Homeಮುಖಪುಟಪಶ್ಚಿಮ ಬಂಗಾಳ: ಬಿಜೆಪಿಗೆ ಸೇರಿದ ನಟನನ್ನು ನಾಟಕದಿಂದ ಹೊರ ಹಾಕಿದ ತಂಡ!

ಪಶ್ಚಿಮ ಬಂಗಾಳ: ಬಿಜೆಪಿಗೆ ಸೇರಿದ ನಟನನ್ನು ನಾಟಕದಿಂದ ಹೊರ ಹಾಕಿದ ತಂಡ!

"ನಾಟಕವು ಮೂಲಭೂತವಾಗಿ ಬಿಜೆಪಿಯ ಸಿದ್ಧಾಂತಕ್ಕೆ ವಿರುದ್ಧವಾಗಿದೆ ಮತ್ತು ಆ ಪಕ್ಷದೊಂದಿಗೆ ಸಂಬಂಧ ಹೊಂದಿರುವ ಯಾರಾದರೂ ಘುಮ್ ನೀಯ ಭಾಗವಾಗಲು ಸಾಧ್ಯವಿಲ್ಲ"

- Advertisement -
- Advertisement -

ಬಿಜೆಪಿಗೆ ಸೇರಿದ ಕಾರಣಕ್ಕೆ ನಾಟಕ ತಂಡದಿಂದ ಕಲಾವಿದರೊಬ್ಬರನ್ನು ಹೊರ ಹಾಕಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಸಾಮಾಜಿಕ-ಆರ್ಥಿಕ ವಿಷಯಗಳನಿಟ್ಟುಕೊಂಡು ನಾಟಕಗಳನ್ನು ನಿರ್ಮಾಣ ಮಾಡುವ ಪಶ್ಚಿಮ ಬಂಗಾಳದ ಒಂದು ನಾಟಕ ತಂಡ, ತಮ್ಮ ತಂಡದ ನಟ ಬಿಜೆಪಿಗೆ ಸೇರಿದ ಕಾರಣ ಅವರನ್ನು ನಾಟಕದಿಂದ ಕೈಬಿಟ್ಟಿದೆ.

ತಂಡದ ಮುಖ್ಯಸ್ಥ ಸೌರವ್ ಪಲೋಧಿ ಅವರು ತಮ್ಮ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ, ಕಲಾವಿದ ಕೌಶಿಕ್ ಕಾರ್ ಅವರನ್ನು ನಾಟಕದಿಂದ ತೆಗೆದುಹಾಕಲಾಗಿದೆ ಎಂದು ಪೋಸ್ಟ್ ಮಾಡಿದ್ದರು. ಎಡ ಸಿದ್ಧಾಂತದ ಮೂಲಕ ದೇಶದ ಪ್ರಸ್ತುತ ರಾಜಕೀಯ ಪರಿಸ್ಥಿತಿಯ ಕುರಿತು ಉತ್ಪಾಲ್ ದತ್ ಅವರ ನಾಟಕದ ರೂಪಾಂತರ “ಘುಮ್ ನೀ” ನಾಟಕದಿಂದ ನಟನನ್ನು ತೆಗೆದು ಹಾಕಲಾಗಿದೆ.

ಗೋಮಾಂಸ ಇಟ್ಟುಕೊಂಡಿದ್ದ ಅನುಮಾನದ ಮೇಲೆ 2015 ರಲ್ಲಿ ಹಲ್ಲೆಗೊಳಗಾದ ವ್ಯಕ್ತಿಯ ಪಾತ್ರವನ್ನು ನಿರ್ವಹಿಸಲು, ಕಲಾವಿದ ಕೌಶಿಕ್ ಕಾರ್ ಅವರನ್ನು 2019 ರಲ್ಲಿ ಸೌರವ್ ಪಲೋಧಿಯವರ ನಾಟಕ ತಂಡ ಇಚೆಮೊಟೊ ಆಹ್ವಾನಿಸಿತ್ತು.

ಇದನ್ನೂ ಓದಿ: ಬಿಜೆಪಿಗೆ ಮತ ನೀಡದಂತೆ ಮದುವೆ ಮನೆಗಳಲ್ಲಿಯೂ ಅಭಿಯಾನ: #NoVoteToBJP ಟ್ವಿಟರ್ ಟ್ರೆಂಡ್

ಪಾಲೋಧಿ ಅವರು ಮೂರು ದಿನಗಳ ಹಿಂದೆ ಬಂಗಾಳಿಯಲ್ಲಿ ತಮ್ಮ ಫೇಸ್‌ಬುಕ್‌ನಲ್ಲಿ ಈ ಕುರಿತು ಪೋಸ್ಟ್ ಮಾಡಿದ್ದಾರೆ. “ನಾವು ಕೌಶಿಕ್ ಕಾರ್ ಅವರನ್ನು ‘ಘುಮ್ ನೇ’ಯಿಂದ ತಕ್ಷಣವೇ ತೆದುಹಾಕಿದ್ದೇವೆ. ಏಕೆಂದರೆ ಅವರು ಬಿಜೆಪಿಗೆ ಸೇರಿದ್ದಾರೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಅವರನ್ನು ತೆಗೆದುಹಾಕಲು ಇದಕ್ಕಿಂತ ಮುಖ್ಯ ಕಾರಣ ಬೇಕಾಗಿಲ್ಲ. ಕಾರ್ಮಿಕ ವರ್ಗದ ನಾಟಕದಲ್ಲಿ ಕೋಮು ಅಂಶಗಳಿಗಾಗಿ ಯಾವುದೇ ಸ್ಥಳವಿಲ್ಲ” ಎಂದಿದ್ದಾರೆ.

ಥಿಯೇಟರ್ ಗುಂಪು ಶೀಘ್ರದಲ್ಲೇ ಮುಂದಿನ ಘುಮ್ ನೀ ನಾಟಕ ನಡೆಯುವ ದಿನಾಂಕವನ್ನು ಪ್ರಕಟಿಸಲಿದೆ.

“ಇದು ಕಲಾವಿದರ ಸ್ವಾತಂತ್ರ್ಯದ ಉದಾಹರಣೆಯೆ..? ಪ್ರಜಾಪ್ರಭುತ್ವ ಹಕ್ಕು ಎಲ್ಲಿದೆ? ಒಬ್ಬ ಕಲಾವಿದನನ್ನು ಅವನ ಎಡಪಂಥೀಯ ಅಥವಾ ಬಲಪಂಥೀಯ ಒಲವುಗಳಿಂದ ನಿರ್ಣಯಿಸಬಹುದೇ? ಯಾವ ರಾಜಕೀಯ ಪಕ್ಷಕ್ಕೆ ಅವನು ಅಥವಾ ಅವಳು ಸೇರಬೇಕು ಎಂಬುದು ಅವರ ಇಚ್ಛೆ. ಯಾರಿಗೂ ಹಸ್ತಕ್ಷೇಪ ಮಾಡುವ ಹಕ್ಕಿಲ್ಲ” ಎಂದು ಅರ್ಕಾ ರಾಯ್ ಅವರಂತಹ ಬಳಕೆದಾರರು ಸಾಮಾಜಿಕ ಮಾಧ್ಯಮದಲ್ಲಿ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಭಾರತ ಈಗ ಪ್ರಜಾಪ್ರಭುತ್ವ ರಾಷ್ಟ್ರವಲ್ಲ: ಸ್ವೀಡನ್ ವರದಿ ಉಲ್ಲೇಖಿಸಿದ ರಾಹುಲ್ ಗಾಂಧಿ

ಸಾಮಾಜಿಕ ಜಾಲತಾಣಗಳ ಪೋಸ್ಟ್‌ಗಳಿಗೆ ಪ್ರತಿಕ್ರಿಯೆ ನೀಡಿರುವ ಪಲೋಧಿ, “ನಾಟಕವು ಮೂಲಭೂತವಾಗಿ ಬಿಜೆಪಿಯ ಸಿದ್ಧಾಂತಕ್ಕೆ ವಿರುದ್ಧವಾಗಿದೆ ಮತ್ತು ಆ ಪಕ್ಷದೊಂದಿಗೆ ಸಂಬಂಧ ಹೊಂದಿರುವ ಯಾರಾದರೂ ಘುಮ್ ನೀಯ ಭಾಗವಾಗಲು ಸಾಧ್ಯವಿಲ್ಲ” ಎಂದು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

“ಕೌಶಿಕ್ ಕಾರ್ ಅವರ ಪ್ರಸ್ತುತ ರಾಜಕೀಯ ಗುರುತನ್ನು ತಿಳಿದಿದ್ದರೂ ಸಹ, ನಾಟಕ ನಿರ್ಮಾಣದೊಂದಿಗೆ ಒಳಗೊಳ್ಳುವುದು ನಾಟಕದ ಉತ್ಸಾಹ ಮತ್ತು ಕಾರ್ಮಿಕ ವರ್ಗಕ್ಕೆ ತೀವ್ರ ಅನ್ಯಾಯವಾಗಲಿದೆ” ಎಂದಿದ್ದಾರೆ.

ಘಟನೆ ಬಗ್ಗೆ ಮಾತನಾಡಿರುವ ಕಲಾವಿದ ಕೌಶಿಕ್ ಕಾರ್‌, “ಇದು ಎಡಪಂಥೀಯ ಫ್ಯಾಸಿಸಂ” ನ ಅಭಿವ್ಯಕ್ತಿ ಎಂದಿದ್ದಾರೆ. “ಆರಾಮ ಕುರ್ಚಿಯ ಗಣ್ಯರು ಮಾತ್ರ, ಕಮ್ಯುನಿಸಂ ಕುರಿತು ಉಪನ್ಯಾಸಗಳನ್ನು ನೀಡುತ್ತಾರೆ. ಜನಸಾಮಾನ್ಯರೊಂದಿಗೆ ಅವರಿಗೆ ಯಾವುದೇ ಸಂಬಂಧವಿಲ್ಲ ಮತ್ತು ಪ್ರಗತಿಪರ ಸಾಂಸ್ಕೃತಿಕ ಚಳವಳಿಯ ಇತಿಹಾಸದ ಬಗ್ಗೆ ಅಜ್ಞಾನಿಗಳು ಅಂತಹ ನಿರ್ಧಾರ ತೆಗೆದುಕೊಳ್ಳಬಹುದು. ಏಕಪಕ್ಷೀಯ ನಿರ್ಧಾರದಿಂದ ನಾನು ಆಘಾತಕ್ಕೊಳಗಾಗಿದ್ದೇನೆ” ಎಂದಿದ್ದಾರೆ.


ಇದನ್ನೂ ಓದಿ: ಸರ್ಕಾರದ ಭೂಮಿ ಉಳಿಸಿಕೊಳ್ಳಲಾಗದವರು ಅಧಿಕಾರದಲ್ಲಿದ್ದೇನು ಪ್ರಯೋಜನ?-ಎಚ್‌.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...