Homeಮುಖಪುಟಬಂಗಾಳ ಚುನಾವಣೆ: ನಂದಿಗ್ರಾಮದಲ್ಲಿ ಸುವೇಂದು ಅಧಿಕಾರಿ ರ್‍ಯಾಲಿ, ಹೋಮ

ಬಂಗಾಳ ಚುನಾವಣೆ: ನಂದಿಗ್ರಾಮದಲ್ಲಿ ಸುವೇಂದು ಅಧಿಕಾರಿ ರ್‍ಯಾಲಿ, ಹೋಮ

ಮಮತಾ ಬ್ಯಾನರ್ಜಿಯವರ ಆಪ್ತರಾಗಿದ್ದ ಸುವೇಂದು ಅಧಿಕಾರಿ ಈಗ ಬಿಜೆಪಿ ಅಭ್ಯರ್ಥಿಯಾಗಿ ನಂದಿಗ್ರಾಮ ಕ್ಷೇತ್ರದಿಂದ ಕಣಕ್ಕಿಳಿಯುತ್ತಿದ್ದಾರೆ.

- Advertisement -
- Advertisement -

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ನಂದಿಗ್ರಾಮ ಕ್ಷೇತ್ರ ಈ ಬಾರಿ ಎಲ್ಲರ ಕೇಂದ್ರಬಿಂದುವಾಗಿದೆ. ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಸುವೇಂದು ಅಧಿಕಾರಿಯ ಪ್ರಾಬಲ್ಯದ ಕ್ಷೇತ್ರ ಅದು. ಹಾಗಾಗಿ ಸ್ವಕ್ಷೇತ್ರ ಭವಾನಿಪೋರ್ ಬಿಟ್ಟು ಸಿಎಂ ಮಮತಾ ಬ್ಯಾನರ್ಜಿಗೆ ನಂದಿಗ್ರಾಮದಿಂದಲೇ ಸ್ಪರ್ಧಿಸುತ್ತಿದ್ದಾರೆ. ಅಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಶುಕ್ರವಾರ (ಮಾರ್ಚ್ 12)  ಸುವೇಂದು ಅಧಿಕಾರಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಎದುರಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಕಾರಣಕ್ಕಾಗಿ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿಈ ಕ್ಷೇತ್ರ ಎಲ್ಲರ ಚಿತ್ತವನ್ನು ತನ್ನೆಡೆಗೆ ಸೆಳೆದುಕೊಂಡಿದೆ.

ಕಳೆದ ಶನಿವಾರ ಬಿಜೆಪಿ ಪಶ್ಚಿಮ ಬಂಗಾಳ ಚುನಾವಣೆಗೆ 57 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ನಂದಿಗ್ರಾಮದಿಂದ ಸುವೇಂದು ಅವರನ್ನು ಕಣಕ್ಕಿಳಿಸಿದೆ. ಸಿಪಿಐ(ಎಂ) ಪಕ್ಷದಿಂದ ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‌ಐ)ದ ರಾಜ್ಯ ಅಧ್ಯಕ್ಷೆ ಮಿನಾಕ್ಷಿ ಮುಖರ್ಜಿ ನಂದಿಗ್ರಾಮದಲ್ಲಿ ಸ್ಪರ್ಧಿಸಲಿದ್ದಾರೆ.

ಇದನ್ನೂ ಓದಿ: ಭ್ರಷ್ಟ ನಾಯಕರನ್ನು ಖರೀದಿಸಬಹುದು; ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನಲ್ಲ – ಮಮತ ಬ್ಯಾನರ್ಜಿ

ಎರಡು ದಿನಗಳ ಹಿಂದಷ್ಟೇ ನಂದಿಗ್ರಾಮದಲ್ಲಿ ಪಾದಯಾತ್ರೆ, ರ್‍ಯಾಲಿ ಮಾಡಿ ನಾಮಪತ್ರ ಸಲ್ಲಿಕೆ ಮಾಡಿ ವಾಪಾಸ್ ಆಗುತ್ತಿದ್ದ ಮಮತಾ ಬ್ಯಾನರ್ಜಿಯವರ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಿದ್ದಾರೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಜೆಪಿ ಇದನ್ನು ರಾಜಕೀಯಕ್ಕಾಗಿ ನಡೆಸುತ್ತಿರುವ ನಾಟಕ ಎಂದಿದೆ. ಆದರೆ ದೇಶಾದ್ಯಂತ ಪಕ್ಷಾತೀತವಾಗಿ ಹಲವು ಮುಖಂಡರು ಮಮತಾ ಬ್ಯಾನರ್ಜಿ ಮೇಲಿನ ಹಲ್ಲೆಯನ್ನು ಖಂಡಿಸಿ, ಬೇಗ ಗುಣಮುಖರಾಗಲಿ ಎಂದು ಹರಸಿದ್ದಾರೆ.

ಶುಕ್ರವಾರ ಬೆಳಗ್ಗೆಯಿಂದಲೇ ಬಿಜೆಪಿ ಅಭ್ಯರ್ಥಿಯಾಗಿರುವ ಸುವೇಂದು ಅಧಿಕಾರಿ, ನಂದಿಗ್ರಾಮದಲ್ಲಿ ಹಲವು ದೇವಾಲಯಗಳಲ್ಲಿ ಪೂಜೆ, ಹವನ ಮಾಡಿಸುತ್ತಿದ್ದಾರೆ. ದೊಡ್ಡ ರ್‍ಯಾಲಿಯನ್ನು ನಡೆಸಲಾಗುತ್ತಿದೆ. ನಂತರ ಬಿಜೆಪಿ ನಾಯಕರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ ಮಾಡಲಾಗುತ್ತದೆ ಎನ್ನಲಾಗಿದೆ.

Image
PC:Twitter@SuvenduWB

’ನಂದಿಗ್ರಾಮದ ಜನರಿಗೂ ನನಗೂ ತುಂಬಾ ಹಳೆಯ ಸಂಬಂಧವಿದೆ. ಮಮತಾ ಬ್ಯಾನರ್ಜಿ 5 ವರ್ಷಕ್ಕೆ ಒಮ್ಮೆ ಚುನಾವಣೆ ಬಂದಾಗ ಅವರನ್ನು ನೆನಪಿಸಿಕೊಳ್ಳುತ್ತಾರೆ. ಈ ಬಾರಿ ಜನ ಅವರನ್ನು ಸೋಲಿಸುತ್ತಾರೆ. ನಾನು ನಂದಿಗ್ರಾಮದ ಮತದಾರ. ಇಂದು ನಾನು ನಾಮಪತ್ರ ಸಲ್ಲಿಸುತ್ತೇನೆ’ ಎಂದು ಸುವೇಂದು ಅಧಿಕಾರಿ ನಂದಿಗ್ರಾಮದಲ್ಲಿ ಹೇಳಿದ್ದಾರೆ.


ಇದನ್ನೂ ಓದಿ: ಬೆಂಬಲಿಗರಿಗೆ ಆಸ್ಪತ್ರೆಯಿಂದಲೇ ವಿಡಿಯೊ ಸಂದೇಶ: ಮಮತಾ ಬ್ಯಾನರ್ಜಿ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...