Homeಮುಖಪುಟ"ಕೈಗೆ ಬೇಡಿ, ಕಾಲಿಗೆ ಸಂಕೋಲೆ ಹಾಕಲಾಗಿತ್ತು"...ಅಮೆರಿಕದಿಂದ ಗಡಿಪಾರಾದ ಭಾರತೀಯರ ಅಳಲು

“ಕೈಗೆ ಬೇಡಿ, ಕಾಲಿಗೆ ಸಂಕೋಲೆ ಹಾಕಲಾಗಿತ್ತು”…ಅಮೆರಿಕದಿಂದ ಗಡಿಪಾರಾದ ಭಾರತೀಯರ ಅಳಲು

- Advertisement -
- Advertisement -

ಅಕ್ರಮ ವಲಸಿಗರು ಎಂದು ಗುರುತಿಸಲಾದ ಭಾರತೀಯ ಪ್ರಜೆಗಳನ್ನು ಗಡಿಪಾರು ಮಾಡಿರುವ ಅಮೆರಿಕ ತನ್ನ ಸೇನಾ ವಿಮಾನದಲ್ಲಿ ಕಳುಹಿಸಿಕೊಟ್ಟಿದೆ. ಮೊದಲ ಹಂತದಲ್ಲಿ 104 ಭಾರತೀಯರನ್ನು ಹೊತ್ತ ವಿಮಾನ ಪಂಜಾಬ್‌ನ ಅಮೃತಸರಕ್ಕೆ ಬುಧವಾರ (ಫೆ.5) ಬಂದು ತಲುಪಿದೆ.

“ಎಲ್ಲಾ ಅಕ್ರಮ ವಲಸಿಗರನ್ನು ದೇಶದಿಂದ ಹೊರದುಬ್ಬುತ್ತೇವೆ” ಎಂದು ಚುನಾವಣಾ ಪೂರ್ವದಲ್ಲಿ ವಾಗ್ದಾನ ಮಾಡಿದ್ದ ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅಧಿಕಾರಕ್ಕೇರಿದ ಬಳಿಕ ಹೇಳಿದಂತೆ ಮಾಡಿದ್ದಾರೆ. ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳ ಸಾವಿರಾರು ಜನರನ್ನು ಗಡಿಪಾರು ಮಾಡುವ ಪ್ರಕ್ರಿಯೆ ಪ್ರಾರಂಭಗೊಂಡಿದೆ.

ಅಮೃತಸರ ವಿಮಾನ ನಿಲ್ದಾಣದಲ್ಲಿ ಬುಧವಾರ ಬಂದಿಳಿದ ಪಂಜಾಬ್ ಮತ್ತು ಹರಿಯಾಣ ಮೂಲದ ಅಕ್ರಮ ವಲಸಿಗರು, ಎಲ್ಲಾ ವಿಧಿ ವಿಧಾನಗಳ ಬಳಿಕ ಪೊಲೀಸ್ ವಾಹನಗಳಲ್ಲಿ ತಮ್ಮ ಊರಿನತ್ತ ತೆರಳಿದ್ದಾರೆ.

ಗಡಿಪಾರು ಮಾಡಲಾದ ಭಾರತೀಯ ವಲಸಿಗರಲ್ಲಿ ಒಬ್ಬರಾದ ಹರಿಯಾಣದ ಜಸ್ಪಾಲ್ ಸಿಂಗ್ “ನಮ್ಮ ಕೈಗೆ ಬೇಡಿ, ಕಾಲಿಗೆ ಸಂಕೋಲೆ ಬಿಗಿದು ಅಮೆರಿಕದಿಂದ ಹೊರದಬ್ಬಲಾಗಿತ್ತು. ಅಮೃತಸರ ವಿಮಾನ ನಿಲ್ದಾಣದಲ್ಲಿ ಅವುಗಳನ್ನು ತೆಗೆಯಲಾಗಿದೆ” ಎಂದು ತಮ್ಮ ನೋವು ತೋಡಿಕೊಂಡಿದ್ದಾರೆ.

