Homeಕರ್ನಾಟಕ‘ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ, ಒಗ್ಗಟ್ಟಿನಿಂದ ಇದ್ದೇವೆ: ನಾನು, ಡಿ.ಕೆ. ಶಿವಕುಮಾರ್ ಸಹೋದರರಿದ್ದಂತೆ’: ಸಿಎಂ ಸಿದ್ದರಾಮಯ್ಯ

‘ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ, ಒಗ್ಗಟ್ಟಿನಿಂದ ಇದ್ದೇವೆ: ನಾನು, ಡಿ.ಕೆ. ಶಿವಕುಮಾರ್ ಸಹೋದರರಿದ್ದಂತೆ’: ಸಿಎಂ ಸಿದ್ದರಾಮಯ್ಯ

- Advertisement -
- Advertisement -

‘ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರಿದ್ದಂತೆ, ಒಂದೇ ಪಕ್ಷದಲ್ಲಿದ್ದು, ಒಂದೇ ಸಿದ್ಧಾಂತ ನಂಬಿಕೊಂಡಿದ್ದೇವೆ, 2028ರ ಚುನಾವಣೆಯಲ್ಲಿಯೂ ಒಟ್ಟಿಗೆ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 

ಡಿಸೆಂಬರ್ 2, ಮಂಗಳವಾರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಹ್ವಾನದ ಮೇರೆಗೆ ಬೆಳಗಿನ ಉಪಹಾರಕ್ಕಾಗಿ ಅವರ ನಿವಾಸಕ್ಕೆ ಭೇಟಿದ ಸಂದರ್ಭದಲ್ಲಿ ಅವರು ಮಾತನಾಡಿದರು. 

ಶಾಸಕರು ಹಾಗೂ ಸಚಿವರಿಗೆ ಇದನ್ನೇ ಹೇಳುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು ‘ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ. ಒಗ್ಗಟ್ಟಿನಿಂದ ಇದ್ದೇವೆ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು. ಸಿಎಲ್ ಪಿ ಸಭೆ ಕರೆದಾಗ ಎಲ್ಲರೂ ಊಟಕ್ಕೆ ಸೇರುತ್ತೇವೆ ಎಂದರು. 

ಡಿ.ಕೆ.ಶಿವಕುಮಾರ್ ಅವರ ಭೇಟಿಯ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ವಿಚಾರಗಳನ್ನು ಈ ಭೇಟಿಯಲ್ಲಿ ಚರ್ಚಿಸಲಾಗಿದೆ. ಡಿಸೆಂಬರ್ 8, ರಂದು ಬೆಳಗಾವಿ ಅಧಿವೇಶನ ಪ್ರಾರಂಭವಾಗಲಿದ್ದು, ವಿಪಕ್ಷಗಳನ್ನು ಎದುರಿಸಲು ಸರ್ಕಾರದ ರಣನೀತಿಗಳ ಬಗ್ಗೆ ಇಂದು ಚರ್ಚಿಸಲಾಗಿದೆ. ವಿಪಕ್ಷಗಳು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಿದ್ದಾರೆ ಎಂಬ ಮಾಹಿತಿ ಪತ್ರಿಕೆಗಳಿಂದ ತಿಳಿದು ಬಂದಿದೆ. ಅಲ್ಲದೇ ವಿಪಕ್ಷಗಳು ಕೇಳಬಹುದಾದ ಪ್ರಶ್ನೆಗಳನ್ನು ಸಮರ್ಥವಾಗಿ ಸರ್ಕಾರ ಎದುರಿಸಲಿದೆ. ಕಬ್ಬು, ಮೆಕ್ಕೆಜೋಳದ ಸಮಸ್ಯೆ ಸೇರಿದಂತೆ ರಾಜ್ಯದ ಸಮಸ್ಯೆಗಳಿಗೆ ಸಮರ್ಪಕ ಪರಿಹಾರಗಳನ್ನು ಕಂಡುಕೊಳ್ಳಲು ಈ ಅಧಿವೇಶನದಲ್ಲಿ ಪ್ರಯತ್ನಿಸಲಾಗುವುದು ಎಂದರು.

