Homeಮುಖಪುಟಮೂಡನಂಬಿಕೆಗಳಿಗೆ ಸವಾಲು ಹಾಕಬೇಕು; ಉದಯ್‌ ನಿಧಿ ಸ್ಟಾಲಿನ್

ಮೂಡನಂಬಿಕೆಗಳಿಗೆ ಸವಾಲು ಹಾಕಬೇಕು; ಉದಯ್‌ ನಿಧಿ ಸ್ಟಾಲಿನ್

- Advertisement -
- Advertisement -

ಸನಾತನ ಧರ್ಮದ ಕುರಿತು ಹೇಳಿಕೆ ಕೊಟ್ಟು ಸುದ್ದಿಯಾಗಿದ್ದ ತಮಿಳು ನಾಡಿನ ಸಚಿವ ಉದಯ್‌ ನಿಧಿ ಸ್ಟಾಲಿನ್ ಅವರು ಮೂಡನಂಬಿಕೆಗೆ ಸವಾಲುಹಾಕಬೇಕು ಮತ್ತು ಸಾಮಾಜಿಕ ನ್ಯಾಯಕ್ಕೆ ಬದ್ಧರಾಗಬೇಕು ಎಂದು ಹೇಳಿದ್ದಾರೆ.

ಸನಾತನ ಧರ್ಮದ ಕುರಿತ ನನ್ನ ಹೇಳಿಕೆಗಳಿಗೆ ನಾನು ಈಗಲೂ ಬದ್ಧನಾಗಿರುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿ ನಾಯಕರು ನನ್ನ ಭಾಷಣವನ್ನು ತಿರುಚಿ ರಾಜಕೀಯ ಮೈಲೇಜ್ ಪಡೆಯಲು ವದಂತಿಗಳು ಮತ್ತು ದ್ವೇಷವನ್ನು ಹರಡಿದ್ದಾರೆ. ಮೂಢನಂಬಿಕೆಗಳು ಮತ್ತು ಕುರುಡು ನಂಬಿಕೆಗಳಿಗೆ ಸವಾಲು ಹಾಕಿ ಸಾಮಾಜಿಕ ನ್ಯಾಯಕ್ಕೆ ಬದ್ಧರಾಗಿರಬೇಕಾದ ಅಗತ್ಯವಿದೆ. ನಾವು ತಮಿಳುನಾಡಿನಲ್ಲಿ 2021ರಲ್ಲಿ ನೋಡಿದ ಬದಲಾವಣೆಯಂತೆ 2024ರಲ್ಲಿ ನಾವು ದೆಹಲಿಯಲ್ಲಿ ಅಧಿಕಾರದ ಬದಲಾವಣೆಯನ್ನು ನೋಡಬೇಕಾಗಿದೆ ಎಂದು ಉದಯನಿಧಿ ಅವರು ಹೇಳಿದ್ದಾರೆ.

ಸೆ.2ರಂದು ಉದಯ್‌ ನಿಧಿ ಸ್ಟಾಲಿನ್‌ ಅವರು ಸನಾತನ ಧರ್ಮದ ಬಗ್ಗೆ ನೀಡಿರುವ ಹೇಳಿಕೆ ಚರ್ಚೆಗೆ ಗುರಿಯಾಗಿತ್ತು. ಚೆನ್ನೈನಲ್ಲಿ ನಡೆದ ಲೇಖಕರ ಸಮಾವೇಶದಲ್ಲಿ ಮಾತನಾಡಿದ ಉದಯನಿಧಿ ಸ್ಟಾಲಿನ್, ಸನಾತನ ಧರ್ಮವು ಸಾಮಾಜಿಕ ನ್ಯಾಯದ ಕಲ್ಪನೆಗೆ ವಿರುದ್ಧವಾಗಿದೆ. ಅದು ಮಲೇರಿಯಾ ಮತ್ತು ಡೆಂಗ್ಯೂ ಇದ್ದಂತೆ ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು.

