Homeಮುಖಪುಟಕಾಂಗ್ರೆಸ್ ಸರ್ಕಾರದಲ್ಲಿ ಕಮಿಷನ್ ದಂಧೆ ನಡೆದರೆ ಬಹಿರಂಗಪಡಿಸುತ್ತೇವೆ: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ

ಕಾಂಗ್ರೆಸ್ ಸರ್ಕಾರದಲ್ಲಿ ಕಮಿಷನ್ ದಂಧೆ ನಡೆದರೆ ಬಹಿರಂಗಪಡಿಸುತ್ತೇವೆ: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ

- Advertisement -
- Advertisement -

ಕಾಂಗ್ರೆಸ್ ಸರ್ಕಾರದಲ್ಲಿ ಕಮಿಷನ್ ದಂಧೆ ನಡೆದರೆ ಬಹಿರಂಗಪಡಿಸುತ್ತೇವೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದಲ್ಲಿಯೂ ಕಮಿಷನ್ ನಿಗಧಿಯಾಗಿದೆ ಎಂಬ ಆರೋಪ ಬಂದಿದೆ ಎಂಬ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತಿರಿಸಿದ ಅವರು, “ಈ ಸರ್ಕಾರದಲ್ಲಿ ಇದುವರೆಗೂ ನಮ್ಮನ್ನು ಯಾರೂ ಕಮಿಷನ್ ಕೇಳಿಲ್ಲ. ಒಂದು ವೇಳೆ ಕಾಂಗ್ರೆಸ್ ಸರ್ಕಾರದಲ್ಲಿ ಕಮಿಷನ್ ದಂಧೆ ನಡೆದರೆ ಬಹಿರಂಗಪಡಿಸುತ್ತೇವೆ” ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಬಿಲ್ ಪಾವತಿ ಬಗ್ಗೆ ಮನವಿ ಮಾಡಿದ ನಂತರ ಅವರು ಮಾತನಾಡಿದ್ದಾರೆ.

ಕಮಿಷನ್ ದಂಧೆಗೆ ಸಂಪೂರ್ಣ ಕಡಿವಾಣ ಹಾಕುತ್ತೇವೆ : ಸಿಎಂ ಸಿದ್ದರಾಮಯ್ಯ

ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತು ಮತ್ತು ಕಮಿಷನ್ ಹಾವಳಿಯಿಂದ ಗುತ್ತಿಗೆದಾರರಿಗೆ ಸಮಸ್ಯೆ ಆಗಿದೆ. ಹೀಗೆ ಹಳಿ ತಪ್ಪಿಸಿರುವ ಆರ್ಥಿಕತೆಯನ್ನು ಸರಿಪಡಿಸಲು ಸಮಯಾವಕಾಶ ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬಿಲ್ ಬಿಡುಗಡೆಗೆ ವಿಚಾರದಲ್ಲಿ ಪರಿಶೀಲಿಸಲು ಬಜೆಟ್ ಮಂಡನೆಯಾಗಬೇಕಿದೆ. ಬಜೆಟ್ ಅಧಿವೇಶನದ ನಂತರ ಬಿಬಿಎಂಪಿ ಹಾಗೂ ಆರ್ಥಿಕ ಇಲಾಖೆ ಕಾರ್ಯದರ್ಶಿಗಳ ಸಭೆ ಕರೆದು ಪರಿಶೀಲಿಸಿ ಮುಂದುವರೆಯಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬಿಬಿಎಂಪಿಯಲ್ಲಿ 2000 ಕೋಟಿ ರೂಪಾಯಿಗಳು ಹಾಗೂ ನಗರೋತ್ಥಾನ ಯೋಜನೆಯಡಿ 1500 ಕೋಟಿ ರೂಪಾಯಿಗಳು ಬಾಕಿ ಇರುವುದಾಗಿ ತಿಳಿಸಿದ ಕೆಂಪಣ್ಣ ಅವರು ತಡೆಹಿಡಿದಿರುವ ಮೊತ್ತವನ್ನು ಪರಿಶೀಲಿಸಿ ಬಿಡುಗಡೆ ಮಾಡಬೇಕು ಹಾಗೂ ನಿರಾಕ್ಷೇಪಣಾ ಪತ್ರವನ್ನು ಬಿಡುಗಡೆ ಮಾಡಬೇಕೆಂದು ಕೆಂಪಣ್ಣ ಮನವಿ ಮಾಡಿದರು.

ಇದನ್ನೂ ಓದಿ: ಧಾರ್ಮಿಕ ಪ್ರತಿನಿಧಿಗಳಿಂದ ನೂತನ ಶಾಸಕರಿಗೆ ತರಬೇತಿ ಶಿಬಿರ ಕೈಬಿಡಿ: ಸ್ಪೀಕರ್ ಖಾದರ್‌ಗೆ ‘ಜಾಗೃತ ನಾಗರಿಕರ…

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮತದಾನ ನಡೆದ 48 ಗಂಟೆಗಳಲ್ಲಿ ಅಂಕಿಅಂಶಗಳ ಬಿಡುಗಡೆ: ಚು.ಆಯೋಗದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್‌

0
ಮತದಾನ ಮುಗಿದ 48 ಗಂಟೆಗಳ ಒಳಗೆ ಮತದಾನ ಕೇಂದ್ರವಾರು ಮತದಾರರ ಅಂಕಿಅಂಶಗಳನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲು ನಿರ್ದೇಶನ ನೀಡುವಂತೆ ಕೋರಿ ಎನ್‌ಜಿಒ ಎಡಿಆರ್ ಸಲ್ಲಿಸಿದ ಮನವಿಗೆ ಸುಪ್ರೀಂಕೋರ್ಟ್ ಶುಕ್ರವಾರ ಒಂದು ವಾರದೊಳಗೆ ಭಾರತೀಯ...