Homeಕರ್ನಾಟಕ"ಬಿಜೆಪಿ, ಆರ್‌ಎಸ್‌ಎಸ್‌ ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗಲ್ಲ-ಬಗ್ಗಲ್ಲ": ಭಾಷಣ ವೇಳೆ ಗದ್ದಲ ಎಬ್ಬಿಸಿದ ಬಿಜೆಪಿ ಕಾರ್ಯಕರ್ತರ...

“ಬಿಜೆಪಿ, ಆರ್‌ಎಸ್‌ಎಸ್‌ ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗಲ್ಲ-ಬಗ್ಗಲ್ಲ”: ಭಾಷಣ ವೇಳೆ ಗದ್ದಲ ಎಬ್ಬಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ

- Advertisement -
- Advertisement -

ನಾವು ಬಿಜೆಪಿ-ಆರ್‌ಎಸ್‌ಎಸ್‌ನ ಗೊಡ್ಡು ಬೆದರಿಕೆಗಳಿಗೆ ಜಗ್ಗಲ್ಲ-ಬಗ್ಗಲ್ಲ. ನಿಮ್ಮನ್ನೆಲ್ಲ ಸಾರ್ವಜನಿಕವಾಗಿ ಎದುರಿಸುವ ಶಕ್ತಿ ನನಗಿದೆ. ನಮ್ಮ ಕಾರ್ಯಕರ್ತರಿಗೂ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದರು.

ಬೆಳಗಾವಿಯಲ್ಲಿ ಎಐಸಿಸಿ ಆಯೋಜಿಸಿದ್ದ ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ ಹಾಗೂ ದೇಶ ವಿರೋಧಿ ಆಡಳಿತ ವಿರೋಧಿ ಖಂಡನಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಿಜೆಪಿಯ ದೇಶ ವಿರೋಧಿ ಆಡಳಿತ, ಜನ ವಿರೋಧಿ ಕ್ರಮಗಳನ್ನು ಖಂಡಿಸಿ ಭಾಷಣ ಮಾಡುವ ವೇಳೆ ಅಡ್ಡಿಪಡಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಸಿಎಂ ಬಿಜೆಪಿ-ಆರ್‌ಎಸ್‌ಎಸ್‌ಗೆ ನೇರ ಸವಾಲೆಸೆದರು.

ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಾ, ಭಾರತೀಯರ ಬದುಕನ್ನು ಬೆಲೆ ಏರಿಕೆಯಲ್ಲಿ ಬೇಯಿಸುತ್ತಾ, ಭಾರತೀಯ ಸಮಾಜವನ್ನು ಛಿದ್ರಗೊಳಿಸುತ್ತಾ, ಬಿರುಕು ಮೂಡಿಸುತ್ತಾ ಜನದ್ರೋಹಿಯಾಗಿ ವರ್ತಿಸುತ್ತಿರುವುದು ಬಿಟ್ಟರೆ ಬೇರೆ ಏನು ಮಾಡಿದ್ದೀರಿ ತೋರಿಸಿ ಎಂದು ಸಿಎಂ ಆಕ್ರೋಶ ವ್ಯಕ್ತಪಡಿಸಿದರು.

ಭಾರತೀಯರು ಬ್ರಿಟಿಷರ ವಿರುದ್ಧ ಪ್ರಾಣತ್ಯಾಗ ಮಾಡಿ ಹೋರಾಡುತ್ತಿದ್ದಾಗ ನೀವು ಸಂಘ ಪರಿವಾರದವರು ಏನು ಕಡೆದು ಕಟ್ಟೆ ಹಾಕ್ತಿದ್ರಿ? ಸ್ವಾತಂತ್ರ್ಯ ಹೋರಾಟಕ್ಕೆ ಏಕೆ ಬರಲಿಲ್ಲ? ಏನ್ ಮಾಡ್ತಾ ಕೂತಿದ್ರಿ? ಆಗ ಎಂದು ಪ್ರಶ್ನಿಸಿದರು.

