Homeಮುಖಪುಟಫ್ಯಾಸಿಸ್ಟ್‌‌ಗಳ ವಿರುದ್ಧ ಹೋರಾಡಲು ಒಟ್ಟಾಗಿ ಕೆಲಸ ಮಾಡುತ್ತೇವೆ: ಮಲ್ಲಿಕಾರ್ಜುನ ಖರ್ಗೆ

ಫ್ಯಾಸಿಸ್ಟ್‌‌ಗಳ ವಿರುದ್ಧ ಹೋರಾಡಲು ಒಟ್ಟಾಗಿ ಕೆಲಸ ಮಾಡುತ್ತೇವೆ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಫ್ಯಾಸಿಸ್ಟ್ ಶಕ್ತಿಗಳ ವಿರುದ್ಧ ಹೋರಾಡಲು ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ರಾಷ್ಟ್ರೀಯ ಕಾಂಗ್ರೆಸ್‌ ಅಧ್ಯಕ್ಷರಾಗಿ ನೂತನವಾಗಿ ಆಯ್ಕೆಯಾದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಹೇಳಿದ್ದಾರೆ.

ಬಹುನಿರೀಕ್ಷಿತ ಕಾಂಗ್ರೆಸ್‌‌ ಅಧ್ಯಕ್ಷೀಯ ಚುನಾವಣೆಯಲ್ಲಿ ಕರ್ನಾಟಕದ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ‌ ಅವರು ಭಾರಿ ಬಹುಮತಗಳಿಂದ ಆಯ್ಕೆಯಾಗಿದ್ದಾರೆ. ಈ ಮೂಲಕ ಸುಮಾರು 2 ದಶಕಗಳ ನಂತರ ಕಾಂಗ್ರೆಸ್‌ನ ಅಧ್ಯಕ್ಷೀಯ ಸ್ಥಾನವನ್ನು ಅಲಂಕರಿಸಿದ ಮೊದಲ ಗಾಂಧಿಯೇತರ ನಾಯಕರಾಗಿ ಹೊರಹೊಮ್ಮಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಫಲಿತಾಂಶ ಪ್ರಕಟವಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ ಅವರು,“ಚುನಾವಣೆಯಲ್ಲಿ ತಮ್ಮ ಎದುರಾಳಿಯಾಗಿದ್ದ ಶಶಿ ತರೂರ್ ಅವರೊಂದಿಗೆ ಒಟ್ಟಾಗಿ ಕೆಲಸ ಮಾಡುತ್ತೇನೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಾರ್ಮಿಕನ ಪುತ್ರರಾದ ಖರ್ಗೆ ಕಾಂಗ್ರೆಸ್‌ ಅಧ್ಯಕ್ಷ ಹುದ್ದೆಯವರೆಗೆ ಬೆಳೆದ ಯಶೋಗಾಥೆ

ಪ್ರಸ್ತುತ ಪಕ್ಷದ ಭಾರತ್ ಜೋಡೋ ಯಾತ್ರೆಯನ್ನು ಮುನ್ನಡೆಸುತ್ತಿರುವ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಮಲ್ಲಿಕಾರ್ಜುನ ಖರ್ಗೆ ಕೃತಜ್ಞತೆ ಸಲ್ಲಿಸಿದ್ದಾರೆ.

“ರಾಹುಲ್ ನನಗೆ ಕರೆ ಮಾಡಿ ನನಗೆ ಶುಭ ಹಾರೈಸಿದ್ದು, ಅವರು ಪಕ್ಷದ ಸೈನಿಕನಾಗಿ, ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು…ನಾನು ಸೋನಿಯಾ ಗಾಂಧಿ ಅವರಿಗೆ ಧನ್ಯವಾದ ಹೇಳುತ್ತೇನೆ. ಅವರ ನಾಯಕತ್ವದಲ್ಲಿ ನಾವು ಎರಡು ಬಾರಿ ಕೇಂದ್ರದಲ್ಲಿ ಅಧಿಕಾರ ಹಿಡಿದಿದ್ದೇವೆ. ಜೊತೆಗೆ ನಾವು ರಾಜ್ಯಗಳಲ್ಲಿಯೂ ಸಹ ಬಲಶಾಲಿಯಾಗಿದ್ದೆವು. ಪಕ್ಷದಲ್ಲಿ ಅವರ ಕೊಡುಗೆ ನೆನಪಿನಲ್ಲಿ ಉಳಿಯುವಂತಹದು” ಎಂದು ಖರ್ಗೆ ಹೇಳಿದ್ದಾರೆ.

ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ 7897 ಮತಗಳನ್ನು ಪಡದಿದ್ದು, ಅವರ ಪ್ರತಿಸ್ಪರ್ಧಿ ಶಶಿ ತರೂರ್‌ 1072 ಮತಗಳನ್ನು ಪಡೆದಿದ್ದಾರೆ. 416 ಮತಗಳು ತಿರಸ್ಕೃತಗೊಂಡಿದ್ದು, ಒಟ್ಟು 9385 ಮತಗಳು ಚಲಾವಣೆಯಾಗಿದ್ದವು.

