Homeಚಳವಳಿಸಂಸತ್ತನ್ನು ಹೇಗೆ ನಡೆಸಬೇಕೆಂದು ನಾವು ಒಕ್ಕೂಟ ಸರ್ಕಾರಕ್ಕೆ ತೋರಿಸುತ್ತೇವೆ - ಯೋಗೇಂದ್ರ ಯಾದವ್

ಸಂಸತ್ತನ್ನು ಹೇಗೆ ನಡೆಸಬೇಕೆಂದು ನಾವು ಒಕ್ಕೂಟ ಸರ್ಕಾರಕ್ಕೆ ತೋರಿಸುತ್ತೇವೆ – ಯೋಗೇಂದ್ರ ಯಾದವ್

ಕೃಷಿ ಕಾಯ್ದೆಗಳ ವಿರುದ್ಧ ರೈತರೊಂದಿಗೆ ವಿರೋಧ ಪಕ್ಷಗಳು ಒಗ್ಗಟ್ಟಿನ ಹೋರಾಟ ನಡೆಸಿದ್ದಾರೆ.

- Advertisement -
- Advertisement -

ಸಂಸತ್ತಿನ ಮಾನ್ಸೂನ್ ಅಧಿವೇಶನ ನಾಲ್ಕನೇ ಕಾಲಿಟ್ಟವೇಳೆ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ದನಿಯೆತ್ತಿದ್ದಾರೆ. ಕಾಂಗ್ರೆಸ್, ಟಿಎಂಸಿ, ಸಿಪಿಐ, ಸಿಪಿಐ, ಡಿಎಂಕೆ, ಅಕಾಲಿ ದಳ ಸೇರಿದಂತೆ ಪ್ರಮುಖ ವಿರೋಧ ಪಕ್ಷಗಳು ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಿದ್ದಾರೆ.

“ಅವರು ಅಸತ್ಯ, ಅನ್ಯಾಯ, ದುರಹಂಕಾರ ತೋರಿಸುತ್ತಿದ್ದಾರೆ. ನಾವು ಸತ್ಯಾಗ್ರಹಿಗಳು, ನಿರ್ಭೀತರು, ಇಲ್ಲಿ ಒಂದಾಗಿ ನಿಂತಿದ್ದೇವೆ. ಜೈ ಕಿಸಾನ್” ಎಂದು ರಾಹುಲ್ ಗಾಂಧಿ ಪ್ರತಿಭಟನೆಯ ಫೋಟೊವನ್ನು ಟ್ವೀಟ್ ಮಾಡಿದ್ದಾರೆ.

ಶಿರೋಮಣಿ ಅಕಾಲಿ ದಳದ ಸಂಸದರು ಸಂಸತ್ತಿನ ಮುಂದೆ ಕೃಷಿ ಕಾಯ್ದೆಗಳ ವಿರುದ್ಧ ಭಿತ್ತಿಪತ್ರ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಮುಂದೆ ಭಿತ್ತಿಪತ್ರಗಳನ್ನು ತೋರಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಡಪಕ್ಷಗಳು, ಆರ್‌ಜೆಡಿ, ಡಿಎಂಕೆ ಸೇರಿ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಇನ್ನೊಂದೆಡೆ ರೈತರು ಜಂತರ್ ಮಂತರ್‌ನಲ್ಲಿ ‘ಕಿಸಾನ್ ಪಾರ್ಲಿಮೆಂಟ್’ ನಡೆಸುವ ಮೂಲಕ ಹೊರಗಿನಿಂದ ಸರ್ಕಾರದ ಮೇಲೆ ಒತ್ತಡ ತರಲು ಮುಂದಾಗಿದ್ದಾರೆ. 200 ಕ್ಕೂ ಹೆಚ್ಚು ರೈತರು ಸಿಂಘು ಗಡಿಯಿಂದ ಪಾದಯಾತ್ರೆ ನಡೆಸಿ ಜಂತರ್ ಮಂತರ್ ತಲುಪಿದ್ದಾರೆ. ಸ್ವರಾಜ್ ಇಂಡಿಯಾದ ಮುಖ್ಯಸ್ಥ ಯೋಗೇಂದ್ರ ಯಾದವ್, ಬಿಕೆಯುವಿನ ರಾಕೇಶ್ ಟಿಕಾಯತ್ ಸೇರಿದಂತೆ ಪ್ರಮುಖರ ಹೋರಾಟದ ನೇತೃತ್ವ ವಹಿಸಿದ್ದಾರೆ.

