ತ್ರಿಭಾಷಾ ನೀತಿಯನ್ನು ಜಾರಿಗೆ ತರಲು ನಿರಾಕರಿಸಿದ ಕಾರಣ ಸಮಗ್ರ ಶಿಕ್ಷಾ ಯೋಜನೆಯಡಿ ಕೇಂದ್ರ ಸರ್ಕಾರವು 2,152 ಕೋಟಿ ರೂ.ಗಳ ಹಣವನ್ನು ತಡೆಹಿಡಿದಿದ್ದಕ್ಕಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶನಿವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವುದಾಗಿ ಹೇಳಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. “ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ತಲುಪಬೇಕಾದ ಹಣವನ್ನು ಕೇಂದ್ರ ಸರ್ಕಾರವು ಕ್ಷುಲ್ಲಕ ರಾಜಕೀಯದಿಂದಾಗಿ ತಡೆಹಿಡಿಯುತ್ತಿದೆ” ಎಂದು ಸ್ಟಾಲಿನ್ ಚೆನ್ನೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ. ಶಿಕ್ಷಣ ನಿಧಿ ತಡೆಹಿಡಿದ
ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ಸರ್ಕಾರವು ಸಂಸ್ಕೃತವನ್ನು ಉತ್ತೇಜಿಸುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ತಿಂಗಳ ಆರಂಭದಲ್ಲಿ ನೀಡಿದ್ದ ಹೇಳಿಕೆಯನ್ನು ಸ್ಟಾಲಿನ್ ಉಲ್ಲೇಖಿಸಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.
“ಅವರ [ಶಾ] ಹೇಳಿಕೆಗಳು ನಾವು ಬಹಳ ದಿನಗಳಿಂದ ಭಯಪಡುತ್ತಿರುವುದನ್ನು ದೃಢಪಡಿಸುತ್ತವೆ. ಈ ನೀತಿಯು ತಮಿಳು ಮತ್ತು ಇತರ ಭಾಷೆಗಳನ್ನು ದುರ್ಬಲಗೊಳಿಸುವ ಉದ್ದೇಶಪೂರ್ವಕ ಪ್ರಯತ್ನವಾಗಿದೆ” ಎಂದು ಸ್ಟಾಲಿನ್ ಹೇಳಿದ್ದಾರೆ. ಶಿಕ್ಷಣವನ್ನು ಮತ್ತೆ ರಾಜ್ಯ ಪಟ್ಟಿಗೆ ತರುವುದಷ್ಟೆ ಈ ಪ್ರವೃತ್ತಿಯನ್ನು ನಿಲ್ಲಿಸುವ ಏಕೈಕ ಮಾರ್ಗ ಅವರು ಪ್ರತಿಪಾದಿಸಿದ್ದಾರೆ.
ಫೆಬ್ರವರಿಯಲ್ಲಿ ಕೂಡಾ ಕೇಂದ್ರ ಸರ್ಕಾರ ನಿಧಿಯನ್ನು ತಡೆಹಿಡಿಯುತ್ತಿದೆ ಎಂದು ಸ್ಟಾಲಿನ್ ಆರೋಪಿಸಿದ್ದರು, ಇದು ರಾಜ್ಯಗಳು ಕೇಂದ್ರ ಸರ್ಕಾರ ಆದೇಶಿಸಿದ ಕಾರ್ಯಕ್ರಮಗಳನ್ನು ಅಳವಡಿಸಿಕೊಳ್ಳುವಂತೆ ಒತ್ತಾಯಿಸುವ ತಂತ್ರವಾಗಿದೆ ಎಂದು ಅವರು ಹೇಳಿದ್ದರು. 2020 ರ ರಾಷ್ಟ್ರೀಯ ಶಿಕ್ಷಣ ನೀತಿಯ ಅನುಷ್ಠಾನಕ್ಕೆ ಒತ್ತಾಯಿಸದೆ, ಯೋಜನೆಯಡಿಯಲ್ಲಿ ಬಾಕಿ ಹಣವನ್ನು ಪಡೆಯುವಲ್ಲಿ ಮಧ್ಯಪ್ರವೇಶಿಸುವಂತೆ ಕೋರಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಈ ವೇಳೆ ಪತ್ರ ಬರೆದಿದ್ದರು.