ಇದನ್ನೂ ಓದಿ: 8ನೇ ತರಗತಿಯಲ್ಲಿ ಇದ್ದಾಗಿಂದ ನಾನು ಲೀಡರ್ರೇ ಆಗಿದ್ದೆ: ಮಲ್ಲಿಕಾರ್ಜುನ ಖರ್ಗೆಯವರ ಹಳೆಯ ಸಂದರ್ಶನ

24 ವರ್ಷಗಳ ನಂತರ ನಡೆದ ಪಕ್ಷದ ಮೊದಲ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಮಲ್ಲಿಕಾರ್ಜುನ ಖರ್ಗೆ ಅವರು ಹೊಸ ಕಾಂಗ್ರೆಸ್ ಅಧ್ಯಕ್ಷರಾಗಲಿದ್ದು, ದೀಪಾವಳಿ ನಂತರ ಪಕ್ಷದ ಅಧ್ಯಕ್ಷರಾಗಿ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಗೆ ಆರಂಭವಾದ ಮತ ಎಣಿಕೆ ಮಧ್ಯಾಹ್ನ 1 ಗಂಟೆ ಸುಮಾರಿಗೆ ಮುಕ್ತಾಯವಾಯಿತು.

2014 ಮತ್ತು 2019 ರ ಸಾರ್ವತ್ರಿಕ ಚುನಾವಣೆಗಳಲ್ಲಿ ಪಕ್ಷದ ಸತತ ಎರಡು ಸೋಲಿನ ಜವಾಬ್ದಾರಿಯನ್ನು ಹೊತ್ತುಕೊಂಡು ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ನಂತರ, ಸೋನಿಯಾ ಗಾಂಧಿ ಅವರು ಪಕ್ಷವನ್ನು ತಾತ್ಕಾಲಿಕವಾಗಿ ಮುನ್ನಡೆಸಲು ಒಪ್ಪಿಕೊಂಡ ಮೂರು ವರ್ಷಗಳ ನಂತರ ಈ ಚುನಾವಣೆ ನಡೆದಿದೆ.

ಇದನ್ನೂ ಓದಿ: ಕಾಂಗ್ರೆಸ್ ಅಧ್ಯಕ್ಷರಾಗಿ ಖರ್ಗೆ: ಈ ಐದು ಅಂಶಗಳಿಗೆ ಪ್ರಾಮುಖ್ಯತೆ ಸಿಗುವ ಸಾಧ್ಯತೆ!

ಮಲ್ಲಿಕಾರ್ಜುನ ಖರ್ಗೆ ಯಾರು?

1942 ಜುಲೈ 21 ರಂದು ಕರ್ನಾಟಕ-ಮಹಾರಾಷ್ಟ್ರ ಗಡಿಯ ಬೀದರ್ ಜಿಲ್ಲೆಯ ವರವಟ್ಟಿ ಎಂಬ ಕುಗ್ರಾಮದಲ್ಲಿ ಅಸ್ಪೃಶ್ಯ ಮಹಾರ್ ಕುಟುಂಬದಲ್ಲಿ ಜನಿಸಿದ ಮಲ್ಲಿಕಾರ್ಜುನ ಖರ್ಗೆ ಅವರು, ಹುಟ್ಟುತ್ತಲೇ ಗಲಭೆಯೊಂದರಲ್ಲಿ ತಮ್ಮ ತಾಯಿಯನ್ನು ಕಳೆದುಕೊಂಡಿದ್ದರು. ಕೂಲಿ ಮಾಡಿ ಕಾಲೇಜು ಮುಗಿಸಿದ ಖರ್ಗೆ ಅವರು ಕಾರ್ಖಾನೆಯಲ್ಲಿ ಕಾರ್ಮಿಕರ ಸಂಘಟನೆ ಕಟ್ಟಿದ ಸಾಮಾಜಿಕ ರಂಗಕ್ಕೆ ಪ್ರವೇಶ ಮಾಡಿದರು.

RPI ಪಕ್ಷದಿಂದ ಸ್ಥಳೀಯ ಸಂಸ್ಥೆ ಚುನಾವಣೆಗಳು ರಾಜಕೀಯದಲ್ಲಿ ಸಕ್ರಿಯವಾಗಿ, ನಂತರ ಕಾಂಗ್ರೆಸ್ ಸೇರಿದ ಅವರು ಒಂಬತ್ತು ಬಾರಿ ಶಾಸಕರು, ಎರಡು ಸಲ ಸಂಸದರಾಗಿ ಆಯ್ಕೆಯಾಗಿದ್ದಾರೆ. ಒಂದು ಬಾರಿ ಕೇಂದ್ರ ಸಚಿವರಾಗಿ, ಇದೀಗ ದೇಶದ ಅತ್ಯಂತ ಹಳೆಯ ಪಕ್ಷವಾದ ಕಾಂಗ್ರೆಸ್‌‌ನ ಅತ್ಯುನ್ನತ ನಾಯಕರಾಗಿ ಆಯ್ಕೆಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...