Homeಮುಖಪುಟಪಶ್ಚಿಮ ಬಂಗಾಳ: ವಿಧಾನ ಪರಿಷತ್ ರಚಿಸುವ ನಿರ್ಣಯ ಅಂಗೀಕಾರ, ಬಿಜೆಪಿ ತಂತ್ರಕ್ಕೆ ಟಿಎಂಸಿ ಪ್ರತಿತಂತ್ರವೇ?

ಪಶ್ಚಿಮ ಬಂಗಾಳ: ವಿಧಾನ ಪರಿಷತ್ ರಚಿಸುವ ನಿರ್ಣಯ ಅಂಗೀಕಾರ, ಬಿಜೆಪಿ ತಂತ್ರಕ್ಕೆ ಟಿಎಂಸಿ ಪ್ರತಿತಂತ್ರವೇ?

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭೆಯು ಮಂಗಳವಾರ (ಜುಲೈ 6) ಭಾರತ ಸಂವಿಧಾನದ 169 ನೇ ವಿಧಿ ಅನ್ವಯ ರಾಜ್ಯದಲ್ಲಿ ವಿಧಾನ ಪರಿಷತ್ ರಚಿಸುವ ನಿರ್ಣಯವನ್ನು ಅಂಗೀಕರಿಸಿದೆ.

ವಿಧಾನಸಭೆಯಲ್ಲಿ ಹಾಜರಿದ್ದ ಒಟ್ಟು 265 ಸದಸ್ಯರಲ್ಲಿ 196 ಶಾಸಕರು ನಿರ್ಣಯದ ಪರವಾಗಿ ಮತ ಚಲಾಯಿಸಿದರೆ, 69 ಮಂದಿ ಇದರ ವಿರುದ್ಧ ಮತ ಚಲಾಯಿಸಿದ್ದಾರೆ.

ಶಾಸಕಾಂಗ ಮಂಡಳಿಯ ರಚನೆಯು ವಿಧಾನಸಭಾ ಚುನಾವಣೆಯಲ್ಲಿ ಪ್ರಣಾಳಿಕೆಯಲ್ಲಿ ಕಾಣಿಸಿಕೊಂಡ  ಭರವಸೆಗಳಲ್ಲಿ ಒಂದಾಗಿದೆ. ವಿಧಾನಸಭೆ ಚುನಾವಣೆಯ ನಂತರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ಪ್ರಸ್ತಾಪಕ್ಕೆ ಅನುಮೋದನೆ ನೀಡಿದ್ದರು. ಈ ನಿರ್ಣಯವನ್ನು ಅಂಗೀಕರಿಸಲು ಮತದಾನ ನಡೆದ ಸಂದರ್ಭದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸದನದಲ್ಲಿ ಹಾಜರಿರಲಿಲ್ಲ ಎಂಬುದು ವಿಶೇಷ.

ಇದನ್ನೂ ಓದಿ: ಬಂಗಾಳ ರಾಜ್ಯಪಾಲರನ್ನು ಕಿತ್ತು ಹಾಕಲು ಒಕ್ಕೂಟ ಸರ್ಕಾರಕ್ಕೆ ಪತ್ರ ಬರೆದ ಮಮತಾ ಬ್ಯಾನರ್ಜಿ

ವಿರೋಧ ಪಕ್ಷ ನಾಯಕ, ಬಿಜೆಪಿಯ ಸುವೇಂಧು ಅಧಿಕಾರಿಯು ಈ ನಿರ್ಣಯವು ರಾಜ್ಯದಲ್ಲಿ ಆರ್ಥಿಕವಾಗಿ ಸೂಕ್ತವಲ್ಲ ಎಂದು ವಿರೋಧಿಸಿದ್ದಾರೆ. ಜೊತೆಗೆ ಈ ವಿಧಾನ ಪರಿಷತ್ ರಚಿಸುವ ನಿರ್ಣಯದಿಂದ ವಿಧಾನಸಭಾ ಚುನಾವಣೆಯಲ್ಲಿ ಸೋತ ಟಿಎಂಸಿ ಅಭ್ಯರ್ಥಿಗಳಿಗೆ, ಮುಖಂಡರಿಗೆ ಅವಕಾಶ ಕಲ್ಪಿಸುವ ಟಿಯಂಸಿಯ ತಂತ್ರವಾಗಿದೆ ಎಂದು ಆರೋಪಿಸಿದ್ದಾರೆ.

“ದೇಶದ 23 ರಾಜ್ಯಗಳಲ್ಲಿ ವಿಧಾನ ಪರಿಷತ್ ಇಲ್ಲ. ರಾಜ್ಯಗಳ ಆಡಳಿತಕ್ಕೆ ಇದು ಒಳ್ಳೆಯದಲ್ಲ. ಟಿಎಂಸಿಯು ಚುನಾವಣೆಯಲ್ಲಿ ಮುಖ್ಯಮಂತ್ರಿ ಸೇರಿದಂತೆ 7 ರಿಂದ 8 ಮಂತ್ರಿಗಳನ್ನು ಕಳೆದುಕೊಂಡಿದೆ. ಅವರನ್ನು ವಿಧಾನ ಪರಿಷತ್ ಮೂಲಕ ರಾಜಕೀಯಕ್ಕೆ ಹಿಂಬಾಗಿಲಿನ ಪ್ರವೇಶ ನೀಡಲು ಟಿಎಂಸಿ ಪ್ರಯತ್ನಿಸುತ್ತಿದೆ” ಎಂದು ಸುವೇಂಧು ಅಧಿಕಾರಿ ಆರೋಪಿಸಿದ್ದಾರೆ. “ಸಂಸತ್ತಿನಲ್ಲಿ ಬಿಜೆಪಿಗೆ ಬಹುಮತವಿದೆ. ಈ ನಿರ್ಣಯವನ್ನು ವಿರೋಧಿಸುವುದು ನಮ್ಮ ನಿರ್ಧಾರ” ಎಂದು ಹೇಳಿದ್ದಾರೆ.

