Homeಕರ್ನಾಟಕಶೀಘ್ರದಲ್ಲೆ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ' ಜಾರಿ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ

ಶೀಘ್ರದಲ್ಲೆ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ’ ಜಾರಿ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಶೀಘ್ರದಲ್ಲೆ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ-2022’ ಕಾಯ್ದೆಯನ್ನು ಜಾರಿ ಮಾಡುತ್ತೇವೆ; ಅಲ್ಲಿಯವರೆಗೆ ಶಾಂತಿಯುತವಾಗಿದ್ದು ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕನ್ನಡಪರ ಸಂಘನೆಗಳ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

ಈ ಕುರಿತು ಇಂದು ಹೇಳಿಕೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ, ‘ಸುಗ್ರೀವಾಜ್ಞೆ ಹೊರಡಿಸಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್ 17 (6)ಕ್ಕೆ ತಿದ್ದುಪಡಿ ತಂದು, 2024ರ ಫೆಬ್ರವರಿ 28ರೊಳಗೆ ವಾಣಿಜ್ಯ ಮಳಿಗೆಗಳು ಅನುಷ್ಠಾನಗೊಳಿಸಲು ಗಡುವು ನೀಡಲಾಗುವುದು. ಕಾಯ್ದೆ ಜಾರಿ ಮಾಡುತ್ತೇವೆ; ಅಲ್ಲಿವರೆಗೆ ಎಲ್ಲರೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು ಎಂದು ಮನವಿ ಮಾಡುತ್ತೇನೆ’ ಎಂದು ಹೇಳಿದ್ದಾರೆ.

‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್ 17 (6) ರ ಪ್ರಕಾರ ಸರ್ಕಾರದ ಅಥವಾ ಸ್ಥಳೀಯ ಪ್ರಾಧಿಕಾರದ ಅನುಮೋದನೆಯೊಂದಿಗೆ ನಡೆಸುತ್ತಿರುವ ವಾಣಿಜ್ಯ ಕೈಗಾರಿಕೆ, ವ್ಯಾಪಾರ ಸಂಸ್ಥೆ, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್ ಮುಂತಾದವುಗಳ ಹೆಸರನ್ನು ಪ್ರದರ್ಶಿಸುವ ಫಲಕಗಳ ಮೇಲಿನ ಅರ್ಧ ಭಾಗವು ಕನ್ನಡದಲ್ಲಿ ಇರತಕ್ಕದ್ದು ಎಂದು ತಿಳಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

‘ಇದಕ್ಕೂ ಮೊದಲು 2018ರಲ್ಲಿ ಹೊರಡಿಸಿದ ಸುತ್ತೋಲೆಯಲ್ಲಿ ನಾಮಫಲಕದಲ್ಲಿ ಶೇ. 60 ಕನ್ನಡ ಭಾಷೆ ಹಾಗೂ ಶೇ. 40 ರಷ್ಟು ಇತರ ಭಾಷೆಯಲ್ಲಿರಬಹುದು ಎಂದು ತಿಳಿಸಲಾಗಿದೆ. ಇದರಂತೆಯೇ ಸುಗ್ರೀವಾಜ್ಞೆ ಹೊರಡಿಸಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರವರಿ 28 ರೊಳಗೆ ವಾಣಿಜ್ಯ ಮಳಿಗೆಗಳು ಅನುಷ್ಠಾನಗೊಳಿಸಲು ಗಡುವು ನೀಡಲಾಗುವುದು’ ಎಂದು ಅವರು ಹೇಳಿದ್ದಾರೆ.

‘ಈ ಕಾಯ್ದೆಯ ನಿಯಮ 17(6) ರಲ್ಲಿ ರಾಜ್ಯದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾದ ಜಾಹೀರಾತು ಮತ್ತು ಸೂಚನೆಗಳನ್ನು ಪ್ರದರ್ಶಿಸುವ ಎಲ್ಲ ಫಲಕಗಳಲ್ಲಿ ವಿಷಯಗಳ ನಿಗದಿತ ಶೇಕಡಾವಾರು ಪ್ರಮಾಣವು ಕನ್ನಡ ಭಾಷೆಯಲ್ಲಿ ಇರತಕ್ಕದ್ದು ಎಂದಿದೆ. ಜಾಹೀರಾತುಗಳ ವರ್ಗೀಕರಣ ಮತ್ತು ಕನ್ನಡದಲ್ಲಿ ಪ್ರದರ್ಶಿಸಬೇಕಾದ ಜಾಹೀರಾತು ವಿಷಯಗಳ ಶೇಕಡಾವಾರು ಪ್ರಮಾಣವು ರಾಜ್ಯ ಸರ್ಕಾರದಿಂದ ನಿಯಮಿಸಲಾದಂತೆ ಇರತಕ್ಕದ್ದು ಎಂದು ತಿಳಿಸಲಾಗಿದೆ. ಇದನ್ನು ಸಹ ಅನುಷ್ಠಾನಗೊಳಿಸಲಾಗುವುದು’ ಎಂದಿದ್ದಾರೆ.

‘ಈ ಕಾಯ್ದೆಯ ಅಧಿಸೂಚನೆ ಹೊರಡಿಸಲು ಹಾಗೂ ನಿಯಮಗಳನ್ನು ರೂಪಿಸಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು. ಶಾಂತಿಯುತವಾದ ಪ್ರತಿಭಟನೆ ಮಾಡಲು ಸರ್ಕಾರದ ವಿರೋಧ ಇಲ್ಲ. ನಮಗೆ ಪ್ರಜಾಪ್ರಭುತ್ವದಲ್ಲಿ, ಸಂವಿಧಾನದಲ್ಲಿ ನಂಬಿಕೆ ಇದೆ. ಆದರೆ, ಕಾನೂನಿಗೆ ವಿರುದ್ಧವಾಗಿ ಯಾರಾದರೂ ನಡೆದುಕೊಂಡರೆ ಅದನ್ನು ಸರ್ಕಾರ ಸಹಿಸುವುದಿಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳ ಬಯಸುತ್ತೇನೆ’ ಎಂದು ಎಚ್ಚರಿಕೆ ನೀಡಿದ್ದಾರೆ.

‘3-3-2022ರಲ್ಲಿ ಕರ್ನಾಟಕ ಉಚ್ಛನ್ಯಾಯಾಲಯವು ಪ್ರತಿಭಟನೆಗಳನ್ನು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಾತ್ರ ನಡೆಸಬೇಕು, ರಾಜ್ಯ ಸರ್ಕಾರವು ಇದನ್ನು ಖಾತರಿಪಡಿಸಬೇಕು ಎಂದು ಸ್ಪಷ್ಟವಾದ ಆದೇಶ ಹೊರಡಿಸಿದೆ. ಸಂಘಟನೆಯಿರಲಿ, ವ್ಯಕ್ತಿಗಳಿರಲಿ, ಖಾಸಗಿ ಸಂಸ್ಥೆಗಳಿರಲಿ ಯಾರೇ ಆಗಲಿ ಸಂವಿಧಾನಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು. ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ’ ಎಂದು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ; ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛತೆ; ಶಿಕ್ಷಣ ಸಚಿವರ ತವರಿನಲ್ಲೇ ಬೆಳಕಿಗೆ ಬಂತು ಮತ್ತೊಂದು ಪ್ರಕರಣ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...