Homeಅಂತರಾಷ್ಟ್ರೀಯಪಶ್ಚಿಮ ಏಷ್ಯಾ ಬಿಕ್ಕಟ್ಟು : ಇರಾನ್ ವಿದೇಶಾಂಗ ಸಚಿವರ ಜೊತೆ ಜೈಶಂಕರ್ ಚರ್ಚೆ

ಪಶ್ಚಿಮ ಏಷ್ಯಾ ಬಿಕ್ಕಟ್ಟು : ಇರಾನ್ ವಿದೇಶಾಂಗ ಸಚಿವರ ಜೊತೆ ಜೈಶಂಕರ್ ಚರ್ಚೆ

- Advertisement -
- Advertisement -

ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರೊಂದಿಗೆ ಮಂಗಳವಾರ (ಮಾ.10) ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಈ ವೇಳೆ ಪಶ್ಚಿಮ ಏಷ್ಯಾದ ಬೆಳವಣಿಗೆಗಳು ಮತ್ತು ಹಾರ್ಮುಝ್ ಜಲಸಂಧಿಯಲ್ಲಿ ಹಡಗು ಭದ್ರತೆಯ ಬಗ್ಗೆ ಇರುವ ಕಳವಳಗಳನ್ನು ಚರ್ಚಿಸಿದ್ದಾರೆ ಎಂದು ವರದಿಯಾಗಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಎಸ್‌.ಜೈಶಂಕರ್ ಅವರು, “ಇಂದು ಸಂಜೆ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಅವರೊಂದಿಗೆ ಪ್ರಸ್ತುತ ನಡೆಯುತ್ತಿರುವ ಸಂಘರ್ಷದ ಇತ್ತೀಚಿನ ಬೆಳವಣಿಗೆಗಳ ಕುರಿತು ವಿಸ್ತೃತ ಚರ್ಚೆ ನಡೆಸಿದೆವು. ನಾವು ನಿರಂತರವಾಗಿ ಸಂಪರ್ಕದಲ್ಲಿರಲು ಸಮ್ಮತಿಸಿದ್ದೇವೆ” ಎಂದು ತಿಳಿಸಿದ್ದಾರೆ.

ಇರಾನ್ ವಿದೇಶಾಂಗ ಸಚಿವಾಲಯ ಕೂಡ ಜೈಶಂಕರ್ ಅವರ ಜೊತೆ ಅರಘ್ಚಿ ಚರ್ಚೆ ಮಾಡಿರುವ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದು, ಹೆಚ್ಚಿನ ಮಾಹಿತಿಯನ್ನು ನೀಡಿದೆ.

ಇರಾನ್ ಮತ್ತು ಭಾರತದ ವಿದೇಶಾಂಗ ಸಚಿವರು ದೂರವಾಣಿ ಮೂಲಕ ಪ್ರಾದೇಶಿಕ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ತಿಳಿಸಿದೆ.

“ಈ ದೂರವಾಣಿ ಚರ್ಚೆಯಲ್ಲಿ ಇರಾನ್ ವಿದೇಶಾಂಗ ಸಚಿವರು ಕಳೆದ 11 ದಿನಗಳಲ್ಲಿ ಇರಾನ್ ರಾಷ್ಟ್ರದ ವಿರುದ್ಧ ಅಮೆರಿಕ ಮತ್ತು ಇಸ್ರೇಲ್ ಆಡಳಿತವು ಎಸಗಿರುವ ಅಪರಾಧಗಳನ್ನು ವಿಸ್ತೃತವಾಗಿ ವಿವರಿಸಿದ್ದಾರೆ. ಇದರಲ್ಲಿ ಯುದ್ಧದ ಮೊದಲ ದಿನದಂದೇ ಮಿನಾಬ್‌ನ ಬಾಲಕಿಯರ ಪ್ರಾಥಮಿಕ ಶಾಲೆಯ ಮೇಲೆ ನಡೆದ ಕ್ಷಿಪಣಿ ದಾಳಿ ಮತ್ತು ತದನಂತರ ನಾಗರಿಕ ಪ್ರದೇಶಗಳು ಹಾಗೂ ಸಾರ್ವಜನಿಕ ಸೇವಾ ಕೇಂದ್ರಗಳ ಮೇಲೆ ನಡೆದ ವ್ಯಾಪಕ ದಾಳಿಗಳು ಸೇರಿವೆ. ಇರಾನ್‌ನ ಸಮಗ್ರತೆಯನ್ನು ಸಮಗ್ರವಾಗಿ ರಕ್ಷಿಸುವ ತನ್ನ ದೃಢಸಂಕಲ್ಪವನ್ನು ಅವರು ಇದೇ ವೇಳೆ ಒತ್ತಿಹೇಳಿದ್ದಾರೆ” ಎಂದು ವಿವರಿಸಿದೆ.

