Homeಮುಖಪುಟಪ್ರಶಾಂತ್ ಭೂಷಣ್ ಮೇಲಿನ ನ್ಯಾಯಾಂಗ ನಿಂದನೆ ಪ್ರಕರಣ ಕೈಬಿಡಲು ವೆಲ್ಫೇರ್ ಪಾರ್ಟಿ ಆಗ್ರಹ

ಪ್ರಶಾಂತ್ ಭೂಷಣ್ ಮೇಲಿನ ನ್ಯಾಯಾಂಗ ನಿಂದನೆ ಪ್ರಕರಣ ಕೈಬಿಡಲು ವೆಲ್ಫೇರ್ ಪಾರ್ಟಿ ಆಗ್ರಹ

ಸುಪ್ರೀಂ ಕೋರ್ಟ್‍ನ ಮುಖ್ಯನ್ಯಾಯಮೂರ್ತಿಗಳ ಮೇಲೆ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಮಾಡಿರುವ ಟ್ವೀಟ್‍ಗಳು ವಿಮರ್ಶೆಗಳೇ ಹೊರತು ನಿಂದನೆಗಳಲ್ಲ. ಪ್ರಜಾತಾಂತ್ರಿಕ ವ್ಯವಸ್ಥೆಯಲ್ಲಿ ರಚನಾತ್ಮಕ ವಿಮರ್ಶೆಗಳಿಂದ ನ್ಯಾಯಾಂಗ ವ್ಯವಸ್ಥೆಗೆ ಯಾವುದೇ ಪೆಟ್ಟಾಗುವುದಿಲ್ಲ.

- Advertisement -
- Advertisement -

ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರ ಮೇಲಿನ ನ್ಯಾಯಾಂಗ ನಿಂದನೆ ಪ್ರಕರಣ ಕೈಬಿಡಲು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಡ್ವೋಕೇಟ್ ತಾಹಿರ್ ಹುಸೇನ್ ಆಗ್ರಹಿಸಿದ್ದಾರೆ.

ಸುಪ್ರೀಂ ಕೋರ್ಟ್‍ನ ಮುಖ್ಯನ್ಯಾಯಮೂರ್ತಿಗಳ ಮೇಲೆ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಮಾಡಿರುವ ಟ್ವೀಟ್‍ಗಳು ವಿಮರ್ಶೆಗಳೇ ಹೊರತು ನಿಂದನೆಗಳಲ್ಲ. ಪ್ರಜಾತಾಂತ್ರಿಕ ವ್ಯವಸ್ಥೆಯಲ್ಲಿ ರಚನಾತ್ಮಕ ವಿಮರ್ಶೆಗಳಿಂದ ನ್ಯಾಯಾಂಗ ವ್ಯವಸ್ಥೆಗೆ ಯಾವುದೇ ಪೆಟ್ಟಾಗುವುದಿಲ್ಲ. ಬದಲಾಗಿ ಗಟ್ಟಿಯಾಗುತ್ತದೆ ಎಂಬುದನ್ನು ಪರಿಗಣಿಸಿ ಪ್ರಶಾಂತ್ ಭೂಷಣ್ ಅವರಿಗೆ ಶಿಕ್ಷೆ ವಿಧಿಸದೇ ನ್ಯಾಯಾಂಗ ನಿಂದನೆ ಪ್ರಕರಣ ಕೈಬಿಡಬೇಕೆಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಶಾಂತ್ ಭೂಷಣ್ ಮೇಲಿನ ನ್ಯಾಯಾಂಗ ನಿಂದನೆ ಪ್ರಕರಣ ಕೈಬಿಡಲು ವೆಲ್ಫೇರ್ ಪಾರ್ಟಿ ಆಗ್ರಹ
ತಾಹಿರ್ ಹುಸೇನ್

