Homeಕರ್ನಾಟಕ‘ನಾವು ರೈತರ ಪರವಾಗಿ ನಿಲ್ಲುತ್ತೇವೆ, ಸಮಸ್ಯೆ ಬಗೆಹರಿಸಲು ಕೇಂದ್ರವೂ ಸಿದ್ದವಾಗಬೇಕು’: ಸಿಎಂ ಸಿದ್ದರಾಮಯ್ಯ

‘ನಾವು ರೈತರ ಪರವಾಗಿ ನಿಲ್ಲುತ್ತೇವೆ, ಸಮಸ್ಯೆ ಬಗೆಹರಿಸಲು ಕೇಂದ್ರವೂ ಸಿದ್ದವಾಗಬೇಕು’: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಬೆಂಗಳೂರು: ಕಬ್ಬು ಬೆಳೆಗಾರರಿಗೆ ನೆರವಾಗುವುದು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಜವಾಬ್ದಾರಿಯಾಗಿದೆ. ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಎಫ್.ಆರ್.ಪಿ ನಿಗದಿಪಡಿಸುವುದು ಕೇಂದ್ರ ಸರ್ಕಾರದ ಕಾರ್ಯ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ನವೆಂಬರ್ 7, ಶುಕ್ರವಾರ ವಿಧಾನಸೌಧ ಸಭಾಂಗಣದಲ್ಲಿ ನಡೆದ ಸಕ್ಕರೆ ಕಾರ್ಖಾನೆ ಮಾಲಿಕರ ಸಭೆಯಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರ ದಿನಾಂಕ 2025 ಮೇ 6ರಂದು ಎಫ್ಆರ್.ಪಿ ನಿಗದಿಪಡಿಸಿದೆ. ಈ ಎಫ್.ಆರ್.ಪಿಯಲ್ಲಿ ಸಾಗಾಟ ಮತ್ತು ಕಟಾವು ವೆಚ್ಚ ಸಹ ಸೇರಿದೆ. ಸಕ್ಕರೆಯ ಎಂ.ಎಸ್.ಪಿ ಹೆಚ್ಚಳ ಮಾಡುವಂತೆ ಈ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ನಾವು ಮನವಿ ಸಲ್ಲಿಸಿದ್ದೇವೆ. ಇದೀಗ ಕೇಂದ್ರ ಸರ್ಕಾರ ಸಮಸ್ಯೆ ಹುಟ್ಟು ಹಾಕಿದೆ ಎಂದು ಹೇಳಿದರು.

ಇದೇ ವೇಳೆ ಸಕ್ಕರೆ ಕಾರ್ಖಾನೆಗಳು ಮಾರಾಟ ಮಾಡುವ ವಿದ್ಯುತ್ ಮೇಲೆ ಪ್ರತಿ ಯುನಿಟ್ಗೆ 60 ಪೈಸೆ ತೆರಿಗೆ ನಿಗದಿಪಡಿಸುವ ಪ್ರಸ್ತಾವನೆಯನ್ನು ಮರು ಪರಿಶೀಲಿಸಲಾಗುವುದು ಎಂದರು. 

ಸಭೆಯಲ್ಲಿ ತಮ್ಮ ಸಮಸ್ಯೆ ಹೇಳಿಕೊಂಡ ಕಾರ್ಖಾನೆ ಮಾಲೀಕರು ಸಕ್ಕರೆ ಉತ್ಪಾದನೆ ಮತ್ತು ಮಾರಾಟ, ಎಥಿನಾಲ್ ಉತ್ಪಾದನೆ ಮತ್ತು ಬೆಲೆ ನಿಗಧಿ, ಸಕ್ಕರೆ ರಫ್ತು ಮತ್ತು ಬೆಲೆ ನಿಗಧಿ ಎಲ್ಲವೂ ಕೇಂದ್ರ ಸರ್ಕಾರದ ಕೈಯಲ್ಲಿದೆ. ಕೇಂದ್ರದ ನೀತಿಯಿಂದ ದಕ್ಷಿಣ ಭಾರತದ ಕಾರ್ಖಾನೆಗಳು ಸಮಸ್ಯೆಯಲ್ಲಿವೆ, ಉತ್ತರ ಭಾರತದ ಕಾರ್ಖಾನೆಗಳು ಅನುಕೂಲಕರವಾಗಿವೆ ಎಂದು ಆರೋಪಿಸಿದರು. 

ಈ ವೇಳೆ ರೈತರ ಬೇಡಿಕೆ ಈಡೇರಿಸುವುದರಲ್ಲಿ ಕೇಂದ್ರ ಸರ್ಕಾರದ ಜವಾಬ್ದಾರಿ ಪ್ರಮುಖವಾಗಿವೆ ಮತ್ತು ಕಾರ್ಖಾನೆಗಳ ಜವಾಬ್ದಾರಿಯು ಇದೆ ಎಂದು ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು. ಹಾಗೆ ಕಾರ್ಖಾನೆ ಮಾಲೀಕರ ಸಮಸ್ಯೆಗಳಲ್ಲಿ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ಸಮಸ್ಯೆಗಳನ್ನು ಬಗೆಹರಿಸುವ ಬಗ್ಗೆಯೂ ಪರಿಶೀಲಿಸೋಣ ಎಂದು ಭರವಸೆ ನೀಡಿದರು.  