“ಮೊದಲಿಗೆ ನಮ್ಮನ್ನು ಭಾರತಕ್ಕೆ ಕರೆದೊಯ್ಯಲಾಗುತ್ತಿದೆ ಎಂದು ತಿಳಿದಿರಲಿಲ್ಲ. ನಮ್ಮನ್ನು ಬೇರೆ ಶಿಬಿರಕ್ಕೆ ಕರೆದೊಯ್ಯಲಾಗುತ್ತಿದೆ ಎಂದು ನಾವು ಭಾವಿಸಿದ್ದೆವು. ನಂತರ ಒಬ್ಬರು ಪೊಲೀಸ್ ಅಧಿಕಾರಿ ನಮ್ಮನ್ನು ಭಾರತಕ್ಕೆ ಕರೆದೊಯ್ಯಲಾಗುತ್ತಿದೆ ಎಂದು ಹೇಳಿದರು. ನಮ್ಮ ಕೈಗಳಿಗೆ ಕೋಳ ಹಾಕಿ, ಕಾಲುಗಳಿಗೆ ಸರಪಳಿ ಬಿಗಿಯಲಾಗಿತ್ತು. ಅಮೃತಸರ ವಿಮಾನ ನಿಲ್ದಾಣದಲ್ಲಿ ಅವುಗಳನ್ನು ತೆಗೆಯಲಾಗಿದೆ” ಎಂದು ಜಸ್ಪಾಲ್ ಸಿಂಗ್ ವಿವರಿಸಿದ್ದಾರೆ.

“ಅಮೆರಿಕಕ್ಕೆ ಕಾನೂನುಬದ್ಧ ಪ್ರವೇಶದ ಭರವಸೆ ನೀಡಿದ್ದ ಟ್ರಾವೆಲ್ ಏಜೆಂಟ್‌ನಿಂದ ನನಗೆ ವಂಚನೆಯಾಗಿದೆ. ಸರಿಯಾದ ಯುಎಸ್ ವೀಸಾ ಪಡೆದ ನಂತರ ನನ್ನನ್ನು ಕಳುಹಿಸಲು ನಾನು ಏಜೆಂಟರನ್ನು ಕೇಳಿದ್ದೆ. ಆದರೆ, ಅವರು ನನ್ನನ್ನು ವಂಚಿಸಿದರು. ಏಜೆಂಟರೊಂದಿಗಿನ ಒಪ್ಪಂದವನ್ನು 30 ಲಕ್ಷ ರೂ.ಗೆ ಅಂತಿಮಗೊಳಿಸಲಾಗಿತ್ತು” ಎಂದು ಹೇಳಿದ್ದಾರೆ.

“ಕಳೆದ ವರ್ಷ ಜುಲೈನಲ್ಲಿ ತಾನು ವಿಮಾನದ ಮೂಲಕ ಬ್ರೆಝಿಲ್ ತಲುಪಿದ್ದಾಗಿ ಜಸ್ಪಾಲ್ ಹೇಳಿಕೊಂಡಿದ್ದಾರೆ. ಮುಂದಿನ ಹಂತದ ಅಮೆರಿಕ ಪ್ರಯಾಣವೂ ವಿಮಾನದ ಮೂಲಕವೇ ಆಗಲಿದೆ ಎಂದು ಭರವಸೆ ನೀಡಲಾಗಿತ್ತು. ಆದರೆ, ತನ್ನ ಏಜೆಂಟ್ ಅಕ್ರಮವಾಗಿ ಗಡಿ ದಾಟುವಂತೆ ಒತ್ತಾಯಿಸಿ ವಂಚಿಸಿದ” ಎಂದು ತಿಳಿಸಿದ್ದಾರೆ.

“ಬ್ರೆಝಿಲ್‌ನಲ್ಲಿ ಆರು ತಿಂಗಳು ತಂಗಿದ್ದ ನಾನು ಗಡಿ ದಾಟಿ ಅಮೆರಿಕ ತಲುಪಿದೆ. ಆದರೆ ಅಮೆರಿಕದ ಗಡಿ ಗಸ್ತು ಪಡೆಯಿಂದ ಬಂಧಿನಕ್ಕೊಳಗಾದೆ. ಅವರು 11 ದಿನಗಳ ಕಾಲ ಕಸ್ಟಡಿಯಲ್ಲಿಟ್ಟು ನಂತರ ಮನೆಗೆ ಕಳುಹಿಸಿದರು” ಎಂದು ಜಸ್ಪಾಲ್ ಹೇಳಿದ್ದಾರೆ.

