Homeಕರ್ನಾಟಕಮೇಲ್ಮನೆಯಲ್ಲಿ ಬಹುಮತ ಪಡೆದ ಬಳಿಕ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ : ಸಿಎಂ ಸಿದ್ದರಾಮಯ್ಯ

ಮೇಲ್ಮನೆಯಲ್ಲಿ ಬಹುಮತ ಪಡೆದ ಬಳಿಕ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮೇಲ್ಮನೆಯಲ್ಲಿ ನಾವು (ಕಾಂಗ್ರೆಸ್) ಬಹುಮತ ಪಡೆದ ನಂತರ ಭೂ ಸುಧಾರಣಾ ಕಾಯ್ದೆಗೆ ಮತ್ತೆ ತಿದ್ದುಪಡಿ ತಂದು ಕೃಷಿಕರ ಜಮೀನು ಉದ್ಯಮಿಗಳ ಪಾಲಾಗುತ್ತಿರುವುದಕ್ಕೆ ಕಡಿವಾಣ ಹಾಕುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮಂಗಳವಾರ ಆಯೋಜಿಸಿದ್ದ ಡಿ.ದೇವರಾಜ ಅರಸು ಅವರ 109ನೇ ಜನ್ಮ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಸಿಎಂ, ದೇವರಾಜ ಅರಸು ಅವರು ಕೃಷಿಕರ ಅನುಕೂಲಕ್ಕಾಗಿ ‘ಉಳುವವನೇ ಹೊಲದೊಡೆಯ’ ಎಂದು ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದರು. ಆದರೆ, ಬಿಜೆಪಿ ಸರ್ಕಾರ ಅದಕ್ಕೆ ತಿದ್ದುಪಡಿ ತಂದ ಪರಿಣಾಮ ಉದ್ಯಮಿಗಳೂ ಕೃಷಿಕರ ಭೂಮಿ ಪಡೆಯುವಂತವಾಗಿದೆ ಎಂದಿದ್ದಾರೆ.

ಭೂ ಸುಧಾರಣಾ ಕಾಯ್ದೆ-1961ಕ್ಕೆ ಅರಸು ಅವರು ತಿದ್ದುಪಡಿ ತಂದ ಉಪಬಂಧ ’79 ಎ’ ಮತ್ತು ‘ಬಿ’ಯನ್ನು ಬಿಜೆಪಿ ಸರ್ಕಾರ ರದ್ದುಪಡಿಸಿದೆ. ಇದರಿಂದ ಕೃಷಿ ಕುಟುಂಬದವರು ಮಾತ್ರ ಕೃಷಿ ಭೂಮಿ ಖರೀದಿಸಬಹುದು, ಕೃಷಿ ಆದಾಯದ ಮಿತಿ 25 ಲಕ್ಷ ರೂಪಾಯಿ ಒಳಗಿದ್ದವರೂ ಮಾತ್ರ ಜಮೀನು ಖರೀದಿಸಬಹುದು ಎಂಬುವುದು ಕೊನೆಗೊಂಡಿದೆ ಎಂದು ಸಿಎಂ ಹೇಳಿದ್ದಾರೆ.

ಕಾಯ್ದೆ ರದ್ದಾದ ಬಳಿಕ ವಿಚಾರಣೆಗೆ ಬಾಕಿಯಿದ್ದ 13 ಸಾವಿರಕ್ಕೂ ಹೆಚ್ಚು ಪ್ರಕರಣಗಳನ್ನು ಕೈಬಿಟ್ಟು, ಉಳ್ಳವರಿಗೆ ಅನುಕೂಲ ಮಾಡಿಕೊಡಲಾಗಿದೆ. ಬಡವರ, ಹಿಂದುಳಿದವರ ವಿರೋಧಿಯಾದ ಕಾಯ್ದೆ ತಿದ್ದುಪಡಿ ರದ್ದುಗೊಳಿಸಿ, ಪರಿಶಿಷ್ಷ ಜಾತಿ, ಪರಿಶಿಷ್ಟ ಪಂಗಡದ ಜನರ ಭೂಮಿಯ ಹಕ್ಕು ಖಾತ್ರಿಪಡಿಸಲು ’79ಎ’ ಮತ್ತು ‘ಬಿ’ ಅನ್ನು ಮರು ಸ್ಥಾಪಿಸಲಾಗುವುದು ಎಂದಿದ್ದಾರೆ.