ತುರ್ತು ಪರಿಸ್ಥಿತಿ ಸೇರಿದಂತೆ ಹಲವು ಸಂದರ್ಭಗಳಲ್ಲಿ ಪ್ರಶಾಂತ್ ಭೂಷಣ್ ಅವರು ಸ್ವತಂತ್ರ ನ್ಯಾಯಾಂಗ ವ್ಯವಸ್ಥೆಯ ಪರಂಪರೆಯ ರಕ್ಷಣೆಗಾಗಿ ಹೋರಾಟ ನಡೆಸಿದವರು. ಅಣ್ಣಾ ಹಜಾರೆ ಜತೆಗೆ ಭ್ರಷ್ಟಾಚಾರ ವಿರೋಧಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದವರು. ತಮ್ಮ ವಕೀಲ ವೃತ್ತಿ ಜೀವನದ ಐದು ದಶಕಗಳ ಉದ್ದಕ್ಕೂ ಜನರ ಹಕ್ಕುಗಳ ರಕ್ಷಣೆಗಾಗಿ ಯಾವ ಪಕ್ಷದ ಸರಕಾರ ಅಧಿಕಾರದಲ್ಲಿದ್ದರೂ ಪ್ರಶ್ನಿಸುತ್ತಾ ಬಂದವರು. ನ್ಯಾಯಾಂಗದಲ್ಲಿ, ನ್ಯಾಯಾಧೀಶರಿಂದ ಲೋಪಗಳಾದಾಗಲೂ ಪ್ರಶ್ನಿಸಿದ್ದಾರೆ. ಇದು ಅವರು ಈ ದೇಶದ ಜನತೆ ಮತ್ತು ಪ್ರಜಾತಾಂತ್ರಿಕ-ಸಾಂವಿಧಾನಿಕ ಮೌಲ್ಯಗಳನ್ನು ರಕ್ಷಿಸಲು ಮಾಡಿದ ಸೇವೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಹಿಂದೆ 8 ಮುಖ್ಯ ನ್ಯಾಯಾಧೀಶರ ಮೇಲೆ ಮಾಡಿದ ಟೀಕೆ ಮತ್ತು ಈಗ ಮುಖ್ಯ ನ್ಯಾಯಾಧೀಶರನ್ನೊಳಗೊಂಡು ಮಾಡಿರುವ ವಿಮರ್ಶೆಗಳು ಸಾಕ್ಷ್ಯಾಧಾರ ಸಮೇತವಾಗಿವೆ ಎಂಬುದು ಮೇಲ್ನೋಟಕ್ಕೆ ಸ್ಪಷ್ಟವಾಗಿವೆ. ಹಾಗಾಗಿ ಪ್ರಶಾಂತ್ ಭೂಷಣ್ ಅವರು ಎತ್ತಿರುವ ಪ್ರಶ್ನೆಗಳನ್ನು ಗಂಭೀರವಾಗಿ ಪರಿಗಣಿಸಿ ಸಂಬಂಧಿಸಿದವರನ್ನು ವಿಚಾರಣೆಗೆ ಒಳಪಡಿಸದೇ, ತಪ್ಪನ್ನು ಪ್ರಶ್ನಿಸಿದ ಪ್ರಶಾಂತ್ ಭೂಷಣ್ ಅವರನ್ನೇ ಶಿಕ್ಷೆಗೆ ಒಳಪಡಿಸಿರುವ ಸವೋಚ್ಚ ನ್ಯಾಯಾಲಯದ ಕ್ರಮ ದೇಶದ ಜನರಲ್ಲಿ ಆಶ್ಚರ್ಯ ಮೂಡಿಸಿದೆ. ಮತ್ತು ಇದು ನ್ಯಾಯಾಲಯದ ಮೇಲಿನ ವಿಶ್ವಾಸ ಕ್ಷೀಣಿಸುವಂತೆ ಮಾಡಿದೆ ಎಂದಿದ್ದಾರೆ.

ನ್ಯಾಯಾಲಯದ ಈ ಕ್ರಮ ಮತ್ತು ಪ್ರಕರಣದ ವಿಚಾರಣೆಯಲ್ಲಿ ಪ್ರತಿವಾದಿಗೆ ನೇರವಾಗಿ ವಾದ ಮಂಡಿಸಲು ಅವಕಾಶ ನೀಡದೇ ಇರುವ ವಿಧಾನವನ್ನು ದೇಶದಾದ್ಯಂತ ಸಾವಿರಾರು ವಕೀಲರು, ನಿವೃತ್ತ ನ್ಯಾಯಾಧೀಶರು ಮತ್ತು ಕಾನೂನು ಪಂಡಿತರು ತೀವ್ರವಾಗಿ ಟೀಕಿಸಿದ್ದಾರೆ. ಹಾಗಾಗಿ, ಮೇಲಿನ ಎಲ್ಲ ಅಂಶಗಳನ್ನು ಸಮಗ್ರವಾಗಿ ಪರಿಗಣಿಸಿ ದೇಶದ ಸರ್ವೋಚ್ಚ ನ್ಯಾಯಾಲಯವು ಪ್ರಶಾಂತ್ ಭೂಷಣ್‍ರ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣವನ್ನು ಕೈಬಿಟ್ಟು ನಿಜವಾದ ನ್ಯಾಯವನ್ನು ಎತ್ತಿಹಿಡಿಯಬೇಕು. ಆ ಮೂಲಕ ದೇಶದ ನಾಗರಿಕರಲ್ಲಿ ಸರ್ವೋಚ್ಚ ನ್ಯಾಯಾಲಯದ ಮೇಲಿನ ನಂಬಿಕೆಯನ್ನು ಗಟ್ಟಿಗೊಳಿಸಬೇಕು ಎಂದು ತಾಹಿರ್ ಹುಸೇನ್ ಹೇಳಿದ್ದಾರೆ.


