Homeಮುಖಪುಟ‘40% ಕಮಿಷನ್ CMಗೆ ಸ್ವಾಗತ’: ಬೊಮ್ಮಾಯಿಯನ್ನು ವ್ಯಂಗ್ಯವಾಗಿ ಸ್ವಾಗತಿಸಿದ ತೆಲಂಗಾಣ ಆಡಳಿತರೂಢ ಪಕ್ಷ ಟಿಆರ್‌ಎಸ್

‘40% ಕಮಿಷನ್ CMಗೆ ಸ್ವಾಗತ’: ಬೊಮ್ಮಾಯಿಯನ್ನು ವ್ಯಂಗ್ಯವಾಗಿ ಸ್ವಾಗತಿಸಿದ ತೆಲಂಗಾಣ ಆಡಳಿತರೂಢ ಪಕ್ಷ ಟಿಆರ್‌ಎಸ್

- Advertisement -
- Advertisement -

‘ಹೈದರಾಬಾದ್‌‌‌ ವಿಮೋಚನಾ ದಿನ’ದ ಅಂಗವಾಗಿ ತೆಲಂಗಾಣದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಶನಿವಾರ ಭಾಗವಹಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಅವರನ್ನು ಗುರಿಯಾಗಿಸಿರುವ ಆಡಳಿತರೂಢ ಪಕ್ಷವಾದ ಟಿಆರ್‌ಎಸ್‌‌, ‘40% ಕಮಿಷನ್ ಸಿಎಂಗೆ ಸ್ವಾಗತ’ ಎಂದು ಬರೆದಿರುವ ಬೃಹತ್‌ ಬ್ಯಾನರ್‌‌ ಅನ್ನು ಅಳವಡಿಸಿದೆ ಎಂದು ವರದಿಯಾಗಿದೆ.

ಒಕ್ಕೂಟ ಸರ್ಕಾರದ ವತಿಯಿಂದ ಇದೇ ಮೊದಲ ಬಾರಿ ನಡೆಯುತ್ತಿರುವ ‘ಸೆಪ್ಟೆಂಬರ್ 17’ರ ‘ಹೈದರಾಬಾದ್ ವಿಮೋಚನಾ ದಿನ’ದಲ್ಲಿ ಗೃಹ ಸಚಿವ ಅಮಿತ್‌‌ ಶಾ ಅವರು ತೆಲಂಗಾಣದ ಸಿಕಂದರಾಬಾದ್‌ನ ಸೇನಾ ಪರೇಡ್ ಮೈದಾನದಲ್ಲಿ  ಭಾಗವಹಿಸಲಿದ್ದಾರೆ. ಇದೇ ಮೈದಾನದ ಪಕ್ಕವೆ ಟಿಆರ್‌ಎಸ್‌ ಬೊಮ್ಮಾಯಿ ಅವರನ್ನು ಗುರಿಯಾಗಿಸಿ ಬ್ಯಾನರ್‌ ಅನ್ನು ಅಳವಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಳೆಯ ಹೈದರಾಬಾದ್‌‌ನಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರವು ಇರುವುದರಿಂದ ಈ ಕಾರ್ಯಕ್ರಮಕ್ಕೆ ಸಿಎಂ ಬೊಮ್ಮಾಯಿ ಸೇರಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರಿಗೆ ಕೂಡಾ ಆಹ್ವಾನವಿದ್ದು, ಇಬ್ಬರೂ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ರಾಜ್ಯದ ಹೊಸ ಸಚಿವಾಲಯಕ್ಕೆ ಡಾ. ಅಂಬೇಡ್ಕರ್‌ ಹೆಸರು: ತೆಲಂಗಾಣ ಸಿಎಂ ಕೆಸಿಆರ್ ಘೋಷಣೆ

‘ಸೆಪ್ಟೆಂಬರ್ 17’ರ ದಿನಾಚರಣೆಯನ್ನು ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಇಬ್ಬರೂ ಶನಿವಾರ ಹೈದರಾಬಾದ್‌ನಲ್ಲಿ ಪ್ರತ್ಯೇಕ ‘ಸೆಪ್ಟೆಂಬರ್ 17’ರ ಆಚರಣೆಯಲ್ಲಿ ರಾಷ್ಟ್ರಧ್ವಜಾರೋಹಣ ಮಾಡಲಿದ್ದು, ರಾಜ್ಯದಲ್ಲಿ ತೀವ್ರ ಮತ್ತು ಸ್ಪರ್ಧಾತ್ಮಕ ರಾಜಕೀಯ ಚಟುವಟಿಕೆಯ ದಿನವಾಗಿ ನಿರ್ಮಾಣವಾಗುತ್ತಿದೆ.

ಒಕ್ಕೂಟ ಸರ್ಕಾರ ಇದೆ ಮೊದಲ ಬಾರಿಗೆ ಸೆಪ್ಟೆಂಬರ್ 17 ಅನ್ನು ‘ಹೈದರಾಬಾದ್ ವಿಮೋಚನಾ ದಿನ’ ಎಂದು ಆಚರಿಸುತ್ತಿದೆ. ಆದರೆ ತೆಲಂಗಾಣ ಸರ್ಕಾರವು ಸೆಪ್ಟೆಂಬರ್‌‌ 17ನ್ನು ‘ತೆಲಂಗಾಣ ಏಕೀಕರಣ ದಿನ’ ಎಂದು ಕರೆಯುವ ಯೋಜನೆಯನ್ನು ರೂಪಿಸಿದ್ದು, ಮೂರು ದಿನಗಳ ಹಬ್ಬಗಳನ್ನು ಘೋಷಿಸಿದೆ.

ಇದನ್ನೂ ಓದಿ: ಬಿಹಾರಕ್ಕೆ ಭೇಟಿ ನೀಡಿದ ತೆಲಂಗಾಣ ಸಿಎಂ ಕೆಸಿಆರ್‌‌: ‘ಬಿಜೆಪಿ ಮುಕ್ತ ಭಾರತ’ಕ್ಕೆ ಕರೆ

ನಿಜಾಮರ ಆಡಳಿತದ ಅಡಿಯಲ್ಲಿ ಇದ್ದ ಹೈದರಾಬಾದ್ ಭಾರತವು ಸ್ವಾತಂತ್ಯ್ರಗೊಂಡು ಒಂದು ವರ್ಷದ ನಂತರ ಸೆಪ್ಟೆಂಬರ್‌ 17ರಂದು ಭಾರತೀಯ ಒಕ್ಕೂಟದೊಂದಿಗೆ ವಿಲೀನಗೊಂಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...