2018 ರಲ್ಲಿ ಜಾರಿಗೆ ತರಲಾದ ಸಮಗ್ರ ಶಿಕ್ಷಾ ಯೋಜನೆಯು ಕೇಂದ್ರ ಸರ್ಕಾರವು ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ಶಿಕ್ಷಣಕ್ಕೆ ಬೆಂಬಲ ನೀಡುವ ಯೋಜನೆಯಾಗಿದೆ. ಈ ಯೋಜನೆಯನ್ನು ಸಾರ್ವತ್ರಿಕ ಪ್ರಾಥಮಿಕ ಶಿಕ್ಷಣಕ್ಕಾಗಿ ಸರ್ವ ಶಿಕ್ಷಾ ಅಭಿಯಾನ, ಮಾಧ್ಯಮಿಕ ಮತ್ತು ಉನ್ನತ ಮಾಧ್ಯಮಿಕ ಶಾಲೆಗಳಿಗೆ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಾ ಅಭಿಯಾನ ಮತ್ತು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳಂತಹ ಶಿಕ್ಷಕರ ತರಬೇತಿ ಶಿಕ್ಷಣದಂತಹ ಮೂರು ಯೋಜನೆಗಳ ವಿಲೀನ ಮಾಡಿ ಇದನ್ನು ಪರಿಚಯಿಸಲಾಗಿತ್ತು.
ಏಪ್ರಿಲ್‌ನಲ್ಲಿ, ಕೇಂದ್ರ ಶಿಕ್ಷಣ ಸಚಿವಾಲಯವು 2024-25ರ ಕೇಂದ್ರ ಶಿಕ್ಷಣ ಯೋಜನೆಯಡಿಯಲ್ಲಿ ತಮಿಳುನಾಡು, ಕೇರಳ ಮತ್ತು ಪಶ್ಚಿಮ ಬಂಗಾಳಗಳು ಯಾವುದೇ ಹಣವನ್ನು ಪಡೆದಿಲ್ಲ ಎಂದು ರಾಜ್ಯಸಭೆಗೆ ತಿಳಿಸಿತ್ತು.
ಶಿಕ್ಷಣ ಖಾತೆ ರಾಜ್ಯ ಸಚಿವ ಜಯಂತ್ ಚೌಧರಿ ಅವರು ಮೇಲ್ಮನೆಯಲ್ಲಿ ಹಂಚಿಕೊಂಡ ದತ್ತಾಂಶದ ಪ್ರಕಾರ, ಈ ಯೋಜನೆಯಡಿಯಲ್ಲಿ ಕೇರಳಕ್ಕೆ ಕೇಂದ್ರದಿಂದ ಪ್ರಸಕ್ತ ಹಣಕಾಸು ವರ್ಷಕ್ಕೆ 328.90 ಕೋಟಿ ರೂ., ತಮಿಳುನಾಡು 2,151.60 ಕೋಟಿ ರೂ. ಮತ್ತು ಪಶ್ಚಿಮ ಬಂಗಾಳಕ್ಕೆ 1,745.80 ಕೋಟಿ ರೂ. ಹಂಚಿಕೆ ಮಾಡಲಾಗಿದ್ದರೂ, ಮಾರ್ಚ್ 27 ರವರೆಗೆ ಈ ರಾಜ್ಯಗಳಿಗೆ ಯಾವುದೇ ಹಣವನ್ನು ಬಿಡುಗಡೆ ಮಾಡಲಾಗಿಲ್ಲ ಎಂದು ಹೇಳಿದ್ದರು. ಶಿಕ್ಷಣ ನಿಧಿ ತಡೆಹಿಡಿದ
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಸೂರತ್| ಧಾರ್ಮಿಕ ಸ್ವಾತಂತ್ರ್ಯಕ್ಕಾಗಿ ಎರಡು ವರ್ಷಗಳ ಹೋರಾಟ; ಬೌದ್ಧ ಧರ್ಮ ಸ್ವೀಕರಿಸಿದ 80 ದಲಿತ ಕುಟುಂಬಗಳು
ಸೂರತ್| ಧಾರ್ಮಿಕ ಸ್ವಾತಂತ್ರ್ಯಕ್ಕಾಗಿ ಎರಡು ವರ್ಷಗಳ ಹೋರಾಟ; ಬೌದ್ಧ ಧರ್ಮ ಸ್ವೀಕರಿಸಿದ 80 ದಲಿತ ಕುಟುಂಬಗಳು

