ಚುನಾವಣೆ ವೇಳೆ ಜನರ ಮುಂದೆ ಇಟ್ಟಿದ್ದ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ: ಸಿಎಂ ಸಿದ್ದರಾಮಯ್ಯ

ಚುನಾವಣೆ ಪೂರ್ವದಲ್ಲಿ ನಾವು ಕೊಟ್ಟಿದ್ದ ಪೈಕಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಈಡೇರಿಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸರ್ಕಾರ ಎರಡು ವರ್ಷ ಪೂರೈಸಿರುವ ಹಿನ್ನೆಲೆ ಹೊಸಪೇಟೆಯಲ್ಲಿ ಕಂದಾಯ ಇಲಾಖೆ ಆಯೋಜಿಸಿದ್ದ ‘ಸಮರ್ಪಣೆ ಸಂಕಲ್ಪ’ ಸಮಾವೇಶದಲ್ಲಿ 1,11,111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ, ಮಾಜಿ ಪ್ರಧಾನಿ  ಇಂದಿರಾಗಾಂಧಿಯವರ ಪ್ರತಿಮೆ ಲೋಕಾರ್ಪಣೆಗೊಳಿಸಿ ಸಿಎಂ ಮಾತನಾಡಿದರು. ಮೊದಲ ಬಾರಿ ನಾನು ಮುಖ್ಯಮಂತ್ರಿಯಾಗಿದ್ದಾಗ ನೀಡಿದ್ದ 165 ಭರವಸೆಗಳ ಪೈಕಿ … Continue reading ಚುನಾವಣೆ ವೇಳೆ ಜನರ ಮುಂದೆ ಇಟ್ಟಿದ್ದ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ: ಸಿಎಂ ಸಿದ್ದರಾಮಯ್ಯ