ಸಭೆಯಲ್ಲಿ ಸಕ್ಕರೆ ಕಾರ್ಖಾನೆ ಮಾಲಿಕರ ಪರವಾಗಿ ಮಾತನಾಡಿದ ಮುರುಗೇಶ್ ನಿರಾಣಿ, ಎಲ್ಲಾ ಸರ್ಕಾರಗಳಲ್ಲೂ ಕಬ್ಬು ಬೆಳೆಗಾರರ ಸಮಸ್ಯೆ ಮುಂದುವರೆಯುತ್ತಾ ಬಂದಿದೆ. ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದವನ್ನು ರಾಜ್ಯ ಸರ್ಕಾರ ನವೀಕರಣ ಮಾಡಿರುವುದಿಲ್ಲ. ಮಹಾರಾಷ್ಟ್ರದಲ್ಲಿ ಸಕ್ಕರೆ ಕಾರ್ಖಾನೆಯವರಿಂದ ಖರೀದಿಸುವ ವಿದ್ಯುತ್ ಪ್ರತಿ ಯುನಿಟ್ಗೆ ರೂ. 6 ಪಾವತಿಸಲಾಗುತ್ತಿದೆ. ಇದೇ ಮಾದರಿಯಲ್ಲಿ ರಾಜ್ಯ ಸರ್ಕಾರ ಒಪ್ಪಂದ ಮಾಡಬೇಕಿದೆ. ಕಾರ್ಖಾನೆಗಳು ಮಾರಾಟ ಮಾಡುವ ವಿದ್ಯುತ್ ಮೇಲೆ ಪ್ರತಿ ಯುನಿಟ್ಗೆ 60 ಪೈಸೆ ತೆರಿಗೆ ನಿಗದಿಪಡಿಸಿರುವುದನ್ನು ಕೈಬಿಡಬೇಕು. ಸಕ್ಕರೆ ಕಾರ್ಖಾನೆಗಳ ನಡುವಿನ ಅಂತರ ಕನಿಷ್ಠ 25 ಕಿಮೀ ನಿಗದಿಪಡಿಸಬೇಕು. ಏವಿಯೇಷನ್ ಇಂಧನಕ್ಕೆ ಎಥೆನಾಲ್ ಮಿಶ್ರಣ ಅನುಮತಿಯನ್ನು ಆದಷ್ಟು ಬೇಗನೆ ನೀಡುವಂತೆ ಪ್ರಧಾನಿ ಅವರಿಗೆ ಮನವಿ ಮಾಡಬೇಕು. ಪ್ರಸ್ತುತ ರೈತರಿಗೆ ಎಫ್ಆರ್.ಪಿ ಪ್ರಕಾರ ದರ ನೀಡಲಾಗುವುದು. ಹೆಚ್ಚುವರಿ ಆದಾಯ ಸಾಧ್ಯವಾದರೆ ಸೀಸನ್ ಮುಗಿದ ಬಳಿಕ ಅದನ್ನು ರೈತರಿಗೆ ಹಂಚಿಕೆ ಮಾಡಲು ಸಿದ್ಧರಿದ್ದೇವೆ ಎಂದರು.  

ಎಥೆನಾಲ್ ಎಂಎಸ್.ಪಿ ಹೆಚ್ಚಳ ಕುರಿತು ಕೇಂದ್ರಕ್ಕೆ ಮನವಿ ಮಾಡಿದರೂ ಇದುವರೆಗೆ ಹೆಚ್ಚಳ ಮಾಡಿಲ್ಲ. ಇದರಿಂದ ಕರ್ನಾಟಕ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯವಾಗಿದೆ. ಇದೇ ರೀತಿ ಸಕ್ಕರೆ ರಫ್ತಿನ ಮೇಲೆ ನಿರ್ಬಂಧ ಹೇರಿರುವುದರಿಂದ ಸಕ್ಕರೆ ಕಾರ್ಖಾನೆಗಳಿಗೆ ಆರ್ಥಿಕವಾಗಿ ನಷ್ಟ ಉಂಟಾಗಿದೆ. ಇಡೀ ದೇಶಕ್ಕೆ ಕೇವಲ 10ಲಕ್ಷ ಮೆಟ್ರಿಕ್ ಟನ್ ಮಾತ್ರ ರಫ್ತಿಗೆ ಅನುಮತಿ ನೀಡಲಾಗಿದೆ. ಕಳೆದ ಆರು ವರ್ಷಗಳಿಂದ ಸಕ್ಕರೆ ದರವನ್ನು ಸಹ ಪರಿಷ್ಕರಿಸಿಲ್ಲ. ಆದರೆ ಕಬ್ಬಿನ ದರ ಪ್ರತಿ ವರ್ಷ ಹೆಚ್ಚುತ್ತಾ ಹೋಗುತ್ತಿದೆ. ಈ ಎಲ್ಲಾ ಕಾರಣಗಳಿಂದ ಸಕ್ಕರೆ ಕಾರ್ಖಾನೆಗಳಿಗೆ ಈಗ ಎಫ್ಆರ್.ಪಿ ಪ್ರಕಾರ ರೈತರಿಗೆ ಪಾವತಿ ಮಾಡಲು ಕಷ್ಟ ಪಡಬೇಕಾದ ಪರಿಸ್ಥಿತಿಯಿದೆ. ಆದರೆ ಈ ದರ ಕಾನೂನಾತ್ಮಕವಾಗಿ ನೀಡಬೇಕಾಗಿರುವ ಹಿನ್ನೆಲೆಯಲ್ಲಿ ಕಾರ್ಖಾನೆಗಳು ಪಾವತಿಸುತ್ತಿವೆ ಎಂದು ಸಕ್ಕರೆ ಕಾರ್ಖಾನೆ ಮಾಲಿಕರ ಸಂಘದ ಅಧ್ಯಕ್ಷರು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...