Homeಕರ್ನಾಟಕSocial darvinismಗೆ ನಾವು ಅವಕಾಶ ಕೊಡಬಾರದು: ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸೂಚನೆ

Social darvinismಗೆ ನಾವು ಅವಕಾಶ ಕೊಡಬಾರದು: ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸೂಚನೆ

- Advertisement -
- Advertisement -

”Social darvinismಗೆ ನಾವು ಅವಕಾಶ ಕೊಡಬಾರದು. ಬಲಾಢ್ಯರು ಮಾತ್ರ ಉಳಿಯಬೇಕು ಎನ್ನುವ ಡಾರ್ವಿನ್ ಸಿದ್ಧಾಂತಕ್ಕೆ ನಾವು ವಿರುದ್ಧ. ಎಲ್ಲರಿಗೂ ನ್ಯಾಯ ಸಿಗುವಂತಿರಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯ ಸಭಾಂಗಣದಲ್ಲಿ ನಡೆದ ಮೊದಲ ಕರ್ನಾಟಕ ರಾಜ್ಯ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ, ”ಬಲಾಢ್ಯರು ಮಾತ್ರ ಬದುಕಬೇಕು, ಶಕ್ತಿ ಇದ್ದವರಿಗೆ ಮಾತ್ರ ನ್ಯಾಯ ಸಿಗಬೇಕು ಎನ್ನುವ ಡಾರ್ವಿನ್‌ ಸಿದ್ಧಾಂತದ ಮನಸ್ಥಿತಿಗೆ ಪೊಲೀಸ್ ಇಲಾಖೆಯಲ್ಲಿ ಅವಕಾಶ ಇರದಂತೆ ನೋಡಿಕೊಳ್ಳುವ ಜವಾಬ್ದಾರಿ ಇಲಾಖೆಯ ಮೇಲಿದೆ” ಎಂದರು.

”ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಎಲ್ಲಾ ರಾಜ್ಯಗಳ, ಎಲ್ಲಾ ದೇಶಗಳ ಜನ ನೆಲೆಸಿದ್ದಾರೆ. ಅವರೆಲ್ಲರೂ ನೆಮ್ಮದಿಯಿಂದ, ಖುಷಿಯಿಂದ ಇರಬೇಕು” ಎಂದು ಸೂಚಿಸಿದರು.

”ದೂರು ಬಂದರೆ ಮಾತ್ರ FIR ದಾಖಲಿಸಬೇಕು ಎನ್ನುವ ಮನಸ್ಥಿತಿ ಬಿಟ್ಟುಬಿಡಿ. ಸ್ವಯಂ ಪ್ರೇರಿತ FIR ದಾಖಲಿಸಿಕೊಂಡು ತನಿಖೆ ನಡೆಸಿದರೆ ಪೊಲೀಸ್ ವ್ಯವಸ್ಥೆಗೆ ಘನತೆ ಬರುತ್ತದೆ. ಅಪರಾಧ ಜಗತ್ತಿಗೆ ಭಯವೂ ಮೂಡುತ್ತದೆ” ಎಂದರು.

”ಸಮಾಜಘಾತುಕ ಶಕ್ತಿಗಳ ಜತೆ ಸ್ನೇಹ ಇಟ್ಟುಕೊಂಡಿರುವ ಅಧಿಕಾರಿಗಳನ್ನೂ ನಾನು ಗಮನಿಸಿದ್ದೇನೆ. ಹೀಗಾದಾಗ ಜನ ಸಾಮಾನ್ಯರಿಗೆ ಪೊಲೀಸ್ ವ್ಯವಸ್ಥೆ ಮೇಲೆ ನಂಬಿಕೆ ಬರಲು ಹೇಗೆ ಸಾಧ್ಯ? ಬೇಲಿಯೇ ಎದ್ದು ಹೊಲ ಮೇಯ್ದರೆ ಸಮಾಜದ ರಕ್ಷಣೆ ಹೇಗೆ ಸಾಧ್ಯ ಎಂದು ಜನ ಸಾಮಾನ್ಯರು ಪ್ರಶ್ನಿಸುತ್ತಾರೆ” ಎಂದು ಹೇಳಿದರು.

”ಚಾಳಿಬಿದ್ದ ರೌಡಿಗಳನ್ನು ಗಡಿಪಾರು ಮಾಡುವುದು ಹೆಚ್ಚು ಕ್ರಿಯಾಶೀಲವಾಗಿ ನಡೆಯಬೇಕು. ಅವರಿಗೆ ಸಲೀಸಾಗಿ ಜಾಮೀನು ಸಿಗುವಂಥಾಗಬಾರದು. ದೂರುದಾರರಿಗೆ ಧೈರ್ಯ ನೀಡುವ ಕೆಲಸ ಪೊಲೀಸ್ ಠಾಣೆಗಳಲ್ಲಿ ಆಗಬೇಕು. ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಸಿಗುವಂತಿರಬೇಕು” ಎಂದು ಹೇಳಿದರು.

ಗೃಹ ಸಚಿವ ಜಿ.ಪರಮೇಶ್ವರ್, ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು ನಸೀರ್ ಅಹಮದ್ ಅವರು ಉಪಸ್ಥಿತರಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೆನಡಾದ ಸಾರ್ವತ್ರಿಕ ಚುನಾವಣೆಗೆ ಭಾರತದಿಂದ ‘ಆಯ್ಧ ಅಭ್ಯರ್ಥಿಗಳಿಗೆ’ ರಹಸ್ಯವಾಗಿ ಹಣಕಾಸಿನ ನೆರವು: ವರದಿ

0
2021ರ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಆಯ್ದ ಅಭ್ಯರ್ಥಿಗಳಿಗೆ ರಹಸ್ಯವಾಗಿ ಹಣಕಾಸಿನ ನೆರವು ನೀಡಲು ಭಾರತ ಸರ್ಕಾರವು ತನ್ನ ಪ್ರಾಕ್ಸಿ ಏಜೆಂಟ್‌ಗಳ ಮೂಲಕ ಪ್ರಯತ್ನಿಸಿರಬಹುದು ಎಂದು ಕೆನಡಾದಲ್ಲಿ ವಿದೇಶಿ ಹಸ್ತಕ್ಷೇಪದ ಕುರಿತು ತನಿಖೆ ನಡೆಸುತ್ತಿರುವ ಕೆನಡಾದ...