Homeಮುಖಪುಟಅಕ್ರಮ ವಲಸಿಗರ ಹೆಸರು ಎನ್‌ಆರ್‌ಸಿಯಲ್ಲಿದ್ದರೂ ಅವರನ್ನು ಗಡಿಪಾರು ಮಾಡುತ್ತೇವೆ: ಅಸ್ಸಾಂ ಸಿಎಂ

ಅಕ್ರಮ ವಲಸಿಗರ ಹೆಸರು ಎನ್‌ಆರ್‌ಸಿಯಲ್ಲಿದ್ದರೂ ಅವರನ್ನು ಗಡಿಪಾರು ಮಾಡುತ್ತೇವೆ: ಅಸ್ಸಾಂ ಸಿಎಂ

- Advertisement -
- Advertisement -

“ಅಕ್ರಮ ವಲಸಿಗರು” ಎಂದು ಹೇಳಲಾದವರನ್ನು ರಾಷ್ಟ್ರೀಯ ನಾಗರಿಕರ ನೋಂದಣಿಯಲ್ಲಿ ಹೆಸರಿಸಿದ್ದರೂ ಸಹ ಬಾಂಗ್ಲಾದೇಶಕ್ಕೆ “ಗಡಿಪಾರು” ಮಾಡಲಿದ್ದೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಬುಧವಾರ ಹೇಳಿದ್ದಾರೆ. “ಅವರು ಅಕ್ರಮ ವಲಸಿಗರು ಎಂದು ನಮಗೆ ಖಚಿತವಾಗಿದ್ದರೆ, ನಾವು ಅವರನ್ನು ತಕ್ಷಣವೇ ಗಡಿಪಾರು ಮಾಲಿದ್ದೇವೆ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಅಕ್ರಮ ವಲಸಿಗರ ಹೆಸರು

ಅಸ್ಸಾಂನಲ್ಲಿ ಭಾರತೀಯ ನಾಗರಿಕರನ್ನು ರಾಜ್ಯದಲ್ಲಿ ವಾಸಿಸುವ ದಾಖಲೆರಹಿತ ವಲಸಿಗರಿಂದ ಬೇರ್ಪಡಿಸುವ ಉದ್ದೇಶದಿಂದ ಆಗಸ್ಟ್ 2019 ರಲ್ಲಿ ರಾಷ್ಟ್ರೀಯ ನಾಗರಿಕರ ನೋಂದಣಿಯನ್ನು ಪ್ರಕಟಿಸಲಾಯಿತು. ಪಟ್ಟಿಯಲ್ಲಿ ಸೇರಿಸಬೇಕಾದರೆ ನಿವಾಸಿಗಳು ಮಾರ್ಚ್ 24, 1971 ರ ಮಧ್ಯರಾತ್ರಿಯ ಮೊದಲು ಅಸ್ಸಾಂಗೆ ಪ್ರವೇಶಿಸಿದ್ದಾರೆ ಎಂದು ಸಾಬೀತುಪಡಿಸಬೇಕಾಗಿತ್ತು.

19 ಲಕ್ಷಕ್ಕೂ ಹೆಚ್ಚು ಜನರು, ಅಥವಾ ಅರ್ಜಿದಾರರಲ್ಲಿ 5.77% ರಷ್ಟು ಜನರನ್ನು ಅಂತಿಮ ಪಟ್ಟಿಯಿಂದ ಹೊರಗಿಡಲಾಗಿದೆ. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಮತ್ತು ಅಸ್ಸಾಂ ರಾಷ್ಟ್ರೀಯತಾವಾದಿ ಗುಂಪುಗಳು ಮರುಪರಿಶೀಲನೆಗೆ ಒತ್ತಾಯಿಸಿದ ನಂತರ ಕೇಂದ್ರ ಸರ್ಕಾರವು NRC ಗೆ ಅಧಿಸೂಚನೆ ಹೊರಡಿಸಿಲ್ಲ.

ರಾಜ್ಯ ಸರ್ಕಾರವು ಮಂಗಳವಾರ 19 “ಅಕ್ರಮ ವಲಸಿಗರನ್ನು” ಗಡಿಪಾರು ಮಾಡಿದೆ ಮತ್ತು ಬುಧವಾರ ಇನ್ನೂ ಒಂಬತ್ತು ಜನರನ್ನು ಗಡಿಪಾರು ಮಾಡಲಿದೆ ಎಂದು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಸಿಎಂ ಹೇಳಿದ್ದಾರೆ.

“ಹಲವು ಹೆಸರುಗಳನ್ನು ವಂಚನೆಯಿಂದ NRC [ನಾಗರಿಕರ ರಾಷ್ಟ್ರೀಯ ನೋಂದಣಿ]ಯಲ್ಲಿ ಸೇರಿಸಲಾಗಿದೆ. NRC ಪ್ರಕ್ರಿಯೆಯನ್ನು ನಡೆಸಿದ ರೀತಿ ಗಂಭೀರ ಅನುಮಾನಗಳು ಮತ್ತು ಕಳವಳಗಳನ್ನು ಹುಟ್ಟುಹಾಕಿದೆ. ಯಾರನ್ನಾದರೂ ಅಕ್ರಮ ವಲಸಿಗರಲ್ಲ ಎಂದು ನಿರ್ಧರಿಸಲು ರಿಜಿಸ್ಟರ್‌ನಲ್ಲಿ ಹೆಸರಿರುವುದು ಮಾತ್ರ ಸಾಕಾಗುವುದಿಲ್ಲ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ವಿದೇಶಿಯರೆಂದು ಘೋಷಿಸಲ್ಪಟ್ಟ ವ್ಯಕ್ತಿಗಳನ್ನು ಕಾನೂನು ಚೌಕಟ್ಟಿನ ಅಡಿಯಲ್ಲಿ ಬಾಂಗ್ಲಾದೇಶಕ್ಕೆ “ಹಿಂದಕ್ಕೆ ತಳ್ಳಲಾಗುತ್ತಿದೆ” ಎಂದು ಸಿಎಂ ಹೇಳಿಕೊಂಡ ನಾಲ್ಕು ದಿನಗಳ ನಂತರ ಈ ಹೇಳಿಕೆ ಬಂದಿದೆ.

