Homeಮುಖಪುಟಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆಯೂ ಯೋಚಿಸಬಹುದು: ಸುಪ್ರೀಂ ಕೋರ್ಟ್‌

ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆಯೂ ಯೋಚಿಸಬಹುದು: ಸುಪ್ರೀಂ ಕೋರ್ಟ್‌

- Advertisement -
- Advertisement -

ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆ ಕೂಡ ನಾವು ಯೋಚಿಸಬಹುದು ಎಂದು ಸುಪ್ರೀಂ ಕೋರ್ಟ್ ನಿನ್ನೆ ಹೇಳಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನ ಬಂಧನವನ್ನು ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯ ವೇಳೆ  ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು, ಲೋಕಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆ ಪರಿಗಣಿಸುವುದಾಗಿ ಹೇಳಿದೆ.

ಈ ಪ್ರಕರಣವು ಸಮಯ ತೆಗೆದುಕೊಳ್ಳಬಹುದು. ಆದರೆ ಪ್ರಕರಣವು ಸಮಯ ತೆಗೆದುಕೊಂಡರೆ, ಚುನಾವಣೆಯ ಕಾರಣದಿಂದ ನಾವು ಮಧ್ಯಂತರ ಜಾಮೀನಿನ ಅರ್ಜಿಯನ್ನು ಪರಿಗಣಿಸಬಹುದು ಎಂದು ನ್ಯಾಯಾಲಯವು ಹೇಳಿದೆ. ಆದರೆ ತಾನು ಅಂತಿಮವಾಗಿ ಏನನ್ನೂ ನಿರ್ಧರಿಸಿಲ್ಲ ಮತ್ತು ವಿಚಾರಣೆಯು ಶೀಘ್ರದಲ್ಲೇ ಮುಕ್ತಾಯಗೊಳ್ಳುವ ಸಾಧ್ಯತೆಯಿಲ್ಲದಿದ್ದರೆ ಅಂತಹ ಮಧ್ಯಂತರ ಪರಿಹಾರವನ್ನು ಪರಿಗಣಿಸಬಹುದು ಎಂದು ಎರಡೂ ಕಡೆದ ವಕೀಲರಿಗೆ ತಿಳಿಸಿರುವುದಾಗಿ ಪೀಠವು ಹೇಳಿದೆ.

ಈ ಪ್ರಕರಣದ ಮುಂದಿನ ವಿಚಾರಣೆಯು 7ರ ಮಂಗಳವಾರದಂದು ನಡೆಯಲಿದೆ. 2021-2022ರ ದೆಹಲಿ ಅಬಕಾರಿ ನೀತಿಯ ರಚನೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಬಂಧಿಸಿರುವುದನ್ನು ಪ್ರಶ್ನಿಸಿ ಕೇಜ್ರಿವಾಲ್ ಸುಪ್ರೀಂ ಮೊರೆ ಹೋಗಿದ್ದರು. ಕೇಜ್ರಿವಾಲ್‌ ಈ ವಿಚಾರದಲ್ಲಿ ದೆಹಲಿ ಹೈಕೋರ್ಟ್ ತನ್ನ ಮನವಿಯನ್ನು ವಜಾಗೊಳಿಸಿದ ನಂತರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಕಳೆದ ವಿಚಾರಣೆಯ ಸಂದರ್ಭದಲ್ಲಿ 2024ರ ಲೋಕಸಭೆ ಚುನಾವಣೆಗೆ ಮುನ್ನ ಕೇಜ್ರಿವಾಲ್ ಅವರ ಬಂಧನವನ್ನು ಏಕೆ ಮಾಡಲಾಗಿದೆ ಎಂಬ ಕುರಿತು ಸುಪ್ರೀಂ ಕೋರ್ಟ್ ಜಾರಿ ನಿರ್ದೇಶನಾಲಯವನ್ನು ಪ್ರಶ್ನಿಸಿತ್ತು.

ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ನೀಡಿದ ದೂರಿನ ಮೇರೆಗೆ 2022 ರಲ್ಲಿ ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ದಾಖಲಿಸಿದ ಪ್ರಕರಣದಿಂದ ಕೇಜ್ರಿವಾಲ್ ವಿರುದ್ಧ ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆ ಕೈಗೊಂಡಿತ್ತು. ಪ್ರಕರಣದ ತನಿಖೆಯ ಮುಂದುವರಿದ ಭಾಗವಾಗಿ ಮಾರ್ಚ್ 21ರಂದು ಕೇಜ್ರಿವಾಲ್ ಅವರನ್ನು ಬಂಧಿಸಲಾಯಿತು ಮತ್ತು ಪ್ರಸ್ತುತ ಅವರು ತಿಹಾರ್ ಜೈಲಿನಲ್ಲಿದ್ದಾರೆ.

ಕೇಜ್ರಿವಾಲ್ ಅವರು ರಾಜಕಾರಣಿ ಎಂಬ ಕಾರಣಕ್ಕೆ ಅವರನ್ನು ಬೇರೆ ಯಾವುದೇ ಅಪರಾಧಿಗಳಿಗಿಂತ ಭಿನ್ನವಾಗಿ ಪರಿಗಣಿಸಲಾಗುವುದಿಲ್ಲ ಎಂದು ಇಡಿ ಈ ಹಿಂದೆ ಕೋರ್ಟ್‌ಗೆ ತಿಳಿಸಿತ್ತು.

ಇದನ್ನು ಓದಿ; ಮಹಿಳೆಯ ಅಪಹರಣ ಪ್ರಕರಣ: ರೇವಣ್ಣ ಸಹಚರ ಸತೀಶ್ ಬಾಬಣ್ಣಗೆ ನ್ಯಾಯಾಂಗ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮತದಾನ ನಡೆದ 48 ಗಂಟೆಗಳಲ್ಲಿ ಅಂಕಿಅಂಶಗಳ ಬಿಡುಗಡೆ: ಚು.ಆಯೋಗದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್‌

0
ಮತದಾನ ಮುಗಿದ 48 ಗಂಟೆಗಳ ಒಳಗೆ ಮತದಾನ ಕೇಂದ್ರವಾರು ಮತದಾರರ ಅಂಕಿಅಂಶಗಳನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲು ನಿರ್ದೇಶನ ನೀಡುವಂತೆ ಕೋರಿ ಎನ್‌ಜಿಒ ಎಡಿಆರ್ ಸಲ್ಲಿಸಿದ ಮನವಿಗೆ ಸುಪ್ರೀಂಕೋರ್ಟ್ ಶುಕ್ರವಾರ ಒಂದು ವಾರದೊಳಗೆ ಭಾರತೀಯ...