Homeಕರ್ನಾಟಕ‘ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಟೆಕ್ಕಿಗಳಿಗೆ ಲಾಭ: ಸಚಿವ ಮಾಧುಸ್ವಾಮಿ

‘ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಟೆಕ್ಕಿಗಳಿಗೆ ಲಾಭ: ಸಚಿವ ಮಾಧುಸ್ವಾಮಿ

ನಗರದಿಂದ ಬಂದು ಭೂಮಿ ಕೊಳ್ಳುವವರು ಕೃಷಿಗಾಗಿ ಭೂಮಿ ಕೊಳ್ಳುವುದಿಲ್ಲ. ಬದಲಿಗೆ ಅಲ್ಲಿ ಬೇರೆ ಬೇರೆ ಉದ್ಯಮಗಳನ್ನು ತೆರೆಯುತ್ತಾರೆ. ಜೊತೆಗೆ ಕಪ್ಪಹಣ ಹೊಂದಿರುವವರು ಅದನ್ನು ಭೂಮಿ ಅಥವಾ ಬಂಗಾರದ ರೂಪದಲ್ಲಿಡಲು ಬಯಸುತ್ತಾರೆ. ಅಂಥವರಿಗೆ ಈ ಕಾನೂನು ವರದಾನವಾಗಿದೆ.

- Advertisement -
- Advertisement -

ಹಳ್ಳಿ ಬಿಟ್ಟು, ನಗರದಲ್ಲಿ ಸಾಫ್ಟ್ ವೇರ್ ಅಥವಾ ಟೆಕ್ಕಿಯಾಗಿ ಕೆಲಸ ಮಾಡಿದವರಿಗೆ, ಎಷ್ಟೋ ವರ್ಷಗಳಾದ ಮೇಲೆ ತನ್ನ ಹಳ್ಳಿಗೆ ಮರಳಿ ಭೂಮಿ ಕೊಂಡು ಅಲ್ಲಿಯೇ ಕೃಷಿ ಮಾಡಲು ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಅನುಕೂಲವಾಗಿದೆ ಎಂದು ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ ಹೇಳಿದ್ದಾರೆ.

ಬೆಂಗಳೂರು ವಿವಿಯ ಕಾನೂನು ಕಾಲೇಜು ಮತ್ತು ಕಾನೂನು ಅಧ್ಯಯನ ವಿಭಾಗದ ವತಿಯಿಂದ “ಕರ್ನಾಟಕ ಭೂಸುಧಾರಣೆ (ತಿದ್ದುಪಡಿ) ಆಧ್ಯಾದೇಶ-2020 ಕ್ಕೆ ಸಂಬಂಧಿಸಿದಂತೆ ಅದರ ಸಾಧಕ ಮತ್ತು ಬಾಧಕಗಳ” ಕುರಿತ ವೆಬಿನಾರ್‌ನಲ್ಲಿ ತಮ್ಮ ಸರ್ಕಾರದ ತಿದ್ದುಪಡಿಯನ್ನು ಸಮರ್ಥಿಸಿಕೊಂಡಿದ್ದಾರೆ.

ಉಳುವವನೇ ಭೂಮಿಯ ಒಡೆಯ ಎನ್ನುವ ಕಾಯ್ದೆ ಕಾಲಕ್ಕೆ ತಕ್ಕಂತೆ ಬದಲಾಗಬೇಕಾಗುತ್ತದೆ. ಈಗ ಆಗಿರುವುದೂ ಕೂಡ ಅದೇ. ಈ ತಿದ್ದುಪಡಿಯ ಅನ್ವಯ ಭೂಮಿ ಹೊಂದುವ ಹಕ್ಕನ್ನು 40 ಯೂನಿಟ್‌ವರೆಗೆ ಹೆಚ್ಚಿಸಲಾಗಿದೆ. ಯಾರು ಬೇಕಾದರೂ ಭೂಮಿ ಕೊಳ್ಳಬಹುದು. ರೈತ ಯಾರಿಗೆ ಬೇಕಾದರೂ ಭೂಮಿಯನ್ನು ಮಾರಬಹುದು. ಭೂಬೆಲೆಯ ಮೇಲೆ ಯಾವುದೇ ನಿಯಂತ್ರಣವಿರುವುದಿಲ್ಲ. ಇದರಿಂದ ರೈತನಿಗೆ ಲಾಭವೇ ಹೆಚ್ಚು ಎಂದು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಕೋಆಪರೇಟೀಕರಣದತ್ತ ಹೊರಳಬೇಕಿದ್ದ ಕೃಷಿ ಕಾರ್ಪೋರೇಟೀಕರಣದತ್ತ: ಈ ವಿನಾಶದ ಪರಿಣಾಮಗಳೇನು?


