HomeಅಂಕಣಗಳುKarnataka against SIRಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

- Advertisement -
- Advertisement -

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ ಹಿಂದ್ ಕಾರ್ಯದರ್ಶಿ ಯೂಸುಫ್ ಕನ್ನಿ ಹೇಳಿದರು.

ಎಸ್‌ಐಆರ್ ವಿರೋಧಿ ಒಕ್ಕೂಟದಿಂದ ವಿಜಯಪುರದ ಖಾಸಗಿ ಹೋಟೆಲ್‌ನಲ್ಲಿ ಶನಿವಾರ (ಜೂ.13) ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಎಸ್‌ಐಆರ್‌ನ ಲೋಪದೋಷಗಳಿಗೆ ಸಂಬಂಧಪಟ್ಟಂತೆ ಚುನಾವಣಾ ಆಯೋಗಕ್ಕೆ ನಾವು ಹಲವು ಪ್ರಶ್ನೆಗಳನ್ನು ಕೇಳಿದ್ದೇವೆ. ಈ ವಿಚಾರವಾಗಿ ಆಯೋಗ ಬಹಿರಂಗ ಚರ್ಚೆಗೆ ಬರಲಿ ಎಂದು ಆಗ್ರಹಿಸಿದರು.

ಚುನಾವಣಾ ಆಯೋಗ ಎಸ್‌ಐಆರ್ ಘೋಷಣೆ ಮಾಡುವಾಗ ನಕಲಿ ಮತದಾರರನ್ನು ಪಟ್ಟಿಯಿಂದ ಹೊರಗಿಡುವ ಪ್ರಕ್ರಿಯೆ ಎಂದು ಹೇಳಿತ್ತು. ಆದರೆ, ಈಗಾಗಲೇ ಎಸ್‌ಐಆರ್ ನಡೆದಿರುವ ರಾಜ್ಯಗಳಲ್ಲಿ ಕ್ಷುಲ್ಲಕ ಕಾರಣಗಳಿಗೆ ಲಕ್ಷಾಂತರ ಜನರ ಸಾಂವಿಧಾನಿಕ ಹಕ್ಕು ಕಿತ್ತುಕೊಂಡಿರುವುದನ್ನು ನಾವು ನೋಡಿದ್ದೇವೆ. ಹಾಗಾಗಿ, ಇಂತಹ ಅಸಾಂವಿಧಾನಿಕ ಪ್ರಕ್ರಿಯೆ ನಮ್ಮ ರಾಜ್ಯದಲ್ಲಿ ನಡೆಸುವುದು ಬೇಡ ಎಂದರು.

ಎಸ್‌ಐಆರ್‌ಗೆ ಸಂಬಂಧಪಟ್ಟಂತೆ ನಾವು ಈಗಾಗಲೇ ಚುನಾವಣಾ ಆಯೋಗದ ಎದುರು ಹಲವು ಬೇಡಿಕೆಗಳನ್ನು ಇಟ್ಟಿದ್ದೇವೆ. ಅವುಗಳಿಗೆ ಆಯೋಗ ಸ್ಪಂದಿಸಬೇಕು. ಇಲ್ಲದಿದ್ದರೆ ಮುಂದಿನ ಹೋರಾಟದ ಬಗ್ಗೆ ನಿರ್ಧರಿಸುತ್ತೇವೆ ಎಂದು ತಿಳಿಸಿದರು.

ಎಸ್‌ಐಆರ್ ವಿರೋಧಿ ಒಕ್ಕೂಟದ ಪ್ರಮುಖರಾದ ಆರಿಫುಲ್ಲಾ ಮಾತನಾಡಿ, ಎಸ್‌ಐಆರ್‌ ಮತದಾರರ ಪಟ್ಟಿಯ ಸಾಮಾನ್ಯ ಪ್ರಕ್ರಿಯೆ ಅಲ್ಲ, ವಿಶೇಷ ಪರಿಷ್ಕರಣೆಯಾಗಿದೆ. ದೇಶದ ಜನರ ನಾಗರಿಕತ್ವ ನಿರ್ಧರಿಸಲು ಮುಂದಾಗಿರುವ ಈ ದೊಡ್ಡ ಪ್ರಕ್ರಿಯೆಗೆ ಸಂಸತ್ತಿನ ಅನುಮೋದನೆ ಪಡೆದಿಲ್ಲ, ಸರ್ಕಾರದಿಂದ ಯಾವುದೇ ಅಧಿಕೃತ ರಾಜಪತ್ರ ಪ್ರಕಟಿಸಿಲ್ಲ ಎಂದರು.

