Homeಕರ್ನಾಟಕಪ್ರಧಾನಿ ಹುದ್ದೆಯೆ ತಿರಸ್ಕರಿಸಿದ ನಾವು ಯಕಶ್ಚಿತ್‌ ಮಂತ್ರಿ ಸ್ಥಾನಕ್ಕೆ ಆಸೆ ಪಡಲ್ಲ: ಕುಮಾರಸ್ವಾಮಿ

ಪ್ರಧಾನಿ ಹುದ್ದೆಯೆ ತಿರಸ್ಕರಿಸಿದ ನಾವು ಯಕಶ್ಚಿತ್‌ ಮಂತ್ರಿ ಸ್ಥಾನಕ್ಕೆ ಆಸೆ ಪಡಲ್ಲ: ಕುಮಾರಸ್ವಾಮಿ

ಜೆಡಿಎಸ್‌ ಅನ್ನು ಮುಗಿಸುವ ಪ್ರಯತ್ನಗಳೆಲ್ಲ ವಿಫಲವಾಗಿವೆ ಎಂಬುದು ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶದ ಮೂಲಕ ಬಿಜೆಪಿಗೆ ಮನವರಿಕೆಯಾಗಿದೆ. ಈ ಕಾರಣಕ್ಕೆ ಮೈತ್ರಿಯ ಕಪಟ ನಾಟಕವಾಡಲು ನಿಂತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಜೆಡಿಎಸ್ ಎನ್‌ಡಿಎ ಭಾಗವಾಗಲಿದೆ ಎಂದು ಹರಿದಾಡುತ್ತಿರುವ ಸುದ್ದಿಯ ಬಗ್ಗೆ ಸ್ಫಷ್ಟನೆ ನೀಡಿರುವ ಕುಮಾರಸ್ವಾಮಿ, ಈ ಹಿಂದೆ ವಾಜಪೇಯಿ ದೇವೇಗೌಡರಿಗೆ, ಜನತಾದಳಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದರು. ಆಗಲೇ ಪ್ರಧಾನಿ ಹುದ್ದೆ, ಕೇಂದ್ರದ ಅಧಿಕಾರ ತಿರಸ್ಕರಿಸಿದ ನಾವು, ಯಕಶ್ಚಿತ್‌ ಮಂತ್ರಿ ಸ್ಥಾನಕ್ಕೆ ಆಸೆ ಪಡಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಕುಮಾರಸ್ವಾಮಿ, “ಜೆಡಿಎಸ್‌ ಅನ್ನು ಮುಗಿಸುವ ಪ್ರಯತ್ನಗಳೆಲ್ಲ ವಿಫಲವಾಗಿವೆ ಎಂಬುದು ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶದ ಮೂಲಕ ಬಿಜೆಪಿಗೆ ಮನವರಿಕೆಯಾಗಿದೆ. ಇದೇ ಕಾರಣಕ್ಕೆ ಮೈತ್ರಿಯ ಕಪಟ ನಾಟಕವಾಡಲು ಬಿಜೆಪಿ ನಿಂತಿದೆ. ಇದಕ್ಕಾಗಿಯೇ ಜೆಡಿಎಸ್‌ ಎನ್‌ಡಿಎ ಸೇರಲಿದೆ ಎಂಬ ಕಲ್ಪಿತ ಸುದ್ದಿಗಳನ್ನು ವ್ಯವಸ್ಥಿತವಾಗಿ ಹರಡುತ್ತಿದೆ. ಇದೆಲ್ಲವೂ ಅಪ್ಪಟ ಸುಳ್ಳು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜೆಡಿಎಸ್‌‌ನ ಜಾತ್ಯಾತೀತತೆ ಪರೀಕ್ಷಿಸಿದವರಿಗೆ ಈ ಸಾವು ಉತ್ತರ ನೀಡಿರಬಹುದು: ಕುಮಾರಸ್ವಾಮಿ

“ಪ್ರಧಾನಿ ಅವರೊಂದಿಗೆ ರಾಜ್ಯ ಬಿಜೆಪಿ ನಾಯಕರಿಗಿಂತಲೂ ಉತ್ತಮ ಬಾಂಧವ್ಯ ನನಗಿದೆ. ಯಡಿಯೂರಪ್ಪ ಹಿರಿಯರು ಎಂಬ ಗೌರವವೂ ಇದೆ. ವಿರೋಧಕ್ಕಾಗಿ ವಿರೋಧ ಪಕ್ಷವಾಗಿರಬಾರದು ಎಂಬ ಆಶಯವೂ ಇದೆ. ಬಿಜೆಪಿ ಅಪಪ್ರಚಾರಕ್ಕೆ ಕೈ ಹಾಕಿದರೆ, ಬಾಂಧವ್ಯ, ಗೌರವ, ಆಶಯಗಳಿಗೆ ಧಕ್ಕೆಯಾಗಲಿದೆ. ಜೆಡಿಎಸ್‌ ವಿಚಾರದಲ್ಲಿ ಬಿಜೆಪಿಯು ಎಚ್ಚರವಾಗಿರಲಿ” ಎಂದು ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ರೈತರು ಕೃಷಿ ಕಾಯ್ದೆಗೆ ಅವಕಾಶ ನೀಡುವುದು ಉಚಿತ: ಮೋದಿ ಪರ ಕುಮಾರಸ್ವಾಮಿ ಬ್ಯಾಟಿಂಗ್