“ಅಮೆರಿಕಕ್ಕೆ ತೆರಳಲು ಸಾಲ ಪಡೆದು ದೊಡ್ಡ ಮೊತ್ತದ ಹಣ ಖರ್ಚು ಮಾಡಿದ್ದೆ.ಇದೀಗ ಗಡಿಪಾರು ಮಾಡುವಿಕೆಯಿಂದ ತಾನು ಜರ್ಜರಿತನಾಗಿದ್ದೇನೆ” ಎಂದು ಜಸ್ಪಾಲ್ ಹೇಳಿಕೊಂಡಿದ್ದಾರೆ.

ಗಡಿಪಾರು ಪ್ರಕ್ರಿಯೆ ಕುರಿತು ಮಾತನಾಡಿರುವ ಜಸ್ಪಾಲ್, “ಇದು ಸರ್ಕಾರಗಳ ಸಮಸ್ಯೆ. ನಾವು ಕನಸುಗಳನ್ನು ಹೊತ್ತು ನಮ್ಮ ಕುಟುಂಬದ ಭವಿಷ್ಯಕ್ಕಾಗಿ ಉದ್ಯೋಗ ನಿಮಿತ್ತ ವಿದೇಶಕ್ಕೆ ಹೋಗಿರುತ್ತೇವೆ. ಯಾರದ್ದೋ ತಪ್ಪಿಗೆ ನಾವು ಬಲಿಪಶುಗಳಾಗಿದ್ದೇವೆ” ಎಂದಿದ್ದಾರೆ.

Courtesy : timesofindia.indiatimes.com

ಬಾಂಗ್ಲಾದೇಶ | ರಾಷ್ಟ್ರಪಿತ ಶೇಖ್ ಮುಜಿಬುರ್ ರೆಹಮಾನ್ ಮನೆ ಧ್ವಂಸಗೊಳಿಸಿದ ಪ್ರತಿಭಟನಾಕಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...

ಲೈಂಗಿಕ ಕಿರುಕುಳದ ಆರೋಪ ಮಾಡಿದ ಪತ್ರಕರ್ತೆಯ ವಿರುದ್ಧ ಜಾತಿ ನಿಂದನೆ ಪ್ರಕರಣ: ಬಲವಂತದ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಗಳನ್ನು ವರದಿ ಮಾಡುವಾಗ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ವಿವೇಕ್ ಭಗತ್ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಮಹಿಳಾ ಪತ್ರಕರ್ತೆಯ ವಿರುದ್ಧ ದಾಖಲಾಗಿರುವ...

ಸಿಇಸಿ ವಿರೋಧಿ ಪ್ರತಿಭಟನೆ: ಮೆಟ್ರೋ ನಿರ್ಬಂಧ, ಇಂಟರ್ನೆಟ್ ಸ್ಥಗಿತ ಪ್ರಕರಣ: ಸುಪ್ರೀಂ ಕೋರ್ಟ್ ಗೆ ಬೇಷರತ್ ಕ್ಷಮೆಯಾಚಿಸಿದ ಕೇಂದ್ರ ಕಾರ್ಯದರ್ಶಿ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಅಕ್ಟೋಬರ್ 10ರಂದು ದೆಹಲಿಯಲ್ಲಿ ನಡೆದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮೆಟ್ರೋ ಮತ್ತು ರೈಲು ಸೇವೆಗಳ ಮೇಲೆ ನಿರ್ಬಂಧ ವಿಧಿಸಿದ ಹಾಗೂ ಇಂಟರ್ನೆಟ್...

‘ಯಾರೂ ನಮ್ಮನ್ನು ಬೆದರಿಸಿ ಮಣಿಸಲು ಸಾಧ್ಯವಿಲ್ಲ’: ವಿಪಕ್ಷಗಳ ಸುಪ್ರೀಂ ಕೋರ್ಟ್ ಮಾರ್ಚ್ ಕುರಿತು ಸಿಜೆಐ ಹೇಳಿಕೆ

ನ್ಯಾಯಾಲಯ ಸಂಕೀರ್ಣಗಳ ಸಮೀಪ ಪ್ರತಿಭಟನೆಗಳು ಮತ್ತು ಮೆರವಣಿಗೆಗಳಿಗೆ ನಿಯಂತ್ರಕ ಚೌಕಟ್ಟೊಂದನ್ನು ರೂಪಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ಸಂಬಂಧ ಸುಪ್ರೀಂ ಕೋರ್ಟ್ ಇಂದು (ಅ.15) ನೋಟಿಸ್ ಜಾರಿ ಮಾಡಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...

