Homeಮುಖಪುಟಬಿಜೆಪಿಯಿಂದ ಹಣ ಪಡೆದ ಕಿಡಿಗೇಡಿಗಳು ಹಿಂಸೆ ಹರಡುತ್ತಿದ್ದಾರೆ; ಮಮತಾ ಬ್ಯಾನರ್ಜಿ ಆರೋಪ

ಬಿಜೆಪಿಯಿಂದ ಹಣ ಪಡೆದ ಕಿಡಿಗೇಡಿಗಳು ಹಿಂಸೆ ಹರಡುತ್ತಿದ್ದಾರೆ; ಮಮತಾ ಬ್ಯಾನರ್ಜಿ ಆರೋಪ

- Advertisement -
- Advertisement -

ಕೆಲವೇ ಜನರು ಬಿಜೆಪಿಯಿಂದ ಹಣ ತೆಗೆದುಕೊಂಡು ವಿಧ್ವಂಸಕ ಕೃತ್ಯ ಮತ್ತು ಬೆಂಕಿ ಹಚ್ಚುವ ಕೆಸಲದಲ್ಲಿ ತೊಡಗಿದ್ದಾರೆ ಎಂದು ಬಂಗಾಳದಲ್ಲಿ ಹಿಂಸಾಚಾರದ ಕುರಿತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಕೋಲ್ಕತ್ತಾದಲ್ಲಿ ನಡೆಯುತ್ತಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ನಾಗರಿಕತ್ವ ತಿದ್ದುಪಡಿ ಕಾಯ್ದೆ ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಸಿ) ಹಿಂತೆಗೆದುಕೊಳ್ಳುವವರೆಗೆ ನಾವು ನಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ ಎಂದು ಘೋಷಿಸಿದ್ದಾರೆ.

ಬಿಜೆಪಿ ಮಾತ್ರ ಇಲ್ಲಿಯೇ ಉಳಿಯಬೇಕು ಮತ್ತು ಉಳಿದವರೆಲ್ಲರೂ ಹೊರಹೋಗುವಂತೆ ಮಾಡಬೇಕು ಎಂಬುದು ಅವರ ರಾಜಕೀಯ. ಅದು ಎಂದಿಗೂ ಸಾಧ್ಯವಿಲ್ಲ. ಭಾರತ ಎಲ್ಲರದು. ಎಲ್ಲರೂ ಜೊತೆಯಲ್ಲಿರದಿದ್ದರೆ, ಎಲ್ಲರ ವಿಕಾಸವಾಗುವುದು ಹೇಗೆ? ನಾಗರಿಕತ್ವ ಕಾಯ್ದೆ ಯಾರಿಗಾಗಿ? ನಾವೆಲ್ಲರೂ ನಾಗರಿಕರು. ನೀವು ಮತ ​​ಚಲಾಯಿಸಲಿಲ್ಲವೇ? ನೀವು ಇಲ್ಲಿ ವಾಸಿಸುತ್ತಿಲ್ಲವೇ? ಎಂದು ಅವರು ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಮೊದಲು ನಾನೊಬ್ಬಳೆ ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸುತ್ತಿದ್ದೆ. ಈಗ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಕೂಡ ಜಾರಿಗೊಳಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಬಿಹಾರ ಮುಖ್ಯಮಂತ್ರಿ ಎನ್‌ಆರ್‌ಸಿ ಬೆಂಬಲಿಸುವುದಿಲ್ಲ ಎಂದಿದ್ದಾರೆ. ಪೌರತ್ವ ಕಾಯ್ದೆ ಸಹ ಜಾರಿಗೊಳಿಸಬೇಡಿ ಎಂದು ನಾನು ಅವರಲ್ಲಿ ಕೇಳಿಕೊಳ್ಳುತ್ತೇನೆ. ಮಧ್ಯಪ್ರದೇಶ, ರಾಜಸ್ಥಾನ. ಪಂಜಾಬ್‌, ಛತ್ತೀಸ್‌ಘಡ, ಕೇರಳದ ಮುಖ್ಯಮಂತ್ರಿಗಳ ಸಹ ಈಗ ಪೌರತ್ವ ಕಾಯ್ದೆ ವಿರೋಧಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ಆರೋಪ : ನೌಕಾಪಡೆಯ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ಬಂಧನ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ 24 ವರ್ಷದ ಭಾರತೀಯ ನೌಕಾಪಡೆಯ ಲ್ಯಾನ್ಸ್ ನಾಯಕ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮಂಗಳವಾರ (ಮಾ.10)...

ಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಹೂಡಿಕೆಯ ಸಹಾಯದಿಂದ 50 ವರ್ಷಗಳಲ್ಲಿ ಅಮೆರಿಕ ತನ್ನ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ಪಡೆಯಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 'ಅಮೆರಿಕ ಫಸ್ಟ್ ರಿಫೈನಿಂಗ್ ಸಂಸ್ಥೆ'ಯು ಟೆಕ್ಸಾಸ್‌ನ...

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ,...

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...