Homeಕರ್ನಾಟಕ'ಮಾಟ ಮಂತ್ರದಿಂದಲೇ‌ ನಾವು ಸೋತಿದ್ದು': ಜೆಡಿಎಸ್ ಮುಖಂಡ ಬಂಡೆಪ್ಪ ಕಾಶಂಪೂರ

‘ಮಾಟ ಮಂತ್ರದಿಂದಲೇ‌ ನಾವು ಸೋತಿದ್ದು’: ಜೆಡಿಎಸ್ ಮುಖಂಡ ಬಂಡೆಪ್ಪ ಕಾಶಂಪೂರ

- Advertisement -
- Advertisement -

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಟ ಮಂತ್ರದಿಂದಲೇ‌ ನಾವು ಸೋತಿದ್ದು ಎಂದು ಜೆಡಿಎಸ್ ಪಕ್ಷದ ಮಾಜಿ ಶಾಸಕ ಬಂಡೆಪ್ಪ ಕಾಶಂಪೂರ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ನಡೆದ ಪಕ್ಷದ ಪುನಃಶ್ಚೇತನ ಪರ್ವದ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಶಂಪೂರ, ”ವಿಧಾನಸಭಾ ಚುನಾವಣೆಯಲ್ಲಿ ಕೇರಳ ಮಾದರಿ ಮಾಟ ಮಂತ್ರದಿಂದಲೇ ನಾವು ಸೋತಿದ್ದು. ಕಳೆದ ಚುನಾವಣೆಯಲ್ಲಿ ನಾವು 37 ಜ‌ನ ಗೆದ್ದಿದ್ವಿ. ಅದರಲ್ಲಿ ಏಳು ಜನ ಹೋಗಿ 30 ಜನ ಉಳಿದುಕೊಂಡಿದ್ವಿ. ಆದರೆ ಆ 30 ಜನರಲ್ಲಿ ಕೇವಲ ನಾಲ್ಕು ಜನ ಗೆದ್ದಿದ್ದಾರೆ. ಉಳಿದವರು ಸೋಲಲು‌ ಮಾಟ ಮಂತ್ರ ಕಾರಣ” ಎಂದು ಬಂಡೆಪ್ಪ ಹೇಳಿದ್ದಾರೆ.

”ಇದು ನಿಮಗೆ ಯಾರಿಗೂ ಅರ್ಥ ಆಗಿಲ್ಲ. ಮಾಟ ಮಂತ್ರ ಮಾಡಿರೋದು ನೂರಕ್ಕೆ ನೂರು ನಿಜ. ಕಾಂಗ್ರೆಸ್ ನವರಿಗೆ 135 ಸೀಟ್ ಬರುತ್ತೆ ಅನ್ನೋದ ಗೊತ್ತಿರಲಿಲ್ಲ. ನಾವು 55 ಸೀಟ್ ಗೆಲ್ಲಬೇಕಿತ್ತು” ಎಂದು ಬಂಡೆಪ್ಪ ಕಾಶಂಪೂರ ವ್ಯಾಖ್ಯಾನಿಸಿದ್ದಾರೆ.

”ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಒಂದೂ ಸ್ಥಾನವನ್ನ ಗೆಲ್ಲಬಾರದು. ಕಾಂಗ್ರೆಸ್ ವಿರುದ್ದ ಅವರದೇ 35 ಶಾಸಕರು ದಿನಾ ಒಂದು ಡೈಲಾಗ್ ಹೊಡಿತೀದಾರೆ. ಇನ್ನೊಂದು 20 ರಿಂದ 25 ಜನ ಡೈಲಾಗ್ ಹೊಡೆದರೂ ಸರ್ಕಾರದ ಕಥೆ ಮುಗೀತು” ಎಂದು ಕಾಶಂಪೂರ ಹೇಳಿದ್ದಾರೆ.

ಇದೇ ವೇಳೆ ಮಾತನಾಡಿದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರು, ”ಪಂಪಸೆಟ್​ಗಳಿಗೆ ಕರೆಂಟ್ ಇಲ್ಲ, ರೈತರ ಆತ್ಮಹತ್ಯೆ 6ನೇ ಗ್ಯಾರಂಟಿಯಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

”ಕಾಂಗ್ರೆಸ್ ಸರ್ಕಾರ ಒಂದು ಕಾಳು ಅಕ್ಕಿಯನ್ನೂ ಕೂಡ ಕೊಟ್ಟಿಲ್ಲ. ಗೃಹಲಕ್ಷ್ಮೀ, ಅನ್ನಭಾಗ್ಯ ಯೋಜನೆ ಎಲ್ಲವೂ ಬೋಗಸ್​” ಎಂದು ವಾಗ್ದಾಳಿ ನಡೆಸಿದರು.

”ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಕರ್ನಾಟಕದಿಂದ ಹಣ ಹೋಗುತ್ತಿದೆ. ಚುನಾವಣೆಗಾಗಿ ಲಂಚದ ದುಡ್ಡನ್ನು ತೆಗೆದುಕೊಂಡು ಹೋಗುತ್ತಿದ್ದಾರೆ ಎಂದು ಆರೋಪಿಸಿದ ಜಿಟಿಡಿ, ಯಾರು ಏನೇ ಎನ್ನಲಿ ಮತ್ತೆ ಮೋದಿ‌ಯನ್ನು ಪ್ರಧಾನಿ‌ ಮಾಡೋಣ” ಎಂದು ಜಿಟಿಡಿ ಹೇಳಿದರು.

ಇದನ್ನೂ ಓದಿ: ಮಾಜಿ ಶಾಸಕ ರಾಮಪ್ಪ ಲಮಾಣಿ ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...