Homeಮುಖಪುಟಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

- Advertisement -
- Advertisement -

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ ಪೌರತ್ವ ನಿಯಮಗಳು ಮತ್ತು ಗುರುತಿನ ಚೀಟಿಗಳು ಜಾರಿಗೆ ಬರುವ ಮುನ್ನವೇ ತಾವು ಈ ಭೂಮಿಯಲ್ಲಿ ಬದುಕುತ್ತಿರುವುದರಿಂದ, ಈ ಆಧುನಿಕ ದಾಖಲಾತಿ ವ್ಯವಸ್ಥೆಗಳು ತಮಗೆ ಅನ್ವಯಿಸುವುದಿಲ್ಲ ಎಂದು ವಾದಿಸಿರುವುದಾಗಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ತಮ್ಮ ಪುರಾತನ ಅಸ್ತಿತ್ವ ಮತ್ತು ಸಾಂಪ್ರದಾಯಿಕ ಗುರುತನ್ನು ಉಳಿಸಿಕೊಳ್ಳಲು ಈ ಸಮುದಾಯವು ಪ್ರಸ್ತುತ ಎಸ್‌ಐಆರ್ ಪ್ರಕ್ರಿಯೆಯಿಂದ ದೂರ ಉಳಿಯಲು ನಿರ್ಧರಿಸಿದೆ ಎಂದು ವರದಿ ಉಲ್ಲೇಖಿಸಿದೆ.

ಖುಂತಿ ಬ್ಲಾಕ್‌ನ (ತಾಲೂಕು) ಬಾರ್‌ಬಾಂಡಾ ಗ್ರಾಮದ ಮುಂಡಾ ಸಮುದಾಯದ ಸದಸ್ಯರು ತಮ್ಮನ್ನು ‘ಎಸಿ’ (AC) ಸಮುದಾಯ’ ಎಂದು ಕರೆದುಕೊಳ್ಳುತ್ತಾರೆ. ಇಲ್ಲಿ ‘ಎಸಿ’ ಎಂದರೆ ‘Ante Christum’, ಅಂದರೆ ಕ್ರಿಸ್ತಪೂರ್ವ ಎಂದರ್ಥ. ತಾವು ಈ ಭೂಮಿಯ ಅತ್ಯಂತ ಪುರಾತನ ಮೂಲ ನಿವಾಸಿಗಳು ಎಂಬುವುದನ್ನು ಸಾಬೀತುಪಡಿಸಲು ಅಥವಾ ಬಿಂಬಿಸಲು ಅವರು ತಮ್ಮ ಹೆಸರುಗಳ ಮುಂದೆ ‘ಎಸಿ’ ಎಂಬ ಪದವನ್ನು ಬಳಸುತ್ತಾರೆ.

“ನಮಗೆ ಯಾವುದೇ ದಾಖಲೆಗಳು ಬೇಡ, ನಾವು ಏಸುಕ್ರಿಸ್ತನ ಜನನಕ್ಕೂ ಮುಂಚಿನಿಂದಲೂ ಅಸ್ತಿತ್ವದಲ್ಲಿದ್ದೇವೆ. ಇದೇ ಕಾರಣಕ್ಕಾಗಿ ನಾವು ನಮ್ಮ ಹೆಸರುಗಳ ಮುಂದೆ ‘ಎಸಿ’ ಎಂದು ಬಳಸುತ್ತೇವೆ” ಎಂಬುವುದಾಗಿ ಗ್ರಾಮದ ನಿವಾಸಿ ಎಸಿ ಮಂಗ್ರಾ ಮುಂಡಾ ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಉಲ್ಲೇಖಿಸಿದೆ.