ನಗರದಿಂದ ವಾಪಾಸಾದವರು ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಭೂಮಿ ಖರೀದಿಸಿ ಅಲ್ಲಿಯೇ ನೆಲೆನಿಂತರು. ಯಾಕೆಂದರೆ ಅಲ್ಲಿ ಇದಕ್ಕೆ ಅವಕಾಶವಿದೆ. ಹಾಗಾಗಿಯೇ ಈ ತಿದ್ದುಪಡಿಯು ಹೆಚ್ಚು ಮಹತ್ವಪೂರ್ಣವಾದದ್ದು. ಅಷ್ಟಕ್ಕೂ ಈಗ ಇದನ್ನು ಟೀಕಿಸುತ್ತಿರುವ ಕಾಂಗ್ರೆಸ್‌ ಸರ್ಕಾರ 2015ರಲ್ಲಿ ಮಾಡಿದ ತಿದ್ದುಪಡಿಯ ಮುಂದುವರೆದ ಭಾಗವೇ ಈ ಕಾಯ್ದೆಯಾಗಿದೆ ಎಂದಿದ್ದಾರೆ.

ಭೂಮಿಯನ್ನು ಮಾರುವ ಮತ್ತು ಕೊಳ್ಳುವವರ ರಕ್ಷಣೆಗಾಗಿ ಈ ಕಾಯ್ದೆ ತರಲಾಗಿದೆ. ಭೂಮಿ ಮಾರಾಟ ಪ್ರಕ್ರಿಯೆಯಲ್ಲಿ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸಿ ರೈತರಿಗೆ ಹೆಚ್ಚಿನ ಬೆಲೆಗೆ ಭೂಮಿಯನ್ನು ಮಾರಲು ಅವಕಾಶ ನೀಡಲಾಗುತ್ತಿದೆ ಎಂದು ತಿಳಿಸಿದರು.

ನಂತರ ಮಾತನಾಡಿದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್‌ ಮುಖಂಡ ಎಚ್.ಕೆ ಪಾಟೀಲ್ “ಮಾಧುಸ್ವಾಮಿಯವರು ಕೇವಲ ನಮ್ಮ ಟೀಕೆಗಳಿಗೆ ಉತ್ತರಿಸಿದರೇ ವಿನಃ ರೈತರ ಕಷ್ಟ ಕಾರ್ಪಣ್ಯಗಳ ಕುರಿತು ಚರ್ಚಿಸಿಲ್ಲ. 1974 ರಲ್ಲಿ ಬಂದ ಉಳುವವನೇ ಭೂಮಿಯ ಒಡೆಯ ಎಂಬ ಮಹತ್ವದ ಮತ್ತು ಸಾಮಾಜಿಕ ನ್ಯಾಯದ ಕಾನೂನನ್ನು ಬಿಜೆಪಿ ಸರ್ಕಾರ ಮಣ್ಣುಪಾಲು ಮಾಡುತ್ತಿದೆ” ಎಂದು ಆರೋಪಿಸಿದರು.

ಈಗಾಗಲೇ ಬರಗಾಲ, ಬೆಲೆನಿಗದಿ, ಮಧ್ಯವರ್ತಿಗಳ ಹಾವಳಿ, ಬಿತ್ತನೆ ಬೀಜ, ರಸಗೊಬ್ಬರಗಳ ರಾಜಕೀಯ, ಆರ್ಥಿಕ ಕುಸಿತ, ಕೊರೊನಾ ಮುಂತಾದ ಸಮಸ್ಯೆಗಳಲ್ಲಿ ಬಳಲುತ್ತಿರುವ ರೈತರಿಗೆ ಈ ತಿದ್ದುಪಡಿಯು ಗಾಯದ ಮೇಲೆ ಎಳೆದ ಬರೆಯಾಗಿದೆ ಎಂದು ಅಭಿಪ್ರಾಯಪಟ್ಟರು.


