Homeಮುಖಪುಟಪೇ ಸಿಎಂ ಪೋಸ್ಟರ್ ಅನ್ನು ಸರ್ಕಾರಿ ಕಚೇರಿಗಳಲ್ಲಿ ಅಂಟಿಸುತ್ತೇವೆ: ಡಿ.ಕೆ ಶಿವಕುಮಾರ್

ಪೇ ಸಿಎಂ ಪೋಸ್ಟರ್ ಅನ್ನು ಸರ್ಕಾರಿ ಕಚೇರಿಗಳಲ್ಲಿ ಅಂಟಿಸುತ್ತೇವೆ: ಡಿ.ಕೆ ಶಿವಕುಮಾರ್

- Advertisement -
- Advertisement -

ಪೇ ಸಿಎಂ ಅಭಿಯಾನದ ಮೂಲಕ ರಾಜ್ಯ ಬಿಜೆಪಿ ಸರ್ಕಾರ ಮುಜುಗರ ತಂದಿಟ್ಟಿದ್ದ ಕಾಂಗ್ರೆಸ್ ಕಾರ್ಯಕರ್ತರ ಬಂಧನವನ್ನು ಖಂಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ರವರು, ನಮ್ಮ ಶಾಸಕರೆಲ್ಲರೂ ಸೇರಿ ಪೇ ಸಿಎಂ ಪೋಸ್ಟರ್ ಅನ್ನು ಸರ್ಕಾರಿ ಕಚೇರಿಗಳಲ್ಲಿ ಅಂಟಿಸುತ್ತೇವೆ ಎಂದು ಸವಾಲು ಹಾಕಿದ್ದಾರೆ.

ಮುಖ್ಯಮಂತ್ರಿಗಳು ಪೋಸ್ಟರ್ ವಿಚಾರಕ್ಕೆ ಇಷ್ಟು ತಲೆ ಕೆಡಿಸಿಕೊಂಡು ಗಾಬರಿಯಾಗಿರುವುದು ಏಕೆ? ಈ ಪೋಸ್ಟರ್ ಅಂಟಿಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿರುವುದು ಏಕೆ? ಬಿಜೆಪಿ ಅವರು ನಮ್ಮ ಬಗ್ಗೆಯೂ ಕ್ಯೂಆರ್ ಕೋಡ್ ಹಾಕಿದ್ದಾರೆ. ನಾನು ವಿಚಾರಣೆಗೆ ಹೋದ ಸಮಯದಲ್ಲಿ ನಾನು ಕಂಬಿ ಹಿಂದೆ ಇರುವಂತೆ ಮಾಧ್ಯಮಗಳು ಫೋಟೋ ಹಾಕಿದ್ದರು. ಹಾಗೆಂದು ನಾನು ಅವರ ವಿರುದ್ಧ ದೂರು ನೀಡಲು ಸಾಧ್ಯವೇ? ಎಂದು ಅವರು ಪ್ರಶ್ನಿಸಿದ್ದಾರೆ.

ರಾಜಕೀಯದಲ್ಲಿ ಇರುವವರನ್ನು ಜನ ಪ್ರಶ್ನಿಸುವುದು, ಟೀಕಿಸುವುದು ಸಹಜ. ಅಧಿಕಾರದಲ್ಲಿ ಇರುವವರು ಇದನ್ನು ಜೀರ್ಣಿಸಿಕೊಳ್ಳಬೇಕು. ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾಧ್ಯಮಗಳು ವರದಿ ಮಾಡಿವೆ. ಗುತ್ತಿಗೆದಾರರು ಆರೋಪ ಮಾಡಿದ್ದಾರೆ. ನಮ್ಮ ಅಭಿಯಾನದಲ್ಲಿ 8 ಸಾವಿರಕ್ಕೂ ಹೆಚ್ಚು ಮಂದಿ, ನಾವು ಭ್ರಷ್ಟಾಚಾರಕ್ಕೆ ಬಲಿಯಾಗಿದ್ದೇವೆ ಎಂದು ತಿಳಿಸಿದ್ದಾರೆ. ಹೀಗಾಗಿ ಪಕ್ಷದ ವತಿಯಿಂದ ನಾವೇ ಟೋಲ್ ಸಂಖ್ಯೆ ನೀಡಿ ನೋಂದಣಿ ಮಾಡಿಕೊಳ್ಳಲು ಹೇಳಿದ್ದೆವು ಎಂದು ತಿಳಿಸಿದ್ದಾರೆ.

ನಮ್ಮ ವಿರುದ್ಧ ಟ್ವೀಟ್ ಮಾಡಿದವರನ್ನೂ ಬಂಧಿಸಿ: ಸಿದ್ದರಾಮಯ್ಯ ಆಗ್ರಹ

“ನ್ಯಾಯ ಎಲ್ಲರಿಗೂ ಒಂದೇ ಇರಬೇಕು. ಅವರ ಬಗ್ಗೆ ಪೋಸ್ಟರ್ ಅಂಟಿಸಿದ್ದಾರೆ ಅನ್ನೋ ಕಾರಣಕ್ಕೆ ನಮ್ಮವರ ಬಂಧನವಾದರೆ, ನಮ್ಮವಿರುದ್ಧ ಟ್ವಿಟ್ ಮಾಡಿರುವವರನ್ನೂ ಅರೆಸ್ಟ್ ಮಾಡಿಸಿ’ ಎಂದು ವಿರೋಧ ಪಕ್ಷದ ಮುಖಂಡರಾದ ಸಿದ್ದರಾಮಯ್ಯನವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

