Homeಮುಖಪುಟಭವಾನಿಪುರ: ಟಿಎಂಸಿ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ ಮಾಡಿದ ದಿಲೀಪ್ ಘೋಷ್

ಭವಾನಿಪುರ: ಟಿಎಂಸಿ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ ಮಾಡಿದ ದಿಲೀಪ್ ಘೋಷ್

- Advertisement -
- Advertisement -

ಪಶ್ಚಿಮ ಬಂಗಾಳದ ಭವಾನಿಪುರ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾದ ಇಂದು (ಸೆ.27) ಪ್ರಚಾರ ಮಾಡಲು ತೆರಳಿದ್ದ ಬಿಜೆಪಿ ರಾಜ್ಯ ಘಟಕದ ಮಾಜಿ ಅಧ್ಯಕ್ಷ ದಿಲೀಪ್ ಘೋಷ್ ಮೇಲೆ ಟಿಎಂಸಿ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ದಿಲೀಪ್ ಘೋಷ್ ಭಾನುವಾರ ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲ್ ಪರ ಮನೆ ಮನೆ ಪ್ರಚಾರ ಚುನಾವಣಾ ಪ್ರಚಾರ ನಡೆಸಲು ತೆರಳಿದ್ದರು. ಈ ವೇಳೆ ಟಿಎಂಸಿ ಕಾರ್ಯಕರ್ತರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಬಳಿಕ ಪ್ರಚಾರವನ್ನು ಮೊಟಕುಗೊಳಿಸಿ ವಾಪಸ್ ತೆರಳಿದ್ದಾರೆ.

ದಿಲೀಪ್ ಘೋಷ್ ಅವರ ಮೇಲೆ ಟಿಎಂಸಿ ಬೆಂಬಲಿಗರು ಹಲ್ಲೆ ನಡೆಸಿ, ತಳ್ಳಾಡಿದ್ದಾರೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ಸುಕಾಂತ ಮಜೂಂದಾರ್ ಅವರು ಹೇಳಿದ್ದಾರೆ. ಜಾದು ಬಾಬರ್ ಬಜಾರ್ ಬಳಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಬಿಜೆಪಿ ಕಾರ್ಯಕರ್ತರು ಗಾಯಗೊಂಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಭಾರತವನ್ನು ತಾಲಿಬಾನ್, ಪಾಕಿಸ್ತಾನ ಆಗಲು ಬಿಡುವುದಿಲ್ಲ- ಮಮತಾ ಬ್ಯಾನರ್ಜಿ

ಪ್ರಚಾರಕ್ಕೆಂದು ಬಂದಿದ್ದ ಬಿಜೆಪಿ ನಾಯಕರ ವಿರುದ್ಧ ಟಿಎಂಸಿ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ, ಸ್ಥಳದಿಂದ ವಾಪಸ್ ಹೋಗುವಂತೆ ಹೇಳಿದರು. ಇದರಿಂದ ಟಿಎಂಸಿ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರು ಮತ್ತು ದಿಲೀಪ್ ಘೋಷ್  ಅವರ ಭದ್ರತಾ ಸಿಬ್ಬಂದಿ ನಡುವೆ ಜಟಾಪಟಿ ನಡೆಯಿತು.

ಗಲಾಟೆ ತಪ್ಪಿಸಲು ದಿಲೀಪ್ ಘೋಷ್‌ ಅವರ ಭದ್ರತಾ ಸಿಬ್ಬಂದಿ ಜನಸಮೂಹವನ್ನು ಹೆದರಿಸಲು ಸೇವಾ ರಿವಾಲ್ವರ್‌ಗಳನ್ನು ತೋರಿಸಿರುವುದು ಕಂಡುಬಂದಿದೆ. ಪರಿಸ್ಥಿತಿ ನಿಯಂತ್ರಣ ತಪ್ಪಿರುವುದನ್ನು ಕಂಡು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಅಲ್ಲಿಂದ ತನ್ನ ಕಾರ್ಯಕರ್ತರನ್ನು ಕರೆದುಕೊಂಡು ವಾಪಸ್ ಹೋಗಿದ್ದಾರೆ.

ನಿನ್ನೆ ಬಿಜೆಪಿ ಸಂಸದ ಅರ್ಜುನ್ ಸಿಂಗ್ ಕೂಡ ಪ್ರಚಾರದ ವೇಳೆ ಟಿಎಂಸಿ ಬೆಂಬಲಿಗರಿಂದ ಪ್ರತಿಭಟನೆ ಎದುರಿಸಿದ್ದರು. ಶಂಭುನಾಥ ಪಂಡಿತ್ ಆಸ್ಪತ್ರೆಯ ಬಳಿ ಪ್ರಚಾರ ಮಾಡುತ್ತಿದ್ದಾಗ ಸ್ಥಳೀಯರು ಅವರ ವಿರುದ್ಧ ‘ಗೋ ಬ್ಯಾಕ್’ ಘೋಷಣೆಗಳನ್ನು ಕೂಗಿದ್ದರು.

ಸೆಪ್ಟಂಬರ್‌  30 ರಂದು ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.


ಇದನ್ನೂ ಓದಿ: ಗೋವಾ ಮಾಜಿ ಸಿಎಂ ಲುಯಿಜಿನೊ ಫೆಲೇರೊ ರಾಜೀನಾಮೆ: ಟಿಎಂಸಿ ಸೇರ್ಪಡೆ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...