Homeಚಳವಳಿನಮ್ಮ ಮೇಲೆ ದಾಳಿ ನಡೆಸಿದರೆ ಹೋರಾಟವನ್ನು ನಿಲ್ಲಿಸುತ್ತೇವೆಂದು ಭಾವಿಸಿದ್ದೀರಾ, ಮನುವಾದಿಗಳೇ ?- ಜಿಗ್ನೇಶ್

ನಮ್ಮ ಮೇಲೆ ದಾಳಿ ನಡೆಸಿದರೆ ಹೋರಾಟವನ್ನು ನಿಲ್ಲಿಸುತ್ತೇವೆಂದು ಭಾವಿಸಿದ್ದೀರಾ, ಮನುವಾದಿಗಳೇ ?- ಜಿಗ್ನೇಶ್

ಗುಜರಾತ್‌‌ನಲ್ಲಿ ದಲಿತ ವಕೀಲರೊಬ್ಬರನ್ನು ಬ್ರಾಹ್ಮಣ ವಿರೋಧಿ ಬರಹ ಬರೆದಿದ್ದಾರೆಂದು ಇರಿದು ಹತ್ಯೆ ಮಾಡಲಾಗಿತ್ತು

- Advertisement -
- Advertisement -

ಬಾಮ್‌ಸೆಫ್‌ನ‌ ಹಿರಿಯ ನಾಯಕ ದಲಿತ ವಕೀಲ ದೇವ್‌ಜಿ ಮಹೇಶ್ವರಿ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಬ್ರಾಹ್ಮಣ ವಿರೋಧಿ ಬರಹವನ್ನು ಬರೆದಿದ್ದಕ್ಕೆ ಹತ್ಯೆ ಮಾಡಿದ್ದಾರೆಂದು ವಿಶೇಷ ತನಿಖಾ ತಂಡ (SIT) ಹೇಳಿದ ಹಿನ್ನಲೆಯಲ್ಲಿ, ಊನಾ ಚಳವಳಿ ನಾಯಕ ಗುಜರಾತ್‌‌ ಶಾಸಕ ಜಿಗ್ನೇಶ್ ಮೇವಾನಿ “ನಮ್ಮ ಮೇಲೆ ದಾಳಿ ಮಾಡಿದರೆ ನಾವು ಹೋರಾಟವನ್ನು ನಿಲ್ಲಿಸುತ್ತೇವೆ ಎಂದು ಮನುವಾದಿಗಳು ಭಾವಿಸಿದ್ದಾರೆಯೆ?” ಎಂದು  ಪ್ರಶ್ನಿಸಿದ್ದಾರೆ.

ಅಖಿಲ ಭಾರತ ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ನೌಕರರ ಒಕ್ಕೂಟ(ಬಾಮ್ಸೆಫ್)ದ ಹಿರಿಯ ನಾಯಕರಾಗಿರುವ ದೇವ್‌ಜಿ ಮಹೇಶ್ವರಿ ಅವರನ್ನು ಸೆಪ್ಟೆಂಬರ್‌ 25 ರ ಸಂಜೆ ತಮ್ಮ ಕಚೇರಿಗೆ ತೆರಳುತ್ತಿದ್ದಾಗ ಇರಿದು ಹತ್ಯೆ ಮಾಡಲಾಗಿತ್ತು. ಅವರನ್ನು ಬ್ರಾಹ್ಮಣ ವಿರೋಧಿ ಬರಹಗಳಿಗಾಗಿ ಹತ್ಯೆ ಮಾಡಿದ್ದಾರೆಂದು SIT ಹೇಳಿದೆ.

ಇದನ್ನೂ ಓದಿ: ಬ್ರಾಹ್ಮಣ ವಿರೋಧಿ ಬರಹಕ್ಕೆ ದಲಿತ ವಕೀಲನ ಹತ್ಯೆ – SIT ತನಿಖೆಯಲ್ಲಿ ಬಹಿರಂಗ

ಈ ಹಿನ್ನಲೆಯಲ್ಲಿ ಟ್ವೀಟ್ ಮಾಡಿರುವ ಜಿಗ್ನೇಶ್ ಮೇವಾನಿ, “ನಮ್ಮ ಮೇಲೆ ದಾಳಿ ಮಾಡಿದರೆ ನಾವು ಹೋರಾಟವನ್ನು ನಿಲ್ಲಿಸುತ್ತೇವೆ ಎಂದು ಮನುವಾದಿಗಳು ಭಾವಿಸಿದ್ದಾರೆಯೆ? ನಾವು ಜಾತಿಯನ್ನು ಒಡೆದುಹಾಕಿ ನಾಶಪಡಿಸುವವರೆಗೂ ಹೋರಾಡುತ್ತೇವೆ” ಎಂದು ಅವರು ಹೇಳಿದ್ದಾರೆ.

ವಕೀಲ ದೇವ್‌ಜಿ ಹತ್ಯೆ ನಡೆದ ಮರುದಿನ ಮುಂಬೈ ಪೊಲೀಸರು ಪ್ರಧಾನ ಆರೋಪಿ ಭರತ್ ರಾವಲ್‌ನನ್ನು ಬಂಧಿಸಿದ್ದರು. ವಿಚಾರಣೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿನ ಬ್ರಾಹ್ಮಣರ ಕುರಿತು ಪೂರ್ವಾಗ್ರಹದ ಪೋಸ್ಟ್‌ಗೆ ಸಂಬಂಧಿಸಿ ದೇವ್‌‌ಜಿಯನ್ನು ಹತ್ಯೆಗೈದಿರುವುದಾಗಿ ಭರತ್‌ ತಿಳಿಸಿದ್ದಾನೆ. ದೇವ್‌‌ಜಿ ಪತ್ನಿ ಮೀನಾಕ್ಷಿಬೆನ್ FIR ನಲ್ಲಿ 8 ಮಂದಿಯನ್ನು ಉಲ್ಲೇಖಿಸಿದ್ದರು, ಆದರೆ ಅವರ ವಿರುದ್ಧದ ಪುರಾವೆಗಳು ಪೊಲೀಸರಿಗೆ ಇದುವರೆಗೆ ಪತ್ತೆಯಾಗಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: ಹಿಂದೂಗಳ ಕಣ್ಣಿಗೆ ದಲಿತರು ಮನುಷ್ಯರಂತೆ ಕಾಣುವುದೆಂದು? – ಡಿ.ಉಮಾಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...