Homeಕರ್ನಾಟಕಸಂವಿಧಾನ ಬದಲಾಯಿಸುತ್ತೇವೆ ಎಂದಿದ್ದ ಆರೆಸ್ಸೆಸ್‌ ನಾಯಕನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಸಚಿವರು, ಸಂಸದರು, ಶಾಸಕರು ಮತ್ತು ನಾಯಕರು...

ಸಂವಿಧಾನ ಬದಲಾಯಿಸುತ್ತೇವೆ ಎಂದಿದ್ದ ಆರೆಸ್ಸೆಸ್‌ ನಾಯಕನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಸಚಿವರು, ಸಂಸದರು, ಶಾಸಕರು ಮತ್ತು ನಾಯಕರು ಅತಿಥಿಗಳು! ಹೋಗಲ್ಲ ಎಂದ ಸಿಎಂ!

ಸಚಿವ ಪ್ರಿಯಾಂಕ್ ಖರ್ಗೆ ಕೂಡಾ ಕಾರ್ಯಕ್ರಮಕ್ಕೆ ಹೋಗಲ್ಲ ಎಂದು ಸ್ಪಷ್ಟೀಕರಣ ನೀಡಿದ್ದಾರೆ

- Advertisement -
- Advertisement -

ಭಾರತ ಸಂವಿಧಾನದ ವಿರೋಧಿ, ಆರೆಸ್ಸೆಸ್ ನಾಯಕ ಕೆ.ಎನ್. ಗೋವಿಂದಾಚಾರ್ಯ ಅವರ ‘ಭಾರತ ವಿಕಾಸ ಸಂಘಂ’ ಆಯೋಜಿಸುವ 9 ದಿನಗಳ ‘7ನೇ ಭಾರತೀಯ ಸಂಸ್ಕೃತಿ ಉತ್ಸವ’ ಕಾರ್ಯಕ್ರಮದಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಸಚಿವರು, ಶಾಸಕರು ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ. 2016ರಲ್ಲಿ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಗೋಂವಿದಾಚಾರ್ಯ ‘ಭಾರತೀಯತೆಯನ್ನು ಪ್ರತಿಬಿಂಬಿಸಲು ನಾವು ಸಂವಿಧಾನವನ್ನು ಪುನಃ ಬರೆಯುತ್ತೇವೆ’ ಎಂದು ಹೇಳಿದ್ದರು.

ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್, ಆರೆಸ್ಸೆಸ್‌ ನಾಯಕ ದತ್ತಾತ್ರೆಯ ಹೊಸಬಾಳೆ, ವೀರೇಂದ್ರ ಹೆಗಡೆ, ಯಡಿಯೂರಪ್ಪ, ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ವಿಶ್ವೇಶ್ವರ ಕಾಗೇರಿ, ಯತ್ನಾಲ್, ಸುಧಾ ಮೂರ್ತಿ, ವಿಜಯೇಂದ್ರ, ಬಾಬಾ ರಾಮದೇವ್ ಸೇರಿದಂತೆ ಹಲವಾರು ಬಿಜೆಪಿ ಮತ್ತು ಸಂಘಪರಿವಾರದ ನಾಯಕರು ಇದರಲ್ಲಿ ಭಾಗವಹಿಸಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆಶ್ಚರ್ಯವೆಂದರೆ, ಇದೇ ಆರೆಸ್ಸೆಸ್‌ ಪರ ವ್ಯಕ್ತಿಗಳು ನಡೆಸುವ ಕಾರ್ಯಕ್ರಮದಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರದ ಹಲವಾರು ಸಚಿವರು, ಶಾಸಕರು ಹಾಗೂ ಪಕ್ಷದ ಸಂಸದರು ಮತ್ತು ನಾಯಕರು ಭಾಗವಹಿಸಲಿದ್ದಾರೆ ಎಂದು ಆಮಂತ್ರಣ ಪತ್ರಿಕೆಯಲ್ಲಿ ಹೇಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಸರು ಇದ್ದರೂ, ಈ ಬಗ್ಗೆ ಇಬ್ಬರೂ ಈಗಾಗಲೆ ಸ್ಪಷ್ಟೀಕರಣ ಕೊಟ್ಟಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ.