ಎಸ್‌ಐಆರ್ ತಿರಸ್ಕರಿಸುತ್ತಿರುವುದು ಸರ್ಕಾರದ ಕಲ್ಯಾಣ ಯೋಜನೆಗಳು ಹಾಗೂ ಗುರುತಿನ ವ್ಯವಸ್ಥೆಗಳಿಂದ ಸಂಪೂರ್ಣವಾಗಿ ದೂರ ಉಳಿಯುವ ಸಮುದಾಯದ ವಿಶಾಲ ನಿರ್ಧಾರದ ಒಂದು ಭಾಗವಾಗಿದೆ. ತಾವು ಆಧಾರ್ ಕಾರ್ಡ್ ಅಥವಾ ಇತರ ಯಾವುದೇ ಗುರುತಿನ ದಾಖಲೆಗಳನ್ನು ಹೊಂದಿಲ್ಲ ಮತ್ತು ಸರ್ಕಾರದ ಪಡಿತರ ಸೌಲಭ್ಯಗಳನ್ನೂ ಪಡೆಯುತ್ತಿಲ್ಲ ಎಂದು ಅಲ್ಲಿನ ನಿವಾಸಿಗಳು ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಜೇಡಿಮಣ್ಣಿನ ಹೆಂಚಿನ ಛಾವಣಿಗಳನ್ನು ಹೊಂದಿರುವ ಮಣ್ಣಿನ ಮನೆಗಳಲ್ಲಿ ವಾಸಿಸುವ ಈ ಸಮುದಾಯದ ಜನರ ದೈನಂದಿನ ಜೀವನವು ಕೃಷಿ, ಕಾಡುಗಳು ಮತ್ತು ಸಾಂಪ್ರದಾಯಿಕ ಆಚರಣೆಗಳನ್ನು ಅವಲಂಬಿಸಿದೆ. ಇಲ್ಲಿನ ನಿವಾಸಿಗಳು ಅಕ್ಕಿ, ರಾಗಿ, ಕರಿಬೇವು ಮತ್ತು ತರಕಾರಿಗಳನ್ನು ಬೆಳೆಯುತ್ತಾರೆ. ಅವರು ಹೆಚ್ಚಾಗಿ ಗ್ಯಾಜೆಟ್‌ಗಳು, ಅಡುಗೆ ಅನಿಲ ಮತ್ತು ಇತರ ಆಧುನಿಕ ಸೌಕರ್ಯಗಳಿಂದ ದೂರು ಇದ್ದಾರೆ. ಪುರುಷರು ಬಿಳಿ ಧೋತಿ, ಶರ್ಟ್ ಅಥವಾ ಕುರ್ತಾಗಳು ಮತ್ತು ಸಾಂಪ್ರದಾಯಿಕ ಪೇಠ ಧರಿಸುತ್ತಾರೆ. ಮಹಿಳೆಯರು ಬಿಳಿ ಸೀರೆ ಉಡುತ್ತಾರೆ. ಈ ಸಮುದಾಯದ ಜನರು ತಾವು ಧೂಮಪಾನ ಮಾಡುವುದಿಲ್ಲ ಮತ್ತು ಸ್ಥಳೀಯ ಅಕ್ಕಿ ಬ್ರೂವಾದ ‘ಹರಿಯಾ’ ಕುಡಿಯುವುದಿಲ್ಲ ಎಂದು ಹೇಳಿದ್ದಾರೆ.

ಮತದಾರರ ಪಟ್ಟಿ ಪರಿಷ್ಕರಣೆ ನಡೆಸುತ್ತಿರುವ ಅಧಿಕಾರಿಗಳು, ಸ್ಥಳೀಯರನ್ನು ಒಪ್ಪಿಸಲು ಪದೇ ಪದೇ ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ತಿಳಿಸಿದ್ದಾರೆ.

“ನಾವು ಪ್ರಕೃತಿಯ ನಿಯಮಗಳಿಗನುಸಾರವಾಗಿ ಬದುಕುತ್ತೇವೆ ಎಂದು ಅವರು ಹೇಳುತ್ತಾರೆ” ಎಂಬುವುದಾಗಿ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ದುಲಾರಿ ಹೊರೊ ಎಂಬವರು ತಿಳಿಸಿದ್ದಾರೆ. ಬುಧವಾರದ ಗಡುವಿಗಿಂತ ಮುಂಚಿತವಾಗಿ ಮತದಾರರ ವಿವರಗಳ ನಮೂನೆಯನ್ನು ಸಂಗ್ರಹಿಸಲು ಅವರು ಮತ್ತೊಮ್ಮೆ ಪ್ರಯತ್ನಿಸಿದಾಗ ಈ ವಿಷಯ ಬೆಳಕಿಗೆ ಬಂದಿದೆ ಎಂದು ವರದಿ ವಿವರಿಸಿದೆ.

