Homeಮುಖಪುಟಪ.ಬಂಗಾಳ: ಬಿಜೆಪಿ ಮೈತ್ರಿ ತೊರೆದು TMC ಸೇರುವುದಾಗಿ ಘೋಷಿಸಿದ ಬಿಮಲ್ ಗುರುಂಗ್!

ಪ.ಬಂಗಾಳ: ಬಿಜೆಪಿ ಮೈತ್ರಿ ತೊರೆದು TMC ಸೇರುವುದಾಗಿ ಘೋಷಿಸಿದ ಬಿಮಲ್ ಗುರುಂಗ್!

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಆಘಾತ ಉಂಟಾಗಿದ್ದು, ಗೂರ್ಖಾ ಜನಮುಕ್ತಿ ಮೋರ್ಚಾ (GJM) ನಾಯಕ ಬಿಮಲ್ ಗುರುಂಗ್ ಬುಧವಾರ ಎನ್‌ಡಿಎ ಮೈತ್ರಿಯನ್ನು ತೊರೆದು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಜೊತೆ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿರುವುದಾಗಿ ಘೋಷಿಸಿದ್ದಾರೆ.

ಗೂರ್ಖಾಲ್ಯಾಂಡ್ ವಿಷಯದಲ್ಲಿ ಬಿಜೆಪಿ ತನ್ನ ಬದ್ಧತೆಯನ್ನು ಉಳಿಸಿಕೊಂಡಿಲ್ಲ ಎಂದು ಆರೋಪಿಸಿದ ಗುರುಂಗ್, 2021 ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು TMC ಯನ್ನು ಪೂರ್ಣ ಪ್ರಮಾಣದಲ್ಲಿ ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ.

ಆದಾಗ್ಯೂ, 2024 ರಲ್ಲಿ ನಡೆಯಲಿರುವ ಮುಂದಿನ ಲೋಕಸಭಾ ಚುನಾವಣೆಗೆ GJM ನ ನಿಲುವನ್ನು ಗುರುಂಗ್ ಸ್ಪಷ್ಟಪಡಿಸಲಿಲ್ಲ. “ನಮ್ಮ ಗೂರ್ಖಾಲ್ಯಾಂಡ್ ಬೇಡಿಕೆಯ ಪರವಾಗಿ ಮಾತನಾಡುವವರನ್ನು ನಾವು ಬೆಂಬಲಿಸುತ್ತೇವೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ವಾಯುಮಾಲಿನ್ಯ: ಕಳೆದ ವರ್ಷ ಭಾರತದಲ್ಲಿ 1.16 ಲಕ್ಷ ನವಜಾತ ಶಿಶುಗಳು ಮರಣ!

ಕಳೆದ 3 ವರ್ಷಗಳಿಂದ ಕಣ್ಮರೆಯಾಗಿದ್ದ ಗುರುಂಗ್ ಬುಧವಾರ ಕೋಲ್ಕತ್ತಾದಲ್ಲಿ ಕಾಣಿಸಿಕೊಂಡರು. ಒಂಬತ್ತು ವಿಧಾನಸಭಾ ಸ್ಥಾನಗಳಲ್ಲಿ GJM ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. 16 ವಿಧಾನಸಭಾ  ಕ್ಷೇತ್ರದಲ್ಲಿ ನಿರ್ಣಾಯಕ ಮತದಾರರಾಗಿದ್ದಾರೆ. GJM ನ ಗುರುಂಗ್ ಬಣದ ಬೆಂಬಲದೊಂದಿಗೆ, 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಡಾರ್ಜಿಲಿಂಗ್ ಕ್ಷೇತ್ರವನ್ನು ಗೆದ್ದುಕೊಂಡಿತ್ತು.

ತಮ್ಮ ಪಕ್ಷ ಮತ್ತು ಬೆಂಬಲಿಗರು ರಾಜ್ಯದ ವಿಷಯದಲ್ಲಿ ಹಿಂದೆ ಸರಿಯುವುದಿಲ್ಲ ಎಂದು ಗುರುಂಗ್ ಸ್ಪಷ್ಟಪಡಿಸಿದ್ದು, “ಪ್ರಧಾನ ಮಂತ್ರಿಯಾಗಲಿ, ಗೃಹ ಸಚಿವರಾಗಲಿ ಅವರ ಬದ್ಧತೆಯನ್ನು ಉಳಿಸಿಕೊಂಡಿಲ್ಲ. ಆದರೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತುಗಳನ್ನು ಉಳಿಸಿಕೊಂಡಿದ್ದೇವೆ. ಇದಕ್ಕಾಗಿಯೇ ನಾನು ಎನ್‌ಡಿಎಯನ್ನು ತೊರೆದು TMC ಯನ್ನು ಬೆಂಬಲಿಸಲು ನಿರ್ಧರಿಸಿದ್ದೇನೆ” ಎಂದು ಅವರು ಹೇಳಿದರು.

ಗುರುಂಗ್ ಅವರ ವಿರುದ್ಧ ದೇಶದ್ರೋಹ ಆರೋಪ ಸೇರಿದಂತೆ ಹಲವು ಪ್ರಕರಣಗಳಿವೆ ಎಂದು ಬಿಜೆಪಿಯ ರಾಜ್ಯ ಅಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ. “ಬಿಜೆಪಿ ಶಾಂತಿಯನ್ನು ಬಯಸಿದೆ. ಗುರುಂಗ್ ಅವರ ಈ ನಡೆಯು ಈ ಪ್ರದೇಶದಲ್ಲಿ ಅಶಾಂತಿಯನ್ನು ಉಂಟುಮಾಡುವ ಮತ್ತೊಂದು ಪ್ರಯತ್ನವೆಂದು ತೋರುತ್ತದೆ” ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ಮಧ್ಯಪ್ರದೇಶ: ‘ಐಟಂ’ ಹೇಳಿಕೆಗೆ ಕಮಲನಾಥ್ ವಿವರಣೆ ನೀಡಬೇಕು ಎಂದ ಚುನಾವಣಾ ಆಯೋಗ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...