ಕಬ್ಬು ಮತ್ತು ಮೆಕ್ಕೆ ಜೋಳ ಖರೀದಿ

ನಮ್ಮ ಸರ್ಕಾರ ರೈತಪರ ನಿಲುವನ್ನು ಹೊಂದಿದೆ. ಕಬ್ಬು ಬೆಲೆ ನಿಗದಿಗೆ ಸಂಬಂಧಿಸಿದಂತೆ ಸರ್ಕಾರ ರೈತರು, ರೈತ ಮುಖಂಡರು, ಕಾರ್ಖಾನೆ ಮಾಲಿಕರ ಜೊತೆ ಚರ್ಚಿಸಿ, ಸಮಸ್ಯೆಯ ಪರಿಹಾರಕ್ಕೆ ಅಂತಿಮ ರೂಪವನ್ನು ನೀಡಲಾಗಿದೆ. ಕಬ್ಬು ಒಂದು ಟನ್ ಗೆ ಸರ್ಕಾರದಿಂದ 50 ರೂ. ನಿಗದಿಪಡಿಸಲಾಗಿದೆ. ಮೆಕ್ಕೆ ಜೋಳ ಖರೀದಿಯ ಬಗ್ಗೆ ರೈತರು, ಕಾರ್ಖಾನೆ ಮಾಲೀಕರ ಜೊತೆ ಚರ್ಚಿಸಲಾಗಿದೆ. ಕೇಂದ್ರ ಸರ್ಕಾರ ಮೆಕ್ಕೆಜೋಳಕ್ಕೆ 2,400 ರೂ.ಗಳನ್ನು ಬೆಂಬಲ ಬೆಲೆಯಾಗಿ ನಿಗದಿಪಡಿಸಿದೆ. ಆದರೆ ಮಾರುಕಟ್ಟೆ ದರ 1900 ರಿಂದ 2100 ರೂ. ವರೆಗಿರುವುದರಿಂದ ಡಿಸ್ಟಲರಿ ಕಂಪನಿಗಳು, ಎಂಎಸ್ ಪಿ ದರದಲ್ಲಿಯೇ ರೈತರಿಂದ ಮೆಕ್ಕೆಜೋಳವನ್ನು ಖರೀದಿಸಬೇಕೆಂದು ಮನವೊಲಿಸಲಾಗುತ್ತಿದೆ. ಅಂತೆಯೇ ಪೌಲ್ಟ್ರಿ ಫಾರಂಗಳು, ಪಶು-ಆಹಾರಗಳಿಗಾಗಿ ಮೆಕ್ಕೆ ಜೋಳವನ್ನು ಬಳಸಲಾಗುತ್ತದೆ ಎಂದರು.

ಈ ಬಾರಿ ರೈತರು ಮೆಕ್ಕೆ ಜೋಳವನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆದಿದ್ದು, ಸುಮಾರು 55 ಲಕ್ಷ ಮೆ.ಟನ್ ಉತ್ಪಾದನೆಯಾಗುವ ಅಂದಾಜಿದೆ ಎಂದರು.

