Homeಕರ್ನಾಟಕ‘ರಾಹುಲ್ ಗಾಂಧಿಯನ್ನು ಸ್ವಾಗತಿಸುತ್ತೇನೆ’: ಭಾರತ್‌ ಜೋಡೋ ಯಾತ್ರೆಗೆ ಜೆಡಿಎಸ್‌ನ ಶಾಸಕನ ಬೆಂಬಲ

‘ರಾಹುಲ್ ಗಾಂಧಿಯನ್ನು ಸ್ವಾಗತಿಸುತ್ತೇನೆ’: ಭಾರತ್‌ ಜೋಡೋ ಯಾತ್ರೆಗೆ ಜೆಡಿಎಸ್‌ನ ಶಾಸಕನ ಬೆಂಬಲ

ಈ ಹಿಂದೆ ಜೆಡಿಎಸ್‌ ಮಾಜಿ ಶಾಸಕ ವೈ.ಎಸ್‌.ವಿ. ದತ್ತ ಅವರು ಕೂಡಾ ಯಾತ್ರೆಗೆ ಬೆಂಬಲ ನೀಡಿದ್ದರು

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ‘ಭಾರತ್ ಜೋಡೋ’ ಯಾತ್ರೆಗೆ ಜೆಡಿಎಸ್‌ನ ಶಾಸಕ ಎಸ್‌.ಆರ್‌. ಶ್ರೀನಿವಾಸ್ ಬೆಂಬಲ ವ್ಯಕ್ತಪಡಿಸಿದ್ದು, ಪಾದಯಾತ್ರೆಯನ್ನು ಸ್ವಾಗತಿಸುವುದಾಗಿ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಮಟ್ಟದ ಪಾದಯಾತ್ರೆಗೆ ಜೆಡಿಎಸ್‌‌ ಪಕ್ಷದಿಂದ ಬೆಂಬಲ ನೀಡಿದ ಮೊಲದ ಶಾಸಕರಾಗಿದ್ದಾರೆ. ಈ ಹಿಂದೆ ಜೆಡಿಎಸ್‌ನ ಮಾಜಿ ಶಾಸಕ ವೈ.ಎಸ್‌.ವಿ. ದತ್ತ ಅವರು ಕೂಡಾ ಬೆಂಬಲ ನೀಡಿದ್ದಾರೆ.

ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಎಸ್‌.ಆರ್‌.ಶ್ರೀನಿವಾಸ್ ಸುದ್ದಿಗಾರರೊಂದಿಗೆ ಮಾತನಾಡಿ,“ರಾಹುಲ್ ಗಾಂಧಿ ಅವರು ರಾಷ್ಟ್ರಮಟ್ಟದ ನಾಯಕರಾಗಿದ್ದಾರೆ. ಭಾರತ ಜೋಡೋ ಯಾತ್ರೆ ಒಳ್ಳೆ ಉದ್ದೇಶ ಇಟ್ಟುಕೊಂಡು ನಡೆಯುತ್ತಿರಬಹುದು. ಇದರಲ್ಲಿ ಭಾಗವಹಿಸುವಂತೆ ಕಾಂಗ್ರೆಸ್ ಮುಖಂಡರು ಆಹ್ವಾನ ನೀಡಿದ್ದಾರೆ. ಸ್ಥಳೀಯ ಮುಖಂಡರೊಂದಿಗೆ ಚರ್ಚಿಸಿ ಈ ಕುರಿತು ತೀರ್ಮಾನ ಕೈಗೊಳ್ಳುತ್ತೇನೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬಿಜೆಪಿ ಹೊರತುಪಡಿಸಿ ಎಲ್ಲಾ ಪಕ್ಷದ ಮುಖಂಡರು ಹಾಗೂ ಸಾರ್ವಜನಿಕರು ಪಾದಯಾತ್ರೆಗೆ ಭಾಗವಹಿಸುವಂತೆ ಸಂಸದ ಡಿ.ಕೆ. ಸುರೇಶ್ ಅವರು ಕರೆ ನೀಡಿದ್ದಾರೆ. ಅದರಂತೆ ನಾನು ನನ್ನ ವಿಧಾನಸಭಾ ಕ್ಷೇತ್ರವಾದ ಗುಬ್ಬಿಗೆ ಭಾರತ್​ ಜೋಡೊ ಪಾದಯಾತ್ರೆ ಬರುತ್ತಿದ್ದಂತೆ ರಾಹುಲ್​ ಗಾಂಧಿಯವರನ್ನು ಸ್ವಾಗತಿಸುತ್ತೇನೆ, ಆದರೆ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಜೆಡಿಎಸ್‌ ಶಾಸಕರಾಗಿರುವ ಎಸ್. ಆರ್. ಶ್ರೀನಿವಾಸ್ ಅವರು ಕಾಂಗ್ರೆಸ್ ಸೇರಿಕೊಳ್ಳುತ್ತಿದ್ದಾರೆ ಎಂಬ ಸುದ್ದಿಗಳು ಇವೆ. ಡಿಸೆಂಬರ್ ವೇಳೆಗೆ ಈ ಬಗ್ಗೆ ತೀರ್ಮಾನ ಕೈಗೊಳ್ಳವುದಾಗಿ ಅವರು ಹೇಳಿದ್ದಾರೆ. “ನನ್ನ ತೀರ್ಮಾನವನ್ನು ಕಾರ್ಯಕರ್ತರು, ಮುಖಂಡರ ಜೊತೆ ಚರ್ಚಿಸಿ ನಿರ್ಧರಿಸುತ್ತೇನೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ; ಭಾರತದ ಬಹುತ್ವದ ಉಳಿವಿಗೆ ದಾರಿ ಮಾಡಿಕೊಡಬಲ್ಲುದೇ?

ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಆರಂಭವಾಗಿರುವ ರಾಹುಲ್ ಗಾಂಧಿ ನೇತೃತ್ವದ 150 ದಿನಗಳ ಭಾರತ್ ಜೋಡೋ ಯಾತ್ರೆ ಸೆಪ್ಟೆಂಬರ್ 30ರ ಶುಕ್ರವಾದ ರಾಜ್ಯಕ್ಕೆ ಆಗಮಿಸಲಿದೆ. ರಾಜ್ಯದ ಚಾಮರಾಜನಗರ ಜಿಲ್ಲೆಯ ಮೂಲಕ ಯಾತ್ರೆ ರಾಜ್ಯಕ್ಕೆ ಪ್ರವೇಶಿಸಲಿದ್ದು, ರಾಜ್ಯ ಕಾಂಗ್ರೆಸ್ ಅದಕ್ಕೆ ಬೇಕಾದ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದೆ. ರಾಜ್ಯದಾದ್ಯಂತ ಈ ಯಾತ್ರೆಯು 21 ದಿನಗಳ ಕಾಲ ಸಂಚರಿಸಲಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಮಣಿಪುರ ಹಿಂಸಾಚಾರಕ್ಕೆ ಬಲಿಯಾದವರ ಬಗ್ಗೆ ಮೋದಿ ಸರ್ಕಾರಕ್ಕೆ ಸ್ವಲ್ಪವೂ ಸಹಾನುಭೂತಿ ಇಲ್ಲ: ಮಲ್ಲಿಕಾರ್ಜುನ ಖರ್ಗೆ

0
ಮಣಿಪುರದ ಪರಿಸ್ಥಿತಿಯ ಬಗ್ಗೆ ಮೋದಿ ಸರಕಾರ ನಿರಾಸಕ್ತಿಯನ್ನು ಹೊಂದಿದ್ದು, ಪಶ್ಚಾತ್ತಾಪವಿಲ್ಲದಂತೆ ವರ್ತಿಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ನಡೆಸಿದೆ. ಈ ಕುರಿತು ಎಕ್ಸ್‌ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...