ಇದನ್ನೂ ಓದಿ: ಭೂ ಸುಧಾರಣಾ ಕಾನೂನಿನ ತಿದ್ದುಪಡಿ ಮತ್ತು ಅದರ ಪರಿಣಾಮಗಳು – ಡಾ.ಎ.ಆರ್ ವಾಸವಿ


ಉಳುವವನೇ ಭೂಮಿಯ ಒಡೆಯ ಎನ್ನುವ ಊರುಗೋಲನ್ನೇ ಕಿತ್ತು ಕಾರ್ಪೋರೇಟ್ ಕುಳಗಳ ಕೈಗೆ ಕೊಡಲಾಗುತ್ತಿದೆ. ನಗರದ ಶ್ರೀಮಂತರು, ಟೆಕ್ಕಿಗಳು ಬಂದು ಒಕ್ಕಲುತನ ಮಾಡುವುದಕ್ಕೆ ಅವಕಾಶ ಎಂಬ ಸಮರ್ಥನೆ ಮಾಡಿಕೊಳ್ಳಬೇಡಿ. ಬದಲಾಗಿ ಸಂಕಷ್ಟದಲ್ಲಿ ಸಿಲುಕಿರುವ ರೈತರಿಗೆ ಏನಾದರೂ ಪರಹಾರ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಸರ್ಕಾರವನ್ನು ಒತ್ತಾಯಿಸಿದರು.

ನಗರದಿಂದ ಬಂದು ಭೂಮಿ ಕೊಳ್ಳುವವರು ಕೃಷಿಗಾಗಿ ಭೂಮಿ ಕೊಳ್ಳುವುದಿಲ್ಲ. ಬದಲಿಗೆ ಅಲ್ಲಿ ಬೇರೆ ಬೇರೆ ಉದ್ಯಮಗಳನ್ನು ತೆರೆಯುತ್ತಾರೆ. ಜೊತೆಗೆ ಕಪ್ಪಹಣ ಹೊಂದಿರುವವರು ಅದನ್ನು ಭೂಮಿ ಅಥವಾ ಬಂಗಾರದ ರೂಪದಲ್ಲಿಡಲು ಬಯಸುತ್ತಾರೆ. ಅಂಥವರಿಗೆ ಈ ಕಾನೂನು ವರದಾನವಾಗಿದೆ ಎಂದು ಆರೋಪಿಸಿದರು.

ಹಿರಿಯ ವಕೀಲರಾದ ಪ್ರೊ. ರವಿವರ್ಮಕುಮಾರ್ ಮಾತನಾಡಿ, ಈ ಕಾಯ್ದೆ ತಿದ್ದುಪಡಿಗೆ ಸುಗ್ರೀವಾಜ್ಞೆ ತರುವಂತಹ ಅಗತ್ಯವಿತ್ತೇ? ಸದನ ಸೇರಲು ಸಾಧ್ಯವಾಗದಿದ್ದಾಗ, ಕೊರೊನಾ ತುರ್ತು ಸಂದರ್ಭದಲ್ಲಿ ಈ ಸುಗ್ರೀವಾಜ್ಞೆಯನ್ನು ತರಲಾಗಿದೆ. ಆದರೆ ಈಗ ಇರುವ ತುರ್ತು ಕೊರೊನಾ ರೋಗವೇ ಹೊರತು ಈ ಭೂಸುಧಾರಣಾ ಕಾಯ್ದೆಯಲ್ಲ ಎಂದರು.

ಸಚಿವ ಮಾಧುಸ್ವಾಮಿ ಹೇಳಿದಂತೆ ಈಗಾಗಲೇ ಸುಮಾರು 80 ಸಾವಿರ ಮೊಕದ್ದಮೆಗಳು ಈ ಭೂ ವಿವಾದಕ್ಕೆ ಸಂಬಂಧಿಸಿದಂತೆ ಇವೆ. ಅದರಲ್ಲಿ ಸುಮಾರು 50 ಸಾವಿರ ಪ್ರಕರಣಗಳು ಭೂಮಿ ತೆಗೆದುಕೊಂಡವರ ಪರವಾಗಿ ಆಗಿದೆ. 15 ಸಾವಿರ ಪ್ರಕರಣಗಳು ಸರ್ಕಾರದ ಪರ ಆಗಿವೆ. ಉಳಿದ 15 ಸಾವಿರ ಪ್ರಕರಣಗಳು ಹಾಗೆಯೇ ಉಳಿದಿವೆ ಎಂದರು.


ಇದನ್ನೂ ಓದಿ: ಸುತ್ತಿಗೆಯಿಂದ ಕ್ರೂರವಾಗಿ ಥಳಿಸಿದ ಗೋರಕ್ಷಕರು: ಕೈಕಟ್ಟಿ ನೋಡುತ್ತಿದ್ದ ಪೊಲೀಸರು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...