Homeಮುಖಪುಟಜಾತಿಗಣತಿ ವರದಿ ಸ್ವೀಕರಿಸುತ್ತೇವೆ: ಸಿಎಂ ಸಿದ್ದರಾಮಯ್ಯ

ಜಾತಿಗಣತಿ ವರದಿ ಸ್ವೀಕರಿಸುತ್ತೇವೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಹಿಂದುಳಿದ ವರ್ಗಗಳ ಆಯೋಗದ ನೇತೃತ್ವದಲ್ಲಿ 2015ರ ಏಪ್ರಿಲ್-ಮೇ ತಿಂಗಳಿನಲ್ಲಿ ನಡೆದಿರುವ ಕರ್ನಾಟಕ ರಾಜ್ಯದ ಜಾತಿಗಣತಿ ವರದಿಯನ್ನು ಸ್ವೀಕರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ಹಲವು ಶತಮಾನಗಳಿಂದ ಅವಕಾಶ ವಂಚಿತರಾದವರಿಗೆ ಈಗ ಅವಕಾಶ ಒದಗಿಸುವ ಮೂಲಕ ಅಸಮಾನತೆಯನ್ನು ನಿವಾರಿಸಿ ಸಮಾನತೆಯನ್ನು ಕಲ್ಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಹಿಂದೆ ನಮ್ಮ ಸರ್ಕಾರ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು 162 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಂಡಿತ್ತು. ಸಮೀಕ್ಷೆಯ ವರದಿಯನ್ನು ಸ್ವೀಕರಿಸಲು ಹಿಂದಿನ ಸರ್ಕಾರಗಳು ಹಿಂದೇಟು ಹಾಕಿದವು. ಇದೀಗ ನಮ್ಮ ಸರ್ಕಾರ ಈ ವರದಿಯನ್ನು ಸ್ವೀಕರಿಸಲಿದೆ. ವಸ್ತು ಸ್ಥಿತಿಯನ್ನು ಆಧರಿಸಿ, ಜನರಿಗೆ ಶಿಕ್ಷಣ, ಉದ್ಯೋಗ, ಉದ್ಯಮ ಹೀಗೆ ವಿವಿಧ ವಲಯಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲಿದೆ ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಜಾತಿಗಣತಿಯ ಹಿನ್ನೆಲೆ

ಸಾವಿರಾರು ಜಾತಿಗಳಿಂದ ಕೂಡಿರುವ ಭಾರತದಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ 1931ರ ಜನಗಣತಿಯೊಂದಿಗೆ ಜಾತಿಗಣತಿಯೂ ನಡೆದಿತ್ತು. ಅದಾಗಿ 90 ವರ್ಷ ಕಳೆದರೂ ದೇಶಾದ್ಯಂತ ಜಾತಿ ಗಣತಿ ನಡೆದೇ ಇಲ್ಲ. 1991ರ ನಂತರ ಶಿಕ್ಷಣ ಮತ್ತು ಉದ್ಯೋಗದಲ್ಲಿ ಒಬಿಸಿ ಮೀಸಲಾತಿ ಜಾರಿಯಾದ ನಂತರ ಜಾತಿಗಣತಿ ನಡೆಯಬೇಕೆಂದು ದೊಡ್ಡ ಒತ್ತಾಯಗಳು ಕೇಳಿಬಂದಿದ್ದರಿಂದ 2003-04ರಲ್ಲಿ ಕೇಂದ್ರ ಸರ್ಕಾರ ಕರ್ನಾಟಕದಲ್ಲಿ ಜಾತಿಗಣತಿಯ ಪೈಲೆಟ್ ಪ್ರಾಜೆಕ್ಟ್ ನಡೆಸಲು 21.5 ಕೋಟಿ ರೂ ಬಿಡುಗಡೆ ಮಾಡಿತ್ತು. ಆಗ ಕರ್ನಾಟಕದಲ್ಲಿ ಸಿದ್ದರಾಮಯ್ಯನವರು ಉಪ ಮುಖ್ಯಮಂತ್ರಿ ಮತ್ತು ಹಣಕಾಸು ಸಚಿವರಾಗಿದ್ದರು. ಆಗ ಕರ್ನಾಟಕ ಸರ್ಕಾರ 1.5 ಕೋಟಿ ನೀಡಿತ್ತು. ಆದರೆ ಆಗಿನ ಸರ್ಕಾರಗಳ ನಿರ್ಲಕ್ಷ್ಯದಿಂದಾಗಿ ಅದು ನಡೆಯಲಿಲ್ಲ. ನಂತರ ಮನಮೋಹನ್ ಸಿಂಗ್ ನೇತೃತ್ವದಲ್ಲಿ 2011ರ ನಂತರ ಪ್ರತ್ಯೇಕವಾಗಿ ಜಾತಿಗಣತಿ ನಡೆಸಲು ಮುಂದಾದರೂ ಅದು ಕೂಡ ನಡೆಯದೇ ನೆನೆಗುದ್ದಿಗೆ ಬಿದ್ದಿತು.

2013ರಲ್ಲಿ ಸಿದ್ದರಾಮಯ್ಯನವರು ಕರ್ನಾಟಕದ ಮುಖ್ಯಮಂತ್ರಿಯಾದಾಗ ಜಾತಿಗಣತಿಗಾಗಿ ಬಜೆಟ್‌ನಲ್ಲಿ 187 ಕೋಟಿ ರೂ ಬಿಡುಗಡೆ ಮಾಡಿದ್ದರು. ಹಿಂದುಳಿದ ವರ್ಗಗಳ ಆಯೋಗದ ನೇತೃತ್ವದಲ್ಲಿ 2015ರ ಏಪ್ರಿಲ್-ಮೇ ತಿಂಗಳಿನಲ್ಲಿ 162 ಕೋಟಿ ರೂ ಖರ್ಚಿನಲ್ಲಿ ಜಾತಿಗಣತಿ ನಡೆದಿದ್ದು, ಸಮೀಕ್ಷಾ ವರದಿ ಸಿದ್ಧವಾಗಿದೆ. ಆದರೆ ಆ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗವು ಇದುವರೆಗೂ ಸರ್ಕಾರಕ್ಕೆ ಸಲ್ಲಿಸಿಲ್ಲ. ಸಿದ್ದರಾಮಯ್ಯ, ಕುಮಾರಸ್ವಾಮಿ, ಯಡಿಯೂರಪ್ಪ ಮತ್ತು ಬಸವರಾಜ್ ಬೊಮ್ಮಾಯಿ ಈ ನಾಲ್ವರು ಸಿಎಂಗಳು ಸಹ ವರದಿ ಸ್ವೀಕರಿಸದ ಕಾರಣ ಅದು ಆಯೋಗದ ಬಳಿಯೇ ಉಳಿದುಕೊಂಡಿದೆ. ಸದ್ಯ ಆ ವರದಿಯನ್ನು ಸ್ವೀಕರಿಸಿ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದು ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ಕರ್ನಾಟಕ ಮಾದರಿಯಲ್ಲಿ ಬಿಹಾರ ರಾಜ್ಯದಲ್ಲಿ ಜಾತಿ ಗಣತಿ ನಡೆಸಲು ಅಲ್ಲಿನ ಸರ್ಕಾರ ನಿರ್ಧರಿಸಿದೆ. ಆದರೆ ಪಾಟ್ನಾ ಹೈಕೋರ್ಟ್ ಮಧ್ಯಂತರ ತಡೆ ನೀಡಿದ್ದು, ಮುಂದಿನ ವಿಚಾರಣೆಯನ್ನು ಜುಲೈ 03ಕ್ಕೆ ನಿಗಧಿಗೊಳಿಸಿದೆ.

ಬಿಹಾರದ ಮಹಾಘಟಬಂಧನ ಸರ್ಕಾರ ರಾಜ್ಯದಲ್ಲಿ ಜಾತಿ ಗಣತಿ ನಡೆಸುವ ನಿರ್ಧಾರ ಕೈಗೊಂಡಿತ್ತು. ಎರಡು ಹಂತಗಳಲ್ಲಿ ಮನೆ ಮನೆ ಸರ್ವೇ ನಡೆಸುತ್ತಿದ್ದು ಜನವರಿಯಲ್ಲಿ ಮೊದಲ ಹಂತದ ಜಾತಿಗಣತಿ ಮುಗಿದಿದ್ದು, ಈ ಏಪ್ರಿಲ್-ಮೇ ತಿಂಗಳಿನಲ್ಲಿ ಎರಡನೇ ಹಂತದ ಗಣತಿ ನಡೆಯುತ್ತಿತ್ತು. ಈ ಯೋಜನೆಗೆ ಸುಮಾರು 500 ಕೋಟಿ ರೂ ಮೀಸಲಿಡಲಾಗಿದೆ.

ಆದರೆ ಜಾತಿ ಗಣತಿ ನಡೆಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರ ಇದೆ. ಬಿಹಾರ ಸರ್ಕಾರ ಈ ಗಣತಿಯಲ್ಲಿ ಸೂಕ್ತ ನಡಾವಳಿಗಳನ್ನು ಪಾಲಿಸುತ್ತಿಲ್ಲ ಎಂದು ಆರೋಪಿಸಿ ನಿತೀಶ್ ಕುಮಾರ್ ನೇತೃತ್ವದ ಸರ್ಕಾರದ ಜಾತಿ ಆಧಾರಿತ ಸಮೀಕ್ಷೆಯನ್ನು ಪ್ರಶ್ನಿಸಿ ಯೂತ್ ಫಾರ್ ಈಕ್ವಾಲಿಟಿ ಸೇರಿದಂತೆ ಮೂರು ಅರ್ಜಿಗಳನ್ನು ಸಲ್ಲಿಸಲಾಗಿತ್ತು.

ಇದನ್ನೂ ಓದಿ: ಜಾತಿ ಗಣತಿಯ ಅಂಕಿ-ಅಂಶ ಬಿಡುಗಡೆಗೆ ರಾಹುಲ್‌, ಖರ್ಗೆ ಒತ್ತಾಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೋಕಸಭೆ ಚುನಾವಣೆ : ಕರ್ನಾಟಕದ 14 ಸೇರಿ ದೇಶದ 93 ಕ್ಷೇತ್ರಗಳಲ್ಲಿ ಇಂದು ಮತದಾನ

0
ದೇಶದಲ್ಲಿ ಇಂದು ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ನಡೆಯುತ್ತಿದ್ದು, ಕರ್ನಾಟಕದ 14 ಸೇರಿ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 93 ಕ್ಷೇತ್ರಗಳ ಜನರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಕರ್ನಾಟಕದ ಚಿಕ್ಕೋಡಿ, ಬೆಳಗಾವಿ,...