ಎಸ್ಐಆರ್ ನಮೂನೆಯಲ್ಲಿ ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ವ್ಯತ್ಯಾಸವಿದೆ. ಇದಕ್ಕೆ ನಮ್ಮ ವಿರೋಧವಿದೆ. ಈ ಮೊದಲು ಸರ್ಕಾರ ಬಂದು ಮತದಾರರ ಪಟ್ಟಿ ತಯಾರಿಸುತಿತ್ತು, ಈಗ ನಾವೇ ಮಾಡಬೇಕಂತೆ. ಚುನಾವಣಾ ಆಯೋಗ ಏನೇ ತಪ್ಪು ಮಾಡಿದರೂ ಪ್ರಶ್ನಿಸುವ ಅಧಿಕಾರ ಕಿತ್ತುಕೊಳ್ಳಲಾಗಿದೆ. ಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆ ಮಾರ್ಪಡಿಸಿರುವುದು ಇವೆಲ್ಲ ಅವ್ಯವಸ್ಥೆಗಳ ಮೂಲ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆಯನ್ನೇ ಬದಲಿಸಿ, ಅವರಿಗೆ ಬೇಕಾದವರನ್ನು ನೇಮಿಸಿಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಸ್‌ಐಆರ್‌ ಮೂಲಕ ವಲಸೆ ಕಾರ್ಮಿಕರನ್ನು ನುಸುಳುಕೋರರು ಎಂದು ಹಣೆಪಟ್ಟಿ ಕಟ್ಟಲಾಗ್ತಿದೆ. ರಾಜ್ಯದಿಂದ ರಾಜ್ಯಕ್ಕೆ ವಲಸೆ ಬಂದವರು ನುಸುಳುಕೋರರಲ್ಲ, ಅವರೂ ನಮ್ಮ ದೇಶದವರು. ಬಡ ಕೂಲಿ ಕಾರ್ಮಿಕರು, ದಲಿತರು, ಆದಿವಾಸಿಗಳು ಎಲ್ಲಿಂದ ದಾಖಲೆಗಳನ್ನು ತರಬೇಕು ಎಂದು ಪ್ರಶ್ನಿಸಿದರು.

ಸ್ಥಳೀಯ ಕಾಂಗ್ರೆಸ್ ಮುಖಂಡ ರಫೀಕ್ ಅಹ್ಮದ್ ಮಾತನಾಡಿ, ಎಸ್‌ಐಆರ್ ಮೂಲಕ ದೇಶದ ಪ್ರಜೆಗಳನ್ನು ಹೊರಗಿಟ್ಟು ಚುನಾವಣೆ ನಡೆಸಲಾಗುತ್ತಿದೆ. ಇದನ್ನು ಯಾವುದೇ ಕಾರಣಕ್ಕೆ ಒಪ್ಪಲು ಸಾಧ್ಯವಿಲ್ಲ. ಎಸ್‌ಐಆರ್‌ ವೇಳೆ ಮತದಾರರ ಪಟ್ಟಿಯಿಂದ ಹೊರಬಿದ್ದರೆ ಸರಿಪಡಿಸಿಕೊಳ್ಳಲು ಅವಕಾಶ ಇದೆ ಎಂದು ಹೇಳಲಾಗ್ತಿದೆ. ಆದರೆ, ಸಮಸ್ಯೆಗಳನ್ನು ಸರಿಪಡಿಸಿಕೊಳ್ಳುವ ಮೊದಲೇ ಚುನಾವಣೆ ನಡೆದಿರುವ ಉದಾಹರಣೆಗಳನ್ನು ನಾವು ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿ ನೋಡಿದ್ದೇವೆ ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...