ಜೂನ್ 7 ರಂದು, 1955 ರ ಪೌರತ್ವ ಕಾಯ್ದೆಯ ಸೆಕ್ಷನ್ 6Aಯ ವಿರುದ್ಧ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸುವ ವೇಳೆ ಸುಪ್ರೀಂಕೋರ್ಟ್, “ವಿದೇಶಿಯರನ್ನು ಗುರುತಿಸಲು ಅಸ್ಸಾಂ ಸರ್ಕಾರವು ಯಾವಾಗಲೂ ನ್ಯಾಯಾಂಗವನ್ನು ಸಂಪರ್ಕಿಸಲು ಯಾವುದೇ ಕಾನೂನು ಅವಶ್ಯಕತೆಯಿಲ್ಲ” ಎಂದು ಹೇಳಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

“‘ವಲಸಿಗರ ಹೊರಹಾಕುವ ಆದೇಶ’ ಎಂಬ ಹಳೆಯ ಕಾನೂನು ಅಸ್ತಿತ್ವದಲ್ಲಿದೆ. ಈ ಕಾನೂನು ಇನ್ನೂ ಜಾರಿಯಲ್ಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಕಾನೂನಿನ ಪ್ರಕಾರ, ಜಿಲ್ಲಾಧಿಕಾರಿಗೆ ಆದೇಶ ಹೊರಡಿಸುವ ಮತ್ತು ತಕ್ಷಣದ ನಿರಾಕರಣೆಗೆ ಅವಕಾಶ ನೀಡುವ ಅಧಿಕಾರವಿದೆ.” ಎಂದು ಅವರು ಹೇಳಿದ್ದಾರೆ.

ಅಕ್ಟೋಬರ್‌ನಲ್ಲಿ, ಸುಪ್ರೀಂಕೋರ್ಟ್ 1955 ರ ಪೌರತ್ವ ಕಾಯ್ದೆಯ ಸೆಕ್ಷನ್ 6A ಯ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿದಿತ್ತು.

1985 ರಲ್ಲಿ ಕೇಂದ್ರ ಸರ್ಕಾರ ಮತ್ತು ಅಸ್ಸಾಂ ಚಳವಳಿಯ ನಾಯಕರ ನಡುವೆ ಅಸ್ಸಾಂ ಒಪ್ಪಂದಕ್ಕೆ ಸಹಿ ಹಾಕಿದಾಗ ಕಾಯಿದೆಯಡಿಯಲ್ಲಿ ವಿಶೇಷ ನಿಬಂಧನೆಯಾಗಿ ಸೆಕ್ಷನ್ 6A ಅನ್ನು ಪರಿಚಯಿಸಲಾಯಿತು. ಇದು ಜನವರಿ 1, 1966 ಮತ್ತು ಮಾರ್ಚ್ 25, 1971 ರ ನಡುವೆ ಅಸ್ಸಾಂಗೆ ಬಂದ ವಿದೇಶಿಯರಿಗೆ ಭಾರತೀಯ ಪೌರತ್ವವನ್ನು ಪಡೆಯಲು ಅವಕಾಶ ನೀಡುತ್ತದೆ.

ಅಸ್ಸಾಂನಲ್ಲಿರುವ ಸ್ಥಳೀಯ ಗುಂಪುಗಳು ಕಾಯಿದೆಯಲ್ಲಿನ ಈ ನಿಬಂಧನೆಯು ಬಾಂಗ್ಲಾದೇಶದಿಂದ ವಲಸೆ ಬಂದವರ ಒಳನುಸುಳುವಿಕೆಯನ್ನು ಕಾನೂನುಬದ್ಧಗೊಳಿಸಿದೆ ಎಂದು ಆರೋಪಿಸಿವೆ. ಸೋಮವಾರ ಅಸ್ಸಾಂ ಸರ್ಕಾರವು 303 “ವಿದೇಶಿಯರನ್ನು” “ಹಿಂದಕ್ಕೆ ತಳ್ಳಿದೆ(ಗಡಿಪಾರು ಮಾಡಿದೆ)” ಮತ್ತು 1950 ರ ಅಸ್ಸಾಂನಿಂದ ವಲಸಿಗರ ಹೊರಹಾಕುವಿಕೆ ಕಾಯ್ದೆಯಡಿಯಲ್ಲಿ ಅದನ್ನು ಮುಂದುವರಿಸುತ್ತದೆ ಎಂದು ಸಿಎಂ ಹೇಳಿದ್ದಾರೆ.ಅಕ್ರಮ ವಲಸಿಗರ ಹೆಸರು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗುಜರಾತ್‌ | ಇ-ಕೆವೈಸಿ ಲೋಪ; ಪಡಿತರವಿಲ್ಲದೆ ಬಳಲುತ್ತಿರುವ 10 ಲಕ್ಷ ಜನರು

ಗುಜರಾತ್‌ | ಇ-ಕೆವೈಸಿ ಲೋಪ; ಪಡಿತರವಿಲ್ಲದೆ ಬಳಲುತ್ತಿರುವ 10 ಲಕ್ಷ ಜನರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...