ವಿಧಾನಪರಿಷತ್‌ನಲ್ಲಿ ನಮ್ಮ ಪಕ್ಷ ಬಹುಮತ ಪಡೆಯುವುದಕ್ಕಾಗಿ ಕಾಯುತ್ತಿದ್ದೇವೆ. ನಿರೀಕ್ಷಿತ ಬಲ ಪಡೆದ ನಂತರ ಅರಸು ಕಾಲದ ಉಳುವವನೇ ಹೊಲದ ಒಡೆಯ ಕಾನೂನು ಮರು ಜಾರಿಗೊಳಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಅರಸುಗೆ ಮರಣೋತ್ತರ ಪ್ರಶಸ್ತಿ , ಎಲೆಕ್ಟ್ರಾನಿಕ್ ಸಿಟಿಗೆ ಮರುನಾಮಕರಣ

ದೇಶದ ಅತ್ಯುನ್ನತ ನಾಗರಿಕ ಗೌರವ ‘ಭಾರತ ರತ್ನ’ ವನ್ನು ದೇವರಾಜ ಅರಸು ಅವರಿಗೆ ಮರಣೋತ್ತರವಾಗಿ ನೀಡಿ ಗೌರವಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಗೆ ‘ಡಿ. ದೇವರಾಜ ಅರಸು ಎಲೆಕ್ಟ್ರಾನಿಕ್ ಸಿಟಿ’ ಎಂದು ಮರುನಾಮಕರಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಇದನ್ನೂ ಓದಿ : ಜಾತಿ ವ್ಯವಸ್ಥೆಯನ್ನು ಅಸಾಂವಿಧಾನಿಕ ಎಂದು ಘೋಷಿಸಲು ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ರಾನ್ಸ್‌ನಲ್ಲಿ ಭುಗಿಲೆದ್ದ ಜನಾಕ್ರೋಶ: ಬೆಲೆ ಏರಿಕೆ ಹಾಗೂ ಸಾರ್ವಜನಿಕ ಸೇವೆಗಳ ಕಡಿತ ವಿರೋಧಿಸಿ ಬೃಹತ್ ಪ್ರತಿಭಟನೆ; ಹಿಂಸಾಚಾರದಲ್ಲಿ 1,800ಕ್ಕೂ ಅಧಿಕ ಮಂದಿ ವಶ!

ಜೀವನ ವೆಚ್ಚದ ಭಾರಿ ಏರಿಕೆ, ಕುಸಿದುಬೀಳುತ್ತಿರುವ ಶಾಲಾ-ಕಾಲೇಜುಗಳ ಮೂಲಸೌಕರ್ಯ ಹಾಗೂ ಸಾರ್ವಜನಿಕ ಸೇವೆಗಳ ಕಡಿತವನ್ನು ಖಂಡಿಸಿ ಫ್ರಾನ್ಸ್‌ನಾದ್ಯಂತ ಶನಿವಾರ ಲಕ್ಷಾಂತರ ಜನರು ರಸ್ತೆಗಿಳಿದು ನಡೆಸಿದ ಬೃಹತ್ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ವಿದ್ಯಾರ್ಥಿ...

ಪ.ಬಂಗಾಳ : ದುರ್ಗಾ ಪೂಜೆಗಳಲ್ಲಿ ಎಡಪಕ್ಷಗಳ ಪುಸ್ತಕ ಮಳಿಗೆಗಳ ಮೇಲೆ ದಾಳಿ

ಶನಿವಾರ (ಅಕ್ಟೋಬರ್ 17) ಸಂಜೆ ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಶನ್‌ನ (ಕೆಎಂಸಿ) ತಂಡವೊಂದು ನಾಲ್ಕು ದಿನಗಳ ಹಿಂದೆ ಜಾದವ್‌ಪುರದಲ್ಲಿ ಸ್ಥಾಪಿಸಲಾಗಿದ್ದ ಪುಸ್ತಕ ಮಳಿಗೆಯನ್ನು ಧ್ವಂಸಗೊಳಿಸಲು ಆಗಮಿಸಿದಾಗ, ಕೇಂದ್ರ ಸಶಸ್ತ್ರ ಪಡೆಗಳು ಮತ್ತು ಪೊಲೀಸರು ಆ...

ಎಸ್‌ಐಆರ್ ಗೊಂದಲ: ರದ್ದಾಗಿರುವ ಮತದಾರರನ್ನು ಮರಳಿ ಸೇರಿಸಲು ‘ಫಾರ್ಮ್ 6’ ತಿದ್ದುಪಡಿಗೆ ಮಹಾರಾಷ್ಟ್ರ ಪ್ರಸ್ತಾಪ; ಜೈಲು ಶಿಕ್ಷೆಯ ಭೀತಿಯಲ್ಲಿ ಜನರು!