ಮೊನ್ನೆ ಕಾಶ್ಮೀರದಲ್ಲಿ ಕರ್ನಾಟಕದ ಮೂವರು ಸೇರಿದಂತೆ ಅಮಾಯಕ ಭಾರತೀಯರನ್ನು ರಾಜಾರೋಷವಾಗಿ ಗನ್‌ಗಳ ಸಮೇತ ಬಂದು ಅಮಾನುಷವಾಗಿ ಹತ್ಯೆ ಮಾಡಿ ಹೋದರಲ್ಲಾ, ಇದು ಕೇಂದ್ರ ಸರ್ಕಾರದ ಭದ್ರತಾ ಲೋಪ ಅಲ್ಲವೇ? ಭಾರತೀಯರಿಗೆ ರಕ್ಷಣೆ ಕೊಡುವುದರಲ್ಲಿ ವಿಫಲ ಆಗಿರುವುದನ್ನು ನಾವು ಭಾರತೀಯರು ಪ್ರಶ್ನಿಸಬಾರದಾ? ಪ್ರಶ್ನಿಸಿದರೆ ಕಾರ್ಯಕ್ರಮಕ್ಕೆ ಅಡ್ಡಿ ಪಡಿಸ್ತೀರಾ? ಎಂದು ಸಿಎಂ ಕಿಡಿಕಾರಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದು 52 ವರ್ಷಗಳ ಕಾಲ ಆರ್‌ಎಸ್‌ಎಸ್‌ ಕಚೇರಿ ಮೇಲೆ ಭಾರತದ ಬಾವುಟ ಹಾರಿಸಲೇ ಇಲ್ಲ ನೀವು.ಇದಕ್ಕೂ ನಾಚಿಕೆ ಆಗುವುದಿಲ್ಲವೇ ನಿಮಗೆ ಎಂದು ಪ್ರಶ್ನಿಸಿದರು.

ಸ್ವಾತಂತ್ರ್ಯ ಹೋರಾಟದಿಂದ ಹಿಡಿದು ಆಧುನಿಕ ಭಾರತ ನಿರ್ಮಾಣದವರೆಗೂ ಬಿಜೆಪಿ, ಸಂಘ ಪರಿವಾರದ ಕೊಡುಗೆ ಏನಿದೆ? ನಾಚಿಕೆ ಇಲ್ಲದೆ ದೇಶಭಕ್ತಿ ಬಗ್ಗೆ ಮಾತಾಡ್ತೀರಾ. ಭಾರತೀಯ ಸಮಾಜವನ್ನು ಬಿರುಕು ಮೂಡಿಸಿದ್ದು ಬಿಟ್ಟರೆ ಇಷ್ಟು ವರ್ಷಗಳ ನಿಮ್ಮ ಕೊಡುಗೆ ಭಾರತಕ್ಕೆ ಏನು ಎಂಬುವುದನ್ನು ದೇಶದ ಜನಕ್ಕೆ ವಿವರಿಸಿ ಎಂದು ಸವಾಲು ಹಾಕಿದರು.

ಮನಮೋಹನ್ ಸಿಂಗ್ ಅವರು ಪ್ರಧಾನಿ ಆಗಿದ್ದಾಗ ಅತ್ಯಂತ ಶ್ರೀಮಂತರ ಮೇಲೆ 32% ಟ್ಯಾಕ್ಸ್ ಇತ್ತು. ಮೋದಿ ಬಂದ ಮೇಲೆ ಅತ್ಯಂತ ಶ್ರೀಮಂತರ ಮೇಲಿನ ತೆರಿಗೆಯನ್ನು ಶೇ25 ಇಳಿಸಿದಿರಿ. ಬಡವರು, ಮಧ್ಯಮ ವರ್ಗದವರ ಮೇಲಿನ ತೆರಿಗೆಯನ್ನು ಹೆಚ್ಚಿಸಿದಿರಿ. ನಾಚಿಕೆ ಆಗುತ್ತಿಲ್ಲ ನಿಮಗೆ? ಬಡವರ, ಮಧ್ಯಮ ವರ್ಗದವರ ವಿರೋಧಿ ಬಿಜೆಪಿಯ ಆಡಳಿತವನ್ನು ಪ್ರಶ್ನಿಸಬಾರದಾ? ಭಾರತೀಯರನ್ನು ನಿರಂತರ ಸುಳ್ಳುಗಳಲ್ಲಿ ಇನ್ನೂ ಎಷ್ಟು ವರ್ಷ ಮರಳು ಮಾಡ್ತೀರಿ? ಸತ್ಯ ಹೇಳಿ ಎಂದರು.

ಭಾರತದ ಸ್ವಾತಂತ್ರ್ಯಕ್ಕೆ ಪ್ರಾಣ ತ್ಯಾಗ ಮಾಡಿದ ಕಾಂಗ್ರೆಸ್ ಪಕ್ಷಕ್ಕೆ ಹೋರಾಟ ಹೊಸದಲ್ಲ.ಬ್ರಿಟಿಷರನ್ನೇ ಒದ್ದೋಡಿಸಿದ ನಮಗೆ ನೀವು ಬಿಜೆಪಿ-ಆರ್‌ಎಸ್‌ಎಸ್‌ ಎದುರಿಸಿ ನಿಲ್ಲುವ ಶಕ್ತಿ ಇದೆ ಎಂದು ಹೇಳಿದರು.