ರಾಜ್ಯ ಸಂಸದರ ಸಭೆ

ಪೌಲ್ಟ್ರಿ 20 ಲಕ್ಷಕ್ಕಿಂತ ಹೆಚ್ಚು ಉತ್ಪಾದಿಸುವ ನಿರೀಕ್ಷೆಯಿದೆ. ಪಶು-ಆಹಾರ 4-5 ಲಕ್ಷ ಟನ್  ಹಾಗೂ 7-10 ಲಕ್ಷದ ಎಥೆನಾಲ್ ಗಾಗಿ ಬಳಸುತ್ತಾರೆ.  ಇದೆಲ್ಲಾ ಕೇಂದ್ರ ಸರ್ಕಾರ ಮಾಡಬೇಕು. ಎಥೆನಾಲ್ ಹಾಗೂ ಎಂ.ಎಸ್.ಪಿ, ಎಫ್.ಆರ್.ಪಿ ನಿಗದಿ ಮಾಡುವುದು ಕೇಂದ್ರ ಸರ್ಕಾರ. ಆದರೆ ಕೇಂದ್ರ ಸರ್ಕಾರದವರು ನಮಗೇನು ಜವಾಬ್ದಾರಿ ಇಲ್ಲವೆಂಬಂತೆ ಮಾತನಾಡುತ್ತಾರೆ. ಸಂಸದರ ಸಭೆ ಕರೆಯಬೇಕು ಎಂದು ಚರ್ಚಿಸಲಾಗಿದ್ದು,  ಡಿಸೆಂಬರ್ 8 ರಂದು ಸಂಸತ್ತು ಮುಂದೂಡಬಹುದೆಂದು ಭಾವಿಸಿದ್ದು, ಅಂದೇ ಸಭೆ ಕರೆಯಬೇಕೆಂದು ತೀರ್ಮಾನಿಸಲಾಗಿದೆ ಎಂದರು. ಏಕೆಂದರೆ ಅಂದು ರಾಜ್ಯದ ಸಂಸದರು ಅಲ್ಲಿಯೇ ಉಪಸ್ಥಿತರಿರುತ್ತಾರೆ ಎಂದರು. 

ಈ ವೇಳೆ ಹೈ ಕಮಾಂಡ್ ಭೇಟಿ ಕುರಿತ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಸಮಯ ಸಿಕ್ಕು, ಭೇಟಿಗೆ ಅವಕಾಶ ನೀಡಿದಾಗ ಹೈ ಕಮಾಂಡ್ ಭೇಟಿ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಹೈ ಕಮಾಂಡ್ ಸೂಚನೆಯಂತೆ ನಡೆದುಕೊಳ್ಳುವುದಾಗಿ ಮೊನ್ನೆ ಹಾಗೂ ಇಂದೂ ಕೂಡ ಚರ್ಚಿಸಲಾಗಿದೆ ಎಂದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶದಲ್ಲಿ ಮತ್ತೋರ್ವ ಬಿಎಲ್‌ಒ ಆತ್ಮಹತ್ಯೆ: ಎಸ್‌ಐಆರ್‌ ಕೆಲಸದ ಒತ್ತಡ ಕಾರಣವೆಂದ ಕುಟುಂಬ

ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ಶುಕ್ರವಾರ ಬೂತ್ ಮಟ್ಟದ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದ ಕೆಲಸದ ಒತ್ತಡದಿಂದಾಗಿ ಅವರು ಈ ನಿರ್ಧಾರ ಮಾಡಿದ್ದಾರೆ ಎಂದು...

ಉನ್ನಾವೋ ಅತ್ಯಾಚಾರ ಪ್ರಕರಣ: ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ 

ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶವನ್ನು "ಕಾನೂನಿಗೆ ವಿರುದ್ಧ" ಮತ್ತು "ವಿಕೃತ" ಎಂದು ಕರೆದಿರುವ ಕೇಂದ್ರ ತನಿಖಾ ದಳ (ಸಿಬಿಐ) ಶುಕ್ರವಾರ...

ಮೋದಿ-ಮಲ್ಯ ಇಬ್ಬರನ್ನೂ ಭಾರತಕ್ಕೆ ಕರೆತರುವುದಾಗಿ ವಿದೇಶಾಂಗ ಸಚಿವಾಲಯ ಭರವಸೆ

ಲಲಿತ್ ಮೋದಿ ಮತ್ತು ವಿಜಯ್ ಮಲ್ಯ ಸೇರಿದಂತೆ ಆರ್ಥಿಕವಾಗಿ ಪರಾರಿಯಾಗಿರುವವರನ್ನು ವಿದೇಶದಿಂದ ವಾಪಸ್ ಕರೆತಂದು ದೇಶದಲ್ಲಿ ಕಾನೂನು ಕ್ರಮ ಜರುಗಿಸಲು ಬದ್ಧವಾಗಿದೆ ಎಂದು ಭಾರತ ಸರ್ಕಾರ ಶುಕ್ರವಾರ ಹೇಳಿದೆ. ವಿಜಯ್ ಅವರೊಂದಿಗೆ ಸಾಮಾಜಿಕ ಮಾಧ್ಯಮ...

