Homeಮುಖಪುಟನಾವು 2021ರ ಜೂನ್ ವರೆಗೂ ಉಚಿತ ಪಡಿತರ ನೀಡುತ್ತೇವೆ: ಮೋದಿಗೆ ಟಾಂಗ್‌ ಕೊಟ್ಟ ಮಮತಾ!

ನಾವು 2021ರ ಜೂನ್ ವರೆಗೂ ಉಚಿತ ಪಡಿತರ ನೀಡುತ್ತೇವೆ: ಮೋದಿಗೆ ಟಾಂಗ್‌ ಕೊಟ್ಟ ಮಮತಾ!

ಈ ವರ್ಷ ಸೆಪ್ಟಂಬರ್‌ ಮತ್ತು ಅಕ್ಟೋಬರ್‌ನಲ್ಲಿ ಬಿಹಾರ ರಾಜ್ಯದ ಚುಣಾವಣೆ ನಡೆಯಲಿದೆ. ಅದೇ ರೀತಿ ಮುಂದಿನ ವರ್ಷ ಏಪ್ರಿಲ್‌ನಲ್ಲಿ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಮೋದಿ- ಮಮತಾರವರ ಹೇಳಿಕೆಗೆ ಭಾರೀ ಮಹತ್ವ ಬಂದಿದೆ.

- Advertisement -
- Advertisement -

ನಾವು 2021ರ ಜೂನ್ ವರೆಗೂ ಬಂಗಾಳದ ಜನರಿಗೆ ಉಚಿತ ಪಡಿತರ ನೀಡುತ್ತೇವೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. ಪ್ರಧಾನಿ ಮೋದಿಯವರು ದೇಶವನ್ನುದ್ದೇಶಿಸಿದ ಭಾಷಣದಲ್ಲಿ ಈ ವರ್ಷ ನವೆಂಬರ್‌ವರೆಗೂ ಉಚಿತ ಪಡಿತರ ನೀಡುತ್ತೇವೆ ಎಂದು ಘೋಷಿಸಿದ ಕೆಲವೇ ನಿಮಿಷಗಳಲ್ಲಿ ಮಮತಾ ಬ್ಯಾನರ್ಜಿಯವರ ಹೇಳಿಕೆಯೂ ಬಂದಿದೆ. ಆ ಮೂಲಕ ಮಮತಾರವರು ಮೋದಿಯನ್ನೂ ಮೀರಿಸಿದ್ದಾರೆ.

ಈ ವರ್ಷ ಸೆಪ್ಟಂಬರ್‌ ಮತ್ತು ಅಕ್ಟೋಬರ್‌ನಲ್ಲಿ ಬಿಹಾರ ರಾಜ್ಯದ ಚುಣಾವಣೆ ನಡೆಯಲಿದೆ. ಅದೇ ರೀತಿ ಮುಂದಿನ ವರ್ಷ ಏಪ್ರಿಲ್‌ನಲ್ಲಿ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಮೋದಿ- ಮಮತಾರವರ ಹೇಳಿಕೆಗೆ ಭಾರೀ ಮಹತ್ವ ಬಂದಿದೆ.

ಭಾರತದ ಬಡ 80 ಕೋಟಿ ಜನರಿಗೆ ಉಚಿತ ಆಹಾರ ಧಾನ್ಯಗಳನ್ನು ನೀಡುವ ಸರ್ಕಾರದ ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಅನ್ನ ಯೋಜನೆ ಯೋಜನೆಯನ್ನು ನವೆಂಬರ್‌ವರೆಗೆ ವಿಸ್ತರಿಸಲಾಗುವುದು. “ಮುಂದಿನ ಕೆಲವು ತಿಂಗಳುಗಳಲ್ಲಿ ಬರಲಿರುವ ಎಲ್ಲಾ ಹಬ್ಬಗಳನ್ನು ಗಮನದಲ್ಲಿಟ್ಟುಕೊಂಡು, 80 ಕೋಟಿ ಜನರಿಗೆ 5 ಕೆಜಿ ಉಚಿತ ಪಡಿತರ ಮತ್ತು ತಿಂಗಳಿಗೆ 1 ಕೆಜಿ ಬೇಳೆ ನೀಡುವ ಈ ಯೋಜನೆಯನ್ನು ಈಗ ದೀಪಾವಳಿ ಮತ್ತು ಛತ್ತ ಪೂಜೆಯವರೆಗೆ ಅಥವಾ ನವೆಂಬರ್ ಕೊನೆಯವರೆಗೂ ವಿಸ್ತರಿಸಲಾಗುವುದು. ಇದಕ್ಕಾಗಿ 90,000 ಕೋಟಿ ಖರ್ಚಾಗಲಿದೆ ” ಎಂದು ಪ್ರಧಾನಿ ಮೋದಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ ಮಮತಾ ಬ್ಯಾನರ್ಜಿಯವರು “ನಾವು ಮುಂದಿನ ವರ್ಷದ ಜೂನ್‌ವರೆಗೂ ಉಚಿತ ಪಡಿತರ ನೀಡುತ್ತೇವೆ. ನಮ್ಮ ಪಡಿತರದ ಗುಣಮಟ್ಟವು ಕೇಂದ್ರಕ್ಕಿಂತ ಉತ್ತಮವಾಗಿದೆ. ಬಂಗಾಳದಲ್ಲಿ ಕೇವಲ 60 ಪ್ರತಿಶತದಷ್ಟು ಜನರು ಮಾತ್ರ ಕೇಂದ್ರದ ಪಡಿತರವನ್ನು ಪಡೆಯುತ್ತಾರೆ” ಎಂದಿದ್ದಾರೆ.

ಒಟ್ಟಿನಲ್ಲಿ ಚುನಾವಣೆಗಳನ್ನು ಮುಂದಿಟ್ಟುಕೊಂಡು ಜನರಿಗೆ ಉಚಿತ ಪಡಿತರ ನೀಡುವ ಭರವಸೆಗಳನ್ನು ಒಬ್ಬರಿಗಿಂತ ಒಬ್ಬರು ಮೀರಿಸುತ್ತಿದ್ದಾರೆ.


ಇದನ್ನೂ ಓದಿ: ನವೆಂಬರ್‌ವರೆಗೂ 80 ಕೋಟಿ ಜನರಿಗೆ ಉಚಿತ ಆಹಾರ ಧಾನ್ಯ: ಪ್ರಧಾನಿ ಮೋದಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...