Homeಮುಖಪುಟ'ಬಿಜೆಪಿಯ ಷಡ್ಯಂತ್ರಗಳನ್ನು ಯಾವುದೇ ಬೆಲೆ ತೆತ್ತಾದರೂ ವಿಫಲಗೊಳಿಸುತ್ತೇವೆ..'; 'ಲ್ಯಾಟರಲ್ ಎಂಟ್ರಿ' ಕುರಿತು ರಾಹುಲ್ ಪ್ರತಿಕ್ರಿಯೆ

‘ಬಿಜೆಪಿಯ ಷಡ್ಯಂತ್ರಗಳನ್ನು ಯಾವುದೇ ಬೆಲೆ ತೆತ್ತಾದರೂ ವಿಫಲಗೊಳಿಸುತ್ತೇವೆ..’; ‘ಲ್ಯಾಟರಲ್ ಎಂಟ್ರಿ’ ಕುರಿತು ರಾಹುಲ್ ಪ್ರತಿಕ್ರಿಯೆ

- Advertisement -
- Advertisement -

ಅಧಿಕಾರಶಾಹಿಯಲ್ಲಿ ಲ್ಯಾಟರಲ್ ಎಂಟ್ರಿಯ ಇತ್ತೀಚಿನ ಜಾಹೀರಾತನ್ನು ಕೇಂದ್ರವು ಹಿಂತೆಗೆದುಕೊಂಡಿರುವ ಹಿನ್ನೆಲೆಯಲ್ಲಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದು, “ಸಂವಿಧಾನ ಮತ್ತು ಮೀಸಲಾತಿ ವ್ಯವಸ್ಥೆಯನ್ನು ಎಲ್ಲ ಸಂದರ್ಭದಲ್ಲಿ ಕಾಂಗ್ರೆಸ್ ರಕ್ಷಿಸುತ್ತದೆ; ಬಿಜೆಪಿಯ ಪಿತೂರಿಗಳನ್ನು ವಿಫಲಗೊಳಿಸುತ್ತದೆ” ಎಂದು ಹೇಳಿದರು.

ಕೇಂದ್ರ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ಅಧ್ಯಕ್ಷೆ ಪ್ರೀತಿ ಸುದನ್ ಅವರಿಗೆ ಪತ್ರ ಬರೆದ ನಂತರ ಮತ್ತು ಹಿಂದುಳಿದ ಸಮುದಾಯಗಳು ಸರ್ಕಾರಿ ಸೇವೆಗಳಲ್ಲಿ ತಮ್ಮ ಸರಿಯಾದ ಪ್ರಾತಿನಿಧ್ಯವನ್ನು ಪಡೆಯಲು ಜಾಹೀರಾತನ್ನು ರದ್ದುಗೊಳಿಸುವಂತೆ ಕೇಳಿಕೊಂಡ ನಂತರ ಅವರು ಈ ಹೇಳಿಕೆ ನೀಡಿದ್ದಾರೆ.

“ನಾವು ಸಂವಿಧಾನ ಮತ್ತು ಮೀಸಲಾತಿ ವ್ಯವಸ್ಥೆಯನ್ನು ಎಲ್ಲ ಸದರ್ಭಗಳಲ್ಲಿ ರಕ್ಷಿಸುತ್ತೇವೆ. ಯಾವುದೇ ಬೆಲೆ ತೆತ್ತಾದರೂ ‘ಲ್ಯಾಟರಲ್ ಎಂಟ್ರಿ’ಯಂತಹ ಬಿಜೆಪಿಯ ಪಿತೂರಿಗಳನ್ನು ನಾವು ವಿಫಲಗೊಳಿಸುತ್ತೇವೆ” ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ ರಾಹುಲ್ ಗಾಂಧಿ.

“ನಾನು ಮತ್ತೊಮ್ಮೆ ಹೇಳುತ್ತಿದ್ದೇನೆ, 50 ಶೇಕಡಾ ಮೀಸಲಾತಿ ಮಿತಿಯನ್ನು ತೆಗೆದುಹಾಕುವ ಮೂಲಕ, ನಾವು ಜಾತಿ ಜನಗಣತಿಯ ಆಧಾರದ ಮೇಲೆ ಸಾಮಾಜಿಕ ನ್ಯಾಯವನ್ನು ಖಾತರಿಪಡಿಸುತ್ತೇವೆ” ಎಂದು ಮಾಜಿ ಕಾಂಗ್ರೆಸ್ ಮುಖ್ಯಸ್ಥರು ಹೇಳಿದರು.

ಆಗಸ್ಟ್ 17 ರಂದು, ಯುಪಿಎಸ್‌ಸಿ 45 ಜಂಟಿ ಕಾರ್ಯದರ್ಶಿಗಳು, ನಿರ್ದೇಶಕರು ಮತ್ತು ಉಪ ಕಾರ್ಯದರ್ಶಿಗಳನ್ನು ಲ್ಯಾಟರಲ್ ಎಂಟ್ರಿ ಮೂಲಕ ನೇಮಕ ಮಾಡಲು ಅಧಿಸೂಚನೆಯನ್ನು ಹೊರಡಿಸಿತು, ಇದನ್ನು ಸರ್ಕಾರಿ ಇಲಾಖೆಗಳಲ್ಲಿ ತಜ್ಞರ (ಖಾಸಗಿ ವಲಯದವರನ್ನು ಒಳಗೊಂಡಂತೆ) ನೇಮಕಾತಿ ಎಂದು ಉಲ್ಲೇಖಿಸಲಾಗುತ್ತದೆ.

ಈ ನಿರ್ಧಾರವು ಒಬಿಸಿ, ಎಸ್‌ಸಿ ಮತ್ತು ಎಸ್‌ಟಿಗಳ ಮೀಸಲಾತಿ ಹಕ್ಕುಗಳನ್ನು ದುರ್ಬಲಗೊಳಿಸಿದೆ ಎಂದು ಪ್ರತಿಪಕ್ಷಗಳಿಂದ ಟೀಕೆಗೆ ಗುರಿಯಾಗಿತ್ತು.

ಪ್ರಧಾನ ಮಂತ್ರಿಗೆ ಸಾರ್ವಜನಿಕ ಉದ್ಯೋಗದಲ್ಲಿ ಮೀಸಲಾತಿಯು “ಐತಿಹಾಸಿಕ ಅನ್ಯಾಯಗಳನ್ನು ಪರಿಹರಿಸುವ ಮತ್ತು ಒಳಗೊಳ್ಳುವಿಕೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ನಮ್ಮ ಸಾಮಾಜಿಕ ನ್ಯಾಯದ ಚೌಕಟ್ಟಿನ ಮೂಲಾಧಾರವಾಗಿದೆ” ಎಂದು ಸಿಂಗ್ ತಮ್ಮ ಪತ್ರದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ; ಅಧಿಕಾರಶಾಹಿಯಲ್ಲಿ ಲ್ಯಾಟರಲ್ ಎಂಟ್ರಿ ಎಂದರೇನು..? ಜಾಹೀರಾತು ಹಿಂತೆಗೆದುಕೊಳ್ಳುವಂತೆ ಯುಪಿಎಸ್‌ಸಿಗೆ ಸೂಚಿಸಿದ್ಯಾಕೆ ಕೇಂದ್ರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...