Homeಕರ್ನಾಟಕಪಠ್ಯಪುಸ್ತಕ ತಿದ್ದುಪಡಿ ಮಾಡಿಯೇ ತೀರುತ್ತೇವೆ, ಬಿಜೆಪಿ ಟೀಕೆಗೆ ಸೊಪ್ಪು ಹಾಕೊಲ್ಲ: ಸಚಿವ ಮಧು ಬಂಗಾರಪ್ಪ

ಪಠ್ಯಪುಸ್ತಕ ತಿದ್ದುಪಡಿ ಮಾಡಿಯೇ ತೀರುತ್ತೇವೆ, ಬಿಜೆಪಿ ಟೀಕೆಗೆ ಸೊಪ್ಪು ಹಾಕೊಲ್ಲ: ಸಚಿವ ಮಧು ಬಂಗಾರಪ್ಪ

- Advertisement -
- Advertisement -

”ಪಠ್ಯಪುಸ್ತಕ ತಿದ್ದುಪಡಿ ಮಾಡುವ ವಿಚಾರದಲ್ಲಿ ಬಿಜೆಪಿ ಸಾಕಷ್ಟು ಟೀಕೆ ಮಾಡುತ್ತಿದೆ. ಆದರೆ ನಾವು ಅವರ ಟೀಕೆಗಳಿಗೆ ಸೊಪ್ಪು ಹಾಕುವುದಿಲ್ಲ, ತಿದ್ದುಪಡಿ ಮಾಡಿಯೇ ತೀರುತ್ತೇವೆ” ಎಂದು ಸೋಮವಾರ ಶಿವಮೊಗ್ಗ ಕಾಂಗ್ರೆಸ್ ಕಚೇರಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು, ಇದರ ವಿರುದ್ಧ ಬಿಜೆಪಿ ನಾಯಕರು ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಈ ಬಗ್ಗೆ ಮಾತನಾಡಿದ ಮಧು ಬಂಗಾರಪ್ಪ, ”ಬಿಜೆಪಿ ಸ್ವಾರ್ಥದ ರಾಜಕಾರಣದಿಂದ ತನ್ನ ಆಡಳಿದ ಅಂತ್ಯಕ್ಕೆ ನಾಂದಿ ಹಾಡಿಕೊಂಡಿದೆ. ಕೇವಲ ಹಿಂದುತ್ವ, ದ್ವೇಷದ ರಾಜಕಾರಣದಿಂದ ರಾಜ್ಯದಲ್ಲಿ ಚಿಂತನೆಯ ತನ್ನ ಅಸ್ತಿತ್ವ ಕಳೆದುಕೊಂಡಿದೆ” ಎಂದರು.

”ಬಿಜೆಪಿಯವರು ಕಾಂಗ್ರೆಸ್ ಸರ್ಕಾರದ ಬಗ್ಗೆ ಚಿಂತನೆ ಮಾಡುವುದನ್ನು ಬಿಟ್ಟು, 2024ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರ ಕುರ್ಚಿಯ ಉಳಿಸಿಕೊಳ್ಳುವ ಬಗ್ಗೆ ಚಿಂತನೆ ಮಾಡಲಿ” ಎಂದು ಸಲಹೆ ನೀಡಿದರು.

”ಮಕ್ಕಳಿಗೆ ಸೂಕ್ತ ಶಿಕ್ಷಣದ ಅವಶ್ಯಕತೆ ಇದೆ. ಅದಕ್ಕೆ ಪೂರಕವಾಗಿ ಶಾಲಾ ಮಟ್ಟದಿಂದಲೇ ಸಂವಿಧಾನ ಓದು ಮಕ್ಕಳಿಗೆ ಮನದಟ್ಟಾಗಬೇಕು. ಆಗ ಸಂವಿಧಾನದ ಪರಿಕಲ್ಪನೆ ಮಕ್ಕಳ ಮನಸ್ಸಿನಲ್ಲಿ ಬೇರೂರುತ್ತದೆ. ಈ ಎಲ್ಲಾ ವಿಚಾರಗಳಿಂದ ಪಠ್ಯ ಪುಸ್ತಕ ತಿದ್ದುಪಡಿ ಅವಶ್ಯಕ” ಎಂದು ಸಚಿವರು ಹೇಳಿದರು.

