Homeಮುಖಪುಟಪ್ರಧಾನಿಯನ್ನು ಪ್ರೀತಿ, ಅಹಿಂಸೆಯಿಂದ ಸೋಲಿಸುತ್ತೇವೆ: ಬಿಜೆಪಿ ವಿರುದ್ಧ ರಾಹುಲ್ ವಾಗ್ದಾಳಿ

ಪ್ರಧಾನಿಯನ್ನು ಪ್ರೀತಿ, ಅಹಿಂಸೆಯಿಂದ ಸೋಲಿಸುತ್ತೇವೆ: ಬಿಜೆಪಿ ವಿರುದ್ಧ ರಾಹುಲ್ ವಾಗ್ದಾಳಿ

ಬ್ರಿಟಿಷ್ ಸಾಮ್ರಾಜ್ಯಕ್ಕೆ ಹೋಲಿಸಿದರೆ ನರೇಂದ್ರ ಮೋದಿ ಯಾವ ಲೆಕ್ಕ? ಏನೂ ಅಲ್ಲ. ಈ ದೇಶದ ಜನರು ಬ್ರಿಟಿಷ್ ಸಾಮ್ರಾಜ್ಯವನ್ನೇ ಹಿಂದಕ್ಕೆ ಕಳುಹಿಸಿದ್ದಾರೆ.

- Advertisement -
- Advertisement -

“ಇವರಿಗಿಂತ ಪ್ರಬಲವಾಗಿದ್ದ ಶತ್ರುಗಳನ್ನೂ ಹೊಡೆದೋಡಿಸಿದ್ದೇವೆ; ಇನ್ನು ಇವರು ಯಾವ ಲೆಕ್ಕ” ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬಿಜೆಪಿ ಸರ್ಕಾರದ ಸರ್ವಾಧಿಕಾರಿ ಧೋರಣೆಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಏಪ್ರಿಲ್ 6 ರ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಅಭಿಯಾನದ ಅಂಗವಾಗಿ ದಕ್ಷಿಣ ತಮಿಳುನಾಡಿನಲ್ಲಿ ಎರಡನೇ ದಿನ ಪ್ರವಾಸ ಮಾಡುತ್ತಿರುವ ರಾಹುಲ್ ಗಾಂಧಿ, ತಿರುನಲ್ವೇಲಿಯ ಸೇಂಟ್ ಕ್ಸೇವಿಯರ್ ಕಾಲೇಜಿನಲ್ಲಿ ‘ಎಜುಕೇಟರ್ಸ್ ಮೀಟ್’ ಎಂಬ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

“ಇವರಿಗಿಂತಲೂ ದೊಡ್ಡ ಶತ್ರುಗಳನ್ನು ಸೋಲಿಸಿದ್ದೇವೆ. ಆದರೆ ನಾವು ಪ್ರೀತಿ ಮತ್ತು ಅಹಿಂಸೆಯ ಮೂಲಕ ಪ್ರಧಾನಿಯನ್ನು ಸೋಲಿಸುತ್ತೇವೆ” ಎಂದು ಹೇಳಿದರು.

ಇದನ್ನೂ ಓದಿ: ಮಹಾಪಂಚಾಯತ್‌ನಲ್ಲಿ ಎಬಿಪಿ ನ್ಯೂಸ್‌ಗೆ ರಾಜೀನಾಮೆ ನೀಡಿದ ಪತ್ರಕರ್ತನ ಮಾತುಗಳು

ದೇಶದ ಸ್ವಾತಂತ್ರ್ಯ ಚಳವಳಿಯನ್ನು ನೆನಪಿಸಿಕೊಂಡ ಅವರು, ಪ್ರಧಾನಿ ಮೋದಿಗಿಂತಲೂ ಬ್ರಿಟಿಷರು ಹೆಚ್ಚು ಶಕ್ತಿಶಾಲಿಯಾಗಿದ್ದರು ಎಂದು ಹೇಳಿದರು.

“ಬ್ರಿಟಿಷ್ ಸಾಮ್ರಾಜ್ಯಕ್ಕೆ ಹೋಲಿಸಿದರೆ ನರೇಂದ್ರ ಮೋದಿ ಯಾವ ಲೆಕ್ಕ? ಏನೂ ಅಲ್ಲ. ಈ ದೇಶದ ಜನರು ಬ್ರಿಟಿಷ್ ಸಾಮ್ರಾಜ್ಯವನ್ನೇ ಹಿಂದಕ್ಕೆ ಕಳುಹಿಸಿದ್ದಾರೆ. ಅದೇ ರೀತಿಯಲ್ಲಿ ನಾವು ನರೇಂದ್ರ ಮೋದಿಯವರನ್ನು ಮತ್ತೆ ನಾಗಪುರಕ್ಕೆ ಕಳುಹಿಸುತ್ತೇವೆ (ಮಹಾರಾಷ್ಟ್ರದ ಆರ್‌ಎಸ್‌ಎಸ್‌ ಪ್ರಧಾನ ಕಚೇರಿ)” ಎಂದು ರಾಹುಲ್ ಗಾಂಧಿ ಹೇಳಿದರು.

“ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಹಿಂದೂ ಧರ್ಮವನ್ನು ಪ್ರತಿನಿಧಿಸುವುದಾಗಿ ಹೇಳಿಕೊಂಡಿದೆ. ಆದರೆ ವಾಸ್ತವದ ಹಿಂದೂ ಧರ್ಮಕ್ಕೂ ಬಿಜೆಪಿಯ ಹಿಂದೂ ಧರ್ಮಕ್ಕೂ ಯಾವುದೇ ಸಂಬಂಧವಿಲ್ಲ. ಹಿಂದುತ್ವ ಯಾವ ಜನರನ್ನೂ ಅವಮಾನಿಸಿ ಎಂದು ಹೇಳುವುದಿಲ್ಲ. ಕೊಲ್ಲುವುದನ್ನು ಹೊಡೆಯುವುದನ್ನು ಬೋಧಿಸುವುದಿಲ್ಲ. ಎಲ್ಲಾ ಧರ್ಮಗಳ ಮೂಲ ತತ್ವವೆಂದರೆ ಪ್ರೀತಿ” ಎಂದು ಹೇಳಿದರು.


ಇದನ್ನೂ ಓದಿ: ನಭಕ್ಕೆ ಜಿಗಿದ ಮೋದಿ ಫೋಟೊ, ಭಗವದ್ಗೀತೆ ಕಾಪಿ: ಇಲ್ಲೇ ಉಳಿದ ‘ಆನಂದ್’ ಉಪಗ್ರಹ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...