Homeಮುಖಪುಟತೀರ್ಪಿಗೂ ಮುನ್ನ ನಮ್ಮನ್ನು ಗೃಹಬಂಧನದಲ್ಲಿಟ್ಟಿದ್ದರು: ಒಮರ್ ಅಬ್ದುಲ್ಲಾ

ತೀರ್ಪಿಗೂ ಮುನ್ನ ನಮ್ಮನ್ನು ಗೃಹಬಂಧನದಲ್ಲಿಟ್ಟಿದ್ದರು: ಒಮರ್ ಅಬ್ದುಲ್ಲಾ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿಯ ಕುರಿತು ಸುಪ್ರೀಂಕೋರ್ಟ್ ತೀರ್ಪು ನೀಡುವ ಮೊದಲು ನಮ್ಮನ್ನು ಪೊಲೀಸರು ಗೃಹಬಂಧನದಲ್ಲಿ ಇರಿಸಿದ್ದರು ಎಂದು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ನಾಯಕ ಒಮರ್ ಅಬ್ದುಲ್ಲಾ ಆರೋಪ ಮಾಡಿದ್ದಾರೆ.

ಆರ್ಟಿಕಲ್ 370 ತೀರ್ಪು ಪ್ರಕಟಿಸುವ ಮೊದಲು ಪೊಲೀಸರು ಮಫ್ತಿ ಅವರ ನಿವಾಸದ ಬಾಗಿಲುಗಳನ್ನು ಮುಚ್ಚಿದ್ದರು ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ (ಪಿಡಿಪಿ) ಟ್ವೀಟ್‌ನಲ್ಲಿ ತಿಳಿಸಿದೆ.

ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಮುಫ್ತಿ ಮತ್ತು ಒಮರ್ ಅಬ್ದುಲ್ಲಾ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಎಂಬ ಹೇಳಿಕೆಯನ್ನು ನಿರಾಕರಿಸಿದ್ದು, ಆರೋಪಗಳು ‘ಆಧಾರರಹಿತ’ ಎಂದು ಹೇಳಿದರು.

‘ಈ ಆರೋಪ ಸಂಪೂರ್ಣವಾಗಿ ಆಧಾರರಹಿತವಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜಕೀಯ ಕಾರಣಗಳಿಗಾಗಿ ಯಾರನ್ನೂ ಗೃಹಬಂಧನದಲ್ಲಿ ಇರಿಸಲಾಗಿಲ್ಲ ಹಾಗೂ ಬಂಧಿಸಿಲ್ಲ. ಇದೂ ಕೂಡ ವದಂತಿಗಳನ್ನು ಹರಡುವ ಪ್ರಯತ್ನವಾಗಿದೆ’ ಎಂದು ಅವರು ಹೇಳಿದರು.

ಈ ಬೆಳವಣಿಗೆಗಳ ನಡುವೆಯೇ ಶ್ರೀನಗರದ ಗುಪ್ಕರ್‌ನಲ್ಲಿರುವ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಮತ್ತು ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಅವರ ನಿವಾಸದ ಬಳಿಗೆ ಪತ್ರಕರ್ತರು ಬರುವುದಕ್ಕೆ ಪೊಲೀಸರು ಅವಕಾಶ ನೀಡಿಲ್ಲ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಪ್ರಕಟಿಸಿವೆ.

ಗುಪ್ಕಾರ್ ರಸ್ತೆಯ ಪ್ರವೇಶ ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು ಮತ್ತು ಎನ್‌ಸಿ ನಾಯಕರ ನಿವಾಸಕ್ಕೆ ಪತ್ರಕರ್ತರು ತೆರಳುವುದನ್ನು ನಿರಾಕರಿಸಲಾಗಿದೆ. ಒಮರ್ ಅಬ್ದುಲ್ಲಾ ಅವರು ಅಕ್ಟೋಬರ್ 2020 ರಲ್ಲಿ ತಮ್ಮ ಅಧಿಕೃತ ನಿವಾಸವನ್ನು ಖಾಲಿ ಮಾಡಿದ ನಂತರ ತಮ್ಮ ತಂದೆಯೊಂದಿಗೆ ವಾಸಿಸುತ್ತಿದ್ದಾರೆ.

ಶ್ರೀನಗರದ ಸಂಸತ್ ಸದಸ್ಯರಾದ ಫಾರೂಕ್ ಅಬ್ದುಲ್ಲಾ ಅವರು ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಚಳಿಗಾಲ ಅಧಿವೇಶನಕ್ಕಾಗಿ ದೆಹಲಿಯಲ್ಲಿದ್ದರೆ, ಅವರ ಮಗ ಕಾಶ್ಮೀರ ಕಣಿವೆಯಲ್ಲಿದ್ದಾರೆ.

ಆಗಸ್ಟ್ 5, 2019 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ತೆಗೆದುಹಾಕಲು ಮತ್ತು ಹಿಂದಿನ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲು ಕೇಂದ್ರವು ಮಸೂದೆಗಳನ್ನು ಅಂಗೀಕರಿಸಿದ ನಂತರ ಮುಫ್ತಿ, ಒಮರ್ ಅಬ್ದುಲ್ಲಾ, ಫಾರೂಕ್ ಅಬ್ದುಲ್ಲಾ ಮತ್ತು ಇತರ ಕಾಶ್ಮೀರಿ ನಾಯಕರನ್ನು ಬಂಧಿಸಿ ಗೃಹ ಬಂಧನಲ್ಲಿ ಇರಿಸಲಾಗಿತ್ತು.

ಇದನ್ನೂ ಓದಿ; ಜಮ್ಮು-ಕಾಶ್ಮೀರ 370ನೇ ವಿಧಿ ರದ್ದು: ಕೇಂದ್ರದ ನಿರ್ಧಾರ ಎತ್ತಿಹಿಡಿದ ಸುಪ್ರೀಂಕೋರ್ಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read