ಇದನ್ನೂ ಓದಿ: ಈ ವರ್ಷವೇ ಪಠ್ಯ ಪರಿಷ್ಕರಣೆಯಾಗಲಿದೆ: ಸಚಿವ ಮಧು ಬಂಗಾರಪ್ಪ

ಇದೇ ವೇಳೆ ಸರ್ಕಾರದ 5 ಗ್ಯಾರೆಂಟಿಗಳ ಬಗ್ಗೆ ಬಿಜೆಪಿಯ ಟೀಕೆಗಳಿಗೆ ಪ್ರತಿಕ್ರಿಯಿಸಿ, ”ಮಾಧ್ಯಮಗಳಲ್ಲಿ ಮಾತ್ರ ಬಿಜೆಪಿಯವರು ಬಾಲ ಬಿಚ್ಚುತ್ತಿದ್ದಾರೆ. ಬಡವರಿಗೆ ಸೇರಬೇಕಿರುವ ಅನ್ನ ಭಾಗ್ಯಕ್ಕೆ ಕೇಂದ್ರದ ಬಿಜೆಪಿ ಸರ್ಕಾರ ಕನ್ನ ಹಾಕುತ್ತಿದೆ. ಕೇಂದ್ರಕ್ಕೆ ತೆರಿಗೆ ಪಾವತಿಸುವಲ್ಲಿ ಕರ್ನಾಟಕ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ ಎಂದ ಅವರು, ಹೃದಯ ಇಲ್ಲದವರು ಮಾತ್ರ ಈ ರೀತಿಯ ಯೋಜನೆಗಳನ್ನು ದ್ವೇಷ ಮಾಡಲು ಸಾಧ್ಯ” ಎಂದು ಬಿಜೆಪಿ ನಾಯಕರಿಗೆ ಛಾಟಿ ಬೀಸಿದರು.

”ಕಾಂಗ್ರೆಸ್‌ ಸರ್ಕಾರದ ಗ್ಯಾರೆಂಟಿ ಕುರಿತು ಬಿಜೆಪಿ ನಾಯಕರು ಅಪಪ್ರಚಾರ ಮಾಡಿ, ಜನರನ್ನು ದಿಕ್ಕು ತಪ್ಪಿಸಲು ಹೊರಟಿದ್ದಾರೆ. ಜನರಿಗೆ ಅನುಕೂಲವಾಗುವಂತಹ ಕಾರ್ಯಗಳ ಅನುಷ್ಠಾನ ಮಾಡುವುದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಗುರಿಯಾಗಿದೆ” ಎಂದರು.

”ಶಿಕ್ಷಣ ಇಲಾಖೆಯಲ್ಲಿಯೇ ಶೇ 40 ರಷ್ಟು ಸರ್ಕಾರಿ ನೌಕರರು ಇದ್ದಾರೆ. ಎಲ್ಲರನ್ನೂ ಉತ್ತಮ ಹಾದಿಯಲ್ಲಿ ಕೊಂಡೊಯ್ಯುವ ಜವಾಬ್ದಾರಿ ನನ್ನ ಮೇಲಿದೆ. ಖಾಸಗಿ ಶಾಲೆಗಳ ಭರಾಟೆಯ ಮಧ್ಯೆ ಸರ್ಕಾರಿ ಶಾಲೆಗಳು ಅಭಿವೃದ್ಧಿ ಕಾಣುವ ಅವಶ್ಯಕತೆ ಇದೆ. ಅದು ಈ ಸರ್ಕಾರದ ಅವಧಿಯಲ್ಲಿ ನೆರವೇರುತ್ತದೆ” ಎಂದು ಭರವಸೆ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...