Homeಮುಖಪುಟಬಂಗಾಳದಲ್ಲಿ ಬಿಜೆಪಿ ಗೆದ್ದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಕ್ಕೆ ಎಸೆಯುತ್ತೇವೆ : ಸುವೇಂದು ಅಧಿಕಾರಿ

ಬಂಗಾಳದಲ್ಲಿ ಬಿಜೆಪಿ ಗೆದ್ದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರಕ್ಕೆ ಎಸೆಯುತ್ತೇವೆ : ಸುವೇಂದು ಅಧಿಕಾರಿ

- Advertisement -
- Advertisement -

ಮುಂಬರುವ 2026ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ರಾಜ್ಯದಲ್ಲಿ ಸರ್ಕಾರ ರಚಿಸಿದ ಬಳಿಕ ಮುಸ್ಲಿಂ ಶಾಸಕರನ್ನು ವಿಧಾನಸಭೆಯಿಂದ ಹೊರದಬ್ಬುತ್ತೇವೆ ಎಂದು ಪಶ್ಚಿಮ ಬಂಗಾಳ ವಿಧಾನಸಭೆಯ ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿ ದ್ವೇಷದ ಹೇಳಿಕೆ ನೀಡಿದ್ದು, ಭಾರೀ ವಿರೋಧ ವ್ಯಕ್ತವಾಗಿದೆ.

ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಕ್ತಾರ ಕುನಾಲ್ ಘೋಷ್ ಅವರು ಸುವೇಂದು ಅಧಿಕಾರಿ ಅವರ ಹೇಳಿಕೆಯನ್ನು ಖಂಡಿಸಿದ್ದು, “ಇದು ‘ದ್ವೇಷ ಭಾಷಣ’. ಸಾಂವಿಧಾನಿಕ ಹುದ್ದೆಯಲ್ಲಿರುವವರು ಇಂತಹ ಹೇಳಿಕೆಗಳನ್ನು ನೀಡುವುದು ಕ್ರಿಮಿನಲ್ ಅಪರಾಧ” ಎಂದಿದ್ದಾರೆ.

ಫೆಬ್ರವರಿ 17 ರಿಂದ ಬಜೆಟ್ ಅಧಿವೇಶನದ ಅಂತ್ಯದವರೆಗೆ ಸುವೇಂದು ಅಧಿಕಾರಿ ಅವರನ್ನು ವಿಧಾನಸಭೆಯಿಂದ ಅಮಾನತುಗೊಳಿಸಲಾಗಿದೆ.

ಮಮತಾ ಬ್ಯಾನರ್ಜಿ ಸರ್ಕಾರವನ್ನು “ಮುಸ್ಲಿಂ ಲೀಗ್‌ನ ಎರಡನೇ ಆವೃತ್ತಿಯಂತೆ ವರ್ತಿಸುತ್ತಿರುವ ಕೋಮು ಆಡಳಿತ” ಎಂದು ಕರೆದಿರುವ ಅಧಿಕಾರಿ, “ಬಂಗಾಳದ ಜನರು ಈ ಬಾರಿ ಅವರನ್ನು (ಟಿಎಂಸಿ) ಬೇರು ಸಹಿತ ಕಿತ್ತುಹಾಕುತ್ತಾರೆ” ಎಂದು ಹೇಳಿದ್ದಾರೆ.

ಸುವೇಂದು ಅಧಿಕಾರಿಯ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಲು ಬಂಗಾಳದ ಬಿಜೆಪಿ ನಾಯಕರು ನಿರಾಕರಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಟಿಎಂಸಿ ವಕ್ತಾರ ಕುನಾಲ್ ಘೋಷ್, “ಇದು ಅತ್ಯಂತ ಆಕ್ಷೇಪಾರ್ಹ ಹೇಳಿಕೆ. ಬಂಗಾಳದ ವಿರೋಧ ಪಕ್ಷದ ನಾಯಕರು ಧರ್ಮದ ಹೆಸರಿನಲ್ಲಿ ತಾರತಮ್ಯ ಮಾಡಲು ಸಾಧ್ಯವಿಲ್ಲ. ನಿರ್ದಿಷ್ಟ ಧರ್ಮದ ಶಾಸಕರನ್ನು ದೈಹಿಕವಾಗಿ ಹೊರಹಾಕಲಾಗುವುದು ಎಂದು ಅವರು ಹೇಳಲು ಸಾಧ್ಯವಿಲ್ಲ. ಇದು ಸಂಭವಿಸಲೂ ಸಾಧ್ಯವಿಲ್ಲ. ಈ ರೀತಿ ಹೇಳಬಾರದು, ಅವರ ಮನಸ್ಥಿತಿ ಸರಿಯಿಲ್ಲ” ಎಂದಿದ್ದಾರೆ.

