Homeಕರ್ನಾಟಕಸಾಮಾಜಿಕ‌ ಸಮಸ್ಯೆಗಳಿಗೆ ಪರಿಹಾರ ದೊರಕುವ ರೀತಿ ಪ್ರಣಾಳಿಕೆ ರೂಪಿಸುತ್ತೇವೆ: ಸಿಎಂ ಸಿದ್ದರಾಮಯ್ಯ

ಸಾಮಾಜಿಕ‌ ಸಮಸ್ಯೆಗಳಿಗೆ ಪರಿಹಾರ ದೊರಕುವ ರೀತಿ ಪ್ರಣಾಳಿಕೆ ರೂಪಿಸುತ್ತೇವೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಸಂವಿಧಾನಕ್ಕೆ, ಪ್ರಜಾಪ್ರಭುತ್ವಕ್ಕೆ , ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನ ನಡೆಯುತ್ತಿರುವ ಹೊತ್ತಲ್ಲಿ, ಈ ಅನಾಹುತಗಳನ್ನು ತಡೆಯುವ ಪರಿಣಾಮಕಾರಿ ಘೋಷಣೆ-ಕಾರ್ಯಕ್ರಮಗಳನ್ನು ಪ್ರಣಾಳಿಕೆಯಲ್ಲಿ ರೂಪಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್‌ನಲ್ಲಿ ನಡೆದ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ದೇಶದಲ್ಲಿ ಆಗಿರುವ ಅಭಿವೃದ್ಧಿಯಲ್ಲಿ, ಜಾರಿ ಆಗಿರುವ ಸಾಮಾಜಿಕ ಭದ್ರತೆ, ಆಹಾರ ಭದ್ರತೆ ಕಾರ್ಯಕ್ರಮಗಳಲ್ಲಿ ಬಹುತೇಕ ಎಲ್ಲವೂ ಕಾಂಗ್ರೆಸ್ ಅವಧಿಯವು. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಆಹಾರ ಭದ್ರತಾ ಕಾಯ್ದೆ, ಶಿಕ್ಷಣ ಹಕ್ಕು ಮತ್ತು ಮಾಹಿತಿ ಹಕ್ಕು ಕಾಯ್ದೆಗಳು ಜಾರಿ ಆದವು ಎಂದು ಮುಖ್ಯಮಂತ್ರಿಗಳು ಪಟ್ಟಿ ಮಾಡಿದರು.

ದೇಶದ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ವಾಗ್ದಾನಗಳನ್ನು ಕೊಡಬೇಕು ಮತ್ತು ಅವುಗಳನ್ನು ಈಡೇರಿಸಬೇಕು. ಜನರ ವಿಶ್ವಾಸ ಉಳಿಸಿಕೊಳ್ಳುವಂತಹ ವಾಗ್ದಾನಗಳನ್ನು ನಾವು ನೀಡಬೇಕು ಎನ್ನುವುದು ಕಾಂಗ್ರೆಸ್ ಬದ್ಧತೆ. 2013 ರಲ್ಲಿ ನೀಡಿದ್ದ ವಾಗ್ದಾನಗಳನ್ನು ನಮ್ಮ ಸರ್ಕಾರ ಶೇ98 ರಷ್ಟು ಈಡೇರಿಸಿದೆ. 2024 ರಲ್ಲೂ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿ ಉಳಿದ ಭರವಸೆಗಳನ್ನು ಯಶಸ್ವಿಯಾಗಿ ಜಾರಿ ಮಾಡುತ್ತಿದ್ದೇವೆ ಎಂದರು.

ಎಐಸಿಸಿ ಮುಖಂಡ, ಪ್ರಣಾಳಿಕೆ ಸಮಿತಿ ಸದಸ್ಯ ರಾಜಾ, ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಪ್ರಣಾಳಿಕೆ ಸಮಿತಿ ಮುಖ್ಯಸ್ಥ ಮೆಹರೂಜ್ ಖಾನ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.‌

ಇದನ್ನೂ ಓದಿ: ಕೇಂದ್ರ ಬಿಜೆಪಿ ಸರ್ಕಾರದ ರೈತ ವಿರೋಧಿ ‘ಭೂ ಸುಧಾರಣಾ ಕಾಯ್ದೆ 2020’ಕ್ಕೆ ತಿದ್ದುಪಡಿ: ಸಿಎಂ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...