Homeಕರೋನಾ ತಲ್ಲಣರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ: ಏನೇನು ಇರಲಿದೆ?

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ: ಏನೇನು ಇರಲಿದೆ?

- Advertisement -
- Advertisement -

ಕೊರೊನಾ ತೀವ್ರವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಮಂಗಳವಾರದಂದು ನಡೆದ ಸರ್ವಪಕ್ಷಗಳ ಸಭೆಯ ನಂತರ ರಾಜ್ಯದಾದ್ಯಂತ ವೀಕೆಂಡ್ ಕರ್ಫ್ಯೂ ಹೇರುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಜೊತೆಗೆ ಮುಂದಿನ 14 ದಿನಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಕೂಡಾ ಸರ್ಕಾರ ಬಿಡುಗಡೆ ಮಾಡಿದೆ.

ಕೊರೊನಾ ತೀವ್ರಗೊಳ್ಳುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ಹೊಸದಾಗಿ ಬಿಡುಗಡೆ ಮಾಡಿರುವ ಮಾರ್ಗಸೂಚಿಯ ಪ್ರಮುಖ ಅಂಶಗಳು ಹೀಗಿವೆ.

  • ರಾಜ್ಯದ ಪ್ರತಿ ಜಿಲ್ಲೆಯಲ್ಲಿ ರಾತ್ರಿ 9 ರಿಂದ ಬೆಳಗ್ಗೆ 6 ವರೆಗೆ (ಏಪ್ರಿಲ್​ 21 ರಿಂದ ಮೇ 4 ರವರೆಗೆ) ನೈಟ್​ ಕರ್ಫ್ಯೂ ಜಾರಿಯಲ್ಲಿರಲಿದೆ.
  • ಆದರೆ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಕರ್ಪ್ಯು ಜಾರಿಯಲ್ಲಿರಲಿದೆ.
  • ಶಾಲೆ, ಕಾಲೇಜುಗಳು ಸಂಪೂರ್ಣವಾಗಿ ಬಂದ್ ಆಗಲಿದ್ದು, ಆನ್​ಲೈನ್​ ತರಗತಿಗೆ ಮಾತ್ರವೇ ಅವಕಾಶ ನೀಡಲಾಗಿದೆ.

ಇದನ್ನು ಓದಿ: ಆಕ್ಸಿಜನ್‌ಗಾಗಿ ರೋಗಿಗಳು ಕಾಯಬೇಕೆಂದು ಹೇಳುತ್ತೀರಾ?: ಕೇಂದ್ರದ ವಿರುದ್ಧ ಕಿಡಿಕಾರಿದ ಹೈಕೋರ್ಟ್

  • ಸಿನಿಮಾ ಹಾಲ್​ಗಳು, ಶಾಪಿಂಗ್​ ಮಾಲ್​ಗಳು, ಜಿಮ್​, ಯೋಗಾ ಸೆಂಟರ್​, ಸ್ವಿಮ್ಮಿಂಗ್​ ಪೂಲ್​, ಸ್ಪೋರ್ಟ್ಸ್​ ಕಾಂಪ್ಲೆಕ್ಸ್​, ಸ್ಪಾ, ಬಾರ್​, ಆಡಿಟೋರಿಯಂನಂತಹ ಸ್ಥಳಗಳು ಮುಚ್ಚಲಾಗುವುದು. ಆದರೆ, ಸ್ವಿಮ್ಮಿಂಗ್​ ಫೆಡರೇಷನ್​ ಆಫ್​ ಇಂಡಿಯಾದಿಂದ ಅನುಮತಿ ಪಡೆದ ಸ್ವಿಮ್ಮಿಂಗ್​ ಫೂಲ್​ಗಳನ್ನು ಮಾತ್ರ ತೆರೆಯಲು ಅನುಮತಿ ನೀಡಲಾಗಿದೆ.
  • ಸಾರ್ವಜನಿಕ, ರಾಜಕೀಯ ಸೇರಿ ಎಲ್ಲ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಲಾಗಿದ್ದು, ಎಲ್ಲಾ ಧಾರ್ಮಿಕ ಸ್ಥಳಗಳನ್ನು ಮುಚ್ಚಲಾಗುವುದು.
  • ಹೋಟೆಲ್​ ಮತ್ತು ರೆಸ್ಟೋರೆಂಟ್​ಗಳಲ್ಲಿ ಪಾರ್ಸೆಲ್​ ಮಾತ್ರಕ್ಕೆ ಅವಕಾಶ ನೀಡಲಾಗಿದೆ.
  • ಕಟ್ಟಡ ನಿರ್ಮಾಣ ಕಾಮಗಾರಿ, ಕಾರ್ಖಾನೆಗಳಲ್ಲಿ ಕೆಲಸ ನಡೆಸಲು ಅನುಮತಿ ನೀಡಲಾಗಿದೆ.
  • ಅಗತ್ಯ ಆಹಾರ ವಸ್ತುಗಳಾದ ದಿನಸಿ, ಹಣ್ಣು, ತರಕಾರಿ ಅಂಗಡಿಗಳು, ಹಾಲಿನ ಡೈರಿ, ಮೀನು ಮತ್ತು ಮಾಂಸದ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.
  • ಲಾಡ್ಜ್​ಗಳನ್ನು ತೆರೆದಿಡಲು ಅನುಮತಿ ನೀಡಲಾಗಿದೆ.