ಉಕ್ರೇನ್ ರಾಜಧಾನಿ ಕೈವ್ ಮೇಲೆ ರಷ್ಯಾ ದಾಳಿ: ಸೇನಾ ಅಧಿಕಾರಿಗಳ ಹೇಳಿಕೆ

ಉಕ್ರೇನಿಯನ್ ರಾಜಧಾನಿ ಕೈವ್ ನಲ್ಲಿ ಶನಿವಾರ ಮುಂಜಾನೆ ರಷ್ಯಾದಿಂದ ಬೃಹತ್ ದಾಳಿ ನಡೆದಿದೆ ಎಂದು ಸೇನಾ ಅಧಿಕಾರಿಗಳು ಹೇಳಿದ್ದಾರೆ.  ಶನಿವಾರ ಬೆಳಗಿನ ಜಾವ ನಗರದಲ್ಲಿ ಸ್ಫೋಟಗಳ ಸದ್ದು ಕೇಳಿಬಂದಿತು, ವಾಯು ರಕ್ಷಣಾ ಪಡೆಗಳು ಕಾರ್ಯಾಚರಣೆಯಲ್ಲಿವೆ...

ಹುಬ್ಬಳ್ಳಿ ಮರ್ಯಾದೆಗೇಡು ಹತ್ಯೆ ಪ್ರಕರಣ: ಪ್ರತ್ಯೇಕ ಕಾಯ್ದೆಗೆ ಪ್ರಗತಿಪರ ಸಂಘಟನೆಗಳ ಆಗ್ರಹ

ಮಾದಿಗ ಸಮುದಾಯದ ಯುವಕನನ್ನು ಮದುವೆಯಾಗಿದ್ದ ಲಿಂಗಾಯತ ಸಮುದಾಯದ ಮಾನ್ಯ ಪಾಟೀಲ್ ಎಂಬ ಯುವತಿಯ ಮರ್ಯಾದಾಗೇಡು ಹತ್ಯೆ ಪ್ರಕರಣವನ್ನು ಖಂಡಿಸಿ ಸಮಾನ ಮನಸ್ಕ ಪ್ರಗತಿಪರ ಸಂಘಟನೆಗಳು ಶುಕ್ರವಾರ (ಡಿ.26) ಸಂಜೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದವು. ಹುಬ್ಬಳ್ಳಿಯ...

ದೆಹಲಿ ವಾಯುಮಾಲಿನ್ಯ : ಏರ್ ಪ್ಯೂರಿಫೈಯರ್‌ ಜಿಎಸ್‌ಟಿ ಕಡಿತಕ್ಕೆ ಕೇಂದ್ರ ಆಕ್ಷೇಪ

ಏರ್‌ಪ್ಯೂರಿಫೈಯರ್‌ ಸಾಧನಗಳ ಮೇಲಿನ ಜಿಎಸ್‌ಟಿ ಕಡಿತಗೊಳಿಸುವಂತೆ ಜಿಎಸ್‌ಟಿ ಮಂಡಳಿಗೆ ಆದೇಶಿಸಿದರೆ ಅದು ಅಂತಹ ಇನ್ನಷ್ಟು ಪ್ರಕರಣಗಳು ಹೆಚ್ಚಳವಾಗಲು ಕಾರಣವಾಗುತ್ತದೆ (Pandora Box)ಎಂದು ಕೇಂದ್ರ ಸರ್ಕಾರ ಶುಕ್ರವಾರ (ಡಿ.26) ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ. ದೆಹಲಿ ಎನ್‌ಸಿಆರ್‌...