“ಸಂಸತ್ತು ಅಥವಾ ರಾಜ್ಯ ವಿಧಾನಸಭೆಗಳಲ್ಲಿ ಚರ್ಚೆ ಮತ್ತು ವಾದ-ವಿವಾದಗಳು ನಡೆಯಬಹುದು. ಆದರೆ ಧರ್ಮವನ್ನು ಕೆಣಕುವುದು ಮತ್ತು ನಿರ್ದಿಷ್ಟ ಸಮುದಾಯಕ್ಕೆ ಸೇರಿದ ಶಾಸಕರನ್ನು ಗುರಿಯಾಗಿಸಿಕೊಳ್ಳುವುದು ಭಾರತೀಯ ಸಂವಿಧಾನಕ್ಕೆ ವಿರುದ್ಧವಾಗಿದೆ. ವಿರೋಧ ಪಕ್ಷದ ನಾಯಕ ತನ್ನ ಮಾನಸಿಕ ಅಸ್ಥಿರತೆಯಿಂದಾಗಿ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದು ಅಪಾಯಕಾರಿ, ಪ್ರಚೋದನಕಾರಿ ಮತ್ತು ನೀತಿಗೆಟ್ಟದ್ದು. ಇದು ಕ್ರಿಮಿನಲ್ ಅಪರಾಧವೂ ಆಗಿದೆ” ಎಂದು ಘೋಷ್ ಕಿಡಿಕಾರಿದ್ದಾರೆ.

ಸುವೇಂದು ಅಧಿಕಾರಿ ಹೇಳಿಕೆ ಅವರ ಸ್ವಂತ ಪಕ್ಷದಲ್ಲೇ ಅಸಮಾಧಾನವನ್ನು ಉಂಟುಮಾಡಿರುವುದು ಇದೇ ಮೊದಲಲ್ಲ.

2024 ರ ಲೋಕಸಭಾ ಚುನಾವಣೆಯಲ್ಲಿ ಬಂಗಾಳದಲ್ಲಿ ಬಿಜೆಪಿಯ ಕಳಪೆ ಪ್ರದರ್ಶನದ ನಂತರ, ಅಧಿಕಾರಿಯು ‘ಸಬ್ಕಾ ಸಾಥ್, ಸಬ್ಕಾ ವಿಕಾಸ್’ ಘೋಷಣೆಯನ್ನು ಕೊನೆಗೊಳಿಸಲು ಕರೆ ನೀಡಿದ್ದರು: “ಈ ‘ಸಬ್ಕಾ ಸಾಥ್, ಸಬ್ಕಾ ವಿಕಾಸ್’ ಅನ್ನು ನಿಲ್ಲಿಸಿ.  ನಾವು ‘ಜೋ ಹಮಾರೆ ಸಾಥ್, ಹಮ್ ಉನ್ಕೆ ಸಾಥ್’ ಎನ್ನುತ್ತೇನೆ. ನಮಗೆ ಅಲ್ಪಸಂಖ್ಯಾತ ಮೋರ್ಚಾ ಅಗತ್ಯವಿಲ್ಲ” ಎಂದಿದ್ದರು.

ಬಂಗಾಳದ ಬಿಜೆಪಿ ಮುಖಂಡರು ಈ ಹೇಳಿಕೆಯನ್ನು ಸಾರ್ವಜನಿಕವಾಗಿ ತಿರಸ್ಕರಿಸಿದ್ದರು.

ಜಮ್ಮು ಕಾಶ್ಮೀರದ ಎರಡು ಪಕ್ಷಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...