ಇನ್ನು, ಪಶ್ಚಿಮ ಬಂಗಾಳ ವಿಧಾನಸಭೆ ನಿರ್ಣಯವನ್ನು ಅಂಗೀಕರಿಸಿದರೂ, ಪರಿಷತ್ ಸ್ಥಾಪಿಸುವ ಸಲುವಾಗಿ, ಸಂಸತ್ತಿನಲ್ಲಿ ಮಸೂದೆಯನ್ನು ಅಂಗೀಕರಿಸಬೇಕಾಗುತ್ತದೆ. ಈ ವಿಷಯದಲ್ಲಿ ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರದ ಪಾತ್ರ ನಿರ್ಣಾಯಕವಾಗಲಿದೆ.

ಇದನ್ನೂ ಓದಿ: ನಿಯಂತ್ರಿಸಲು ಸಾಧ್ಯವಾಗದ ಎಲ್ಲವನ್ನೂ ಮೋದಿ ಸರ್ಕಾರ ಧ್ವಂಸ ಮಾಡುತ್ತಿದೆ: ಮಮತಾ ಬ್ಯಾನರ್ಜಿ

ಗಮನಾರ್ಹವಾಗಿ, ಈ ಮೊದಲು ಪಶ್ಚಿಮ ಬಂಗಾಳದಲ್ಲಿ 1952 ರಲ್ಲಿ ಮೇಲ್ಮನೆ ಅಸ್ತಿತ್ವಕ್ಕೆ ಬಂದಿತ್ತು. ಆದರೆ, ರಾಜ್ಯ ವಿಧಾನಸಭೆಯಲ್ಲಿ ವಿಧಾನ ಪರಿಷತ್ ರದ್ದುಗೊಳಿಸುವ ನಿರ್ಣಯವನ್ನು ಮಾರ್ಚ್ 21, 1969 ರಂದು ಅಂಗೀಕರಿಸಲಾಗಿತ್ತು.

ಪ್ರಸ್ತುತ  ಆಂಧ್ರ ಪ್ರದೇಶ, ಬಿಹಾರ, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ ಮತ್ತು ಉತ್ತರ ಪ್ರದೇಶ  ಸೇರಿ ದೇಶದ ಒಟ್ಟು ಆರು ರಾಜ್ಯಗಳಲ್ಲಿ ಮಾತ್ರ ವಿಧಾನ ಪರಿಷತ್ ಇದೆ. ಉಳಿದ ಕಡೆ ಜನರಿಂದ ನೇರವಾಗಿ ಆಯ್ಕೆಯಾದರೆ ಮಾತ್ರ ಶಾಸಕಾಂಗದಲ್ಲಿ ಸ್ಥಾನ ಪಡೆಯಬಹುದಾಗಿದೆ.

ಚುನಾವಣಾ ಆಯೋಗ ಕೊರೊನಾ ಹೆಸರಲ್ಲಿ ಯಾವುದೆ ಉಪಚುನಾವಣೆ ನಡೆಸಲು ಮುಂದೆ ಬರುತ್ತಿಲ್ಲ. ಹಾಗಾಗಿ ಮಮತಾ ಬ್ಯಾನರ್ಜಿ ಆರು ತಿಂಗಳೊಳಗೆ ಶಾಸಕಿಯಾಗದಿದ್ದಲ್ಲಿ ಉತ್ತರಾಖಂಡದ ಮಾದರಿಯಲ್ಲಿ ರಾಜೀನಾಮೆ ನೀಡಬೇಕು ಎಂಬುದು ಬಿಜೆಪಿ ಒತ್ತಾಯ. ಆ ಮೂಲಕ ಅವರಿಗೆ ಮುಖಭಂಗ ಮಾಡಲು ಬಿಜೆಪಿ ಉತ್ತರಾಖಂಡದಲ್ಲಿ ತಿರತ್ ಸಿಂಗ್‌ ರಾವತ್‌ರನ್ನು ಕೆಳಗಿಳಿಸಿದೆ ಎಂಬ ವದಂತಿಗಳು ಹರಿದಾಡುತ್ತಿವೆ. ಆದರೆ ಬಿಜೆಪಿಗೆ ತಿರುಗೇಟು ನೀಡಲು ಮುಂದಾಗಿರುವ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರ ವಿಧಾನ ಪರಿಷತ್ ರಚನೆಗೆ ಮುಂದಾಗಿದೆ.


ಇದನ್ನೂ ಓದಿ: Explainer: ಬಿಜೆಪಿಯು ಉತ್ತರಾಖಂಡ ಸಿಎಂ ಬದಲಿಸಿದ್ದು ಮಮತಾ ಬ್ಯಾನರ್ಜಿಯನ್ನು ಕೆಳಗಿಳಿಸಲೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...