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ ಹೆಸರು ರದ್ದಾಗಿರುವ ಹಳೆಯ ಮತದಾರರನ್ನು ಮರಳಿ ಪಟ್ಟಿಗೆ ಸೇರ್ಪಡೆಗೊಳಿಸುವ ಪ್ರಕ್ರಿಯೆಯಲ್ಲಿ ಭಾರಿ ಆಡಳಿತಾತ್ಮಕ ಮತ್ತು ಕಾನೂನು ತೊಡಕು ಎದುರಾಗಿದೆ. ಎಸ್‌ಐಆರ್ ಪರಿಷ್ಕರಣೆಯಲ್ಲಿ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ : ಬೆಂಗಳೂರಿನ ಟೌನ್‌ಹಾಲ್ ಬಳಿ ಪ್ರತಿಭಟಿಸಿದವರ ಬಂಧನ, ಬಿಡುಗಡೆ

ಶನಿವಾರ (ಅಕ್ಟೋಬರ್ 17) ಬೆಂಗಳೂರಿನ ಟೌನ್ ಹಾಲ್ ಬಳಿ ಮತದಾರರ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ಪ್ರಕ್ರಿಯೆಯ ವಿರುದ್ಧ ಪ್ರತಿಭಟನೆ ನಡೆಸಿದ ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...

ಆಂಧ್ರದಲ್ಲಿ ಮುಂದುವರಿದ ಟಿಡಿಪಿ-ವೈಎಸ್‌ಆರ್‌ಸಿಪಿ ಸಂಘರ್ಷ : ಪರಿಸ್ಥಿತಿ ಹತೋಟಿಗೆ ತರಲು ಗಾಳಿಯಲ್ಲಿ ಗುಂಡು ಹಾರಿಸಿದ ಕಡಪಾ ಪೊಲೀಸರು

ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಾಮಪತ್ರ ಸಲ್ಲಿಕೆಯ ಎರಡನೇ ದಿನವಾದ ಶನಿವಾರ (ಅಕ್ಟೋಬರ್ 17) ಆಂಧ್ರ ಪ್ರದೇಶದಲ್ಲಿ ರಾಜಕೀಯ ಸಂಘರ್ಷಗಳು ಮುಂದುವರಿದಿವೆ. ವೈಎಸ್ಆರ್ ಕಾಂಗ್ರೆಸ್ ಪಕ್ಷದ (ವೈಎಸ್ಆರ್‌ಸಿಪಿ) ಭದ್ರಕೋಟೆಯಾಗಿರುವ ವೈಎಸ್ಆರ್ ಕಡಪ ಜಿಲ್ಲೆಯ ಪುಲಿವೆಂದುಲದಲ್ಲಿ...

ಮಧ್ಯಪ್ರದೇಶ: ದೇವಸ್ಥಾನದ ಬಳಿ ಭಕ್ತರ ಮೇಲೆ ಹರಿದ ಲಾರಿ; 14 ಸಾವು, ಹಲವರಿಗೆ ಗಂಭೀರ ಗಾಯ

ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿರುವ ಶೀತಲಾ ಮಾತಾ ದೇವಸ್ಥಾನದ ಬಳಿ ನವರಾತ್ರಿ ಉತ್ಸವದ ಸಂಭ್ರಮದಲ್ಲಿದ್ದ ಭಕ್ತಾದಿಗಳ ಮೇಲೆ ಅತಿವೇಗವಾಗಿ ಬಂದ ಲಾರಿಯೊಂದು ನುಗ್ಗಿದ ಪರಿಣಾಮ ಕನಿಷ್ಠ 14 ಜನರು ದಾರುಣವಾಗಿ ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿರುವ...

ಕೋಲ್ಕತ್ತಾ ದುರ್ಗಾ ಪೂಜೆ ಪೆಂಡಾಲ್‌ನಲ್ಲಿ ಕಾಲ್ತುಳಿತ : ಮೃತರ ಸಂಖ್ಯೆ 19ಕ್ಕೆ ಏರಿಕೆ; ಏಳು ಮಂದಿಯ ಬಂಧನ

ಕೋಲ್ಕತ್ತಾದ ಸಮುದಾಯ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಶನಿವಾರ (ಅ.17) ಸಂಜೆ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಸುಮಾರು 25 ಮಂದಿ ಗಾಯಗೊಂಡಿದ್ದು, ಕೋಲ್ಕತ್ತಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ...

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...