ಕೃಷಿ ಕಾಯ್ದೆಗಳಿಗೆ ಚಿಕಿತ್ಸೆ ಸಂಸತ್ತಿನಲ್ಲಿ ನೀಡಬೇಕು. ಸಂಸತ್ತಿನಲ್ಲಿ ಕುಳಿತಿರುವವರಿಗೆ ನಾವು ಚಿಕಿತ್ಸೆ ನೀಡುತ್ತೇವೆ. ‘ಎಂಟು ತಿಂಗಳ ಹಿಂದೆ ಸರ್ಕಾರ ನಮ್ಮನ್ನು ರೈತರೆಂದು ಪರಿಗಣಿಸಲು ಸಿದ್ದರಿರಲಿಲ್ಲ. ಈಗ ಪರಿಗಣಿಸುತ್ತಿದ್ದಾರೆ. ಅವರು ಷರತ್ತಬದ್ದ ಮಾತುಕತೆಯನ್ನು ಮಾತ್ರ ಬಯಸುತ್ತಿದ್ದಾರೆ. ಅದಕ್ಕೆ ನಮ್ಮ ಒಪ್ಪಿಗೆಯಿಲ್ಲ’ ಎಂದು ರಾಕೇಶ್ ಟಿಕಾಯತ್ ಹೇಳಿದರೆ “ಸಂಸತ್ತನ್ನು ಹೇಗೆ ನಡೆಸಬೇಕು ಎಂಬುದನ್ನು ನಾವು ಒಕ್ಕೂಟ ಸರ್ಕಾರಕ್ಕೆ ತೋರಿಸುತ್ತೇವೆ” ಎಂದು ರೈತ ಮುಖಂಡ ಯೋಗೇಂದ್ರ ಯಾದವ್ ಹೇಳಿದ್ದಾರೆ.

ಆಗಸ್ಟ್ 09ರವರೆಗೂ ಪ್ರತಿದಿನ ನಮ್ಮ ಕಿಸಾನ್ ಪಾರ್ಲಿಮೆಂಟ್ ನಡೆಯಲಿದೆ. ನಾವು ಶಾಂತಿ ಮತ್ತು ಉತ್ಸಾಹದಿಂದ ಅಧಿವೇಶನ ನಡೆಸುತ್ತೇವೆ ಎಂದು ರೈತರು ಘೋಷಿಸಿದ್ದಾರೆ. ರೈತ ಹೋರಾಟವನ್ನು ವರದಿ ಮಾಡಲು ಪತ್ರಕರ್ತರಿಗೆ ಅವಕಾಶ ನೀಡುತ್ತಿಲ್ಲ, ಜಂತರ್ ಮಂತರ್ ಮೈದಾನ ಪ್ರವೇಶಿಸಲು ಬಿಡುತ್ತಿಲ್ಲ ಎಂದು ಪತ್ರಕರ್ತರು ಆರೋಪಿಸಿ ಧರಣಿ ನಡೆಸಿದ್ದಾರೆ.


ಇದನ್ನೂ ಓದಿ: ಸಂಸತ್ ಸದಸ್ಯರಿಗೆ ಮತದಾರರ ವಿಪ್ ನೀಡಿದ ಸಂಯುಕ್ತ ಹೋರಾಟ ಕರ್ನಾಟಕ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...