“ಜೆಡಿಎಸ್‌ ಜೊತೆಗೆ ಮಿತ್ರತ್ವದ ನಾಟಕವಾಡಿ, ಕಡೆಗೆ ಪಕ್ಷವನ್ನೇ ಒಡೆಯಲು ಯತ್ನಿಸಿದವರು ಅನೇಕರು. ಈಗ ಬಿಜೆಪಿ ಸರದಿ. ಅಷ್ಟಕ್ಕೂ ಮೈತ್ರಿಗೆ ಜೆಡಿಎಸ್‌ನಿಂದ ಬಿಜೆಪಿಗೆ ಅರ್ಜಿ ಹಾಕಿದವರು ಯಾರು? ಜೆಡಿಎಸ್‌ನೊಂದಿಗೆ ಮೈತ್ರಿ ಇಲ್ಲವೆಂದಿರುವ ಬಿಜೆಪಿ ಉಸ್ತುವಾರಿ ಅರ್ಜುನ್ ಸಿಂಗ್ ಎದುರು ಮೈತ್ರಿ ಪ್ರಸ್ತಾಪ ಇಟ್ಟವರ್ಯಾರು?” ಎಂದು ಪ್ರಶ್ನಿಸಿದ್ದಾರೆ.

“ಜೆಡಿಎಸ್‌ ಎನ್‌ಡಿಎ ಮೈತ್ರಿಕೂಟ ಸೇರುತ್ತದೆ, ಕುಮಾರಸ್ವಾಮಿ ಅವರನ್ನು ಕೇಂದ್ರ ಮಂತ್ರಿ ಮಾಡಲಾಗುತ್ತದೆ ಎಂಬುದೆಲ್ಲವೂ ಸುಳ್ಳಿನ ಕಂತೆ. ಈ ರೀತಿಯ ಆಮಿಷಗಳ ಮೂಲಕ ಬಿಜೆಪಿಯು ಜೆಡಿಎಸ್‌ ಕಾರ್ಯಕರ್ತರು, ಜೆಡಿಎಸ್‌ ಬೆಂಬಲಿಸುವ ಜನರ ಮನಸ್ಸುಗಳಿಗೆ ವಿಷ ಬಿತ್ತುವ ಕೆಲಸ ಮಾಡುತ್ತಿದೆ. ಇದು ನೈತಿಕವಲ್ಲದ ರಾಜಕಾರಣ ಎಂಬುದನ್ನು ಬಿಜೆಪಿ ತಿಳಿಯಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಈ ದೇಶದಲ್ಲಿ ಯಾವ ಪಕ್ಷಕ್ಕೂ ಯಾವ ಸಿದ್ಧಾಂತವೂ ಇಲ್ಲ: ಎಚ್.ಡಿ ಕುಮಾರಸ್ವಾಮಿ

“1997ರಲ್ಲಿ ದೇವೇಗೌಡರು ಪ್ರಧಾನಿ ಸ್ಥಾನದಿಂದ ಇಳಿಯುವಾಗ ಇದೇ ಬಿಜೆಪಿಯ ಅಗ್ರಮಾನ್ಯ ಸಾರ್ವಕಾಲಿಕ ನಾಯಕ ದಿ. ವಾಜಪೇಯಿ ಅವರು ದೇವೇಗೌಡರಿಗೆ, ಜನತಾದಳಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದರು. ಆಗಲೇ ಪ್ರಧಾನಿ ಹುದ್ದೆ, ಕೇಂದ್ರದ ಅಧಿಕಾರ ತಿರಸ್ಕರಿಸಿ ಬಂದವರು ನಾವು. ಇನ್ನು ಯಕಶ್ಚಿತ್‌ ಮಂತ್ರಿ ಸ್ಥಾನಕ್ಕೆ ಆಸೆ ಪಡುವ ವ್ಯಕ್ತಿ ನಾನಲ್ಲ” ಎಂದು ತಿಳಿಸಿದ್ದಾರೆ.

“ಸದ್ಯ ಯಾವ ಪಕ್ಷಕ್ಕೆ ಯಾರ ಅಗತ್ಯವೂ ಇಲ್ಲ. ನಮಗಂತೂ ಬಿಜೆಪಿ ಸ್ನೇಹ ಬೇಕಿಲ್ಲ. ನಮಗೆ ಬೇಕಿರುವುದು ರಾಜ್ಯದ ಅಭಿವೃದ್ಧಿ ಹಾಗೂ ನಮ್ಮ ಕಾರ್ಯಕರ್ತರು. ಪ್ರತಿಕೂಲ ಪರಿಸ್ಥಿತಿ ಇದ್ದರೂ ಕಾರ್ಯಕರ್ತರಲ್ಲಿ ಉತ್ಸಾಹ, ಚೈತನ್ಯವಿದೆ ಎಂಬುದು ಗ್ರಾ.ಪಂ. ಚುನಾವಣೆ ಫಲಿತಾಂಶದಿಂದ ಎಲ್ಲರಿಗೂ ಗೊತ್ತಾಗಿದೆ. ಈಗ ನಮ್ಮ ಮುಂದಿರುವುದು ಪಕ್ಷದ ಸಂಘಟನೆ ಮಾತ್ರ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ಜೆಡಿಎಸ್‌ನವರಿಗಿಂತಲೂ ಹೆಚ್ಚು ಬಿಜೆಪಿಗರಿಂದ ಹುಟ್ಟುಹಬ್ಬದ ಅಭಿನಂದನೆ ಪಡೆದುಕೊಂಡ ಎಚ್‌ ಡಿ ಕುಮಾರಸ್ವಾಮಿ! ಏನಿದರ ಮರ್ಮ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...