Homeಅಂತರಾಷ್ಟ್ರೀಯ"ನಾವೆಲ್ಲರೂ ನಿಮ್ಮ ಬಗ್ಗೆ ಯೋಚಿಸುತ್ತಿದ್ದೇವೆ": ನ್ಯೂಯಾರ್ಕ್‌ನ ನೂತನ ಮೇಯರ್ ಝೊಹ್ರಾನ್ ಮಮ್ದಾನಿಯಿಂದ ಉಮರ್ ಖಾಲಿದ್‌ಗೆ ಪತ್ರ

“ನಾವೆಲ್ಲರೂ ನಿಮ್ಮ ಬಗ್ಗೆ ಯೋಚಿಸುತ್ತಿದ್ದೇವೆ”: ನ್ಯೂಯಾರ್ಕ್‌ನ ನೂತನ ಮೇಯರ್ ಝೊಹ್ರಾನ್ ಮಮ್ದಾನಿಯಿಂದ ಉಮರ್ ಖಾಲಿದ್‌ಗೆ ಪತ್ರ

- Advertisement -
- Advertisement -

ಜೈಲಿನಲ್ಲಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಅವರಿಗೆ ನ್ಯೂಯಾರ್ಕ್‌ ನಗರದ ನೂತನ ಮೇಯರ್ ಝೊಹ್ರಾನ್ ಮಮ್ದಾನಿ ಅವರು ಕೈಬರಹದ ಪತ್ರವೊಂದನ್ನು ಬರೆದಿದ್ದಾರೆ ಎಂದು, ಖಾಲಿದ್ ಸ್ನೇಹಿತೆ ಬನೋಜ್ಯೋತ್ಸ್ನಾ ಲಹಿರಿ ಗುರುವಾರ (ಜ.1) ತಿಳಿಸಿದ್ದಾರೆ.

2025ರ ಡಿಸೆಂಬರ್‌ನಲ್ಲಿ ಉಮರ್ ಖಾಲಿದ್ ಪೋಷಕರು ಅಮೆರಿಕಕ್ಕೆ ಭೇಟಿ ನೀಡಿದ್ದ ವೇಳೆ ಮಮ್ದಾನಿ ಪತ್ರ ಕೊಟ್ಟಿದ್ದಾರೆ ಎಂದು ವರದಿಯಾಗಿದೆ.

“ಪ್ರಿಯ ಉಮರ್, ಕಹಿಯ ಬಗ್ಗೆ ನಿಮ್ಮ ಮಾತುಗಳನ್ನು ನಾನು ಆಗಾಗ್ಗೆ ನೆನಪಿಸಿಕೊಳ್ಳುತ್ತೇನೆ. ಅದು ಒಬ್ಬರ ಆತ್ಮವನ್ನು ಆವರಿಸದಂತೆ ನೋಡಿಕೊಳ್ಳಬೇಕೆಂಬ ನಿಮ್ಮ ಮಾತುಗಳು ನನಗೆ ಆಗಾಗ್ಗೆ ನೆನಪಾಗುತ್ತವೆ. ನಿಮ್ಮ ಪೋಷಕರನ್ನು ಭೇಟಿಯಾದುದು ಸಂತೋಷವಾಯಿತು” ಎಂದು ಮಮ್ದಾನಿ ಪತ್ರದಲ್ಲಿ ಬರೆದಿದ್ದಾರೆ.

ಅಂದರೆ, ಉಮರ್ ಖಾಲಿದ್ ಅವರು ಜೈಲಿನಲ್ಲಿರುವಾಗ ಬರೆದ ಪತ್ರಗಳಲ್ಲಿ, “ಕಹಿಯಿಂದ (ಕೋಪ, ಸಿಟ್ಟು, ಬೇಸರ) ಹೃದಯವನ್ನು ತುಂಬಿಕೊಳ್ಳಬಾರದು. ಅದು ನಮ್ಮನ್ನು ಪೂರ್ತಿಯಾಗಿ ನಾಶಮಾಡಬಹುದು. ಅದನ್ನು ನಿಯಂತ್ರಣದಲ್ಲಿಟ್ಟುಕೊಂಡು, ಧೈರ್ಯವಾಗಿ ಮುಂದುವರೆಯಬೇಕು ಎಂದು ಬರೆದಿದ್ದರು. ಮಮ್ದಾನಿ ಆ ಬರಹ ತನ್ನ ಮೇಲೆ ತುಂಬಾ ಪ್ರಭಾವ ಬೀರಿವೆ ಎಂದು ಮಮ್ದಾನಿ ಹೇಳಿದ್ದಾರೆ. ಉಮರ್ ಅವರಿಗೆ ಬೆಂಬಲ ಸೂಚಿಸಿದ್ದಾರೆ.

2023ರಲ್ಲಿ, ನ್ಯೂಯಾರ್ಕ್‌ನಲ್ಲಿ ನಡೆದ ಒಂದು ಕಾರ್ಯಕ್ರಮದಲ್ಲಿ (ಹೌಡಿ ಡೆಮಾಕ್ರಸಿ?! ಎಂಬ ಕಾರ್ಯಕ್ರಮ) ಮಮ್ದಾನಿ ಅವರು ಉಮರ್ ಖಾಲಿದ್ ಜೈಲಿನಿಂದ ಬರೆದ ಪತ್ರದ ಕೆಲವು ಭಾಗಗಳನ್ನು ಜೋರಾಗಿ ಓದಿದ್ದರು.

ಮಮ್ದಾನಿ ಬರೆದ ಪತ್ರವನ್ನು ಅವರು ನ್ಯೂಯಾರ್ಕ್ ಮೇಯರ್ ಆಗಿ ಪ್ರಮಾಣವಚನ ಸ್ವೀಕರಿಸಿದ ದಿನದಂದೇ (ಜ.1) ಬನೋಜ್ಯೋತ್ಸ್ನಾ ಲಹಿರಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಖಾಲಿದ್ ಅವರ ಪೋಷಕರಾದ ಸಾಹಿಬಾ ಖಾನಮ್ ಮತ್ತು ಸೈಯದ್ ಖಾಸಿಮ್ ರಸೂಲ್ ಇಲ್ಯಾಸ್, ಕುಟುಂಬದ ವಿವಾಹಕ್ಕೆ ಮುಂಚಿತವಾಗಿ ತಮ್ಮ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಭೇಟಿ ಮಾಡಲು ಅಮೆರಿಕಕ್ಕೆ ತೆರಳಿದ್ದರು. ಈ ವೇಳೆ ಅವರು ಮಮ್ದಾನಿ ಮತ್ತು ಇತರ ಕೆಲವರನ್ನು ಭೇಟಿಯಾಗಿದ್ದರು ಎಂದು ಲಹಿರಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...