ಮಹಿಳೆಯರಿಗೆ ಬಾರ್‌ಗಳಲ್ಲಿ ಕೆಲಸ ಮಾಡಲು ಅವಕಾಶ ನೀಡುವ ಮಸೂದೆಯನ್ನು ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಅಂಗೀರಿಸಿದ್ದು, ಇದನ್ನು ವಿರೋಧಿಸಿ ಬಿಜೆಪಿಯ ಮಹಿಳಾ ವಿಭಾಗ ಶನಿವಾರ ಕೊಲ್ಕತ್ತಾದಲ್ಲಿ ಪ್ರತಿಭಟನೆ ನಡೆಸಿದೆ.
ತೃಣಮೂಲ ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ಮಹಿಳೆಯರಿಗೆ ಉದ್ಯೋಗಾವಕಾಶಗಳನ್ನು ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದು ಬಿಜೆಪಿ ಮಹಿಳಾ ಘಟಕದ ನಾಯಕಿ ಫಲ್ಗುಣಿ ಪಾತ್ರಾ ಹೇಳಿದ್ದು, ಹಾಗಾಗಿಯೆ ಆಡಳಿತರೂಢ ಪಕ್ಷವು ಇಂತಹ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಉತ್ತರ ಕೋಲ್ಕತ್ತಾದ ಕಾಲೇಜು ಚೌಕದಿಂದ ಸುಮಾರು ಎರಡು ಕಿಲೋಮೀಟರ್ ದೂರದಲ್ಲಿರುವ ಬೌಬಜಾರ್‌ನಲ್ಲಿರುವ ಅಬಕಾರಿ ಇಲಾಖೆಯ ಪ್ರಧಾನ ಕಚೇರಿಯವರೆಗೆ ಬಿಜೆಪಿ ಪ್ರತಿಭಟಣಾ ಮೆರವಣಿಗೆ ನಡೆಸಿದೆ.
ಪಶ್ಚಿಮ ಬಂಗಾಳ ವಿಧಾನಸಭೆಯು ಬುಧವಾರ 1909 ರ ಬಂಗಾಳ ಅಬಕಾರಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಮಹಿಳೆಯರಿಗೆ ಬಾರ್‌ಗಳಲ್ಲಿ ಕೆಲಸ ಮಾಡಲು ಅವಕಾಶ ನೀಡುವ ಮಸೂದೆಯನ್ನು ಅಂಗೀಕರಿಸಿತ್ತು.
“ರಾಜ್ಯವು ಜೀವನದ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಭದ್ರತೆಯನ್ನು ಒದಗಿಸುವಲ್ಲಿ ವಿಫಲವಾಗಿದೆ ಮತ್ತು ಈಗ ಅವರ ಸುರಕ್ಷತೆಯನ್ನು ಉಲ್ಲಂಘಿಸಬಹುದಾದ ಸ್ಥಳಗಳಲ್ಲಿ ಕೆಲಸ ಮಾಡಲು ಅವರನ್ನು ಒತ್ತಾಯಿಸಲಾಗುತ್ತಿದೆ” ಎಂದು ಬಿಜೆಪಿ ನಾಯಕಿ ಪಾತ್ರಾ ಹೇಳಿದ್ದಾರೆ.
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಗೌಪ್ಯ ದಾಖಲೆ ಪ್ರಕರಣದಲ್ಲಿ ಪತ್ರಕರ್ತ ಮಹೇಶ್ ಲಾಂಗಾಗೆ ಗುಜರಾತ್ ಹೈಕೋರ್ಟ್ ನಿರೀಕ್ಷಣಾ ಜಾಮೀನು
ಗೌಪ್ಯ ದಾಖಲೆ ಪ್ರಕರಣದಲ್ಲಿ ಪತ್ರಕರ್ತ ಮಹೇಶ್ ಲಾಂಗಾಗೆ ಗುಜರಾತ್ ಹೈಕೋರ್ಟ್ ನಿರೀಕ್ಷಣಾ ಜಾಮೀನು

