Homeಚಳವಳಿಬೆಂಗಳೂರು ಅಡ್ವೊಕೇಟ್ಸ್ ಗ್ರೂಪ್ ವತಿಯಿಂದ ಪ್ರಶಾಂತ್ ಭೂಷಣ್ ಪರ ನಾಳೆ ಮೌನ ಧರಣಿ

ಬೆಂಗಳೂರು ಅಡ್ವೊಕೇಟ್ಸ್ ಗ್ರೂಪ್ ವತಿಯಿಂದ ಪ್ರಶಾಂತ್ ಭೂಷಣ್ ಪರ ನಾಳೆ ಮೌನ ಧರಣಿ

ಪ್ರಶಾಂತ್‌ ಭೂಷಣ್‌ರವರೊಂದಿಗೆ ಐಕ್ಯಮತ್ಯ ಸಾರಲು ದಿನಾಂಕ 18.08.2020 ರಂದು, ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.00 ರ ನಡುವೆ, ನಾವು ವಕೀಲರು ಮತ್ತು ಮಾನವ ಹಕ್ಕುಗಳ ಕಾರ್ಯಕರ್ತರ ಗುಂಪು, ಮೌರ್ಯ ವೃತ್ತದಲ್ಲಿ ಒಟ್ಟುಗೂಡುತ್ತೇವೆ ಎಂದು ಎಸ್‌.ಬಾಲನ್‌ರವರು ತಿಳಿಸಿದ್ದಾರೆ.

- Advertisement -
- Advertisement -

ಹಿರಿಯ ನ್ಯಾಯವಾದಿಗಳಾದ ಪ್ರಶಾಂತ್‌ ಭೂಷಣ್‌ ಟ್ವೀಟ್‌ ವಿಚಾರದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ಪೂರ್ಣ ನ್ಯಾಯಪೀಠದ ತೀರ್ಪಿನ ಬಗ್ಗೆ ತೀವ್ರ ನಿರಾಶೆಗೊಂಡಿದ್ದೇವೆ ಎಂದು ಬೆಂಗಳೂರು ಅಡ್ವೊಕೇಟ್ಸ್ ಗ್ರೂಪ್ ಹೇಳಿದೆ.

ಈ ಕುರಿತು ಪ್ರತಿಕಾ ಹೇಳಿಕೆ ನೀಡಿರುವ ಗ್ರೂಪ್‌ನ ಸಂಚಾಲಕರು ಮತ್ತು ಹಿರಿಯ ವಕೀಲರಾದ ಎಸ್.ಬಾಲನ್‌ರವರು ಪ್ರಶಾಂತ್ ಭೂಷಣ್‌ರೊಂದಿಗೆ ಐಕ್ಯಮತ್ಯ ಘೋಷಿಸಲು ಆಗಸ್ಟ್ 18ರಂದು ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಒಟ್ಟುಗೂಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

12 ಜನವರಿ 2018 ರಂದು ನಡೆಸಿದ ಅಭೂತಪೂರ್ವ ಪತ್ರಿಕಾಗೋಷ್ಠಿಯಲ್ಲಿ, ಆಗಿನ ನಾಲ್ಕು ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಮತ್ತು ನ್ಯಾಯಮೂರ್ತಿಗಳು ಅಂದಿನ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳೊಂದಿಗಿನ ತಮ್ಮ ಭಿನ್ನಾಭಿಪ್ರಾಯದ ಬಗ್ಗೆ, ರೋಸ್ಟರ್ ಅನ್ನು ನಿರ್ಧರಿಸುವ ವಿಧಾನ, ನ್ಯಾಯಾಂಗ ಪ್ರಕ್ರಿಯೆಯ ಸಮಗ್ರತೆ, ಸಾಂಸ್ಥಿಕ ಸಮಗ್ರತೆ ಇತ್ಯಾದಿಗಳನ್ನು ಪ್ರಶ್ನಿಸಿದರು. ನ್ಯಾಯಾಂಗದ ಪ್ರಮುಖ ತತ್ವಗಳು ಬಾಯಿಮಾತಿಗಷ್ಟೇ ಉಳಿದಿದ್ದು, ನೈತಿಕವಾಗಿ ರಾಜಿ ಮಾಡಿಕೊಂಡಿವೆ ಎಂದು ಅವರು ಬಹಿರಂಗವಾಗಿ ದೂರಿದ್ದರು. ಹೀಗಿರುವಾಗ ಮುಖ್ಯ ನ್ಯಾಯಮೂರ್ತಿಗಳ ಬಗೆಗಿನ ಟೀಕೆಯು ನ್ಯಾಯಾಂಗ ನಿಂದನೆಯಾಗಲು ಹೇಗೆ ಸಾಧ್ಯ ಎಂದು ಅವರು ಪ್ರಶ್ನಿಸಿದ್ದಾರೆ.

ಪ್ರಶಾಂತ್‌ ಭೂಷಣ್‌ರವರ ಟ್ವೀಟ್‌ಗಳು ಅಪರಾಧವಲ್ಲ. ಅವರು ಸಮಾಜದ ಅನೇಕ ದುರ್ಬಲ ವರ್ಗಗಳ ಪರವಾಗಿ ಕೆಲಸ ಮಾಡಿದ ಅಪರೂಪದ ನ್ಯಾಯವಾದಿ. ಈ ನಿರ್ಣಾಯಕ ಹಂತದಲ್ಲಿ, ನಾವು ಧ್ವನಿ ಇಲ್ಲದವರ ಧ್ವನಿಯಾದ ಪ್ರಶಾಂತ್ ಭೂಷಣ್ ಅವರೊಂದಿಗೆ ನಿಲ್ಲುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಪ್ರಶಾಂತ್‌ ಭೂಷಣ್‌ರವರೊಂದಿಗೆ ಐಕ್ಯಮತ್ಯ ಸಾರಲು ದಿನಾಂಕ 18.08.2020 ರಂದು, ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.00 ರ ನಡುವೆ, ನಾವು ವಕೀಲರು ಮತ್ತು ಮಾನವ ಹಕ್ಕುಗಳ ಕಾರ್ಯಕರ್ತರ ಗುಂಪು, ಮೌರ್ಯ ವೃತ್ತದಲ್ಲಿ ಒಟ್ಟುಗೂಡುತ್ತೇವೆ ಎಂದು ಎಸ್‌.ಬಾಲನ್‌ರವರು ತಿಳಿಸಿದ್ದಾರೆ.


ಇದನ್ನೂ ಓದಿ: ಪ್ರಶಾಂತ್ ಭೂಷಣ್ ಪ್ರಕರಣ: ಪುನರ್ ಪರಶೀಲನಾ ಮನವಿ ಸಲ್ಲಿಸಲು ವಕೀಲರಿಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...