“ಅಮೆರಿಕ ಮತ್ತು ಇಸ್ರೇಲ್ ಆಡಳಿತದ ಈ ಆಕ್ರಮಣಕಾರಿ ಕ್ರಮವು ವಿಶ್ವಸಂಸ್ಥೆಯ ಚಾರ್ಟರ್ ಮತ್ತು ಅಂತಾರಾಷ್ಟ್ರೀಯ ಕಾನೂನಿನ ಮೂಲಭೂತ ತತ್ವಗಳು ಹಾಗೂ ನಿಯಮಗಳ ಉಲ್ಲಂಘನೆಯಾಗಿದೆ ಎಂದು ವಿದೇಶಾಂಗ ಸಚಿವರು ತಿಳಿಸಿದ್ದಾರೆ. ಈ ಮಿಲಿಟರಿ ಆಕ್ರಮಣ ಮತ್ತು ಬಹಿರಂಗ ಕಾನೂನು ಉಲ್ಲಂಘನೆಯನ್ನು ಖಂಡಿಸುವುದು ಎಲ್ಲಾ ಸರ್ಕಾರಗಳ ಜವಾಬ್ದಾರಿಯಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ” ಎಂದು ಬರೆದುಕೊಂಡಿದೆ.

“ಇರಾನ್ ಮತ್ತು ಭಾರತದ ವಿದೇಶಾಂಗ ಸಚಿವರು ಅಮೆರಿಕ ಮತ್ತು ಇಸ್ರೇಲ್ ಆಡಳಿತದ ಮಿಲಿಟರಿ ಆಕ್ರಮಣದಿಂದ ಹಾರ್ಮುಜ್ ಜಲಸಂಧಿಯ ಮೂಲಕ ನಡೆಯುವ ಹಡಗು ಮತ್ತು ನೌಕೆಗಳ ಸಂಚಾರದ ಭದ್ರತೆಯ ಮೇಲಾಗುವ ಪರಿಣಾಮಗಳ ಕುರಿತು ಚರ್ಚಿಸಿದ್ದಾರೆ” ಎಂದು ತಿಳಿಸಿದೆ.

“ಪರ್ಷಿಯನ್ ಕೊಲ್ಲಿಯಲ್ಲಿ ಹಡಗು ಸಂಚಾರದ ಭದ್ರತೆಯನ್ನು ಕಾಪಾಡುವಲ್ಲಿ ಇರಾನ್‌ನ ತತ್ವಬದ್ಧ ನಿಲುವನ್ನು ಉಲ್ಲೇಖಿಸಿದ ವಿದೇಶಾಂಗ ಸಚಿವರು, ಪರ್ಷಿಯನ್ ಕೊಲ್ಲಿಯಲ್ಲಿ ಹಡಗು ಸಂಚಾರಕ್ಕೆ ಉಂಟಾಗಿರುವ ಅಸುರಕ್ಷಿತ ಸ್ಥಿತಿ ಮತ್ತು ಸಮಸ್ಯೆಗಳು ಅಮೆರಿಕದ ಆಕ್ರಮಣಕಾರಿ ಮತ್ತು ಅಸ್ಥಿರಗೊಳಿಸುವ ಕ್ರಮಗಳ ಫಲಿತಾಂಶವಾಗಿದೆ ಎಂದು ನೆನಪಿಸಿದ್ದಾರೆ. ಈ ಪರಿಸ್ಥಿತಿಗೆ ಅಂತಾರಾಷ್ಟ್ರೀಯ ಸಮುದಾಯವು ಅಮೆರಿಕವನ್ನೇ ಹೊಣೆಗಾರರನ್ನಾಗಿ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ” ಎಂದಿದೆ.

“ಭಾರತದ ವಿದೇಶಾಂಗ ಸಚಿವರು, ಟೆಹ್ರಾನ್ (ಇರಾನ್) ಮತ್ತು ನವದೆಹಲಿ (ಭಾರತ) ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಮುಂದುವರಿಸುವ ಮತ್ತು ಬಲಪಡಿಸುವ ಮಹತ್ವವನ್ನು ಒತ್ತಿಹೇಳಿದ್ದಾರೆ. ಇದರೊಂದಿಗೆ, ಈ ಪ್ರದೇಶದಲ್ಲಿ ಸ್ಥಿರತೆಯನ್ನು ಮರುಸ್ಥಾಪಿಸಲು ಉಭಯ ದೇಶಗಳ ನಡುವೆ ನಿರಂತರ ಸಮಾಲೋಚನೆ ನಡೆಸುವ ಅಗತ್ಯವನ್ನು ಅವರು ಪ್ರತಿಪಾದಿಸಿದರು” ಎಂದು ಇರಾನ್ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...