ನಾವು ಹಾಲಿನ ದರ 4ರೂ ಹೆಚ್ಚಿಸಿ, ಅದನ್ನು ಪೂರ್ತಿಯಾಗಿ ರೈತರಿಗೆ, ಗೋಪಾಲಕರಿಗೆ, ಗೋ ಸಾಕಾಣಿಕೆದಾರರಿಗೆ ವರ್ಗಾಯಿಸಿದ್ದೀವಿ. ಇದರಲ್ಲಿ ಒಂದು ರೂಪಾಯಿ ಕೂಡ ಸರ್ಕಾರಕ್ಕೆ ಬರಲ್ಲ. ನಾವು 4 ರೂ ಹೆಚ್ಚಿಸಿದರೂ ಹಾಲಿನ‌ ದರ ಇಡೀ ದೇಶದಲ್ಲಿ ಕಡಿಮೆ ಇರುವುದು ನಮ್ಮ ರಾಜ್ಯದಲ್ಲಿ ಮಾತ್ರ. ಬಸ್ ದರ, ನೀರಿನ ದರ, ವಿದ್ಯುತ್ ದರ ಅಕ್ಕ ಪಕ್ಕದ ರಾಜ್ಯಗಳಿಗಿಂತ ಅತ್ಯಂತ ಕಡಿಮೆ ಇರುವುದು ನಮ್ಮ ರಾಜ್ಯದಲ್ಲಿ ಮಾತ್ರ. ನಿಮ್ಮ ಸುಳ್ಳು, ಅಪಪ್ರಚಾರ, ಬೆದರಿಕೆಗೆ ಈ ಸಿದ್ದರಾಮಯ್ಯ ಹೆದರುವವನಲ್ಲ. ನಿಮ್ಮನ್ನು ಮೆಟ್ಟಿ ನಿಲ್ತೀವಿ. ಕಾಂಗ್ರೆಸ್ ಪಕ್ಷಕ್ಕೆ ಆ ಶಕ್ತಿ ಇನ್ನೂ ಇದೆ ಎಂದರು.

ಅಕ್ಕಿ, ಎಣ್ಣೆ, ಚಿನ್ನ, ಬೆಳ್ಳಿ, ಗೊಬ್ಬರ, ಕಾಳು, ಬೇಳೆ, ಡೀಸೆಲ್, ಪೆಟ್ರೋಲ್, ಸಿಲಿಂಡರ್ ಎಲ್ಲದರ ಬೆಲೆ ಏರಿಸಿದ್ದೀರಿ.ಯಾವುದನ್ನು ಬಿಟ್ಟಿದ್ದೀರಿ ಹೇಳಿ ಕೇಳಿದರು.

ಕಚ್ಛಾ ತೈಲ ಬೆಲೆ ಕಡಿಮೆ ಇದ್ದಾಗಲೂ ಪೆಟ್ರೋಲ್, ಡೀಸೆಲ್ ಬೆಲೆ ಮಾತ್ರ ನಿರಂತರವಾಗಿ ಏರಿಕೆ ಮಾಡುತ್ತಲೇ ಇರುವುದು ಭಾರತೀಯರಿಗೆ ಬಿಜೆಪಿ ಬಗೆಯುತ್ತಿರುವ ಮಹಾದ್ರೋಹ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ನಿರಂತರವಾಗಿ ಭಾರತೀಯರನ್ನು ಸುಳ್ಳುಗಳ ಸರಮಾಲೆಯಲ್ಲಿ ಮುಳುಗಿಸಿ, ಸಮಾಜವನ್ನು ಬಿರುಕು ಮೂಡಿಸಿ ಕಾಲ ಕಳೆಯುತ್ತಿದೆ. ನಿಮಗೆ ತಕ್ಕ ಉತ್ತರ ಕೊಡುವ ಶಕ್ತಿ ನಮಗಿದೆ. ನಾವು ಉತ್ತರ ಕೊಡ್ತೀವಿ ಎಂದರು.

ಯುದ್ಧವೇ ಏಕೈಕ ಆಯ್ಕೆಯಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು 'ಪ್ರಿವೆಂಟಿವ್ ಅರೆಸ್ಟ್' ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ...

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...