Homeಅಂತರಾಷ್ಟ್ರೀಯಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

- Advertisement -
- Advertisement -

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ ದುಬೈ ಮಾಧ್ಯಮ ಕಚೇರಿ, ಈ ದಾಳಿಯಲ್ಲಿ ಇಬ್ಬರು ಘಾನಾ ಪ್ರಜೆಗಳು, ಓರ್ವ ಬಾಂಗ್ಲಾದೇಶಿ ಪ್ರಜೆ ಮತ್ತು ಒಬ್ಬ ಭಾರತೀಯ ಪ್ರಜೆ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದು, ವಿಮಾನ ಹಾರಾಟ ಮುಂದುವರೆದಿದೆ ಎಂದು ಸ್ಪಷಷ್ಟಡಿಸಿದೆ.

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ವಿಶ್ವದ ಅತ್ಯಂತ ಜನನಿಬಿಡ ಏರ್​ಪೋರ್ಟ್​ ಆಗಿದೆ. ದೀರ್ಘ ಪ್ರಯಾಣದ ವಿಮಾನಯಾನ ಸಂಸ್ಥೆಗಳಿಗೆ ಈ ನಿಲ್ದಾಣ ಎಮಿರೇಟ್ಸ್​​ನ ಪ್ರಮುಖ ನೆಲೆಯಾಗಿದೆ. ಇರಾನ್​ ಗಲ್ಫ್​ ರಾಷ್ಟ್ರಗಳ ವಿಮಾನ ನಿಲ್ದಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ಮುಂದುವರೆಸಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ವಿಮಾನಗಳ ವೇಳಾಪಟ್ಟಿಗಳನ್ನು ಮತ್ತೆ ಮರು ಹೊಂದಾಣಿಕೆ ಮಾಡಲು ಹರಸಾಹಸ ಪಡುವಂತಾಗಿದೆ.

ಇರಾನ್​ ಮೇಲೆ ಅಮೆರಿಕ ಮತ್ತು ಇಸ್ರೇಲ್​ ವೈಮಾನಿಕ ದಾಳಿ ಬಳಿಕ ಉಲ್ಬಣಗೊಂಡ ಯುದ್ದವು ಜಾಗತಿಕ ಇಂಧನದ ಕೊರತೆಯ ಆತಂಕ ಹೆಚ್ಚಿಸಿದೆ. ಈ ನಡುವೆ ಇರಾನ್ ಪರ್ಷಿಯನ್ ಕೊಲ್ಲಿಯಾದ್ಯಂತ ವಾಣಿಜ್ಯ ಹಡಗುಗಳ ಮೇಲೆ ದಾಳಿ ಮುಂದುವರಿಸಿದೆ. ಮಧ್ಯಪ್ರಾಚ್ಯದಲ್ಲಿರುವ ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡುವುದಾಗಿ ಇರಾನ್‌ನ ಜಂಟಿ ಮಿಲಿಟರಿ ಕಮಾಂಡ್ ಘೋಷಿಸಿದೆ. ಇದು ದುಬೈಗೆ ಆಘಾತವನ್ನುಂಟು ಮಾಡಿದೆ. 

ದಾಳಿ ಮುಂದುವರೆದಿರುವ ಕಾರಣ ಇಲ್ಲಿ ಅನೇಕ ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಗಳು ಆತಂಕದಲ್ಲಿವೆ. ಇದರ ಜೊತೆಗೆ ಸೌದಿ ಅರೇಬಿಯಾ ಮತ್ತು ದ್ವೀಪ ಸಾಮ್ರಾಜ್ಯವಾದ ಬಹ್ರೇನ್ ತೀವ್ರ ಸಂಕಷ್ಟಕ್ಕೆ ಸಿಲುಕಿಕೊಂಡಿವೆ.

ಇದಕ್ಕೂ ಮೊದಲು ಓಮನ್ ಕರಾವಳಿ ಹಾರ್ಮುಜ್ ಜಲಸಂಧಿಯಲ್ಲಿ ಒಂದು ಕಂಟೇನರ್ ಹಡಗನ್ನು ಹೊಡೆದುರುಳಿಸಲಾಗಿದೆ ಎಂದು ಬ್ರಿಟಿಷ್ ಮಿಲಿಟರಿ ತಿಳಿಸಿದೆ. ಇರಾನಿನ ಎಂಟು ಡ್ರೋನ್‌ಗಳನ್ನು ಹೊಡೆದುರುಳಿಸಿದಾಗಿ ಕುವೈತ್ ಮಾಹಿತಿ ನೀಡಿದೆ. ಸೌದಿ ಅರೇಬಿಯಾ ರಾಜ್ಯದ ಶೈಬಾ ತೈಲ ನಿಕ್ಷೇಪದ ಕಡೆಗೆ ಹೋಗುತ್ತಿದ್ದ ಐದು ಡ್ರೋನ್‌ಗಳನ್ನು ತಡೆದಿದ್ದೇವೆ ಎಂದು ಅದು ಇದೇ ವೇಳೆ ಮಾಹಿತಿ ಒದಗಿಸಿರುವುದಾಗಿ ವರದಿಯಾಗಿದೆ. 

ಪರ್ಷಿಯನ್ ಕೊಲ್ಲಿಯಿಂದ ಹಿಂದೂ ಮಹಾಸಾಗರದ ಕಡೆಗೆ ಸಾಗಿಸುವ ಸರಕು ಸಾಗಣೆ ಹಡಗುಗಳು ಹಾರ್ಮುಜ್​ ಜಲಸಂಧಿಯಲ್ಲೇ ಬರಬೇಕಿದೆ. ಈ ಜಲಸಂಧಿಯ ಮೇಲೆ ಇರಾನ್​ ಬಿಗಿ ಹಿಡಿತ ಸಾಧಿಸಿದೆ. ಇನ್ನು ಗಲ್ಫ್ ಅರಬ್ ರಾಷ್ಟ್ರಗಳಲ್ಲಿನ ತೈಲ ಮತ್ತು ಸಂಸ್ಕರಣಾಗಾರಗಳನ್ನು ಗುರಿಯಾಗಿಸಿಕೊಂಡು ಇರಾನ್​ ದಾಳಿ ಮುಂದುವರೆಸಿದೆ. 

ಯುನೈಟೆಡ್ ಸ್ಟೇಟ್ಸ್ ಮತ್ತು ಇಸ್ರೇಲ್ ತಮ್ಮ ಸಂಘರ್ಷವನ್ನು ಕೊನೆಗೊಳಿಸಲು ಒತ್ತಡ ಹೇರಲು ಮುಂದಾಗಿದೆ. ಇದು ಸಾಕಷ್ಟು ಜಾಗತಿಕ ಆರ್ಥಿಕ ತೊಂದರೆಯನ್ನು ಉಂಟುಮಾಡುವ ಸಾಧ್ಯತೆಗಳು ಈಗಾಗಲೇ ಗೋಚರಿಸಲು ಆರಂಭವಾಗಿದೆ. ಈ ನಡುವೆ ಇರಾನ್ ತನ್ನ ನೆರೆಯ ಮೇಲೆ ದಾಳಿ ಮಾಡುವುದನ್ನು ನಿಲ್ಲಿಸುವಂತೆ ಒತ್ತಾಯಿಸಿ ಗಲ್ಫ್ ಸಹಕಾರ ಮಂಡಳಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಮತ ಚಲಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...