ಇದನ್ನೂ ಓದಿ: ಭೂಷಣ್ ಪ್ರಕರಣ: ರಚನಾತ್ಮಕ ಟೀಕೆಯೊಂದನ್ನು ಸಹಿಸಲಾಗದಷ್ಟು ಸಂಕುಚಿತವೇ ಸುಪ್ರೀಮ್ ಭುಜಗಳು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...

ಶಬರಿಮಲೆ ತುಪ್ಪ ಮಾರಾಟ ಹಗರಣ: ತನಿಖೆ ಪೂರ್ಣಗೊಳಿಸಲು ವಿಎಸಿಬಿಗೆ 30 ದಿನ ಕಾಲಾವಕಾಶ ನೀಡಿದ ಕೇರಳ ಹೈಕೋರ್ಟ್ 

ಕೊಚ್ಚಿ: ಶಬರಿಮಲೆಯ ಅಯ್ಯಪ್ಪ ದೇಗುಲದಲ್ಲಿ ಭಕ್ತರಿಗೆ ಮಾರಾಟವಾಗುವ ಪವಿತ್ರ ನೈವೇದ್ಯ 'ಆದಿಯ ಸಿಷ್ಟಂ ತುಪ್ಪ' ಮಾರಾಟಕ್ಕೆ ಸಂಬಂಧಿಸಿದಂತೆ ಟಿಡಿಬಿ ನೌಕರರು ಹಣ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪದ ತನಿಖೆಯನ್ನು ಪೂರ್ಣಗೊಳಿಸಲು ಕೇರಳ ಹೈಕೋರ್ಟ್ ಜಾಗೃತ...

ಧಾರ್ಮಿಕ ಆಚರಣೆ ಹೆಸರಿನಲ್ಲಿ ನರ್ಮದಾ ನದಿಗೆ 11,000 ಲೀಟರ್ ಹಾಲು ಸುರಿದ ಭಕ್ತರು

ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯ ನರ್ಮದಾ ನದಿ ದಂಡೆಯಲ್ಲಿ ಬುಧವಾರ ನಡೆದ ಧಾರ್ಮಿಕ ಆಚರಣೆಯ ಸಂದರ್ಭದಲ್ಲಿ 11,000 ಲೀಟರ್ ಹಾಲು ನರ್ಮದಾ ನದಿಗೆ ಸುರಿಯಲಾಗಿದ್ದು, ಇದು ನಂಬಿಕೆ ಮತ್ತು ಪರಿಸರ ಹಾನಿಯ ಕುರಿತು ಚರ್ಚೆಗೆ...

ಪಶ್ಚಿಮ ಬಂಗಾಳ: ಹುಮಾಯೂನ್ ಕಬೀರ್ ಪಕ್ಷದೊಂದಿಗಿನ ಮೈತ್ರಿ ಹಿಂತೆಗೆದುಕೊಂಡ ಎಐಎಂಐಎಂ; ಸ್ವತಂತ್ರ ಸ್ಪರ್ಧೆ ಘೋಷಣೆ

ಮುಂಬರುವ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಹುಮಾಯೂನ್ ಕಬೀರ್ ನೇತೃತ್ವದ ಪಕ್ಷದೊಂದಿಗಿನ ಮೈತ್ರಿಯಿಂದ ಹಿಂದೆ ಸರಿಯುತ್ತಿರುವುದಾಗಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಘೋಷಿಸಿದೆ. ಕಬೀರ್ ಅವರ ಹೇಳಿಕೆಗಳು ಮತ್ತು ಬಹಿರಂಗಪಡಿಸುವಿಕೆಗಳು "ಮುಸ್ಲಿಮರ ಸಮಗ್ರತೆ"ಯ ಬಗ್ಗೆ...