Homeಮುಖಪುಟಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ.

ರತುವಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಡಿ ಮೊತ್ತಕೀನ್ ಆಲಂ ಅವರ ಹೆಸರನ್ನು ಮರು ಸೇರ್ಪಡೆಗೊಳಿಸುವಂತೆ ನ್ಯಾಯಮಂಡಳಿ ಆದೇಶಿಸಿದೆ. ಈ ಕ್ಷೇತ್ರದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೋಮವಾರ ಕೊನೆಯ ದಿನವಾಗಿತ್ತು ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ಮೇಲ್ಮನವಿ ನ್ಯಾಯಮಂಡಳಿಯ ಆದೇಶದ ನಂತರ, ಅಂತಿಮ ಕ್ಷಣದಲ್ಲಿ ಆಲಂ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ. ತನ್ನ ಹೆಸರು ತೆಗೆದು ಹಾಕಿರುವ ಸಂಬಂಧ ಆಲಂ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್ ಸೋಮವಾರ ಮಧ್ಯಾಹ್ನ 12.30ರೊಳಗೆ ಆಲಂ ಅವರ ಪ್ರಕರಣವನ್ನು ಇತ್ಯರ್ಥಪಡಿಸುವಂತೆ ನ್ಯಾಯಮಂಡಳಿಗೆ ಆದೇಶಿಸಿತ್ತು.

ಆಲಂ ಅವರ ಆದೇಶ ಸೋಮವಾರ ಬಂದರೆ, ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ನ್ಯಾಯಮಂಡಳಿ ಭಾನುವಾರ ಆದೇಶಿಸಿತ್ತು. ಮೊತಾಬ್ ಶೇಖ್ ಕೂಡ ಸುಪ್ರೀಂ ಕೋರ್ಟ್ ಕದ ತಟ್ಟಿದ್ದರು.

ಆಲಂ ಅವರ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ನ್ಯಾಯಾಂಗ ಅಧಿಕಾರಿ, ವಿಚಾರಣೆಯ ಸಮಯದಲ್ಲಿ ಆಲಂ ಸಲ್ಲಿಸಿದ ದಾಖಲೆಗಳಲ್ಲಿ ತಂದೆಯ ಹೆಸರು ವಿಭಿನ್ನವಾಗಿದೆ. ಆಲಂ ಮತ್ತು ಅವರ ಪೋಷಕರ ವಯಸ್ಸಿನ ಅಂತರವು ತುಂಬಾ ಹೆಚ್ಚಾಗಿದೆ ಎಂದು ಹೇಳಿರುವುದನ್ನು ನ್ಯಾಯಮಂಡಳಿ ಗಮನಿಸಿದೆ.

“ಅರ್ಜಿದಾರರ (ಆಲಂ) ಪೋಷಕರು ಯಾರು ಎಂದು ಪ್ರಶ್ನಿಸುವ ಅಧಿಕಾರ ತನಿಖಾಧಿಕಾರಿಗೆ ಇಲ್ಲ. ಅಂತಹ ಅಧಿಕಾರ ಇರುವುದಕ್ಕೆ ಯಾವುದೇ ಪುರಾವೆಯೂ ಇಲ್ಲ. ಆದ್ದರಿಂದ, ಕೇವಲ ಪೋಷಕರ ಬಗ್ಗೆ ಸಂಶಯವಿದೆ ಎಂಬ ಕಾರಣಕ್ಕೆ ಅರ್ಜಿದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಲು ಸಾಧ್ಯವಿಲ್ಲ” ಎಂದು ನ್ಯಾಯಮಂಡಳಿ ಹೇಳಿದೆ.

ನ್ಯಾಯಮಂಡಳಿಯ ನಿವೃತ್ತ ಮುಖ್ಯ ನ್ಯಾಯಮೂರ್ತಿ ಟಿ.ಎಸ್. ಶಿವಜ್ಞಾನಂ ಅವರು, ಆಲಂ ನವೆಂಬರ್ ತಿಂಗಳಲ್ಲೇ ಅಗತ್ಯ ದಾಖಲೆಗಳೊಂದಿಗೆ ತಮ್ಮ ವಿವರಗಳ ನಮೂನೆಯನ್ನು ಸಲ್ಲಿಸಿದ್ದರು ಎಂಬುದನ್ನು ತಮ್ಮ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಆಲಂ ಅವರ ತಂದೆಯ ಹೆಸರು ಇಂಗ್ಲಿಷ್ ಬಜಾರ್ ವಿಧಾನಸಭಾ ಕ್ಷೇತ್ರದ 1971ರ ಮತ್ತು 2002ರ ಮತದಾರರ ಪಟ್ಟಿಯಲ್ಲಿ ಕಂಡುಬಂದಿದೆ. ಅಷ್ಟೇ ಅಲ್ಲದೆ, ಆಲಂ ಅವರು 2016ರ ವಿಧಾನಸಭಾ ಚುನಾವಣೆಯಲ್ಲಿ ಮಾಣಿಕ್‌ಚಕ್ ಕ್ಷೇತ್ರದಿಂದ ಗೆದ್ದಿದ್ದರು ಎಂಬ ಅಂಶವನ್ನೂ ನ್ಯಾಯಮೂರ್ತಿ ಗಮನಿಸಿದ್ದಾರೆ.

ಚುನಾವಣಾ ಆಯೋಗವು ಪರಿಷ್ಕರಣಾ ಪ್ರಕ್ರಿಯೆಯ ಸಮಯದಲ್ಲಿ ಆಲಂ ಅವರಿಗೆ ನೋಟಿಸ್ ನೀಡಿತ್ತು. ದಾಖಲೆಗಳಲ್ಲಿ ಅವರ ತಂದೆಯ ಹೆಸರಿನಲ್ಲಿ ವ್ಯತ್ಯಾಸವಿದೆ ಎಂದು ಹೇಳಿತ್ತು. ಆಲಂ ಮತ್ತು ಅವರ ಪೋಷಕರ ನಡುವಿನ ವಯಸ್ಸಿನ ಅಂತರವು 50 ವರ್ಷಗಳಿಗಿಂತ ಹೆಚ್ಚಿದೆ ಎಂದಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...