ಬಂಗಾಳ ಚುನಾವಣೆ: ಕೊರೊನಾಗೆ ಬಲಿಯಾದ ಅಭ್ಯರ್ಥಿಗಳ ಸಂಖ್ಯೆ ನಾಲ್ಕಕ್ಕೆ ಏರಿಕೆ
PC: Telegraphindia

ಕೊರೊನಾ ಎರಡನೇ ಅಲೆಯ ನಡುವೆಯೇ ಪಶ್ಚಿಮ ಬಂಗಾಳ ಎಂಟು ಹಂತದ ಚುನಾವಣೆಯನ್ನು ಎದುರಿಸುತ್ತಿದೆ. ಇದರ ನಡುವೆ ಇಲ್ಲಿಯವರೆಗೂ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ನಾಲ್ವರು ಅಭ್ಯರ್ಥಿಗಳು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಸೋಮವಾರ (ಏಪ್ರಿಲ್ 26) ರ ರಾತ್ರಿ ಕೊರೊನಾ ಸೋಂಕು ದೃಢಪಟ್ಟ ನಂತರ ಅಭ್ಯರ್ಥಿ ಸಮೀರ್ ಘೋಷ್ (42) ಮೃತರಾಗಿದ್ದಾರೆ. ಸಮೀರ್ ಘೋಷ್ ಮಾಲ್ಡಾ ಜಿಲ್ಲೆಯ ಬೈಸ್ನಾಬ್‌ನಗರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಬೈಸ್ನಾಬ್‌ನಗರಕ್ಕೆ ಏಪ್ರಿಲ್ 29 ರ ಗುರುವಾರ ಬಂಗಾಳದ ಕೊನೆಯ ಮತ್ತು ಎಂಟನೇ ಹಂತದಲ್ಲಿ ಮತದಾನ ನಡೆಯಲಿದೆ.

ಚುನಾವಣೆಯಲ್ಲಿ ಸ್ಪರ್ಧಿಸಿರುವ ಕೇಂದ್ರ ಸಚಿವ, ಕೊಲ್ಕತ್ತಾದ ಟಾಲಿಗಂಜ್‌ನ ಬಿಜೆಪಿ ಅಭ್ಯರ್ಥಿ ಬಾಬುಲ್ ಸುಪ್ರಿಯೋ ಕೂಡ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ.

ಇದನ್ನೂ ಓದಿ: ಕೊರೊನಾ ಸೋಂಕಿತ ವರ, ಪಿಪಿಇ ಕಿಟ್ ಧರಿಸಿದ ವಧು: ಮದುವೆ ಮಂಟಪವಾದ ಕೋವಿಡ್ ವಾರ್ಡ್!

ಮುರ್ಷಿದಾಬಾದ್‌ನ ಜಂಗೀಪುರದ ಕ್ರಾಂತಿಕಾರಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಪ್ರದೀಪ್ ಕುಮಾರ್‌ ನಂದಿ, ಅದೇ ಜಿಲ್ಲೆಯಿಂದ ಸ್ಪರ್ಧಿಸುತ್ತಿದ್ದ ಕಾಂಗ್ರೆಸ್ಸಿನ ರೆಝಾಲ್ ಹಾಕ್ ಮತ್ತು ಉತ್ತರ 24 ಪರಗಣಗಳ ಖಾರ್ದಾಹಾದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ಕಾಜಲ್ ಸಿನ್ಹಾ ಸಹ ಕೊರೊನಾ ಸೋಂಕಿನಿಂದ ನಿಧನರಾಗಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಸುಮಾರು 95,000 ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ ಸುಮಾರು 16,000 ಹೊಸ ಪ್ರಕರಣಗಳು ಮತ್ತು 68 ಸಾವುಗಳು ವರದಿಯಾಗಿವೆ.

ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಸೋಂಕುಗಳು, ಔಷಧಿಗಳು ಮತ್ತು ಆಮ್ಲಜನಕದ ಕೊರತೆಯ ಮಧ್ಯೆ ಸೋಮವಾರ ನಡೆದ ಏಳನೇ ಹಂತದ ಮತದಾನದಲ್ಲಿ ಇದುವರೆಗೆ ನಡೆದ ಅತಿ ಕಡಿಮೆ (ಸರಿಸುಮಾರು 75%) ಮತದಾನವಾಗಿರುವುದು ಕಂಡು ಬಂದಿದೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕೊರೊನಾ ಸುರಕ್ಷತಾ ಮಾನದಂಡಗಳನ್ನು ಜಾರಿಗೆ ತರಲು ಚುನಾವಣಾ ಆಯೋಗ ಕೈಗೊಂಡ ಕ್ರಮಗಳ ಬಗ್ಗೆ ಕಲ್ಕತ್ತಾ ಹೈಕೋರ್ಟ್ ಕಳೆದ ವಾರ ಅಸಮಾಧಾನ ವ್ಯಕ್ತಪಡಿಸಿದೆ.

ಏಪ್ರಿಲ್ 06 ರಂದು ತಮಿಳುನಾಡು, ಕೇರಳ ಮತ್ತು ಪುದುಚೇರಿಯ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿದೆ. ಅಸ್ಸಾಂನ್ಲಲಿ ಮೂರು ಹಂತಗಳಲ್ಲಿ ಮತ್ತು ಪಶ್ಚಿಮ ಬಂಗಾಳದಲ್ಲಿ ಚುನಾವಣೆಯನ್ನು ಎಂಟು ಹಂತಗಳಲ್ಲಿ ನಿಗದಿಪಡಿಸಲಾಗಿತ್ತು. ಬಂಗಾಳದಲ್ಲಿ ಮಾರ್ಚ್ 27 ರಂದು ಆರಂಭವಾಗಿರುವ ಮತದಾನ ಏಪ್ರಿಲ್ 29 ಕ್ಕೆ ಕೊನೆಗೊಳ್ಳಲಿದೆ. ಮೇ 2 ರಂದು ಮತಎಣಿಕೆ ನಡೆಯಲಿದೆ.


ಇದನ್ನೂ ಓದಿ: 9 ವರ್ಷದಿಂದ ಯಾವುದೆ ಲಸಿಕೆ ಉತ್ಪಾದಿಸದ ಅತ್ಯಾಧುನಿಕ ಸರ್ಕಾರಿ ವ್ಯಾಕ್ಸಿನ್‌ ಕಾಂಪ್ಲೆಕ್ಸ್!

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
Avatar
ನಾನು ಗೌರಿ ಡೆಸ್ಕ್
+ posts

LEAVE A REPLY

Please enter your comment!
Please enter your name here