Homeಕರ್ನಾಟಕಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನಿಸಿದ್ದೇವೆ : ಸಿಎಂ ಸಿದ್ದರಾಮಯ್ಯ

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನಿಸಿದ್ದೇವೆ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು (ಮಾ.28) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಜಾರಿ ಮತ್ತು ಖಾಸಗಿ ಶಾಲೆಗಳು ಈ ನಿರ್ಧಾರವನ್ನು ವಿರೋಧಿಸುತ್ತಿರುವ ಬಗ್ಗೆ ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡಿ, ಈ ವರ್ಷದಿಂದಲೇ ತೃತೀಯ ಭಾಷೆ ಹಿಂದಿಯನ್ನು ಅಂಕಗಳಿಗೆ ಪರಿಗಣಿಸದೇ, ಎಸ್‌ಎಸ್ಎಲ್‌ಸಿಯಲ್ಲಿ 625 ಅಂಕಗಳನ್ನು 525ಕ್ಕೆ ನಿಗದಿಪಡಿಸಲು ತೀರ್ಮಾನಿಸಲಾಗಿದೆ. ಸರ್ಕಾರದ ಯಾವುದೇ ತೀರ್ಮಾನಕ್ಕೆ ಬೆಂಬಲ ಇಲ್ಲವೇ ವಿರೋಧವೂ ವ್ಯಕ್ತವಾಗಬಹುದು. ಹಿಂದಿ ಭಾಷೆಯನ್ನು ಕಲಿಯುವುದರಲ್ಲಿ ಸರ್ಕಾರದ ವಿರೋಧವಿಲ್ಲ , ಆದರೆ ಪರೀಕ್ಷೆಯ ಅಂಕಗಳಿಗೆ ಕಡ್ಡಾಯವಾಗಬಾರದು ಎಂದರು.

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ವಿಶ್ವಾಸ

ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಯ ಬಗ್ಗೆ ಪ್ರತಿಕ್ರಿಯಿಸಿ, ದಾವಣಗೆರೆ ಹಾಗೂ ಬಾಗಲಕೋಟೆಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುವ ವಿಶ್ವಾಸವಿದ್ದು, ಸೋಮವಾರದಿಂದ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿ, ನಂತರ ಏಪ್ರಿಲ್ 5ರಂದು ಕೇರಳ ರಾಜ್ಯದ ಚುನಾವಣೆಯ ಪ್ರಚಾರಕ್ಕೂ ತೆರಳುವುದಾಗಿ ಸಿಎಂ ತಿಳಿಸಿದರು. ಈ ಹಿಂದೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿತ್ತು. ಇದು ನಮ್ಮ ಮುಂದಿನ ಗೆಲುವಿನ ದಿಕ್ಸೂಚಿಯಾಗಿದೆ. ದಾವಣೆಗೆರೆಯಲ್ಲಿ ಯಾವುದೇ ಗೊಂದಲವಿಲ್ಲ ಎಂದು ಹೇಳಿದರು.

ಉಪಚುನಾವಣೆಗೂ ಸಿಎಂ ಸ್ಥಾನ ವಿಚಾರಕ್ಕೂ ಸಂಬಂಧವಿಲ್ಲ

ಈ ಉಪಚುನಾವಣೆಗಳ ಗೆಲುವು ಸಿಎಂ ಸ್ಥಾನದಲ್ಲಿ ಎದ್ದಿರುವ ಗೊಂದಲಕ್ಕೆ ತೆರೆ ಎಳೆಯಲಿದೆಯೇ ಎಂಬುದಕ್ಕೆ ಪ್ರತಿಕ್ರಿಯಿಸಿ, ಸಿಎಂ ಸ್ಥಾನ ವಿಚಾರಕ್ಕೂ ಈ ಚುನಾವಣೆಗೂ ಯಾವುದೇ ಸಂಬಂಧವಿಲ್ಲ. ಪಕ್ಷದ ಹೈಕಮಾಂಡ್ ಅನುಮತಿಸಿದರೆ ಇನ್ನೆರೆಡು ವರ್ಷವೂ ನಾನೇ ಬಜೆಟ್ ಮಂಡಿಸುತ್ತೇನೆ. ಹೈಕಮಾಂಡ್ ಸೂಚನೆಯ ಮೇರೆಗೆ ನಾವು ನಡೆಯುತ್ತೇವೆ ಎಂದರು.

ಡ್ರಗ್ಸ್ ದಂಧೆ: ತಪ್ಪಿತಸ್ಥರ ವಿರುದ್ಧ ಕ್ರಮ

ಮೈಸೂರಿನಲ್ಲಿ ಡ್ರಗ್ಸ್ ದಂಧೆಯ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಸರ್ಕಾರ ರಾಜ್ಯದಲ್ಲಿ ಡ್ರಗ್ಸ್ ದಂಧೆಯ ವಿರುದ್ಧ ಸಮರ ಸಾರಿದೆ. ಕರ್ನಾಟಕವನ್ನು ಡ್ರಗ್ಸ್ ಮುಕ್ತಗೊಳಿಸುವುದು ನಮ್ಮ ಉದ್ದೇಶ. ಮೈಸೂರಿನಲ್ಲಿ ಡ್ರಗ್ಸ್ ಜಾಲವನ್ನು ಪತ್ತೆಹಚ್ಚಿರುವ ಬಗ್ಗೆ ತಿಳಿದುಬಂದಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಮೈಸೂರಿನಲ್ಲಿ ಟ್ರಾಫಿಕ್ ಸಿಗ್ನಲ್‌ಗಳು ಹೆಚ್ಚಾಗಿ ಜನರಿಗೆ ತೊಂದರೆ ಆಗುತ್ತಿರುವ ಕುರಿತ ದೂರುಗಳು ಬಗ್ಗೆ ಉತ್ತರಿಸಿ, ಟ್ರಾಫಿಕ್ ಸಿಗ್ನಲ್‌ಗಳನ್ನು ಸುಗಮ ವಾಹನ ಸಂಚಾರಕ್ಕಾಗಿ ಅಳವಡಿಸಲಾಗಿದೆ. ಈ ಬಗ್ಗೆ ಮಾಹಿತಿ ಪಡೆದು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...