ಸನಾತನ ಧರ್ಮವನ್ನು ವಿರೋಧಿಸುವುದು ಮಾತ್ರವಲ್ಲ, ಅದನ್ನು ನಿರ್ಮೂಲನೆ ಮಾಡಬೇಕು. ಸನಾತನ ಕಲ್ಪನೆಯು ಜಾತಿ ಮತ್ತು ಲಿಂಗದ ಆಧಾರದ ಮೇಲೆ ಜನರನ್ನು ವಿಭಜಿಸುತ್ತದೆ ಮತ್ತು ಮೂಲಭೂತವಾಗಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತದೆ ಎಂದು ಹೇಳಿದ್ದರು.

ಸನಾತನ ಧರ್ಮ ಮತ್ತು ಸಮಾಜದ ಮೇಲೆ ಅದರ ದುಷ್ಪರಿಣಾಮಗಳ ಬಗ್ಗೆ ಆಳವಾದ ಸಂಶೋಧನೆ ನಡೆಸಿದ ಪೆರಿಯಾರ್ ಮತ್ತು ಅಂಬೇಡ್ಕರ್ ಅವರ ವ್ಯಾಪಕ ಬರಹಗಳನ್ನು ಯಾವುದೇ ವೇದಿಕೆಯಲ್ಲಿ ಪ್ರಸ್ತುತಪಡಿಸಲು ನಾನು ಸಿದ್ಧನಿದ್ದೇನೆ. ನಾನು ಭಾಷಣದಲ್ಲಿ ಹೇಳಿದ ಅಂಶಗಳನ್ನು ಪುನರುಚ್ಚರಿಸುತ್ತೇನೆ. ಕೋವಿಡ್-19, ಸೊಳ್ಳೆಗಳಿಂದ ಡೆಂಗ್ಯೂ ಮತ್ತು ಮಲೇರಿಯಾದಂತಹ ರೋಗಗಳು ಹರಡುವಂತೆ, ಸನಾತನ ಧರ್ಮವು ಅನೇಕ ಸಾಮಾಜಿಕ ಅನಿಷ್ಟಗಳಿಗೆ ಕಾರಣವಾಗಿದೆ ಎಂದು ನಾನು ನಂಬುತ್ತೇನೆ ಎಂದು ಉದಯ ನಿಧಿ ಸ್ಟ್ಯಾಲಿನ್ ಅವರು ಹೇಳಿದ್ದರು.

ಇದನ್ನು ಓದಿ: ಅವಹೇಳನಾಕಾರಿ ಪೋಸ್ಟ್: ಸತಾರಾದಲ್ಲಿ ಘರ್ಷಣೆ, ಮನೆಗಳಿಗೆ ಬೆಂಕಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಿರ್ಗಿಸ್ತಾನ್‌ನಲ್ಲಿ ಹಿಂಸಾಚಾರ: ಮನೆಬಿಟ್ಟು ಹೊರಬರದಂತೆ ಭಾರತೀಯ ವಿದ್ಯಾರ್ಥಿಗಳಿಗೆ ಸೂಚನೆ

0
ಕಿರ್ಗಿಸ್ತಾನ್‌ನ ರಾಜಧಾನಿ ಬಿಷ್ಕೆಕ್‌ನಲ್ಲಿ ವಿದೇಶಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಗುಂಪು ಹಿಂಸಾಚಾರದ ವರದಿಗಳ ಮಧ್ಯೆ ಭಾರತ ಮತ್ತು ಪಾಕಿಸ್ತಾನವು ಶನಿವಾರ ಬಿಷ್ಕೆಕ್‌ನಲ್ಲಿರುವ ವಿದ್ಯಾರ್ಥಿಗಳಿಗೆ ತಾವು ತಂಗಿರುವ ಹಾಸ್ಟೆಲ್‌, ಮನೆಗಳಿಂದ ಹೊರಗೆ ಬರದಂತೆ ಸೂಚಿಸಿದೆ. ಕಿರ್ಗಿಸ್ತಾನ್‌ನಲ್ಲಿರುವ ಭಾರತದ...