“ಈ ಸಮುದಾಯದ ಮಕ್ಕಳು ಶಾಲೆಗೆ ಹೋಗುತ್ತಾರೆ, ಆದರೆ ಅಲ್ಲಿ ನೀಡುವ ಬಿಸಿಯೂಟವನ್ನು ತಿನ್ನುವುದಿಲ್ಲ” ಎಂದು ಹೊರೊ ಅವರು ಹೇಳಿದ್ದಾರೆ. “ಮಕ್ಕಳ ಜನನ ಸಾಮಾನ್ಯವಾಗಿ ಮನೆಗಳಲ್ಲೇ ಆಗುತ್ತದೆ ಮತ್ತು ಅನೇಕ ನವಜಾತ ಶಿಶುಗಳ ಹೆಸರನ್ನು ಸರ್ಕಾರಿ ದಾಖಲೆಗಳಲ್ಲಿ ನೋಂದಾಯಿಸುವುದಿಲ್ಲ” ಎಂದು ಅವರು ತಿಳಿಸಿದ್ದಾರೆ.

ಖುಂತಿ ಬಿಡಿಒ ಜ್ಯೋತಿ ಕುಮಾರಿ ಅವರು ಮಾತನಾಡಿ, ಬಾರ್‌ಬಾಂಡಾ ಗ್ರಾಮದ 27 ಅರ್ಹ ಮತದಾರರು ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ನಿರಾಕರಿಸಿದ್ದಾರೆ ಎಂದು ತಿಳಿಸಿದ್ದಾರೆ. ಖುಂತಿ ತಾಲ್ಲೂಕಿನ ಕನಿಷ್ಠ 15 ಬೂತ್‌ಗಳಲ್ಲಿ ಸುಮಾರು 700 ಜನರು ಮತದಾರರ ವಿವರಗಳ ನಮೂನೆಯನ್ನು ಸಲ್ಲಿಸಿಲ್ಲ ಎಂದು ಅವರು ಹೇಳಿದ್ದಾರೆ.

“ಅವರು (ಬುಡಕಟ್ಟು ಸಮುದಾಯದ ಜನರು) ಬಹುಮಟ್ಟಿಗೆ ಸರ್ಕಾರದ ಅಧಿಕೃತ ಕಲ್ಯಾಣ ಯೋಜನೆಗಳು ಮತ್ತು ಗುರುತಿನ ವ್ಯವಸ್ಥೆಗಳಿಂದ ಹೊರಗುಳಿದಿದ್ದಾರೆ” ಎಂದು ಕುಮಾರಿ ತಿಳಿಸಿದ್ದಾರೆ.

ಮುಖ್ಯ ಚುನಾವಣಾ ಅಧಿಕಾರಿ ಕೆ. ರವಿ ಕುಮಾರ್ ಅವರು ಮಾತನಾಡಿ, ಅಧಿಕಾರಿಗಳು ಸ್ಥಳೀಯರನ್ನು ಸಂಪರ್ಕಿಸುವ ಪ್ರಯತ್ನವನ್ನು ಮುಂದುವರಿಸಲಿದ್ದಾರೆ ಎಂದು ಹೇಳಿದ್ದಾರೆ. “ಅವರು ಭಾರತದ ನಾಗರಿಕರು, ಹಾಗಾಗಿ ನಾವು ಅವರಲ್ಲಿ ಜಾಗೃತಿ ಮೂಡಿಸಲು ಪ್ರಯತ್ನಿಸುತ್ತಲೇ ಇರುತ್ತೇವೆ” ಎಂದು ತಿಳಿಸಿದ್ದಾರೆ. “ಆದಾಗ್ಯೂ, ಅವರು ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾಗವಹಿಸದಿದ್ದರೆ, ಅಂತಿಮವಾಗಿ ಅವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಬಹುದು” ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...