ಇದನ್ನು ಓದಿ: ಪ್ರಧಾನಿ ‘ಕೊರೊನಾ ವಾರಿಯರ್‌’ ಇದ್ದಂತೆ, ಸೋಂಕಿನ ವಿರುದ್ದ ಹೋರಾಡಲು 24×7 ಸಭೆ ನಡೆಸುತ್ತಾರೆ: ಕೇಂದ್ರ

  • ಮದ್ಯದ ಅಂಗಡಿಗಳಲ್ಲಿ ಪಾರ್ಸಲ್​ ನೀಡಲು ಮಾತ್ರ ಅವಕಾಶ ನೀಡಲಾಗಿದೆ.
  • ಬ್ಯಾಂಕ್​, ಇನ್ಶೂರೆನ್ಸ್​, ಮಾಧ್ಯಮ ಸಂಸ್ಥೆಗಳಿಗೆ ಅನುಮತಿ.
  • ಇ ಕಾಮರ್ಸ್​ ವೇದಿಕೆಯಲ್ಲಿ ಡೆಲಿವರಿ ಮಾಡಲು ಅನುಮತಿ.
  • ಐಟಿ ಸಂಸ್ಥೆಗಳ ಅಗತ್ಯ ಸಿಬ್ಬಂದಿ ಹೊರತುಪಡಿಸಿ ಬೇರೆಲ್ಲ ಸಿಬ್ಬಂದಿಗೆ ಮನೆಯಲ್ಲೇ ಕೆಲಸ ಮಾಡಲು ನಿರ್ದೇಶನ.
  • ಖಾಸಗಿ ಸಂಸ್ಥೆಗಳಲ್ಲಿ ಕಡಿಮೆ ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅವಕಾಶ.
  • ಸರ್ಕಾರಿ ಕಚೇರಿಗಳಲ್ಲಿ 50% ಸಿಬ್ಬಂದಿಗಳೊಂದಿಗೆ ಕೆಲಸಕ್ಕೆ ಅನುಮತಿ.
  • ಜಿಲ್ಲೆ ಹಾಗೂ ರಾಜ್ಯಗಳ ನಡುವೆ ಸಂಚಾರಕ್ಕೆ ಯಾವುದೇ ನಿರ್ಬಂಧವಿಲ್ಲ.
  • ಮೆಟ್ರೋ, ಕೆಎಸ್​ಆರ್​ಟಿಸಿ, ಬಿಎಂಟಿಸಿ ಸೇರಿ ಎಲ್ಲ ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳಿಗೆ ಅನುಮತಿ
  • ಮದುವೆಗಳಲ್ಲಿ ಕೇವಲ 50 ಜನರಿಗೆ ಹಾಗೂ ಅಂತ್ಯಕ್ರಿಯೆಗಳಲ್ಲಿ ಕೇವಲ 20 ಜನರಿಗೆ ಮಾತ್ರ ಅವಕಾಶ.

ಇದನ್ನು ಓದಿ: ‘ತಗಡು ಯೋಗಿ – ಯುಪಿ ಮುಖ್ಯಮಂತ್ರಿಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್‌!

ವಿಡಿಯೊ ನೋಡಿ: ವಿದ್ಯಾರ್ಥಿಗಳಿಬ್ಬರ ನೃತ್ಯಕ್ಕೆ ಕೋಮು ಬಣ್ಣ ಹಚ್ಚಿದ ಬಲಪಂಥೀಯರಿಗೆ ಕೇರಳ ಪ್ರತಿರೋಧಿಸಿದ್ದು ಹೇಗೆ ಗೊತ್ತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...