ದೆಹಲಿ ಪ್ರತಿಭಟನೆ ಹಾಗೂ ಜಂತರ್ ಮಂತರ್ ರದ್ದತಿ ವಿವಾದ: ಕೇಂದ್ರ ಸರ್ಕಾರ ಹಾಗೂ ಪೊಲೀಸರಿಗೆ ಸುಪ್ರೀಂ ನೋಟಿಸ್; ವಿಡಿಯೋ ಸಾಕ್ಷ್ಯ ಭದ್ರಪಡಿಸಲು ನಿರ್ದೇಶನ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ನಡೆಸಿದ್ದರೆನ್ನಲಾದ ಅತಿಯಾದ ಬಲಪ್ರಯೋಗ, ಸಾರ್ವಜನಿಕರ ಸಂಚಾರ ನಿರ್ಬಂಧ ಹಾಗೂ ಪ್ರಮುಖ ಪ್ರತಿಭಟನಾ ಸ್ಥಳವಾಗಿದ್ದ 'ಜಂತರ್ ಮಂತರ್' ಅನ್ನು ರದ್ದುಗೊಳಿಸಿದ (De-notification) ಕೇಂದ್ರ...

ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಂಡವರಿಗೆ ‘ಹಿಂದುಳಿದ ವರ್ಗದ’ ಮೀಸಲಾತಿ ಇಲ್ಲ : ಮದ್ರಾಸ್ ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ ಕೋರ್ಟ್

ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವ ವ್ಯಕ್ತಿಯು ತನ್ನ ಮತಾಂತರ ಪೂರ್ವದ ಜಾತಿ ಸ್ಥಿತಿಯ ಆಧಾರದ ಮೇಲೆ ಹಿಂದುಳಿದ ವರ್ಗದ (ಬಿಸಿ) ಮೀಸಲಾತಿಗೆ ಅರ್ಹನಲ್ಲ ಎಂದು ತೀರ್ಪು ನೀಡಿದ್ದ ಮದ್ರಾಸ್ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್...

‘ಎಸ್‌ಐಆರ್’ ವಿರುದ್ಧ ಇಂಡಿಯಾ ನಾಯಕರ ಅರ್ಜಿ: ಸುಪ್ರೀಂ ಕೋರ್ಟ್‌ನಿಂದ ಚುನಾವಣಾ ಆಯೋಗಕ್ಕೆ ನೋಟಿಸ್

ಭಾರತೀಯ ಚುನಾವಣಾ ಆಯೋಗ ದೇಶಾದ್ಯಂತ ಜಾರಿಗೆ ತಂದಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯ ಕಾನೂನಾತ್ಮಕತೆಯನ್ನು ಪ್ರಶ್ನಿಸಿ ವಿಪಕ್ಷ 'ಇಂಡಿಯಾ' ಒಕ್ಕೂಟ ಸಲ್ಲಿಸಿರುವ ಪ್ರಮುಖ...

ಸಿಇಸಿ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್‌ಗೆ ಭಾರತ ತೊರೆಯುವಂತೆ ನೋಟಿಸ್: ಅಕ್ಟೋಬರ್ 28ರ ಗಡುವು

ಮುಂಬೈ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಮುಂಬೈನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್ ಅವರಿಗೆ ಅಕ್ಟೋಬರ್ 28ರೊಳಗೆ ಭಾರತ ತೊರೆಯುವಂತೆ...

2018ರ ‘ಬಿಜೆಪಿ ಐಟಿ ಸೆಲ್’ ವೀಡಿಯೊ ವಿವಾದ: ಯೂಟ್ಯೂಬರ್ ಧ್ರುವ್ ರಾಠಿಗೆ ಹೊಸ ಸಮನ್ಸ್ ಜಾರಿ ಮಾಡಿದ ದೆಹಲಿ ಕೋರ್ಟ್!

ಡಿಜಿಟಲ್ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದ್ದ 2018ರ ಕ್ರಿಮಿನಲ್ ಮಾನಹಾನಿ ದೂರಿಗೆ (Criminal Defamation Case) ಸಂಬಂಧಿಸಿದಂತೆ, ಪ್ರಸಿದ್ಧ ಯೂಟ್ಯೂಬರ್ ಧ್ರುವ್ ರಾಠಿ ಅವರಿಗೆ ದೆಹಲಿಯ ಸಾಕೇತ್ ನ್ಯಾಯಾಲಯವು ಹೊಸದಾಗಿ...