ಅದಾಗ್ಯೂ, ರಾಜ್ಯ ಸರ್ಕಾರ ಸಚಿವರುಗಳಾದ ಡಾ. ಶರಣ್ ಪ್ರಕಾಶ್ ಪಾಟೀಲ್, ಶರಣಬಸಪ್ಪ ಪಾಟೀಲ್ ದಾಸನಪುರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಆಮಂತ್ರಣ ಪತ್ರಿಕೆ ಹೇಳಿದೆ. ಜೊತೆಗೆ ಸಚಿವರುಗಳು ಕೂಡಾ ಈ ಬಗ್ಗೆ ಯಾವುದೇ ಸ್ಪಷ್ಟಿಕರಣವಾಗಲಿ, ನಿರಾಕರಣೆಯಾಗಲಿ ಮಾಡಿಲ್ಲ.

ಇಷ್ಟೆ ಅಲ್ಲದೆ, ಕಲಬುರಗಿಯ ಕಾಂಗ್ರೆಸ್ ಸಂಸದ ರಾಧಾಕೃಷ್ಣ ದೊಡ್ಡಮನಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯನಾಗಿದ್ದು, ರಾಜ್ಯದ ಸಚಿವ ಪ್ರಿಯಾಂಕ್ ಖರ್ಗೆ ಅವರ ಸಹೋದರಿಯ ಪತಿಯಾಗಿದ್ದಾರೆ. ಜೊತೆಗೆ, ಆಮಂತ್ರಣ ಪತ್ರಿಕೆಯಲ್ಲಿ ಬಳ್ಳಾರಿಯ ಕಾಂಗ್ರಸ್ ಸಂಸದ ಇ.ತುಕಾರಾಮ, ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ಅವರ ಮಗ ಜೇವರ್ಗಿಯ ಕಾಂಗ್ರೆಸ್ ಶಾಸಕ ಅಜಯ್ ಸಿಂಗ್ ಮತ್ತು ಕಾಂಗ್ರೆಸ್ ನಾಯಕ ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ ಅವರ ಹೆಸರು ಆಮಂತ್ರಣ ಪತ್ರಿಕೆಯಲ್ಲಿ ಕಾಣಿಸಿಕೊಂಡಿದೆ.

ಇಷ್ಟೆ ಅಲ್ಲದೆ, ಆಮಂತ್ರಣ ಪತ್ರಿಕೆಯಲ್ಲಿ ಹಿರಿಯ ಸಾಹಿತಿ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಇತ್ತಿಚೆಗೆ ಆಯ್ಕೆಯಾದ ಗೊ.ರು. ಚೆನ್ನಬಸಪ್ಪ ಅವರ ಹೆಸರು ಕೂಡಾ ಕಾಣಿಸಿಕೊಂಡಿದೆ. ಕಾಂಗ್ರೆಸ್ ಸರ್ಕಾರವಿರುವ ತೆಲಂಗಾಣದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP) ಆಗಿದ್ದ, ಪ್ರಸ್ತುತ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿರುವ ವಿಶ್ವನಾಥ್ ಚನ್ನಪ್ಪ ಸಜ್ಜನರ್ ಕೂಡಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಜೊತೆಗೆ ಬೀದರ್‌ನ ಶಾಹಿನ್ ಸಂಸ್ಥೆ ಮುಖ್ಯಸ್ಥ ಅಬ್ದುಲ್ ಖಾದಿರ್, ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಹಾಗೂ ಇಸ್ರೋ ಮುಖ್ಯಸ್ಥ ಎಸ್‌. ಸೋಮನಾಥ್ ಕೂಡಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಆರೆಸ್ಸೆಸ್‌ ಪರ ಸಂಘಟನೆಯಾದ ಭಾರತ ವಿಕಾಸ್ ಸಂಘಂ ಈ ಕಾರ್ಯಕ್ರಮವನ್ನು ಕಲಬುರ್ಗಿಯಲ್ಲಿ ಆಯೋಜಿಸಿದ್ದು 2025ರ ಜನವರಿ 29ರಿಂದ ಪ್ರಾರಂಭವಾಗಿ ಫೆಬ್ರವರಿ 6ರ ವರೆಗೆ ನಡೆಯಲಿದೆ. ಕಾರ್ಯಕ್ರಮಕ್ಕೆ ಶ್ರೀ ಕೊಟ್ಟಾಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಮತ್ತು ವಿಕಾಸ್ ಅಕಾಡೆಮಿ ಸಹಯೋಗ ನೀಡಲಿದೆ. ಕಾರ್ಯಕ್ರಮ ಆಯೋಜಿಸುವ ಹೆಚ್ಚಿನ ಎಲ್ಲಾ ಸಂಘಟಕರು ಆರೆಸ್ಸೆಸ್‌ನ ನಾಯಕರುಗಳಾಗಿದ್ದಾರೆ.