ಬಳ್ಳಾರಿ | ಪ್ರಭಾವ, ಗೂಂಡಾಗಿರಿ ಮೂಲಕ ಬಡ ಜನರ ಭೂ ಕಬಳಿಕೆ : ಬುಡಾ ಮಾಜಿ ಅಧ್ಯಕ್ಷನ ವಿರುದ್ಧ ಗಂಭೀರ ಆರೋಪ

ಬಳ್ಳಾರಿ ನಗರಕ್ಕೆ ಹೊಂದಿಕೊಂಡಿರುವ ಕೌಲ್‌ ಬಜಾರಿನ ದಾನಪ್ಪಬೀದಿ ಮತ್ತು ಬಂಡಿಹಟ್ಟಿ ಏರಿಯಾಗಳ ಬಡ ಜನರಿಗೆ ಇನಾಂ ರದ್ದತಿಯ ಬಳಿಕ ನೀಡಲಾಗಿದ್ದ ಭೂಮಿಯನ್ನು ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರ (ಬುಡಾ) ದ ಮಾಜಿ ಅಧ್ಯಕ್ಷ ಎನ್‌....

ಕ್ರಿಸ್‌ಮಸ್‌ ದಿನ ದೇಶದ ಹಲವು ನಗರಗಳಲ್ಲಿ ಗಿಗ್‌ ಕಾರ್ಮಿಕರಿಂದ ಪ್ರತಿಭಟನೆ : ಹೊಸ ವರ್ಷದಂದು ಮತ್ತೊಂದು ಹೋರಾಟಕ್ಕೆ ಸಿದ್ದತೆ

ವರ್ಷಾಂತ್ಯದ ಎರಡು ಪ್ರಮುಖ ದಿನಗಳಾದ ಡಿಸೆಂಬರ್ 25ರ ಕ್ರಿಸ್‌ಮಸ್‌ ಮತ್ತು ಡಿಸೆಂಬರ್ 31ರ ಹೊಸ ವರ್ಷದ ಸಂಜೆ (ಮುನ್ನಾದಿನ) ದೇಶದಾದ್ಯಂತ ಪ್ರತಿಭಟನೆ ನಡೆಸಲು ಗಿಗ್ ಕಾರ್ಮಿಕರು ನಿರ್ಧರಿಸಿದ್ದಾರೆ. ಈಗಾಗಲೇ ಡಿಸೆಂಬರ್ 25ರ ಕ್ರಿಸ್‌ಮಸ್‌ ದಿನದಂದು...

ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಗುಂಪು ಹತ್ಯೆ : ಘಟನೆಗೆ ಕೋಮು ಆಯಾಮವಿಲ್ಲ ಎಂದ ಮಧ್ಯಂತರ ಸರ್ಕಾರ

ಬಾಂಗ್ಲಾದೇಶದ ರಾಜ್‌ಬರಿ ಜಿಲ್ಲೆಯಲ್ಲಿ ಸುಲಿಗೆ ಯತ್ನದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ಗುಂಪೊಂದು ಥಳಿಸಿ ಕೊಂದಿದೆ. ಇದು ಇತ್ತೀಚೆಗೆ ಹಿಂದೂ ವ್ಯಕ್ತಿಯನ್ನು ಗುಂಪು ಹತ್ಯೆ ನಡೆಸಿರುವ ಎರಡನೇ ಘಟನೆಯಾಗಿದೆ. ಆದರೆ, ಅಲ್ಲಿನ ಮಧ್ಯಂತರ ಸರ್ಕಾರ...

ದೆಹಲಿ ವಾಯು ಮಾಲಿನ್ಯದಿಂದ ಸಾಂತಾ ಕ್ಲಾಸ್ ಮೂರ್ಛೆ ಹೋದ ವಿಡಿಯೋ ಹಂಚಿಕೆ : ಎಎಪಿಯ ಸೌರಭ್ ಭಾರದ್ವಾಜ್ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿಪರೀತ ವಾಯುಮಾಲಿನ್ಯದಿಂದ ಸಾಂತಾಕ್ಲಾಸ್ ವೇಷ ಧರಿಸಿದ ಪುರುಷರು ಮೂರ್ಛೆ ಹೋಗುತ್ತಿರುವುದನ್ನು ತೋರಿಸುವ ವಿಡಿಯೋ ಸ್ಕಿಟ್ (ಅಭಿನಯ) ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರಾದ...