ಪಶ್ಚಿಮ ಬಂಗಾಳದ ಭವಾನಿಪುರ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾದ ಇಂದು (ಸೆ.27) ಪ್ರಚಾರ ಮಾಡಲು ತೆರಳಿದ್ದ ಬಿಜೆಪಿ ರಾಜ್ಯ ಘಟಕದ ಮಾಜಿ ಅಧ್ಯಕ್ಷ ದಿಲೀಪ್ ಘೋಷ್ ಮೇಲೆ ಟಿಎಂಸಿ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ದಿಲೀಪ್ ಘೋಷ್ ಭಾನುವಾರ ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲ್ ಪರ ಮನೆ ಮನೆ ಪ್ರಚಾರ ಚುನಾವಣಾ ಪ್ರಚಾರ ನಡೆಸಲು ತೆರಳಿದ್ದರು. ಈ ವೇಳೆ ಟಿಎಂಸಿ ಕಾರ್ಯಕರ್ತರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಬಳಿಕ ಪ್ರಚಾರವನ್ನು ಮೊಟಕುಗೊಳಿಸಿ ವಾಪಸ್ ತೆರಳಿದ್ದಾರೆ.
ದಿಲೀಪ್ ಘೋಷ್ ಅವರ ಮೇಲೆ ಟಿಎಂಸಿ ಬೆಂಬಲಿಗರು ಹಲ್ಲೆ ನಡೆಸಿ, ತಳ್ಳಾಡಿದ್ದಾರೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ಸುಕಾಂತ ಮಜೂಂದಾರ್ ಅವರು ಹೇಳಿದ್ದಾರೆ. ಜಾದು ಬಾಬರ್ ಬಜಾರ್ ಬಳಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಬಿಜೆಪಿ ಕಾರ್ಯಕರ್ತರು ಗಾಯಗೊಂಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಭಾರತವನ್ನು ತಾಲಿಬಾನ್, ಪಾಕಿಸ್ತಾನ ಆಗಲು ಬಿಡುವುದಿಲ್ಲ- ಮಮತಾ ಬ್ಯಾನರ್ಜಿ
1.1 How safe is the life of the common man in this state when public representative is being attacked in Bhabanipur, the home turf of Madam Chief Minister ? pic.twitter.com/bgU2DLqEiu
— Dilip Ghosh (@DilipGhoshBJP) September 27, 2021
ಪ್ರಚಾರಕ್ಕೆಂದು ಬಂದಿದ್ದ ಬಿಜೆಪಿ ನಾಯಕರ ವಿರುದ್ಧ ಟಿಎಂಸಿ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ, ಸ್ಥಳದಿಂದ ವಾಪಸ್ ಹೋಗುವಂತೆ ಹೇಳಿದರು. ಇದರಿಂದ ಟಿಎಂಸಿ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರು ಮತ್ತು ದಿಲೀಪ್ ಘೋಷ್ ಅವರ ಭದ್ರತಾ ಸಿಬ್ಬಂದಿ ನಡುವೆ ಜಟಾಪಟಿ ನಡೆಯಿತು.
TMC’s violent politics on the last day of the campaign! TMC goons attacked BJP workers, including BJP's National Vice President Shri @dilipghoshbjp
Why are they so afraid of the BJP? The fear of Nandigram still torments Pishi? #AbaroHarbeMamata pic.twitter.com/BBV0HoRWZr— BJP Bengal (@BJP4Bengal) September 27, 2021
ಗಲಾಟೆ ತಪ್ಪಿಸಲು ದಿಲೀಪ್ ಘೋಷ್ ಅವರ ಭದ್ರತಾ ಸಿಬ್ಬಂದಿ ಜನಸಮೂಹವನ್ನು ಹೆದರಿಸಲು ಸೇವಾ ರಿವಾಲ್ವರ್‌ಗಳನ್ನು ತೋರಿಸಿರುವುದು ಕಂಡುಬಂದಿದೆ. ಪರಿಸ್ಥಿತಿ ನಿಯಂತ್ರಣ ತಪ್ಪಿರುವುದನ್ನು ಕಂಡು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಅಲ್ಲಿಂದ ತನ್ನ ಕಾರ್ಯಕರ್ತರನ್ನು ಕರೆದುಕೊಂಡು ವಾಪಸ್ ಹೋಗಿದ್ದಾರೆ.
ನಿನ್ನೆ ಬಿಜೆಪಿ ಸಂಸದ ಅರ್ಜುನ್ ಸಿಂಗ್ ಕೂಡ ಪ್ರಚಾರದ ವೇಳೆ ಟಿಎಂಸಿ ಬೆಂಬಲಿಗರಿಂದ ಪ್ರತಿಭಟನೆ ಎದುರಿಸಿದ್ದರು. ಶಂಭುನಾಥ ಪಂಡಿತ್ ಆಸ್ಪತ್ರೆಯ ಬಳಿ ಪ್ರಚಾರ ಮಾಡುತ್ತಿದ್ದಾಗ ಸ್ಥಳೀಯರು ಅವರ ವಿರುದ್ಧ ‘ಗೋ ಬ್ಯಾಕ್’ ಘೋಷಣೆಗಳನ್ನು ಕೂಗಿದ್ದರು.
ಸೆಪ್ಟಂಬರ್ 30 ರಂದು ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.
ಇದನ್ನೂ ಓದಿ: ಗೋವಾ ಮಾಜಿ ಸಿಎಂ ಲುಯಿಜಿನೊ ಫೆಲೇರೊ ರಾಜೀನಾಮೆ: ಟಿಎಂಸಿ ಸೇರ್ಪಡೆ ಸಾಧ್ಯತೆ