ಅಡ್ವಾನಿ ಜೊತೆಗೆ ಸೇರಿ ಬಾಬರಿ ಮಸೀದಿ ಧ್ವಂಸ ನಡೆಸಲು ನೀಲ ನಕ್ಷೆ ರಚಿಸಿದವರಲ್ಲಿ ಕೆ.ಎನ್‌. ಗೋವಿಂದಾಚಾರ್ಯ ಅವರು ಕೂಡಾ ಒಬ್ಬರಾಗಿದ್ದಾರೆ. 2016ರಲ್ಲಿ ದಿ ವೈರ್‌ಗೆ ನೀಡಿದ್ದ ಸಂದರ್ಶದನಲ್ಲಿ ಅವರು ಭಾರತ ಸಂವಿಧಾನದಲ್ಲಿ ಭಾರತೀಯತೆ ಇಲ್ಲ, ಹಾಗಾಗಿ ನಾವು ಹೊಸದಾಗಿ ಸಂವಿಧಾನ ಬರೆಯಲಿದ್ದೇವೆ ಎಂದು ಹೇಳಿದ್ದರು. ಸಂವಿಧಾನವನ್ನು ಪುನಃ ಬರೆಯುತ್ತೇವೆ

ಭಾರತ ವಿಕಾಸ ಸಂಘಂನ ಸ್ಥಾಪಕರಾಗಿರುವ ಗೋಂವಿದಾಚಾರ್ಯ, ಸನಾತನ ಹಿಂದೂ ಪ್ರತಿಷ್ಠಾನ, ರಾಷ್ಟ್ರೀಯ ಸ್ವಾಭಿಮಾನ್ ಆಂದೋಲನ ಸೇರಿದಂತೆ ಔಪಚಾರಿಕವಾಗಿ ಆರೆಸ್ಸೆಸ್‌ನ ಪ್ರಚಾರಕ ಕೂಡಾ ಆಗಿದ್ದಾರೆ. ಬಾಬರಿ ಮಸೀದಿ ಒಡೆಯುವ ಕೃತ್ಯ ಎಸಗಿದ ರಾಮ ಜನ್ಮ ಭೂಮಿ ಆಂದೋಲನ, ಭಾರತೀಯ ಸಂಸ್ಕೃತಿ ಉತ್ಸವ, ಸ್ವದೇಶಿ ಜಾಗರಣ ಮಂಚ್ ಮುಂತಾದ ಹಲವಾರು ಕಾರ್ಯಕ್ರಮಗನ್ನು ಮಾಡುತ್ತಲೆ ಬಂದಿದ್ದಾರೆ. ಅಲ್ಲದೆ, ಶಾಶ್ವತ ದೇವಾಲಯ, ಸನಾತನ ಭಾವ ಜಾಗೃತಿ, ITIHASA ಮತ್ತು ಶಾಶ್ವತ ಭಾರತಂನಂತಹ ಹಲವಾರು ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಇದನ್ನೂ ಓದಿ: ತೆಲಂಗಾಣ| ಮರ್ಯಾದೆಗೇಡು ಹತ್ಯೆ; ಅಂತರ್ಜಾತಿ ವಿವಾವಾಗಿದ್ದ ಮಹಿಳಾ ಪೇದೆಯನ್ನು ಹತ್ಯೆಗೈದ ಸಹೋದರ

ತೆಲಂಗಾಣ| ಮರ್ಯಾದೆಗೇಡು ಹತ್ಯೆ; ಅಂತರ್ಜಾತಿ ವಿವಾವಾಗಿದ್ದ ಮಹಿಳಾ ಪೇದೆಯನ್ನು ಹತ್ಯೆಗೈದ ಸಹೋದರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...