“ಕಾಂಗ್ರೆಸ್ ಪಕ್ಷದಿಂದ 40% ಕಮಿಷನ್ ಆಂದೋಲನ ನಡೆಯುತ್ತಿದೆ. ನಾನು, ಡಿಕೆಶಿ, ಹರಿಪ್ರಸಾದ್ ಎಲ್ಲರೂ ಆಂದೋಲನ ಮಾಡಿದ್ದೇವೆ. ಅದರ ಅಂಗವಾಗಿ ನಿನ್ನೆ ನಮ್ಮ ಕಾರ್ಯಕರ್ತರು ಪೋಸ್ಟರ್ ಅಂಟಿಸಿದ್ದಾರೆ. ಇವೆಲ್ಲಾ ತಪ್ಪು ಕೆಲಸವೇ? ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡೋದು ತಪ್ಪಾ? ಭ್ರಷ್ಟಾಚಾರದ ಬಗ್ಗೆ ಧ್ವನಿ ಎತ್ತೋದು ತಪ್ಪಾ?’ ಎಂದು ಪ್ರಶ್ನಿಸಿದ್ದಾರೆ.

“ಬಿಜೆಪಿಯವರು ಸುಳ್ಳು ಆರೋಪ ಮಾಡಿದ್ದಾರೆ. ನಮ್ಮ ಬಗ್ಗೆಯೂ ‘ಯಾರಿಗೂ ಬೇಡವಾದವರು’ ಅಂತ ಪೋಸ್ಟ‌ ಅಂಟಿಸಿದ್ದಾರೆ ಅಲ್ವಾ, ಹೀಗಿದ್ದ ಮೇಲೆ ಅವರನ್ನು ಯಾಕೆ ಅರೆಸ್ಟ್ ಮಾಡಿಲ್ಲ?” ಎಂದು ಸಿದ್ದರಾಮಯ್ಯ ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು.

“ನಮ್ಮ ಸಾಮಾಜಿಕ ಜಾಲತಾಣ ವಿಭಾಗದ ಮಾಜಿ ಅಧ್ಯಕ್ಷ ನಾಯ್ಡು ಅವರನ್ನು ರಾತ್ರಿ ಬಂಧನ ಮಾಡಿದ್ದಾರೆ. ಅರ್ಧ ರಾತ್ರಿ ಕಾರ್ಯಾಚರಣೆ ಮಾಡಲು ಅವರೇನು ಕೊಲೆ ಅಥವಾ ಕಳ್ಳತನ ಮಾಡಿದ್ರಾ? ಇವರ ಮೇಲೆ ಕ್ರಮ ತೆಗೆದುಕೊಳ್ಳುವ ಸರ್ಕಾರದವರು ತೆಲಂಗಾಣದಲ್ಲಿ ಪೋಸ್ಟರ್ ಅಂಟಿಸಿದ್ದವರ ವಿರುದ್ಧ ಏನು ಶಿಸ್ತುಕ್ರಮ ಜರುಗಿಸಿದ್ದಾರೆಂದು ಹೇಳಲಿ” ಎಂದು ವಿಪಕ್ಷ ನಾಯಕರು ಕಿಡಿ ಕಾರಿದರು.

‘ಭ್ರಷ್ಟಾಚಾರದ ವಿಚಾರದಲ್ಲಿ ಇಷ್ಟೊಂದು ಸೀರಿಯಸ್ ಆಗಿ ಮಾತನಾಡುವ ಇವರು, ಕೆಂಪಣ್ಣ ಪತ್ರ ಬರೆದು ಇಷ್ಟು ದಿನವಾದರೂ ಯಾಕೆ ತನಿಖೆ ಮಾಡಿಸಲಿಲ್ಲ? ಯಡಿಯೂರಪ್ಪನವರ ಆಪ್ತನ ಮೆಲೆ ದಾಳಿಯಾದಾಗ ದಾಖಲೆ ಸಿಕ್ಕಿತ್ತು, ಆವಾಗ ತನಿಖೆ ಮಾಡಿಸಬೇಕಿತ್ತಲ್ವಾ? ಇದು ಯಾವುದೂ ಜನರಿಗೆ ತಲುಪದಂತೆ ಸದ್ದಿಲ್ಲದೆ ಮುಚ್ಚಿ ಹಾಕುವ ಕೆಲಸ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಪೇ ಸಿಎಂ ಪೋಸ್ಟರ್ ಅಂಟಿಸಿದ ಆರೋಪದ ಮೇಲೆ ಪೊಲೀಸರು ಮಧ್ಯರಾತ್ರಿ ಕಾಂಗ್ರೆಸ್ ಕಾರ್ಯಕರ್ತರಾದ ಗಗನ್ ಯಾದವ್ ಮತ್ತು ಬಿ.ಆರ್ ನಾಯ್ಡು ಎಂಬುವವರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ‘ಪೇಸಿಎಂ’ ಪೋಸ್ಟರ್‌ಗಳು ವೈರಲ್‌; ಸ್ಕ್ಯಾನ್‌ ಮಾಡಿದರೆ ‘40% ವೆಬ್‌ಸೈಟ್‌’ ಓಪನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...